Hosea · chapter 10 · verse 1
Hosea 10:1 in Kannada
ಇಸ್ರಾಯೇಲು ಬರಿದಾದ ದ್ರಾಕ್ಷೇಬಳ್ಳಿಯಾಗಿದೆ, ಅವನು ತನಗಾಗಿ ಫಲಫಲಿ ಸುತ್ತಾನೆ; ತನ್ನ ಬಹಳ ಫಲದ ಪ್ರಕಾರವಾಗಿ ಅವನು ಬಲಿಪೀಠಗಳನ್ನೂ ಹೆಚ್ಚಿಸಿದ್ದಾನೆ. ತನ್ನ ದೇಶದ ಒಳ್ಳೆಯ ತನದ ಪ್ರಕಾರ ಅಂದವಾದ ವಿಗ್ರಹಗಳನ್ನು ಮಾಡಿ ದ್ದಾನೆ.
Israayelu baridaada draaksheballiyaagide, avanu tanagaagi phalaphali suttaane; tanna bahala phalada prakaaravaagi avanu balipeethagalannoo hechchisiddaane. Tanna deshada olleya tanada prakaara andavaada vigrahagalannu maadi ddaane.
Hosea 10:1 in English
- King James Version (KJV)
- Israel [is] an empty vine, he bringeth forth fruit unto himself: according to the multitude of his fruit he hath increased the altars; according to the goodness of his land they have made goodly images.
- World English Bible (WEB)
- Israel is a luxuriant vine that produces his fruit. According to the abundance of his fruit he has multiplied his altars. As their land has prospered, they have adorned their sacred stones.
- American Standard Version (ASV)
- Israel is a luxuriant vine, that putteth forth his fruit: according to the abundance of his fruit he hath multiplied his altars; according to the goodness of their land they have made goodly pillars.
- Bible in Basic English (BBE)
- Israel is a branching vine, full of fruit; as his fruit is increased, so the number of his altars is increased; as the land is fair, so they have made fair pillars.
- Darby Translation (DBY)
- Israel is an unpruned vine, he bringeth forth fruit unto himself: according to the abundance of his fruit he hath multiplied altars; according to the goodness of his land they have made goodly statues.
- Webster's Bible (WBS)
- Israel [is] an empty vine, he bringeth forth fruit to himself: according to the multitude of his fruit he hath multiplied the altars; according to the goodness of his land they have made goodly images.
- Young's Literal Translation (YLT)
- 'An empty vine [is] Israel, Fruit he maketh like to himself, According to the abundance of his fruit, He hath multiplied for the altars, According to the goodness of his land, They have made goodly standing-pillars.
Read in context
- 1ಇಸ್ರಾಯೇಲು ಬರಿದಾದ ದ್ರಾಕ್ಷೇಬಳ್ಳಿಯಾಗಿದೆ, ಅವನು ತನಗಾಗಿ ಫಲಫಲಿ ಸುತ್ತಾನೆ; ತನ್ನ ಬಹಳ ಫಲದ ಪ್ರಕಾರವಾಗಿ ಅವನು ಬಲಿಪೀಠಗಳನ್ನೂ ಹೆಚ್ಚಿಸಿದ್ದಾನೆ. ತನ್ನ ದೇಶದ ಒಳ್ಳೆಯ ತನದ ಪ್ರಕಾರ ಅಂದವಾದ ವಿಗ್ರಹಗಳನ್ನು ಮಾಡಿ ದ್ದಾನೆ.
- 2ಅವರ ಹೃದಯವು ಭೇದವಾಯಿತು, ಈಗ ಅವರು ಅಪರಾಧಿಗಳೆಂದು ಕಾಣಿಸಲ್ಪಡುವರು; ಆತನು ಅವರ ಬಲಿಪೀಠಗಳನ್ನು ಕೆಡವಿ, ಅವರ ವಿಗ್ರಹಗಳನ್ನು ನಾಶಮಾಡುವನು.
- 3ಅವರು--ನಮಗೆ ಅರಸನಿಲ್ಲ, ನಾವು ಕರ್ತನಿಗೆ ಭಯಪಡಲಿಲ್ಲ; ಹಾಗಾದರೆ ಅರಸನು ನಮಗೆ ಏನು ಮಾಡುವನು ಎಂದು ಅಂದುಕೊಳ್ಳುವರು.
Cross references
- Hosea 8:11 ಹೋಶೇಯ 8:11ಎಫ್ರಾ ಯಾಮು ಪಾಪಕ್ಕಾಗಿ ಅನೇಕ ಬಲಿಪೀಠಗಳನ್ನು ಮಾಡಿ ದ್ದರಿಂದ, ಬಲಿಪೀಠಗಳು ಅವನ ಪಾಪಕ್ಕಾಗಿ ಇರುವವು.
- Leviticus 26:1 ಯಾಜಕಕಾಂಡ 26:1ನೀವು ನಿಮಗಾಗಿ ವಿಗ್ರಹಗಳನ್ನಾಗಲಿ ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ; ನಿಲ್ಲಿಸುವ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ. ಕಲ್ಲಿನ ವಿಗ್ರಹಗಳನ್ನಾಗಲಿ ನಿಮ್ಮ ದೇಶದಲ್ಲಿಟ್ಟು ಕೊಂಡು ಅವುಗಳಿಗೆ ಅಡ್ಡ ಬೀಳಬೇಡಿರಿ. ನಿಮ್ಮ ದೇವರಾಗಿರುವ ಕರ್ತನು ನಾನೇ.
- Hosea 12:11 ಹೋಶೇಯ 12:11ಗಿಲ್ಯಾದಿನಲ್ಲಿ ದುಷ್ಟತನ ಇದೆಯೋ? ನಿಶ್ಚಯವಾಗಿ ಅವೆಲ್ಲಾ ವ್ಯರ್ಥವೇ; ಅವರು ಗಿಲ್ಗಾಲಿನಲ್ಲಿ ಹೋರಿಗಳನ್ನು ಅರ್ಪಿಸುತ್ತಾರೆ, ಹೌದು, ಅವರ ಬಲಿಪೀಠಗಳು ಹೊಲದ ಸಾಲುಗಳಲ್ಲಿರುವ ಕಲ್ಲುಕುಪ್ಪೆಯ ಹಾಗಿದೆ ಎಂದು ಹೇಳಿದನು.
- Philippians 2:21 ಫಿಲಿಪ್ಪಿಯವರಿಗೆ 2:21ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡು ತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ.
- Isaiah 5:1–7 ಯೆಶಾಯ 5:1–7ನನ್ನ ಪ್ರಿಯನ ದ್ರಾಕ್ಷೇ ತೋಟದ ವಿಷಯವಾದ ಹಾಡನ್ನು ನನ್ನ ಅತಿ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದಲ್ಲಿ ನನ್ನ ಅತಿಪ್ರಿಯನಿಗೆ ದ್ರಾಕ್ಷೆಯ ತೋಟವಿದೆ. ಅವನು ಅದಕ್ಕೆ ಬೇಲಿ ಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದು ಹಾಕಿ ಒಳ್ಳೇ ದ್ರಾಕ್ಷೆಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷೇ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆ ದ್ರಾಕ್ಷೇ ಹಣ್ಣನ್ನು ಕೊಡುವದೆಂದು ಎದುರು ನೋಡು ತ್ತಿರಲು, ಅದು ಕಾಡುಹಣ್ಣನ್ನು ಬಿಟ್ಟಿತು. ಓ ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷೆಯ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಪ್ರಾರ್ಥಿಸುತ್ತೇನೆ. ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ? ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು. ಅದನ್ನು ನಾನು ಹಾಳಾಗಲು ಬಿಡುವೆನು: ಅದನ್ನು ಯಾರೂ ಕುಡಿ ಕತ್ತರಿಸುವದಿಲ್ಲ; ಅಗೆಯುವದೂ ಇಲ್ಲ. ಆದರೆ ಅಲ್ಲಿ ಮುಳ್ಳುಪೊದೆಗಳು ಬೆಳೆಯುವವು; ಅಲ್ಲದೆ ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾ ಪಿಸುವೆನು. ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು.
- Romans 14:7–8 ರೋಮಾಪುರದವರಿಗೆ 14:7–8ನಮ್ಮಲ್ಲಿ ಒಬ್ಬನಾದರೂ ತನಗಾಗಿ ಬದುಕುವದೂ ಇಲ್ಲ, ತನಗಾಗಿ ಸಾಯುವದೂ ಇಲ್ಲ. ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತ ನವರೇ.
- Jeremiah 2:28 ಯೆರೆಮೀಯ 2:28ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟ ಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಯಾಕಂದರೆ ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.
- 1 Kings 14:23 1 ಅರಸುಗಳು 14:23ಅವರು ಎತ್ತರವಾದ ಪ್ರತಿ ಗುಡ್ಡದ ಮೇಲೆಯೂ ಹಸುರಾದ ಪ್ರತಿ ಗಿಡದ ಕೆಳಗೂ ತೋಪು ಗಳನ್ನು ವಿಗ್ರಹಗಳನ್ನು ಉನ್ನತ ಸ್ಥಳಗಳನ್ನು ತಮಗಾಗಿ ಮಾಡಿಕೊಂಡರು. ಇದಲ್ಲದೆ ದೇಶದಲ್ಲಿ ಪುರುಷ ಸಂಗಮರಿದ್ದರು.
- Ezekiel 15:1–5 ಯೆಹೆಜ್ಕೇಲನು 15:1–5ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ-- ಮನುಷ್ಯಪುತ್ರನೇ, ದ್ರಾಕ್ಷೇಗಿಡವು ಬೇರೆ ಗಿಡಗಳಿಗಿಂತಲೂ ಇಲ್ಲವೆ ಅಡವಿ ಯಲ್ಲಿರುವ ಮರಗಳ ಕೊಂಬೆಗಳಿಗಿಂತಲೂ ಹೆಚ್ಚೇನು? ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವ ಕೆಲಸವನ್ನಾದರೂ ಮಾಡುವರೋ? ಅಥವಾ ಅದರ ಮೇಲೆ ಯಾವ ಸಾಮಗ್ರಿಯನನ್ನಾದರೂ ನೇತುಹಾಕು ವದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ? ಇಗೋ, ಅದು ಸೌದೆಗಾಗಿ ಬೆಂಕಿಗೆ ಹಾಕಲ್ಪಡುತ್ತದೆ; ಬೆಂಕಿಯು ಅದರ ಎರಡು ಕೊನೆಗಳನ್ನು ತಿಂದುಬಿಡು ತ್ತದೆ; ಅದರ ಮಧ್ಯಭಾಗವು ಸುಟ್ಟುಹೋಗುತ್ತದೆ. ಇದೇನಾದರೂ ಕೆಲಸಕ್ಕೆ ಬರುವದೋ? ಇಗೋ, ಇದು ಸಂಪೂರ್ಣವಾಗಿದ್ದಾಗಲೇ ಕೆಲಸಕ್ಕೆ ಬರಲಿಲ್ಲ ಎಂದ ಮೇಲೆ ಬೆಂಕಿಯು ಅದನ್ನು ತಿಂದು ಸುಟ್ಟು ಬಿಟ್ಟಮೇಲೆ ಯಾವ ಕೆಲಸಕ್ಕೆ ಬಂದೀತು?
- John 15:1–6 ಯೋಹಾನನು 15:1–6ನಾನೇ ನಿಜವಾದ ದ್ರಾಕ್ಷೇ ಬಳ್ಳಿ ನನ್ನ ತಂದೆ ವ್ಯವಸಾಯಗಾರನು. ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ. ನಾನು ನಿಮಗೆ ಹೇಳಿದ ಮಾತಿನ ದೆಸೆಯಿಂದ ನೀವು ಈಗ ಶುದ್ಧರಾಗಿದ್ದೀರಿ. ನನ್ನಲ್ಲಿ ನೆಲೆಗೊಂಡಿರ್ರಿ, ನಾನು ನಿಮ್ಮಲ್ಲಿ ನೆಲೆ ಗೊಂಡಿರುವೆನು. ಕೊಂಬೆಯು ದ್ರಾಕ್ಷೇಯಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ. ನಾನೇ ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ ಅವನೇ ಬಹಳ ಫಲವನ್ನು ಕೊಡುವನು; ಯಾಕಂದರೆ ನಾನಿಲ್ಲದೆ ನೀವು ಏನೂ ಮಾಡಲಾರಿರಿ. ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.
- Hosea 2:8 ಹೋಶೇಯ 2:8ಅವರು ಬಾಳನಿಗಾಗಿ ಸಿದ್ಧಮಾಡಿದ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ನಾನು ಕೊಟ್ಟು ಅವ ಳಿಗೆ ಬೆಳ್ಳಿ ಬಂಗಾರವನ್ನು ನಾನೇ ಹೆಚ್ಚಿಸಿದ್ದೇನೆಂದು ಅವಳಿಗೆ ತಿಳಿಯಲಿಲ್ಲ.
- Hosea 13:6 ಹೋಶೇಯ 13:6ಅವರ ಆಹಾರದ ಪ್ರಕಾರ ತೃಪ್ತರಾದರು, ಅದರಿಂದ ಅವರ ಹೃದಯಗಳು ಉಬ್ಬಿಕೊಂಡಿತು; ಆದಕಾರಣ ಅವರು ನನ್ನನ್ನು ಮರೆತುಬಿಟ್ಟರು.
Original words (Hebrew)
- Israel · H3478יִשְׂרָאֵל Yisrâʼêl
- empty · H1238בָּקַק bâqaq
- vine · H1612גֶּפֶן gephen
- forth · H7737שָׁוָה shâvâh
- fruit · H6529פְּרִי pᵉrîy
- multitude · H7230רֹב rôb
- fruit · H6529פְּרִי pᵉrîy
- increased · H7235רָבָה râbâh
- altars · H4196מִזְבֵּחַ mizbêach
- goodness · H2896טוֹב ṭôwb
- land · H776אֶרֶץ ʼerets
- goodly · H2895טוֹב ṭôwb
- images · H4676מַצֵּבָה matstsêbâh