Hosea · chapter 10 · verse 9
Hosea 10:9 in Kannada
ಓ ಇಸ್ರಾಯೇಲೇ, ನೀನು ಗಿಬ್ಯದ ದಿನಗಳ ಮೊದ ಲಿನಿಂದ ಪಾಪ ಮಾಡಿದ್ದೀ; ಅವರು ಅಲ್ಲೇ ನಿಂತು ಕೊಂಡರು. ಅನ್ಯಾಯದ ಮಕ್ಕಳಿಗೆ ವಿರೋಧವಾದ ಯುದ್ಧವು ಗಿಬ್ಯದಲ್ಲಿ ಅವರನ್ನು ಮುಟ್ಟಲಿಲ್ಲ.
O israayele, neenu gibyada dinagala moda lininda paapa maadiddee; avaru alle nintu kondaru. Anyaayada makkalige virodhavaada yuddhavu gibyadalli avarannu muttalilla.
Hosea 10:9 in English
- King James Version (KJV)
- O Israel, thou hast sinned from the days of Gibeah: there they stood: the battle in Gibeah against the children of iniquity did not overtake them.
- World English Bible (WEB)
- “Israel, you have sinned from the days of Gibeah. There they remained. The battle against the children of iniquity doesn’t overtake them in Gibeah.
- American Standard Version (ASV)
- O Israel, thou hast sinned from the days of Gibeah: there they stood; the battle against the children of iniquity doth not overtake them in Gibeah.
- Bible in Basic English (BBE)
- O Israel, you have done evil from the days of Gibeah; there they took up their position, so that the fighting against the children of evil might not overtake them in Gibeah.
- Darby Translation (DBY)
- From the days of Gibeah hast thou sinned, O Israel: there they stood: the battle in Gibeah against the children of iniquity did not overtake them.
- Webster's Bible (WBS)
- O Israel, thou hast sinned from the days of Gibeah: there they stood: the battle in Gibeah against the children of iniquity did not overtake them.
- Young's Literal Translation (YLT)
- From the days of Gibeah thou hast sinned, O Israel, There they have stood, Not overtake them in Gibeah doth battle, Because of sons of perverseness.
Read in context
- 7ಸಮಾರ್ಯವಾದರೋ ಅದರ ಅರಸನು ನೀರಿನ ಮೇಲೆ ನೊರೆಯ ಹಾಗೆ ಅಳಿದು ಹೋಗುವನು;
- 8ಇಸ್ರಾಯೇಲಿನ ಪಾಪವಾದ ಅವೇ ನಿನ ಉನ್ನತವಾದ ಸ್ಥಳಗಳು ಹಾಳಾಗಿಹೋಗುವವು. ಮುಳ್ಳುಗಿಡಗಳೂ ಕಳೆಗಳೂ ಬಲಿಪೀಠಗಳ ಮೇಲೆ ಬೆಳೆಯುವವು; ಅವರು ಬೆಟ್ಟಗಳಿಗೆ--ನಮ್ಮನ್ನು ಮುಚ್ಚಿರಿ, ಗುಡ್ಡಗಳೇ ನಮ್ಮ ಮೇಲೆ ಬೀಳಿರಿ ಅನ್ನುವರು.
- 9ಓ ಇಸ್ರಾಯೇಲೇ, ನೀನು ಗಿಬ್ಯದ ದಿನಗಳ ಮೊದ ಲಿನಿಂದ ಪಾಪ ಮಾಡಿದ್ದೀ; ಅವರು ಅಲ್ಲೇ ನಿಂತು ಕೊಂಡರು. ಅನ್ಯಾಯದ ಮಕ್ಕಳಿಗೆ ವಿರೋಧವಾದ ಯುದ್ಧವು ಗಿಬ್ಯದಲ್ಲಿ ಅವರನ್ನು ಮುಟ್ಟಲಿಲ್ಲ.
- 10ನಾನು ಅವರನ್ನು ಶಿಕ್ಷಿಸಲು ನನಗೆ ಮನಸ್ಸುಂಟು; ಅವರು ತಮ್ಮ ಎರಡು ಅಕ್ರಮಗಳಿಗಾಗಿ ಕಟ್ಟಲ್ಪಡುವಾಗ ಜನರು ಅವರಿಗೆ ವಿರೋಧವಾಗಿ ಕೂಡಿಬರುವರು.
- 11ಎಫ್ರಾ ಯಾಮು ಹತೋಟಿಗೆ ಬಂದು ತೆನೆಹುಲ್ಲನ್ನು ತುಳಿ ಯುವ ಕಡಸಾಗಿದೆ; ತುಳಿಯುವದನ್ನು ಪ್ರೀತಿಮಾಡು ತ್ತದೆ; ಆದರೆ ನಾನು ಅದರ ಸೌಂದರ್ಯದ ಕುತ್ತಿಗೆಯ ಮೇಲೆ ದಾಟಿಹೋದೆನು. ಎಫ್ರಾಯಾಮು ಸವಾರಿಮಾಡುವ ಹಾಗೆ ನಾನು ಮಾಡುವೆನು; ಯೆಹೂದ ಉಳುವನು, ಯಾಕೋಬನು ಅವನ ಹೆಂಟೆಗಳನ್ನು ಒಡೆಯುವನು.
Cross references
- Hosea 9:9 ಹೋಶೇಯ 9:9ಗಿಬ್ಯದ ದಿನಗಳಲ್ಲಿ ಆದ ಹಾಗೆ ತಮ್ಮನ್ನು ಬಹಳವಾಗಿ ಕೆಡಿಸಿಕೊಂಡಿದ್ದಾರೆ; ಆದದರಿಂದ ಅವರ ಅಕ್ರಮವನ್ನು ಆತನು ಜ್ಞಾಪಕಮಾಡಿಕೊಳ್ಳುವನು, ಅವರ ಪಾಪಗಳನ್ನು ವಿಚಾರಿಸುವನು.
- Judges 20:5 ನ್ಯಾಯಸ್ಥಾಪಕರು 20:5ಆದರೆ ಗಿಬೆಯ ಪಟ್ಟಣದವರು ನನಗೆ ವಿರೋಧವಾಗಿ ಎದ್ದು ನಾನು ಇಳಿದಿದ್ದ ಮನೆ ಯನ್ನು ರಾತ್ತಿಯಲ್ಲಿ ಮುತ್ತಿಕೊಂಡು ನನ್ನನ್ನು ಕೊಂದು ಹಾಕುವದಕ್ಕೆ ಆಲೋಚಿಸಿ ನನ್ನ ಉಪಪತ್ನಿಯನ್ನು ಕುಂದಿಸಿದರು; ಅವಳು ಸತ್ತುಹೋದಳು.
- Judges 19:22–30 ನ್ಯಾಯಸ್ಥಾಪಕರು 19:22–30ಅವರು ತಮ್ಮ ಹೃದಯವನ್ನು ಸಂತೋಷ ಪಡಿಸಿ ಕೊಳ್ಳುತ್ತಿರುವ ವೇಳೆಯಲ್ಲಿ ಇಗೋ, ಆ ಪಟ್ಟಣದ ಮನುಷ್ಯರಲ್ಲಿ ಬೆಲಿಯಾಳನ ಕೆಲವು ಕುಮಾರರು ಆ ಮನೆಯನ್ನು ಸುತ್ತಿಕೊಂಡು ಕದವನ್ನು ಬಡಿದು ಆ ಮನೆಯ ಯಜಮಾನನಾದ ಮುದುಕನಿಗೆ--ನಿನ್ನ ಮನೆಯಲ್ಲಿ ಬಂದ ಆ ಮನುಷ್ಯನನ್ನು ನಾವು ತಿಳು ಕೊಳ್ಳುವ ಹಾಗೆ, ಅವನನ್ನು ಹೊರಗೆ ತಾ ಎಂದು ಹೇಳಿದರು. ಆಗ ಮನೆಯ ಯಜಮಾನನಾದ ಆ ಮನುಷ್ಯನು ಅವರ ಬಳಿಗೆ ಹೊರಟುಹೋಗಿ ಅವರಿಗೆ--ಹಾಗೆ ಮಾಡಬೇಡಿರಿ; ನನ್ನ ಸಹೋದರರೇ, ದಯಮಾಡಿ ಕೆಟ್ಟತನಮಾಡಬೇಡಿರಿ; ಆ ಮನುಷ್ಯನು ನನ್ನ ಮನೆಯಲ್ಲಿ ಪ್ರವೇಶಿಸಿದ್ದರಿಂದ ನೀವು ಅಂಥಾಬುದ್ಧಿಹೀನತೆಯನ್ನು ಮಾಡಬೇಡಿರಿ. ಇಗೋ, ಕನ್ನಿಕೆ ಯಾದ ನನ್ನ ಮಗಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ತರುವೆನು; ನೀವು ಅವರನ್ನು ಕುಂದಿಸಿ ನಿಮಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡಿರಿ. ಆದರೆ ಈ ಮನುಷ್ಯನಿಗೆ ಅಂಥಾ ಬುದ್ಧಿಹೀನವಾದ ಕಾರ್ಯವನ್ನು ಮಾಡಬೇಡಿರಿ ಅಂದನು. ಆದರೆ ಆ ಮನುಷ್ಯರು ಅವನ ಮಾತನ್ನು ಕೇಳಲೊಲ್ಲದೆ ಹೋದರು. ಆದದರಿಂದ ಆ ಮನುಷ್ಯನು ತನ್ನ ಉಪ ಪತ್ನಿಯನ್ನು ಹಿಡಿದು ಹೊರಗೆ ಅವರ ಬಳಿಯಲ್ಲಿ ತಂದು ಬಿಟ್ಟನು; ಅವರು ಅವಳನ್ನು ತಿಳುಕೊಂಡು ಉದಯ ಕಾಲದ ಪರ್ಯಂತರ ರಾತ್ರಿಯೆಲ್ಲಾ ಅವಳನ್ನು ಕೆಡಿಸಿ ಉದಯವಾಗುವಾಗ ಅವಳನ್ನು ಬಿಟ್ಟುಬಿಟ್ಟರು. ಆ ಸ್ತ್ರೀ ಉದಯ ಕಾಲಕ್ಕೆ ಮುಂಚೆ ಬಂದು ಬೆಳಕಾಗುವ ಮಟ್ಟಿಗೂ ಅಲ್ಲಿ ತನ್ನ ಯಜಮಾನನು ಇರುವ ಮನೆಯ ಬಾಗಿಲ ಬಳಿಯಲ್ಲಿ ಬಿದ್ದಿದ್ದಳು. ಅವಳ ಯಜ ಮಾನನು ಉದಯದಲ್ಲಿ ಎದ್ದು ಮನೆಯ ಬಾಗಲನ್ನು ತೆರೆದು ತನ್ನ ಮಾರ್ಗವಾಗಿ ಹೊರಡುವಾಗ ಇಗೋ, ತನ್ನ ಉಪಪತ್ನಿ ಮನೆಯ ಬಾಗಿಲ ಮುಂದೆ ತನ್ನ ಕೈಗಳನ್ನು ಹೊಸ್ತಿಲ ಮೇಲೆ ಇಟ್ಟವಳಾಗಿ ಬಿದ್ದಿದ್ದಳು. ಆಗ ಅವನು ಅವಳಿಗೆ--ಏಳು, ಹೋಗೋಣ ಅಂದನು. ಆದರೆ ಪ್ರತ್ಯುತ್ತರವೇನೂ ಇಲ್ಲದೆ ಹೋಯಿತು. ಆಗ ಆ ಮನುಷ್ಯನು ಅವಳನ್ನು ಕತ್ತೆಯ ಮೇಲೆ ಹಾಕಿಕೊಂಡು ತನ್ನ ಸ್ಥಳಕ್ಕೆ ಹೋದನು. ಅವನು ತನ್ನ ಮನೆಗೆ ಹೋದಾಗ ಒಂದು ಕತ್ತಿಯನ್ನು ತೆಗೆದುಕೊಂಡು ತನ್ನ ಉಪಪತ್ನಿಯನ್ನು ಹಿಡಿದು ಎಲುಬುಗಳ ಸಂಗಡ ಹನ್ನೆರಡು ತುಂಡು ಗಳಾಗಿ ಕಡಿದು ಅವುಗಳನ್ನು ಇಸ್ರಾಯೇಲಿನ ಮೇರೆ ಗಳಿಗೆಲ್ಲಾ ಕಳುಹಿಸಿದನು.ಆಗ ಅದನ್ನು ನೋಡುವ ವರೆಲ್ಲಾ--ಇಸ್ರಾಯೇಲ್ ಮಕ್ಕಳು ಐಗುಪ್ತದಿಂದ ಬಂದ ದಿವಸ ಮೊದಲುಗೊಂಡು ಈ ಪರ್ಯಂತರ ಇಂಥಾ ಕಾರ್ಯವು ಆದದ್ದೂ ಇಲ್ಲ, ಕಾಣಲ್ಪಟ್ಟದ್ದೂ ಇಲ್ಲ. ಈ ಸಂಗತಿಯನ್ನು ಮನಸ್ಸಿಗೆ ತಂದು ವಿಚಾರಿಸತಕ್ಕದ್ದು ಅಂದುಕೊಂಡರು. ಆಗ ಅದನ್ನು ನೋಡುವ ವರೆಲ್ಲಾ--ಇಸ್ರಾಯೇಲ್ ಮಕ್ಕಳು ಐಗುಪ್ತದಿಂದ ಬಂದ ದಿವಸ ಮೊದಲುಗೊಂಡು ಈ ಪರ್ಯಂತರ ಇಂಥಾ ಕಾರ್ಯವು ಆದದ್ದೂ ಇಲ್ಲ, ಕಾಣಲ್ಪಟ್ಟದ್ದೂ ಇಲ್ಲ. ಈ ಸಂಗತಿಯನ್ನು ಮನಸ್ಸಿಗೆ ತಂದು ವಿಚಾರಿಸತಕ್ಕದ್ದು ಅಂದುಕೊಂಡರು.
- Genesis 6:5 ಆದಿಕಾಂಡ 6:5ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.
- Judges 20:17–48 ನ್ಯಾಯಸ್ಥಾಪಕರು 20:17–48ಬೆನ್ಯಾ ವಿಾನನವರ ಹೊರತು ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿ ಯುವ ಮನುಷ್ಯರು ನಾಲ್ಕು ಲಕ್ಷ ಜನರೆಂದು ಎಣಿಸ ಲ್ಪಟ್ಟರು. ಇವರೆಲ್ಲರೂ ಯುದ್ಧದ ಮನುಷ್ಯರಾಗಿದ್ದರು. ಆಗ ಇಸ್ರಾಯೇಲಿನ ಮಕ್ಕಳು ಎದ್ದು ದೇವರ ಮನೆಗೆ ಹೋಗಿ ತಮ್ಮಲ್ಲಿ ಮೊದಲು ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗ ಬೇಕಾ ದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಕರ್ತನು -- ಯೊಹೂದ ಕುಲದವರು ಮೊದಲು ಹೋಗಬೇಕು ಅಂದನು. ಆಗ ಇಸ್ರಾಯೇಲಿನ ಮಕ್ಕಳು ಉದಯದಲ್ಲಿ ಎದ್ದು ಗಿಬೆಯಕ್ಕೆ ಎದುರಾಗಿ ದಂಡಿಳಿದರು. ಇಸ್ರಾಯೇಲಿನ ಮನುಷ್ಯರು ಬೆನ್ಯಾ ವಿಾನನ ಸಂಗಡ ಯುದ್ಧಮಾಡುವದಕ್ಕೆ ಹೊರಟರು; ಇಸ್ರಾಯೇಲಿನ ಮನುಷ್ಯರು ಗಿಬೆಯ ಬಳಿಯಲ್ಲಿ ಯುದ್ಧಕ್ಕೆ ವ್ಯೂಹಕಟ್ಟಿದರು. ಆಗ ಬೆನ್ಯಾವಿಾನನ ಮಕ್ಕಳು ಗಿಬೆಯದಿಂದ ಹೊರಟು ಇಸ್ರಾಯೇಲ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಆ ದಿನದಲ್ಲಿ ನೆಲಕ್ಕೆ ಬೀಳುವಂತೆ ಸಂಹರಿಸಿದರು. ಇಸ್ರಾಯೇಲ್ ಮನುಷ್ಯರಾದ ಜನರು ಬಲ ಗೊಂಡು ಮೊದಲನೇ ದಿನ ಯುದ್ಧಕ್ಕೆ ವ್ಯೂಹಕಟ್ಟಿದ ಸ್ಥಳದಲ್ಲಿ ತಿರಿಗಿ ವ್ಯೂಹ ಕಟ್ಟಿದರು. (ಇಸ್ರಾಯೇಲ್ ಮಕ್ಕಳು ಕರ್ತನ ಬಳಿಗೆ ಹೋಗಿ ಆತನ ಮುಂದೆ ಸಾಯಂಕಾಲದ ವರೆಗೆ ಅತ್ತು--ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗಬೇಕೋ ಎಂದು ಕರ್ತನನ್ನು ಕೇಳಿದರು. ಅದಕ್ಕೆ ಕರ್ತನು--ಅವನ ಮೇಲೆ ಹೋಗಿರಿ ಅಂದನು). ಎರಡನೇ ದಿನದಲ್ಲಿ ಇಸ್ರಾಯೇಲ್ ಮನು ಷ್ಯರು ಬೆನ್ಯಾವಿಾನನ ಮಕ್ಕಳ ಬಳಿಗೆ ಬಂದರು. ಆಗ ಬೆನ್ಯಾವಿಾನನವರು ಆ ಎರಡನೇ ದಿನದಲ್ಲಿ ಗಿಬೆಯ ದಲ್ಲಿಂದ ಅವರಿಗೆ ಎದುರಾಗಿ ಹೊರಟು ಬಂದು ಇನ್ನೂ ಇಸ್ರಾಯೇಲ್ ಮಕ್ಕಳಲ್ಲಿ ಕತ್ತಿ ಹಿಡಿಯುವ ಹದಿನೆಂಟು ಸಾವಿರ ಜನರನ್ನು ನೆಲಕ್ಕೆ ಉರುಳಿಸಿದರು. ಆಗ ಇಸ್ರಾಯೇಲ್ ಮಕ್ಕಳೆಲ್ಲರೂ ಸಮಸ್ತ ಜನರೂ ಹೊರಟು ದೇವರ ಮನೆಗೆ ಬಂದು ಅತ್ತು ಅಲ್ಲಿ ಕರ್ತನ ಮುಂದೆ ಕುಳಿತುಕೊಂಡು ಆ ಸಾಯಂಕಾಲದ ವರೆಗೆ ಉಪವಾಸವಾಗಿದ್ದು ಕರ್ತ ನಿಗೆ ದಹನಬಲಿಗಳನ್ನೂ ಸಮಾಧಾನದಬಲಿಗಳನ್ನೂ ಕರ್ತನ ಮುಂದೆ ಅರ್ಪಿಸಿದರು. ಯಾಕಂದರೆ ಆ ದಿವಸಗಳಲ್ಲಿ ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿದ್ದದರಿಂದಲೂ ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಅವರ ಮುಂದೆ ನಿಂತಿದ್ದರಿಂದಲೂ, ಇಸ್ರಾಯೇಲ್ ಮಕ್ಕಳು ನಮ್ಮ ಸಹೋದರನಾದ ಬೆನ್ಯಾವಿಾನನ ಮಕ್ಕಳಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವದಕ್ಕೆ ಹೋಗ ಬೇಕೋ ಬೇಡವೋ ಎಂದು ದೇವರನ್ನು ಕೇಳಿ ಕೊಂಡರು. ಕರ್ತನು--ಹೋಗಿರಿ; ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು. ಇಸ್ರಾಯೇಲ್ಯರು ಗಿಬೆಯದ ಸುತ್ತಲೂ ಹೊಂಚಿ ನೋಡುವವರನ್ನಿಟ್ಟರು. ಮೂರನೇ ದಿನದಲ್ಲಿ ಇಸ್ರಾಯೇಲ್ ಮಕ್ಕಳು ಬೆನ್ಯಾವಿಾನನ ಮಕ್ಕಳಿಗೆ ಎದುರಾಗಿ ಹೋಗಿ ಮೊದಲು ಎರಡು ಸಾರಿ ಮಾಡಿದ ಹಾಗೆಯೇ ಗಿಬೆಯದ ಸವಿಾಪದಲ್ಲಿ ವ್ಯೂಹವನ್ನು ಕಟ್ಟಿದರು. ಆಗ ಬೆನ್ಯಾವಿಾನನ ಮಕ್ಕಳು ಇಸ್ರಾ ಯೇಲ್ ಜನಕ್ಕೆ ಎದುರಾಗಿ ಹೊರಟು ಪಟ್ಟಣದ ಬಳಿಯಿಂದ ಹೊರಬಂದು ಅಡವಿಯಲ್ಲಿ ಹೆದ್ದಾರಿ ಯಾದ ಬೇತೇಲಿಗೂ ಗಿಬೆಯಕ್ಕೂ ಹೋಗುವ ಎರಡು ಮಾರ್ಗಗಳಲ್ಲಿ ಇಸ್ರಾಯೇಲ್ ಜನರೊಳಗೆ ಮೊದಲಿನ ಹಾಗೆಯೇ ಹೆಚ್ಚು ಕಡಿಮೆ ಮೂವತ್ತು ಜನರನ್ನು ಹೊಡೆದು ಕೊಲ್ಲಲಾರಂಭಿಸಿದಾಗ ಬೆನ್ಯಾವಿಾನನ ಮಕ್ಕಳು--ಅವರು ಮೊದಲಿನ ಹಾಗೆಯೇ ನಮ್ಮ ಮುಂದೆ ಮುರಿಯಲ್ಪಡುತ್ತಾರೆ ಅಂದುಕೊಂಡರು. ಆದರೆ ಇಸ್ರಾಯೇಲ್ ಮಕ್ಕಳು--ಅವರನ್ನು ಪಟ್ಟಣದ ಬಳಿಯಿಂದ ಹೆದ್ದಾರಿಗಳಿಗೆ ಎಳಕೊಳ್ಳುವ ಹಾಗೆ ನಾವು ಓಡಿಹೋಗೋಣ ಎಂದು ಅಂದುಕೊಂಡರು. ಇಸ್ರಾಯೇಲ್ ಮಕ್ಕಳೆಲ್ಲರೂ ತಮ್ಮ ಸ್ಥಳದಲ್ಲಿಂದ ಎದ್ದು ಬಾಳ್ತಾಮರಿನಲ್ಲಿ ವ್ಯೂಹವನ್ನು ಕಟ್ಟಿದರು. ಆಗ ಗಿಬೆಯದ ಗವಿಯಲ್ಲಿ ಹೊಂಚಿ ನೋಡುತ್ತಿದ್ದ ಇಸ್ರಾಯೇಲ್ಯರು ಹೊರಟುಬಂದರು. ಅವರಲ್ಲಿ ಆದುಕೊಳ್ಳಲ್ಪಟ್ಟ ಹತ್ತು ಸಾವಿರ ಮನುಷ್ಯರು ಗಿಬೆಯಕ್ಕೆ ವಿರೋಧವಾಗಿ ಬಂದರು. ಯುದ್ಧವು ಘೋರವಾಗಿತ್ತು. ಆದರೆ ಅವರು ತಮಗೆ ಕೇಡು ಸವಿಾಪವಾಗಿತ್ತೆಂದು ಅರಿಯದೆ ಇದ್ದರು. ಆಗ ಕರ್ತನು ಇಸ್ರಾಯೇಲಿನ ಮುಂದೆ ಬೆನ್ಯಾವಿಾನನನ್ನು ಹೊಡೆದನು. ಆ ದಿನದಲ್ಲಿ ಇಸ್ರಾಯೇಲ್ ಮಕ್ಕಳು ಬೆನ್ಯಾವಿಾನ್ಯರಲ್ಲಿ ಕತ್ತಿ ಹಿಡಿ ಯುವವರಾದ ಇಪ್ಪತ್ತೈದು ಸಾವಿರದ ನೂರು ಮನುಷ್ಯ ರನ್ನು ನಾಶಮಾಡಿದರು. ಹೀಗೆ ಬೆನ್ಯಾವಿಾನನ ಮಕ್ಕಳು ತಾವು ಹೊಡೆಯಲ್ಪಟ್ಟಿದೇವೆಂದು ಕಂಡರು; ಯಾಕಂದರೆ ಇಸ್ರಾಯೇಲ್ ಮನುಷ್ಯರು ಗಿಬೆಯದ ಬಳಿಯಲ್ಲಿ ಹೊಂಚು ಹಾಕುವದಕ್ಕೆ ಇಟ್ಟವರನ್ನು ನಂಬಿದ್ದದರಿಂದ ಬೆನ್ಯಾವಿಾನ್ಯರಿಗೆ ಸ್ಥಳವನ್ನು ಕೊಟ್ಟರು. ಆಗ ಹೊಂಚುಹಾಕಿಕೊಂಡಿದ್ದವರು ತೀವ್ರವಾಗಿ ಗಿಬೆಯಕ್ಕೆ ಹೋದರು. ಹೊಂಚುಹಾಕಿದ್ದವರು ಸಾಲಾಗಿ ಹೊರಟು ಪಟ್ಟಣದಲ್ಲಿರುವವರೆಲ್ಲರನ್ನು ಕತ್ತಿಯಿಂದ ಹೊಡೆದರು. ಇಸ್ರಾಯೇಲ್ ಮನುಷ್ಯರು ಹೊಂಚು ಹಾಕಿಕೊಂಡಿದ್ದವರ ಸಂಗಡ ನೇಮಿಸಿಕೊಂಡ ಗುರುತೇ ನಂದರೆ, ಪಟ್ಟಣದಲ್ಲಿಂದ ಮಹಾದೊಡ್ಡ ಹೊಗೆಯನ್ನು ಏಳಮಾಡುವದೇ. ಇಸ್ರಾಯೇಲ್ ಮನುಷ್ಯರು ಯುದ್ಧದಲ್ಲಿ ಹಿಂದೆಗೆದಾಗ ಬೆನ್ಯಾವಿಾನ್ಯರು ಇಸ್ರಾ ಯೇಲ್ಯರನ್ನು ಹೊಡೆಯುವದಕ್ಕೆ ಪ್ರಾರಂಭಿಸಿ ಅವರಲ್ಲಿ ಹೆಚ್ಚುಕಡಿಮೆ ಮೂವತ್ತು ಜನರನ್ನು ಕೊಂದಾಗ ಮೊದಲು ಯುದ್ಧದಲ್ಲಿ ಆದ ಹಾಗೆ ನಿಶ್ಚಯವಾಗಿ ಅವರು ನಮ್ಮ ಮುಂದೆ ಮುರಿಯಲ್ಪಡುತ್ತಾರೆ ಅಂದು ಕೊಂಡರು. ಆದರೆ ಪಟ್ಟಣದೊಳಗಿಂದ ಅಗ್ನಿ ಜ್ವಾಲೆಯು ಹೊಗೆಯ ಸ್ತಂಭ ಸಹಿತವಾಗಿ ಏಳುವದಕ್ಕೆ ಪ್ರಾರಂಭಿಸಿತು. ಬೆನ್ಯಾವಿಾನ್ಯರು ಹಿಂದಕ್ಕೆ ಅದನ್ನು ತಿರುಗಿ ನೋಡಿದಾಗ ಇಗೋ, ಪಟ್ಟಣದ ಜ್ವಾಲೆಯು ಆಕಾಶಕ್ಕೆ ಏರಿತು. ಇಸ್ರಾಯೇಲ್ ಮನುಷ್ಯರು ತಿರುಗಿ ಕೊಂಡು ಬಂದಾಗ ಬೆನ್ಯಾವಿಾನನ ಜನರು ತಲ್ಲಣ ಗೊಂಡರು. ತಮ್ಮ ಮೇಲೆ ಕೇಡು ಪ್ರಾಪ್ತವಾಯಿತೆಂದು ಕಂಡರು. ಆದದರಿಂದ ಅವರು ಇಸ್ರಾಯೇಲ್ ಮನು ಷ್ಯರ ಮುಂದೆ ಅರಣ್ಯದ ಮಾರ್ಗಕ್ಕೆ ತಿರುಗಿಕೊಂಡು ಹೋದರು. ಆದರೆ ಯುದ್ಧವು ಅವರನ್ನು ಹಿಡಿ ಯಿತು. ಪಟ್ಟಣದಿಂದ ಹೊರಟು ಬರುವ ಜನರನ್ನು ಮಧ್ಯದಲ್ಲೇ ಕೊಂದುಹಾಕಿದರು. ಹೀಗೆ ಬೆನ್ಯಾ ವಿಾನ್ಯರನ್ನು ಸುತ್ತಲೂ ಮುತ್ತಿಕೊಂಡು ಅವರನ್ನು ಹಿಂದಟ್ಟಿ, ಗಿಬೆಯಕ್ಕೆ ಮೂಡಣ ದಿಕ್ಕಿನಲ್ಲಿ ಸಾವಕಾಶ ವಿಲ್ಲದೆ ತುಳಿದುಹಾಕಿದರು. ಬೆನ್ಯಾವಿಾನ್ಯರಲ್ಲಿ ಹದಿನೆಂಟು ಸಾವಿರ ಜನರು ಬಿದ್ದರು. ಇವರೆಲ್ಲರೂ ಪರಾಕ್ರಮಶಾಲಿಗಳಾಗಿದ್ದರು. ಆದರೆ ಅವರು ತಿರುಗಿ ಕೊಂಡು ಅರಣ್ಯದಲ್ಲಿರುವ ರಿಮ್ಮೋನ್ ಬಂಡೆಗೆ ಓಡಿ ಹೋದರು. ಅದರಲ್ಲಿ ಐದು ಸಾವಿರ ಜನರನ್ನು ಹೆದ್ದಾರಿ ಗಳಲ್ಲಿ ಹಕ್ಕಲಾರಿಸಿ ಕೊಂದುಹಾಕಿದರು. ಕಡಿಮೆಯ ವರನ್ನು ಗಿದೋಮಿನ ವರೆಗೆ ಹಿಂದಟ್ಟಿ ಅವರಲ್ಲಿ ಎರಡು ಸಾವಿರ ಮನುಷ್ಯರನ್ನು ವಧಿಸಿದರು. ಹೀಗೆಯೇ ಬೆನ್ಯಾವಿಾನ್ಯರೊಳಗೆ ಆ ದಿವಸದಲ್ಲಿ ಬಿದ್ದವರೆಲ್ಲರೂ ಕತ್ತಿ ಹಿಡಿಯುವ ಇಪ್ಪತ್ತೈದು ಸಾವಿರ ಜನರು. ಇವರೆ ಲ್ಲರೂ ಪರಾಕ್ರಮಶಾಲಿಗಳಾಗಿದ್ದರು. ಆದರೆ ಆರು ನೂರು ಮಂದಿ ತಿರುಗಿಕೊಂಡು ಅರಣ್ಯದಲ್ಲಿರುವ ರಿಮ್ಮೋನ್ ಬೆಟ್ಟಕ್ಕೆ ಓಡಿಹೋಗಿ ರಿಮ್ಮೋನ್ ಗುಡ್ಡದಲ್ಲಿ ನಾಲ್ಕು ತಿಂಗಳು ವಾಸವಾಗಿದ್ದರು.ಇಸ್ರಾಯೇಲ್ ಜನರು ಬೆನ್ಯಾವಿಾನನ ಮಕ್ಕಳ ಮೇಲೆ ತಿರಿಗಿ ಹೋಗಿ ಪಟ್ಟಣದಲ್ಲಿ ಜನರನ್ನೂ ಪಶು ಗಳನ್ನೂ ಕೈಗೆ ಸಿಕ್ಕಿದ್ದೆಲ್ಲವನ್ನೂ ಕತ್ತಿಯಿಂದ ಹೊಡೆದು ತಾವು ಹೋದ ಸಮಸ್ತ ಪಟ್ಟಣಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು. ಇಸ್ರಾಯೇಲ್ ಜನರು ಬೆನ್ಯಾವಿಾನನ ಮಕ್ಕಳ ಮೇಲೆ ತಿರಿಗಿ ಹೋಗಿ ಪಟ್ಟಣದಲ್ಲಿ ಜನರನ್ನೂ ಪಶು ಗಳನ್ನೂ ಕೈಗೆ ಸಿಕ್ಕಿದ್ದೆಲ್ಲವನ್ನೂ ಕತ್ತಿಯಿಂದ ಹೊಡೆದು ತಾವು ಹೋದ ಸಮಸ್ತ ಪಟ್ಟಣಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
- Zephaniah 3:6–7 ಚೆಫನ್ಯ 3:6–7ನಾನು ಜನಾಂಗಗಳನ್ನು ಕಡಿದು ಬಿಟ್ಟಿದ್ದೇನೆ; ಅವುಗಳ ಗೋಪುರಗಳು ಹಾಳಾಗಿವೆ; ಅವರ ಬೀದಿಗಳನ್ನು ಯಾರೂ ಹಾದು ಹೋಗದ ಹಾಗೆ ಹಾಳು ಮಾಡಿದ್ದೇನೆ; ಅವುಗಳ ಪಟ್ಟಣಗಳು ನಾಶವಾದವು, ಹೀಗೆ ಅಲ್ಲಿ ಯಾವನೂ ಇರುವದಿಲ್ಲ, ಯಾವ ಮನುಷ್ಯನು ಅಲ್ಲಿ ವಾಸಿಸುವದೂ ಇಲ್ಲ. ನಾನು--ನಿಶ್ಚಯವಾಗಿ ನೀನು ನನಗೆ ಭಯಪಟ್ಟು ಶಿಕ್ಷಣವನ್ನು ಹೊಂದುವಿ; ಹೀಗೆ ನಾನು ಅವರಿಗೆ ಶಿಕ್ಷೆ ವಿಧಿಸಿದರೂ ಅವರ ನಿವಾಸವು ಕಡಿದು ಬಿಡಲ್ಪ ಡುವದಿಲ್ಲ; ಆದರೆ ಅವರು ಬೇಗನೆ ಎದ್ದು ತಮ್ಮ ಕ್ರಿಯೆಗಳನ್ನೆಲ್ಲಾ ಕೆಡಿಸಿಬಿಟ್ಟರು ಅಂದೆನು.
- Genesis 8:21 ಆದಿಕಾಂಡ 8:21ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
- Judges 20:13–14 ನ್ಯಾಯಸ್ಥಾಪಕರು 20:13–14ಗಿಬೆಯದಲ್ಲಿರುವ ಬೆಲಿಯಾಳನ ಮಕ್ಕಳಾದ ಆ ಮನುಷ್ಯರನ್ನು ನಾವು ಕೊಲೆಮಾಡಿ ಕೆಟ್ಟತನವನ್ನು ಇಸ್ರಾಯೇಲಿನಿಂದ ತೆಗೆದುಹಾಕುವ ಹಾಗೆ ಅವರನ್ನು ಒಪ್ಪಿಸಿಕೊಡಿರಿ ಎಂದು ಹೇಳಬೇಕು ಅಂದರು. ಆದರೆ ಬೆನ್ಯಾವಿಾನನ ಮಕ್ಕಳು ಇಸ್ರಾಯೇಲ್ ಮಕ್ಕಳಾದ ತಮ್ಮ ಸಹೋದರರ ಮಾತನ್ನು ಕೇಳುವುದಕ್ಕೆ ಮನಸ್ಸಿ ಲ್ಲದೆ ಇಸ್ರಾಯೇಲ್ ಮಕ್ಕಳ ಸಂಗಡ ಯುದ್ಧಮಾಡು ವದಕ್ಕೆ ಹೊರಡುವ ಹಾಗೆ ಪಟ್ಟಣಗಳಿಂದ ಗಿಬೆಯಲ್ಲಿ ಬಂದು ಕೂಡಿದರು.
- Matthew 23:31–32 ಮತ್ತಾಯನು 23:31–32ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ. ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ.