Hosea · chapter 11 · verse 10
Hosea 11:10 in Kannada
ಅವರು ಕರ್ತನ ಹಿಂದೆ ಹೋಗುವರು; ಆತನು ಸಿಂಹದ ಹಾಗೆ ಗರ್ಜಿಸುವನು; ಆತನು ಗರ್ಜಿಸುವಾಗ ಮಕ್ಕಳು ಪಶ್ಚಿಮದಿಂದ ನಡುಗಿಬರುವರು;
Avaru kartana hinde hoguvaru; aatanu sinhada haage garjisuvanu; aatanu garjisuvaaga makkalu pashchimadinda nadugibaruvaru;
Hosea 11:10 in English
- King James Version (KJV)
- They shall walk after the LORD: he shall roar like a lion: when he shall roar, then the children shall tremble from the west.
- World English Bible (WEB)
- They will walk after the LORD, who will roar like a lion; for he will roar, and the children will come trembling from the west.
- American Standard Version (ASV)
- They shall walk after Jehovah, who will roar like a lion; for he will roar, and the children shall come trembling from the west.
- Bible in Basic English (BBE)
- They will go after the Lord; his cry will be like that of a lion; his cry will be loud, and the children will come from the west, shaking with fear;
- Darby Translation (DBY)
- They shall walk after Jehovah; he shall roar like a lion; when he shall roar, then the children shall hasten from the west:
- Webster's Bible (WBS)
- They shall walk after the LORD: he shall roar like a lion: when he shall roar, then the children shall tremble from the west.
- Young's Literal Translation (YLT)
- After Jehovah they go — as a lion He roareth, When He doth roar, then tremble do the sons from the west.
Read in context
- 8ಎಫ್ರಾಯಾಮೇ, ನಾನು ನಿನ್ನನ್ನು ಬಿಟ್ಟು ಬಿಡುವದು ಹೇಗೆ? ಇಸ್ರಾಯೇಲೇ, ನಿನ್ನನ್ನು ನಾನು ಬಿಡಿಸುವದು ಹೇಗೆ? ನಾನು ನಿನ್ನನ್ನು ಅದ್ಮದ ಹಾಗೆ ಮಾಡುವದು ಹೇಗೆ? ನಾನು ನಿನ್ನನ್ನು ಜೆಬೋಯಾಮಿನ ಹಾಗೆ ಸ್ಥಾಪಿಸುವದು ಹೇಗೆ? ನನ್ನ ಹೃದಯವು ನನ್ನಲ್ಲಿ ತಿರುಗಿಕೊಂಡಿದೆ. ನನ್ನ ಪಶ್ಚಾತ್ತಾಪಗಳು ಒಟ್ಟಿಗೆ ಹತ್ತಿ ಕೊಂಡಿವೆ.
- 9ನನ್ನ ಕೋಪದ ಉರಿಯನ್ನು ನಾನು ತೀರಿಸುವದಿಲ್ಲ, ನಾನು ಎಫ್ರಾಯಾಮನ್ನು ನಾಶ ಮಾಡಲು ತಿರುಗಿಕೊಳ್ಳುವದಿಲ್ಲ; ನಾನು ದೇವರೇ ಮನುಷ್ಯನಲ್ಲ, ನಿಮ್ಮ ಮಧ್ಯದಲ್ಲಿರುವಾತನಾದ ಪರಿ ಶುದ್ಧನೇ. ಪಟ್ಟಣದೊಳಗೆ ನಾನು ಪ್ರವೇಶಿಸುವದಿಲ್ಲ.
- 10ಅವರು ಕರ್ತನ ಹಿಂದೆ ಹೋಗುವರು; ಆತನು ಸಿಂಹದ ಹಾಗೆ ಗರ್ಜಿಸುವನು; ಆತನು ಗರ್ಜಿಸುವಾಗ ಮಕ್ಕಳು ಪಶ್ಚಿಮದಿಂದ ನಡುಗಿಬರುವರು;
- 11ಐಗುಪ್ತದ ಪಕ್ಷಿಯ ಹಾಗೆ ಮತ್ತು ಅಶ್ಯೂರ್ಯರ ದೇಶದ ಪಾರಿವಾಳದ ಹಾಗೆ ಅವರು ನಡುಗುವರು. ನಾನು ಅವರನ್ನು ಅವರ ಮನೆತನಗಳಲ್ಲಿ ಇಡುವೆನು ಎಂದು ಕರ್ತನು ಹೇಳುತ್ತಾನೆ.ಎಫ್ರಾಯಾಮು ಸುಳ್ಳಿನಿಂದ ಮತ್ತು ಇಸ್ರಾ ಯೇಲಿನ ಮನೆಯವರು ಮೋಸದಿಂದ ನನ್ನನ್ನು ಸುತ್ತಿಕೊಂಡಿದ್ದಾರೆ, ಆದರೆ ಯೆಹೂದನು ಇನ್ನೂ ದೇವರ ಸಂಗಡ ಆಳುತ್ತಾನೆ; ಮತ್ತು ಪರಿಶುದ್ಧರ ಸಂಗಡ ನಂಬಿಗಸ್ತನಾಗಿದ್ದಾನೆ.
- 12ಎಫ್ರಾಯಾಮು ಸುಳ್ಳಿನಿಂದ ಮತ್ತು ಇಸ್ರಾ ಯೇಲಿನ ಮನೆಯವರು ಮೋಸದಿಂದ ನನ್ನನ್ನು ಸುತ್ತಿಕೊಂಡಿದ್ದಾರೆ, ಆದರೆ ಯೆಹೂದನು ಇನ್ನೂ ದೇವರ ಸಂಗಡ ಆಳುತ್ತಾನೆ; ಮತ್ತು ಪರಿಶುದ್ಧರ ಸಂಗಡ ನಂಬಿಗಸ್ತನಾಗಿದ್ದಾನೆ.
Cross references
- Joel 3:16 ಯೋವೇಲ 3:16ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು.
- Amos 1:2 ಆಮೋಸ 1:2ಅವನು ಹೇಳಿದ್ದೇನಂದರೆ--ಕರ್ತನು ಚೀಯೋನಿ ನಿಂದ ಘರ್ಜಿಸಿ ಯೆರೂಸಲೇಮಿನಿಂದ ತನ್ನ ಧ್ವನಿಗೈಯು ವನು; ಕುರುಬರ ವಾಸದ ಸ್ಥಳಗಳು ಗೋಳಾಡುತ್ತವೆ ಮತ್ತು ಕರ್ಮೆಲಿನ ತುದಿಯು ಒಣಗಿ ಹೋಗುತ್ತದೆ ಎಂದು ಹೇಳುತ್ತಾನೆ.
- Isaiah 31:4 ಯೆಶಾಯ 31:4ಕರ್ತನು ನನಗೆ ಹೀಗೆ ಹೇಳಿದ್ದಾನೆ -- ಸಿಂಹವು, ಪ್ರಾಯದ ಸಿಂಹವು ಬೇಟೆಯ ಮೇಲೆ ಬಿದ್ದು ಗುರು ಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ ಅವರ ಗದ್ದಲಕ್ಕೆ ಕುಂದಿಹೋಗದೆ ಇರುವದೋ ಹಾಗೆಯೇ ಸೈನ್ಯಗಳ ಕರ್ತನು ಚೀಯೋನ್ ಪರ್ವತ ಕ್ಕೋಸ್ಕರವೂ ಅದರ ಗುಡ್ಡಕ್ಕೋಸ್ಕರವೂ ಯುದ್ಧ ಮಾಡಲು ಇಳಿದು ಬರುವನು.
- Jeremiah 25:30 ಯೆರೆಮೀಯ 25:30ಆದದರಿಂದ ನೀನು ಅವರಿಗೆ ವಿರೋಧವಾಗಿ ಈ ವಾಕ್ಯಗಳನ್ನೆಲ್ಲಾ ಪ್ರವಾದಿಸಿ ಅವರಿಗೆ ಹೇಳತಕ್ಕದ್ದೇ ನಂದರೆ--ಕರ್ತನು ಉನ್ನತದಿಂದ ಘರ್ಜಿಸಿ ತನ್ನ ಪರಿಶುದ್ಧ ನಿವಾಸದೊಳಗಿಂದ ತನ್ನ ಶಬ್ದವನ್ನು ಕೊಡು ವನು ತನ್ನ ನಿವಾಸದ ಮೇಲೆ ಗಟ್ಟಿಯಾಗಿ ಘರ್ಜಿಸಿ ದ್ರಾಕ್ಷೇ ತುಳಿಯುವವರ ಹಾಗೆ ಆರ್ಭಟವನ್ನು ಭೂನಿವಾಸಿಗಳೆಲ್ಲರಿಗೆ ವಿರೋಧವಾಗಿ ಎತ್ತುವನು.
- Isaiah 64:2 ಯೆಶಾಯ 64:2ಬೆಂಕಿ ಕಟ್ಟಿಗೆಯನ್ನು ಹೊತ್ತಿಸುವಂತೆಯೂ ಬೆಂಕಿ ನೀರನ್ನು ಉಕ್ಕಿಸುವಂತೆಯೂ ನಿನ್ನ ಹೆಸರು ನಿನ್ನ ವೈರಿಗಳಿಗೆ ತಿಳಿಯುವಂತೆಯೂ ಮಾಡು!
- Jeremiah 31:9 ಯೆರೆಮೀಯ 31:9ಅಳುತ್ತಾ ಬರುವರು; ಬಿನ್ನಹಗಳ ಸಂಗಡ ಅವರನ್ನು ನಡಿಸುವೆನು; ಅವರು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು; ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ; ಎಫ್ರಾಯಾಮನು ನನ್ನ ಚೊಚ್ಚಲನೇ.
- Zechariah 8:7 ಜೆಕರ್ಯ 8:7ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನನ್ನ ಜನರನ್ನು ಪೂರ್ವ ದಿಕ್ಕಿನ ದೇಶದಿಂದಲೂ ಪಶ್ಚಿಮ ದಿಕ್ಕಿನ ದೇಶದಿಂದಲೂ ರಕ್ಷಿಸುವೆನು.
- Amos 3:8 ಆಮೋಸ 3:8ಸಿಂಹವು ಗರ್ಜಿಸಿದರೆ ಭಯಪಡದೆ ಇರುವ ವರು ಯಾರು? ಕರ್ತನಾದ ದೇವರು ಮಾತನಾಡಿದರೆ ಅದನ್ನು ಪ್ರವಾದಿಸದೆ ಇರುವವರು ಯಾರು?
- Jeremiah 5:22 ಯೆರೆಮೀಯ 5:22ನೀವು ನನಗೆ ಭಯಪಡುವದಿಲ್ಲವೋ? ನನ್ನ ಸಮ್ಮುಖದಲ್ಲಿ ನಡುಗುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ; ಸಮುದ್ರವು ದಾಟಕೂಡದ ಹಾಗೆ ಮರಳನ್ನು ನಿತ್ಯ ನೇಮಕದಿಂದ ನಾನು ಮೇರೆಯಾಗಿಟ್ಟಿದ್ದೇನೆ; ಅದರ ತೆರೆಗಳು ಎದ್ದರೂ ದಡ ವಿಾರಲಾರವು, ಘೋಷಿಸಿ ದರೂ ಅದನ್ನು ದಾಟಲಾರವು.
- Romans 8:1 ರೋಮಾಪುರದವರಿಗೆ 8:1ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.
- Micah 4:5 ಮೀಕ 4:5ಎಲ್ಲಾ ಜನಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ದೇವರ ಹೆಸರಿನಲ್ಲಿ ನಡೆ ಯುವನು; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರಿನಲ್ಲಿ ಎಂದೆಂದಿಗೂ ನಡೆಯುವೆವು.
- 2 Peter 2:10 2 ಪೇತ್ರನು 2:10ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.