Hosea · chapter 11 · verse 7
Hosea 11:7 in Kannada
ನನ್ನ ಜನರು ನನ್ನ ಕಡೆಯಿಂದ ಹಿಂಜರಿಯಬೇಕೆಂದು ತೀರ್ಮಾನಿಸಿದ್ದಾರೆ; ಅವರನ್ನು ಮಹೋನ್ನತನ ಬಳಿಗೆ ಕರೆದರೂ ಒಬ್ಬನಾದರೂ ಆತನನ್ನು ಉನ್ನತ ಪಡಿಸಲಾರನು.
Nanna janaru nanna kadeyinda hinjariyabekendu teermaanisiddaare; avarannu mahonnatana balige karedaroo obbanaadaroo aatanannu unnata padisalaaranu.
Hosea 11:7 in English
- King James Version (KJV)
- And my people are bent to backsliding from me: though they called them to the most High, none at all would exalt [him].
- World English Bible (WEB)
- My people are determined to turn from me. Though they call to the Most High, he certainly won’t exalt them.
- American Standard Version (ASV)
- And my people are bent on backsliding from me: though they call them to [him that is] on high, none at all will exalt [him].
- Bible in Basic English (BBE)
- My people are given up to sinning against me; though their voice goes up on high, no one will be lifting them up.
- Darby Translation (DBY)
- Yea, my people are bent upon backsliding from me: though they call them to the Most High, none at all exalteth [him].
- Webster's Bible (WBS)
- And my people are bent to backsliding from me: though they called them to the most High, none at all would exalt [him] .
- Young's Literal Translation (YLT)
- And My people are hanging in suspense, about My returning, And unto the Most High they do call, Together they exalt not.
Read in context
- 5ಅವನು ಐಗುಪ್ತ ದೇಶದೊಳಗೆ ಹಿಂತಿರುಗಿ ಬರಲಾರನು; ಆದರೆ ಅಶ್ಯೂರ್ಯನು ಅವನ ರಾಜನಾಗಿದ್ದಾನೆ. ಅವರು ತಿರುಗಿ ಬರುವದಕ್ಕೆ ನಿರಾಕರಿಸಿದರು.
- 6ಆದದರಿಂದ ಅವರ ಆಲೋಚನೆಗಳ ನಿಮಿತ್ತ ಕತ್ತಿಯು ಅವರ ಪಟ್ಟಣಗಳ ಮೇಲೆ ನೆಲೆಯಾಗಿದ್ದು ಅಲ್ಲಿನ ಕೊಂಬೆ ಗಳನ್ನು ಸುಟ್ಟು ಅವರನ್ನು ನುಂಗಿಬಿಡುತ್ತದೆ.
- 7ನನ್ನ ಜನರು ನನ್ನ ಕಡೆಯಿಂದ ಹಿಂಜರಿಯಬೇಕೆಂದು ತೀರ್ಮಾನಿಸಿದ್ದಾರೆ; ಅವರನ್ನು ಮಹೋನ್ನತನ ಬಳಿಗೆ ಕರೆದರೂ ಒಬ್ಬನಾದರೂ ಆತನನ್ನು ಉನ್ನತ ಪಡಿಸಲಾರನು.
- 8ಎಫ್ರಾಯಾಮೇ, ನಾನು ನಿನ್ನನ್ನು ಬಿಟ್ಟು ಬಿಡುವದು ಹೇಗೆ? ಇಸ್ರಾಯೇಲೇ, ನಿನ್ನನ್ನು ನಾನು ಬಿಡಿಸುವದು ಹೇಗೆ? ನಾನು ನಿನ್ನನ್ನು ಅದ್ಮದ ಹಾಗೆ ಮಾಡುವದು ಹೇಗೆ? ನಾನು ನಿನ್ನನ್ನು ಜೆಬೋಯಾಮಿನ ಹಾಗೆ ಸ್ಥಾಪಿಸುವದು ಹೇಗೆ? ನನ್ನ ಹೃದಯವು ನನ್ನಲ್ಲಿ ತಿರುಗಿಕೊಂಡಿದೆ. ನನ್ನ ಪಶ್ಚಾತ್ತಾಪಗಳು ಒಟ್ಟಿಗೆ ಹತ್ತಿ ಕೊಂಡಿವೆ.
- 9ನನ್ನ ಕೋಪದ ಉರಿಯನ್ನು ನಾನು ತೀರಿಸುವದಿಲ್ಲ, ನಾನು ಎಫ್ರಾಯಾಮನ್ನು ನಾಶ ಮಾಡಲು ತಿರುಗಿಕೊಳ್ಳುವದಿಲ್ಲ; ನಾನು ದೇವರೇ ಮನುಷ್ಯನಲ್ಲ, ನಿಮ್ಮ ಮಧ್ಯದಲ್ಲಿರುವಾತನಾದ ಪರಿ ಶುದ್ಧನೇ. ಪಟ್ಟಣದೊಳಗೆ ನಾನು ಪ್ರವೇಶಿಸುವದಿಲ್ಲ.
Cross references
- Jeremiah 8:5 ಯೆರೆಮೀಯ 8:5ಹಾಗಾದರೆ ಈ ಯೆರೂಸಲೇಮಿನ ಜನರು ನಿತ್ಯವಾದ ಹಿಂಜರಿಯುವಿಕೆಯಿಂದ ಯಾಕೆ ಹಿಂತಿರು ಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವದಕ್ಕೆ ನಿರಾಕರಿಸುತ್ತಾರೆ.
- Hosea 14:4 ಹೋಶೇಯ 14:4ನಾನು ಅವರ ಹಿಂಜರಿಯುವಿಕೆಯನ್ನು ಸ್ವಸ್ಥ ಮಾಡುವೆನು. ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. ಯಾಕಂದರೆ ನನ್ನ ಕೋಪವು ಅವನ ಕಡೆಯಿಂದ ತಿರುಗಿಕೊಂಡಿದೆ.
- Amos 5:4–6 ಆಮೋಸ 5:4–6ಕರ್ತನು ಇಸ್ರಾಯೇಲಿನ ಮನೆಯವರಿಗೆ ಹೀಗೆ ಹೇಳುತ್ತಾನೆ--ನೀವು ನನ್ನನ್ನು ಹುಡುಕಿ ಜೀವಿಸಿರಿ. ಆದರೆ ಬೇತೇಲನ್ನು ಆಶ್ರಯಿಸಬೇಡಿರಿ, ಗಿಲ್ಗಾಲಿಗೆ ಹೋಗಬೇಡಿರಿ, ಬೇರ್ಷೆಬಕ್ಕೆ ಹಾದು ಹೋಗ ಬೇಡಿರಿ, ಯಾಕಂದರೆ ಗಿಲ್ಗಾಲು ಸೆರೆಗೆ ನಿಶ್ಚಯವಾಗಿ ಹೋಗುವದು. ಬೇತೇಲು ಏನಿಲ್ಲದೆ ಹೋಗುವದು. ನೀವು ಕರ್ತನನ್ನು ಹುಡುಕಿ ಬದುಕಿರಿ, ಇಲ್ಲದಿದ್ದರೆ ಆತನು ಬೆಂಕಿಯಂತೆ ಯೋಸೇಫನ ಮನೆತನದಲ್ಲಿ ಪ್ರವೇಶಿಸುವನು; ಅದು ನುಂಗಿಬಿಡುವದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವದಿಲ್ಲ.
- Amos 5:14–15 ಆಮೋಸ 5:14–15ನೀವು ಬದುಕುವ ಹಾಗೆಯೂ ನೀವು ಹೇಳುವ ಪ್ರಕಾರ ಸೈನ್ಯಾಧಿಪತಿಯಾದ ಕರ್ತನು, ನಿಮ್ಮ ಸಂಗಡ ಇರುವ ಹಾಗೆಯೂ ಕೆಟ್ಟದ್ದನ್ನು ಬಿಟ್ಟು ಒಳ್ಳೆಯ ದನ್ನು ಹುಡುಕಿರಿ. ಕೆಟ್ಟದ್ದನ್ನು ದ್ವೇಷಿಸಿರಿ; ಒಳ್ಳೇದನ್ನು ಪ್ರೀತಿಸಿರಿ ಮತ್ತು ಬಾಗಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೈನ್ಯಾಧಿಪತಿಯಾದ ಕರ್ತನು ಯೋಸೇ ಫನ ಉಳಿದವರನ್ನು ಕನಿಕರಿಸಬಹುದು.
- Jeremiah 3:11 ಯೆರೆಮೀಯ 3:11ಕರ್ತನು ನನಗೆ ಹೇಳಿದ್ದೇ ನಂದರೆ--ಹಿಂದಿರುಗಿದ ಇಸ್ರಾಯೇಲು ವಂಚನೆಯುಳ್ಳ ಯೆಹೂದಕ್ಕಿಂತ ಹೆಚ್ಚಾಗಿ ತನ್ನನ್ನು ನೀತಿವಂತಳನ್ನಾಗಿ ಮಾಡಿಕೊಂಡಿದ್ದಾಳೆ.
- Hosea 7:16 ಹೋಶೇಯ 7:16ಅವರು ಹಿಂತಿರುಗುತ್ತಾರೆ, ಆದರೆ ಮಹೋನ್ನತನಾ ದಾತನ ಕಡೆಗೆ ಅಲ್ಲ. ಅವರು ಮೋಸ ಮಾಡುವ ಬಿಲ್ಲಿನ ಹಾಗೆ ಇದ್ದಾರೆ; ಅವರ ಪ್ರಧಾನರ ನಾಲಿಗೆಯ ಹುಚ್ಚು ಕೂಗಾಟದ ನಿಮಿತ್ತ ಕತ್ತಿಯಿಂದ ಬೀಳುವರು; ಇದೇ ಐಗುಪ್ತದೇಶದಲ್ಲಿ ಅವರಿಗಿರುವ ನಿಂದೆಯಾಗಿದೆ.
- Psalm 81:11 ಕೀರ್ತನೆಗಳು 81:11ಆದರೆ ನನ್ನ ಜನರು ನನ್ನ ಸ್ವರವನ್ನು ಕೇಳಲಿಲ್ಲ; ಇಸ್ರಾಯೇಲು ನನ್ನ ಮೇಲೆ ಮನಸ್ಸಿಡಲಿಲ್ಲ.
- Jeremiah 3:6–8 ಯೆರೆಮೀಯ 3:6–8ಕರ್ತನು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನಂದರೆ--ಹಿಂದಿರುಗಿದ ಇಸ್ರಾ ಯೇಲು ಮಾಡಿದ್ದನ್ನು ನೀನು ನೋಡಿದ್ದಿಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ಹೋಗಿ ಸೂಳೆತನ ಮಾಡಿದ್ದಾಳೆ. ಅವಳು ಇವುಗಳನ್ನೆಲ್ಲಾ ಮಾಡಿದ ಮೇಲೆ ನಾನು--ನನ್ನ ಬಳಿಗೆ ತಿರುಗಿಕೋ ಅಂದೆನು; ಆದರೆ ಅವಳು ತಿರುಗಿಕೊಳ್ಳಲಿಲ್ಲ; ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಅದನ್ನು ನೋಡಿದಳು. ಆಗ ನಾನು ನೋಡಿದ್ದೇ ನಂದರೆ, ಹಿಂದಿರುಗಿದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು ತ್ಯಾಗಪತ್ರವನ್ನು ಕೊಟ್ಟಿದ್ದಾಗ್ಯೂ ವಂಚನೆ ಯುಳ್ಳ ಅವಳ ಸಹೋದರಿಯಾದ ಯೆಹೂದಳು ಭಯಪಡದೆ ತಾನು ಕೂಡ ಹೋಗಿ ಸೂಳೆತನವನ್ನು ಮಾಡಿದಳು.
- Psalm 78:57–58 ಕೀರ್ತನೆಗಳು 78:57–58ತಮ್ಮ ಪಿತೃಗಳ ಹಾಗೆ ತಿರುಗಿಬಿದ್ದು ಅಪ ನಂಬಿಗಸ್ತರಾಗಿ ಮೋಸದ ಬಿಲ್ಲಿನ ಹಾಗೆ ವಾರೆ ಯಾದರು. ತಮ್ಮ ಉನ್ನತ ಸ್ಥಳಗಳಿಂದ ಆತನಿಗೆ ಕೋಪವನ್ನೆಬ್ಬಿಸಿ ಕೆತ್ತಿದ ತಮ್ಮ ವಿಗ್ರಹಗಳಿಂದ ಆತನಿಗೆ ರೋಷವನ್ನೆಬ್ಬಿಸಿದರು.
- Proverbs 14:14 ಜ್ಞಾನೋಕ್ತಿಗಳು 14:14ಹೃದಯದಲ್ಲಿ ಹಿಂಜರಿಯುವವನು ತನ್ನ ಸ್ವಂತ ಮಾರ್ಗಗಳಿಂದ ತುಂಬಿಕೊಳ್ಳುವನು; ಒಳ್ಳೆಯವನು ತನ್ನಲ್ಲಿ ತಾನೇ ತೃಪ್ತಿಹೊಂದುವನು.
- Jeremiah 14:7 ಯೆರೆಮೀಯ 14:7ಓ ಕರ್ತನೇ, ನಮ್ಮ ಅಕ್ರಮಗಳು ನಮಗೆ ವಿರೋಧ ವಾಗಿ ಸಾಕ್ಷಿಕೊಟ್ಟರೂ ನೀನೇ ನಿನ್ನ ಹೆಸರಿಗೋಸ್ಕರ ನಡಿಸು; ನಮ್ಮ ಹಿಂಜರಿಯುವಿಕೆಗಳು ಅನೇಕವಾಗಿವೆ; ನಿನಗೆ ವಿರೋಧವಾಗಿ ಪಾಪಮಾಡಿದ್ದೇವೆ.
- Hosea 4:16 ಹೋಶೇಯ 4:16ಹಿಂಜರಿಯುವ ಕಡಸಿನ ಹಾಗೆ ಇಸ್ರಾಯೇಲು ಹಿಂಜ ರಿಯುತ್ತದೆ; ಈಗ ಕರ್ತನು ವಿಸ್ತಾರ ಸ್ಥಳದಲ್ಲಿರುವ ಕುರಿಮರಿಯ ಹಾಗೆ ಅವರನ್ನು ಮೇಯಿಸುವನು.