Hosea · chapter 12 · verse 13
Hosea 12:13 in Kannada
ಪ್ರವಾದಿಯಿಂದ ಕರ್ತನು ಇಸ್ರಾಯೇಲನ್ನು ಐಗುಪ್ತದೊಳಗಿಂದ ಬರಮಾಡಿ ಆ ಪ್ರವಾದಿ ಯಿಂದಲೇ ಆತನು ಅವನನ್ನು ಕಾಪಾಡಿದನು.ಆದ ರೂ ಎಫ್ರಾಯಾಮು ಬಹು ಕಠೋರವಾಗಿ ಆತನನ್ನು ರೇಗಿಸಿತು. ಆದದರಿಂದ ಆತನು ಅದರ ರಕ್ತವನ್ನು ಅದರ ಮೇಲೆ ಬರಮಾಡುವನು; ಅವನ ನಿಂದೆಯನ್ನು ಅವನ ಕರ್ತನು ಅವನ ಮೇಲೆ ಬರಮಾಡುವನು.
Pravaadiyinda kartanu israayelannu aiguptadolaginda baramaadi aa pravaadi yindale aatanu avanannu kaapaadidanu.aada roo ephraayaamu bahu kathoravaagi aatanannu regisitu. Aadadarinda aatanu adara raktavannu adara mele baramaaduvanu; avana nindeyannu avana kartanu avana mele baramaaduvanu.
Hosea 12:13 in English
- King James Version (KJV)
- And by a prophet the LORD brought Israel out of Egypt, and by a prophet was he preserved.
- World English Bible (WEB)
- By a prophet the LORD brought Israel up out of Egypt, and by a prophet he was preserved.
- American Standard Version (ASV)
- And by a prophet Jehovah brought Israel up out of Egypt, and by a prophet was he preserved.
- Bible in Basic English (BBE)
- And by a prophet the Lord made Israel come up out of Egypt, and by a prophet he was kept safe.
- Darby Translation (DBY)
- And by a prophet Jehovah brought Israel out of Egypt, and by a prophet was he preserved.
- Webster's Bible (WBS)
- And by a prophet the LORD brought Israel out of Egypt, and by a prophet was he preserved.
- Young's Literal Translation (YLT)
- And by a prophet hath Jehovah brought up Israel out of Egypt, And by a prophet it hath been watched.
Read in context
- 11ಗಿಲ್ಯಾದಿನಲ್ಲಿ ದುಷ್ಟತನ ಇದೆಯೋ? ನಿಶ್ಚಯವಾಗಿ ಅವೆಲ್ಲಾ ವ್ಯರ್ಥವೇ; ಅವರು ಗಿಲ್ಗಾಲಿನಲ್ಲಿ ಹೋರಿಗಳನ್ನು ಅರ್ಪಿಸುತ್ತಾರೆ, ಹೌದು, ಅವರ ಬಲಿಪೀಠಗಳು ಹೊಲದ ಸಾಲುಗಳಲ್ಲಿರುವ ಕಲ್ಲುಕುಪ್ಪೆಯ ಹಾಗಿದೆ ಎಂದು ಹೇಳಿದನು.
- 12ಯಾಕೋಬನು ಸಿರಿಯಾ ದೇಶಕ್ಕೆ ಓಡಿಹೋದನು; ಇಸ್ರಾಯೇಲನು ಹೆಂಡತಿಯ ನಿಮಿತ್ತ ಸೇವೆಮಾಡಿ ಹೆಂಡತಿಯ ನಿಮಿತ್ತ ಕುರಿಗಳನ್ನು ಕಾದನು.
- 13ಪ್ರವಾದಿಯಿಂದ ಕರ್ತನು ಇಸ್ರಾಯೇಲನ್ನು ಐಗುಪ್ತದೊಳಗಿಂದ ಬರಮಾಡಿ ಆ ಪ್ರವಾದಿ ಯಿಂದಲೇ ಆತನು ಅವನನ್ನು ಕಾಪಾಡಿದನು.ಆದ ರೂ ಎಫ್ರಾಯಾಮು ಬಹು ಕಠೋರವಾಗಿ ಆತನನ್ನು ರೇಗಿಸಿತು. ಆದದರಿಂದ ಆತನು ಅದರ ರಕ್ತವನ್ನು ಅದರ ಮೇಲೆ ಬರಮಾಡುವನು; ಅವನ ನಿಂದೆಯನ್ನು ಅವನ ಕರ್ತನು ಅವನ ಮೇಲೆ ಬರಮಾಡುವನು.
- 14ಆದ ರೂ ಎಫ್ರಾಯಾಮು ಬಹು ಕಠೋರವಾಗಿ ಆತನನ್ನು ರೇಗಿಸಿತು. ಆದದರಿಂದ ಆತನು ಅದರ ರಕ್ತವನ್ನು ಅದರ ಮೇಲೆ ಬರಮಾಡುವನು; ಅವನ ನಿಂದೆಯನ್ನು ಅವನ ಕರ್ತನು ಅವನ ಮೇಲೆ ಬರಮಾಡುವನು.
Cross references
- Acts 3:22–23 ಅಪೊಸ್ತಲರ ಕೃತ್ಯಗಳು 3:22–23ಯಾಕಂದರೆ ಪಿತೃಗಳಿಗೆ ಮೋಶೆಯು ನಿಜವಾಗಿಯೂ ಹೇಳಿದ್ದೇನಂದರೆ--ನನ್ನ ಹಾಗೆ ಒಬ್ಬ ಪ್ರವಾದಿಯನ್ನು ನಿಮ್ಮ ಸಹೋದರರಲ್ಲಿ ನಿಮ್ಮ ದೇವರಾದ ಕರ್ತನು ನಿಮಗಾಗಿ ಎಬ್ಬಿಸುವನು; ಆತನು ನಿಮಗೆ ಹೇಳುವ ಎಲ್ಲಾ ವಿಷಯಗಳಿಗೆ ನೀವು ಕಿವಿಗೊಡತಕ್ಕದ್ದು; ಆ ಪ್ರವಾದಿಗೆ ಕಿವಿಗೊಡದಿರುವ ಪ್ರತಿಯೊಬ್ಬನೂ ಜನ ರೊಳಗಿಂದ ನಾಶವಾಗುವನು ಎಂಬದು.
- Exodus 12:50–51 ವಿಮೋಚನಕಾಂಡ 12:50–51ಕರ್ತನು ಮೋಶೆ ಆರೋನರಿಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ ಮಕ್ಕಳೆಲ್ಲಾ ಮಾಡಿದರು.ಅದೇ ದಿನದಲ್ಲಿ ಕರ್ತನು ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೇಶದೊಳಗಿಂದ ಹೊರಗೆ ತಂದನು. ಅದೇ ದಿನದಲ್ಲಿ ಕರ್ತನು ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೇಶದೊಳಗಿಂದ ಹೊರಗೆ ತಂದನು.
- Psalm 77:20 ಕೀರ್ತನೆಗಳು 77:20ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.
- Isaiah 63:11–14 ಯೆಶಾಯ 63:11–14ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ? ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ? ಅಡವಿಯಲ್ಲಿ ಕುದುರೆಯಂತೆ ಅಗಾಧಗಳಲ್ಲಿ ಅವರನ್ನು ಎಡವದ ಹಾಗೆ ನಡಿಸಿ ದವನು ಎಲ್ಲಿ ಅಂದನು. ಪಶುವು ತಗ್ಗಿಗೆ ಇಳಿ ಯುವ ಪ್ರಕಾರ, ಕರ್ತನ ಆತ್ಮನು ಅವರಿಗೆ ವಿಶ್ರಾಂತಿ ಕೊಟ್ಟನು; ಈ ಪ್ರಕಾರ ನೀನು ನಿನಗೆ ಮಹಿಮೆ ಯುಳ್ಳ ಹೆಸರನ್ನು ಉಂಟು ಮಾಡುವ ಹಾಗೆ, ನಿನ್ನ ಜನರನ್ನು ನಡಿಸಿದಿ.
- Acts 7:35–37 ಅಪೊಸ್ತಲರ ಕೃತ್ಯಗಳು 7:35–37ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು. ಅವನು ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರ ದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತ ಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದ ಮೇಲೆ ಅವರನ್ನು ನಡೆಸಿಕೊಂಡು ಬಂದನು. ನಿಮ್ಮ ದೇವರಾದ ಕರ್ತನು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಒಬ್ಬ ಪ್ರವಾದಿಯನ್ನು ನಿಮ ಗಾಗಿ ಎಬ್ಬಿಸುವನು; ನೀವು ಆತನ ಮಾತಿಗೆ ಕಿವಿಗೊಡ ಬೇಕೆಂದು ಇಸ್ರಾಯೇಲ್ ಜನರಿಗೆ ಹೇಳಿದ ಆ ಮೋಶೆಯು ಇವನೇ.
- Exodus 13:3 ವಿಮೋಚನಕಾಂಡ 13:3ಆಗ ಮೋಶೆಯು ಜನರಿಗೆ--ನೀವು ಐಗುಪ್ತದ ದಾಸತ್ವದ ಮನೆಯಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಿಮ್ಮನ್ನು ಅಲ್ಲಿಂದ ಹೊರಗೆ ಬರಮಾಡಿದ್ದಾನೆ. ಹೀಗಿರುವದರಿಂದ ಅಂದು ನೀವು ಹುಳಿ ರೊಟ್ಟಿಯನ್ನು ತಿನ್ನಬಾರದು.
- Amos 2:11–12 ಆಮೋಸ 2:11–12ನಾನು ನಿಮ್ಮ ಕುಮಾರ ರಲ್ಲಿ ಪ್ರವಾದಿಗಳನ್ನು ನಿಮ್ಮ ಯೌವನಸ್ಥರಲ್ಲಿ ನಾಜೀರರನ್ನು ಎಬ್ಬಿಸಿದೆನು. ಓ ಇಸ್ರಾಯೇಲಿನ ಮಕ್ಕಳೇ, ಇದು ಹೀಗಲ್ಲವೋ ಎಂದು ಕರ್ತನು ಹೇಳುತ್ತಾನೆ. ಆದರೆ ನೀವು ನಾಜೀರರಿಗೆ ಕುಡಿ ಯಲು ದ್ರಾಕ್ಷಾರಸವನ್ನು ಕೊಟ್ಟಿರಿ; ಪ್ರವಾದಿಗಳಿಗೆಪ್ರವಾದಿಸಬೇಡಿರೆಂದು ಆಜ್ಞಾಪಿಸಿದಿರಿ.
- Micah 6:4 ಮೀಕ 6:4ನಾನು ಐಗುಪ್ತದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, ದಾಸರ ಮನೆಯೊಳಗಿಂದ ನಿನ್ನನ್ನು ವಿಮೋ ಚಿಸಿ, ಮೋಶೆಯನ್ನೂ ಆರೋನನನ್ನೂ ಮಿರಿಯಾಮ ಳನ್ನೂ ನಿನ್ನ ಮುಂದೆ ಕಳುಹಿಸಿದೆನು.
- Hosea 13:4–5 ಹೋಶೇಯ 13:4–5ಆದಾಗ್ಯೂ ನಾನು ಐಗುಪ್ತದಿಂದ ನಿನ್ನ ದೇವರಾಗಿರುವ ಕರ್ತನಾಗಿದ್ದೇನೆ, ನೀನು ನನ್ನ ಹೊರತು ಯಾವ ದೇವರನ್ನೂ ತಿಳಿದುಕೊಳ್ಳಬಾರದು; ಯಾಕಂದರೆ ನನ್ನ ಹೊರತು ನಿನಗೆ ಬೇರೆ ರಕ್ಷಕನು ಇಲ್ಲ. ನಾನು ನಿನ್ನನ್ನು ಅರಣ್ಯದಲ್ಲಿಯೂ ಬಹು ಬಾಯಾರಿಕೆಯ ದೇಶದಲ್ಲಿಯೂ ತಿಳಿದುಕೊಂಡಿದ್ದೇನೆ.
- 1 Samuel 12:8 1 ಸಮುವೇಲನು 12:8ಯಾಕೋಬನು ಐಗುಪ್ತಕ್ಕೆ ಬಂದ ತರುವಾಯ ನಿಮ್ಮ ತಂದೆಗಳು ಕರ್ತ ನಿಗೆ ಮೊರೆಯಿಟ್ಟರು. ಆಗ ಕರ್ತನು ಮೋಶೆಯನ್ನೂ ಆರೋನನನ್ನೂ ಕಳುಹಿಸಿದನು. ಇವರು ನಿಮ್ಮ ತಂದೆ ಗಳನ್ನು ಐಗುಪ್ತದಿಂದ ಕರತಂದು ಅವರನ್ನು ಈ ದೇಶ ದಲ್ಲಿ ವಾಸಿಸುವಂತೆ ಮಾಡಿದನು.