Hosea · chapter 12 · verse 4
Hosea 12:4 in Kannada
ಹೌದು, ದೂತನ ಮೇಲೆ ಅವನು ಬಲಹೊಂದಿ ಜಯಿಸಿದನು; ಅವನು ಅತ್ತು ಆತನಿಗೆ ವಿಜ್ಞಾಪನೆಯನ್ನು ಸಲ್ಲಿಸಿದನು; ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು; ಅಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು.
Haudu, dootana mele avanu balahondi jayisidanu; avanu attu aatanige vijnyaapaneyannu sallisidanu; avanu aatanannu betelinalli kandukondanu; alli aatanu nammondige maatanaadidanu.
Hosea 12:4 in English
- King James Version (KJV)
- Yea, he had power over the angel, and prevailed: he wept, and made supplication unto him: he found him [in] Beth-el, and there he spake with us;
- World English Bible (WEB)
- Indeed, he struggled with the angel, and prevailed; he wept, and made supplication to him. He found him at Bethel, and there he spoke with us—
- American Standard Version (ASV)
- yea, he had power over the angel, and prevailed; he wept, and made supplication unto him: he found him at Beth-el, and there he spake with us,
- Bible in Basic English (BBE)
- He had a fight with the angel and overcame him; he made request for grace to him with weeping; he came face to face with him in Beth-el and there his words came to him;
- Darby Translation (DBY)
- Yea, he wrestled with the Angel, and prevailed; he wept, and made supplication unto him: he found him in Bethel, and there he spoke with us,
- Webster's Bible (WBS)
- Yes, he had power over the angel, and prevailed: he wept, and made supplication to him: he found him [in] Beth-el, and there he spoke with us;
- Young's Literal Translation (YLT)
- Yea, he is a prince unto the Messenger, And he overcometh [by] weeping, And he maketh supplication to Him, At Bethel He doth find him, And there He doth speak with us,
Read in context
- 2ಯೆಹೂದ ದೊಂದಿಗೆ ಕರ್ತನು ತರ್ಕಮಾಡಿ ಯಾಕೋಬನ್ನು ತನ್ನ ಮಾರ್ಗಗಳ ಪ್ರಕಾರ ಶಿಕ್ಷಿಸಿ ಅವನ ಕ್ರಿಯೆಗಳ ಪ್ರಕಾರ ಮುಯ್ಯಿ ತೀರಿಸಿ ಅವನಿಗೆ ಪ್ರತಿಫಲವನ್ನು ಕೊಡುವನು.
- 3ಗರ್ಭದಲ್ಲಿ ಅವನು ತನ್ನ ಸಹೋದರ ನನ್ನು ಹಿಮ್ಮಡಿಯಿಂದ ಹಿಡಿದು ತನ್ನ ಶಕ್ತಿಯಿಂದ ದೇವರೊಂದಿಗೆ ಬಲಹೊಂದಿದನು.
- 4ಹೌದು, ದೂತನ ಮೇಲೆ ಅವನು ಬಲಹೊಂದಿ ಜಯಿಸಿದನು; ಅವನು ಅತ್ತು ಆತನಿಗೆ ವಿಜ್ಞಾಪನೆಯನ್ನು ಸಲ್ಲಿಸಿದನು; ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು; ಅಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು.
- 5ಆತನು ಸೈನ್ಯಗಳ ಕರ್ತನಾದ ದೇವರೇ; ಆತನ ಜ್ಞಾಪಕಾ ರ್ಥವು ಕರ್ತನೇ,
- 6ಆದಕಾರಣ ನೀನು ನಿನ್ನ ದೇವರ ಕಡೆಗೆ ತಿರುಗಿಕೊ; ಕರುಣೆಯನ್ನೂ ನ್ಯಾಯವನ್ನೂ ಕಾಪಾಡು; ನಿನ್ನ ದೇವರಿಗಾಗಿ ಯಾವಾಗಲೂ ಕಾದುಕೊಂಡಿರು;
Cross references
- Genesis 35:15 ಆದಿಕಾಂಡ 35:15ದೇವರು ತನ್ನ ಸಂಗಡ ಮಾತನಾಡಿದ ಸ್ಥಳಕ್ಕೆ ಯಾಕೋಬನು ಬೇತೇಲ್ ಎಂದು ಹೆಸರಿಟ್ಟನು.
- Malachi 3:1 ಮಲಾಕಿಯ 3:1ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
- 1 Thessalonians 4:17 1 ಥೆಸಲೊನೀಕದವರಿಗೆ 4:17ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘ ಗಳಲ್ಲಿ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾ ಕಾಲವೂ ಕರ್ತನ ಜೊತೆಯಲ್ಲಿರುವೆವು.ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
- Psalm 66:6 ಕೀರ್ತನೆಗಳು 66:6ಆತನು ಸಮುದ್ರವನ್ನು ಒಣ ಗಿದ ಭೂಮಿಗೆ ತಿರುಗಿಸಿದನು; ಅವರು ಕಾಲು ನಡಿಗೆ ಯಾಗಿ ಪ್ರವಾಹವನ್ನು ದಾಟಿದರು; ಅಲ್ಲಿ ನಾವು ಆತನಲ್ಲಿ ಸಂತೋಷಿಸಿದೆವು.
- Genesis 35:9–10 ಆದಿಕಾಂಡ 35:9–10ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ ದೇವರು ಅವನಿಗೆ ಇನ್ನೊಂದು ಸಾರಿ ಪ್ರತ್ಯಕ್ಷನಾಗಿ ಅವನನ್ನು ಆಶೀರ್ವದಿಸಿದನು. ದೇವರು ಅವನಿಗೆ--ಈಗ ನಿನಗೆ ಯಾಕೋಬನೆಂದು ಹೆಸರಿ ರುವದು. ಆದರೆ ಇನ್ನು ಮೇಲೆ ನೀನು ಯಾಕೋಬ ನೆಂದು ಕರೆಯಲ್ಪಡದೆ ಇಸ್ರಾಯೇಲ್ ಎಂದು ಕರೆಯಲ್ಪಡುವಿ ಎಂದು ಹೇಳಿ ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟನು.
- Hebrews 6:13–18 ಇಬ್ರಿಯರಿಗೆ 6:13–18ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು-- ಖಂಡಿತವಾಗಿ ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೇನು. ನಿನ್ನನ್ನು ಹೆಚ್ಚಿಸೇ ಹೆಚ್ಚಿಸುವೆನು ಎಂದು ಹೇಳಿದನಷ್ಟೆ. ಹೀಗೆ ಅವನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಹೊಂದಿದನು. ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ. ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು. ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
- Genesis 32:29 ಆದಿಕಾಂಡ 32:29ಯಾಕೋಬನು--ನಿನ್ನ ಹೆಸರನ್ನು ನನಗೆ ತಿಳಿಸು ಎಂದು ಆತನನ್ನು ಕೇಳಿಕೊಂಡಾಗ ಆತನು--ನನ್ನ ಹೆಸರನ್ನು ಯಾಕೆ ಕೇಳುತ್ತೀ ಎಂದು ಹೇಳಿ ಅವನನ್ನು ಅಲ್ಲಿ ಆಶೀರ್ವದಿಸಿದನು.
- Acts 7:30–35 ಅಪೊಸ್ತಲರ ಕೃತ್ಯಗಳು 7:30–35ನಾಲ್ವತ್ತು ವರುಷ ತುಂಬಿದ ಮೇಲೆ ಸೀನಾಯಿ ಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು. ಮೋಶೆಯು ಅದನ್ನು ಕಂಡು ಆ ನೋಟಕ್ಕೆ ಆಶ್ಚರ್ಯಪಟ್ಟು ನೋಡಬೇಕೆಂದು ಹತ್ತಿರಕ್ಕೆ ಬಂದನು. ಆಗ--ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಎಂದು ಹೇಳುವ ಕರ್ತನ ಧ್ವನಿಯು ಅವನಿಗಾಯಿತು. ಆಗ ಮೋಶೆಯು ನಡುಗುತ್ತಾ ಅದನ್ನು ನೋಡುವದಕ್ಕೆ ಧೈರ್ಯವಿಲ್ಲ ದವನಾದನು. ಕರ್ತನು ಅವನಿಗೆ--ನಿನ್ನ ಕಾಲಿನ ಕೆರಗಳನ್ನು ತೆಗೆ; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿ. ನಾನು ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವದಕ್ಕೆ ಇಳಿದು ಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತ ದೇಶಕ್ಕೆ ಕಳುಹಿಸುತ್ತೇನೆ, ಬಾ ಎಂದು ಹೇಳಿದನು. ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು.
- Exodus 3:2–5 ವಿಮೋಚನಕಾಂಡ 3:2–5ಆಗ ಕರ್ತನ ದೂತನು ಪೊದೆಯೊಳಗಿಂದ ಅಗ್ನಿಜ್ವಾಲೆಯಲ್ಲಿ ಅವನಿಗೆ ಕಾಣಿಸಿ ಕೊಂಡನು. ಅವನು ನೋಡಿದಾಗ ಇಗೋ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು. ಆದಾಗ್ಯೂ ಪೊದೆಯು ಸುಡಲಿಲ್ಲ. ಆಗ ಮೋಶೆಯು--ನಾನು ಹೋಗಿ ಆ ಪೊದೆಯು ಯಾಕೆ ಸುಡದೆ ಇರುವದೆಂಬ ಆಶ್ಚರ್ಯ ವನ್ನು ನೋಡುವೆನು ಅಂದನು. ಅವನು ನೋಡು ವದಕ್ಕೆ ಹತ್ತಿರ ಬರುವದನ್ನು ಕರ್ತನು ನೋಡಿದಾಗ ದೇವರು ಪೊದೆಯೊಳಗಿಂದ ಅವನಿಗೆ--ಮೋಶೆಯೇ, ಮೋಶೆಯೇ ಎಂದು ಕರೆದನು; ಆಗ ಅವನು--ನಾನು ಇಲ್ಲಿ ಇದ್ದೇನೆ ಅಂದನು. ಆಗ ಆತನು--ಇಲ್ಲಿ ಸವಿಾಪಕ್ಕೆ ಬರಬೇಡ, ನಿನ್ನ ಪಾದಗಳಿಂದ ಕೆರ ಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ ಅಂದನು.
- Hebrews 5:7 ಇಬ್ರಿಯರಿಗೆ 5:7ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
- Isaiah 63:9 ಯೆಶಾಯ 63:9ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.
- Genesis 48:15 ಆದಿಕಾಂಡ 48:15ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು,