Hosea · chapter 12 · verse 9
Hosea 12:9 in Kannada
ಐಗುಪ್ತದೇಶದಿಂದ ನಿನ್ನ ದೇವರಾಗಿರುವ ಕರ್ತನಾದ ನಾನು ಇನ್ನೂ ಪರಿಶುದ್ಧ ಹಬ್ಬದ ದಿನದ ಪ್ರಕಾರ ಗುಡಾರಗಳಲ್ಲಿ ವಾಸಿಸುವ ಹಾಗೆ ನಿನ್ನನ್ನು ಮಾಡುವೆನು.
Aiguptadeshadinda ninna devaraagiruva kartanaada naanu innoo parishuddha habbada dinada prakaara gudaaragalalli vaasisuva haage ninnannu maaduvenu.
Hosea 12:9 in English
- King James Version (KJV)
- And I [that am] the LORD thy God from the land of Egypt will yet make thee to dwell in tabernacles, as in the days of the solemn feast.
- World English Bible (WEB)
- “But I am the LORD your God from the land of Egypt. I will yet again make you dwell in tents, as in the days of the solemn feast.
- American Standard Version (ASV)
- But I am Jehovah thy God from the land of Egypt; I will yet again make thee to dwell in tents, as in the days of the solemn feast.
- Bible in Basic English (BBE)
- But I am the Lord your God from the land of Egypt; I will give you tents for your living-places again as in the days of the holy meeting.
- Darby Translation (DBY)
- But I [that am] Jehovah thy God from the land of Egypt will again make thee to dwell in tents, as in the days of the solemn feast.
- Webster's Bible (WBS)
- And I [that am] the LORD thy God from the land of Egypt will yet make thee to dwell in tabernacles, as in the days of the solemn feast.
- Young's Literal Translation (YLT)
- And I — Jehovah thy God from the land of Egypt, Again do I turn thee back into tents, As in the days of the appointed time.
Read in context
- 7ಅವನು ವ್ಯಾಪಾರಿಯಾಗಿದ್ದು ಅವನ ಕೈಯಲ್ಲಿ ಮೋಸದ ತ್ರಾಸು ಇದೆ. ಕಸಕೊಳ್ಳುವದನ್ನು ಅವನು ಪ್ರೀತಿಮಾಡುತ್ತಾನೆ.
- 8ಎಫ್ರಾಯಾಮು--ಆದಾಗ್ಯೂ ನಾನು ಐಶ್ವರ್ಯವಂತನಾದೆನು, ನಾನು ಆಸ್ತಿಯನ್ನು ಕಂಡುಕೊಂಡೆನು; ನನ್ನ ಕೆಲಸಗಳಲ್ಲೆಲ್ಲಾ ಪಾಪವಾದ ದುಷ್ಟತ್ವವನ್ನು ಅವರು ನನ್ನಲ್ಲಿ ಕಂಡುಕೊಳ್ಳುವದಿಲ್ಲ.
- 9ಐಗುಪ್ತದೇಶದಿಂದ ನಿನ್ನ ದೇವರಾಗಿರುವ ಕರ್ತನಾದ ನಾನು ಇನ್ನೂ ಪರಿಶುದ್ಧ ಹಬ್ಬದ ದಿನದ ಪ್ರಕಾರ ಗುಡಾರಗಳಲ್ಲಿ ವಾಸಿಸುವ ಹಾಗೆ ನಿನ್ನನ್ನು ಮಾಡುವೆನು.
- 10ನಾನು ಪ್ರವಾದಿಗಳ ಮುಖಾಂತರ ಸಹ ನಿನ್ನೊಂದಿಗೆ ಮಾತನಾಡಿದ್ದೇನೆ, ನಾನು ದರ್ಶನಗಳನ್ನು ಹೆಚ್ಚಿಸಿದ್ದೇನೆ, ಇದಲ್ಲದೆ ಪ್ರವಾದಿಗಳ ಸೇವೆಯ ಮುಖಾಂತರ ಸಾಮ್ಯಗಳನ್ನು ಉಪಯೋಗಿಸಿದ್ದೇನೆ.
- 11ಗಿಲ್ಯಾದಿನಲ್ಲಿ ದುಷ್ಟತನ ಇದೆಯೋ? ನಿಶ್ಚಯವಾಗಿ ಅವೆಲ್ಲಾ ವ್ಯರ್ಥವೇ; ಅವರು ಗಿಲ್ಗಾಲಿನಲ್ಲಿ ಹೋರಿಗಳನ್ನು ಅರ್ಪಿಸುತ್ತಾರೆ, ಹೌದು, ಅವರ ಬಲಿಪೀಠಗಳು ಹೊಲದ ಸಾಲುಗಳಲ್ಲಿರುವ ಕಲ್ಲುಕುಪ್ಪೆಯ ಹಾಗಿದೆ ಎಂದು ಹೇಳಿದನು.
Cross references
- Hosea 13:4 ಹೋಶೇಯ 13:4ಆದಾಗ್ಯೂ ನಾನು ಐಗುಪ್ತದಿಂದ ನಿನ್ನ ದೇವರಾಗಿರುವ ಕರ್ತನಾಗಿದ್ದೇನೆ, ನೀನು ನನ್ನ ಹೊರತು ಯಾವ ದೇವರನ್ನೂ ತಿಳಿದುಕೊಳ್ಳಬಾರದು; ಯಾಕಂದರೆ ನನ್ನ ಹೊರತು ನಿನಗೆ ಬೇರೆ ರಕ್ಷಕನು ಇಲ್ಲ.
- Leviticus 23:40–43 ಯಾಜಕಕಾಂಡ 23:40–43ಮೊದಲನೆಯ ದಿವಸದಲ್ಲಿ ನೀವು ಸುಂದರ ವಾದ ಮರಗಳ ಕೊಂಬೆಗಳನ್ನೂ ಖರ್ಜೂರ ಮರಗಳ ಕೊಂಬೆಗಳನ್ನೂ ದಟ್ಟವಾದ ಮರಗಳ ಕೊಂಬೆಗಳನ್ನೂ ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳ ವರೆಗೆ ನಿಮ್ಮ ದೇವರಾಗಿರುವ ಕರ್ತನ ಎದುರಿನಲ್ಲಿ ಸಂತೋಷಪಡಬೇಕು. ಆ ವರುಷದಲ್ಲಿ ನೀವು ಏಳು ದಿವಸಗಳ ಹಬ್ಬವನ್ನು ಕರ್ತನಿಗಾಗಿ ಕೈಕೊಳ್ಳಬೇಕು. ಇದು ನಿಮ್ಮ ಸಂತತಿಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು; ನೀವು ಇದನ್ನು ಏಳನೆಯ ತಿಂಗಳಿನಲ್ಲಿ ಆಚರಿಸಬೇಕು. ಏಳು ದಿವಸಗಳ ವರೆಗೆ ನೀವು ಗುಡಾರಗಳಲ್ಲಿ ವಾಸಿಸಬೇಕು; ಇಸ್ರಾಯೇಲ್ಯ ರಾಗಿ ಹುಟ್ಟಿದವರೆಲ್ಲರೂ ಗುಡಾರಗಳಲ್ಲಿ ವಾಸಿಸ ಬೇಕು. ನಾನು ಇಸ್ರಾಯೇಲ್ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾಗ ಅವರು ಗುಡಾರಗಳಲ್ಲಿ ವಾಸಿಸುವಂತೆ ಮಾಡಿದೆನೆಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು; ನಿಮ್ಮ ದೇವರಾ ಗಿರುವ ಕರ್ತನು ನಾನೇ ಎಂಬದು.ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಕರ್ತನ ಹಬ್ಬಗಳನ್ನು ಪ್ರಕಟ ಮಾಡಿದನು.
- 2 Samuel 7:2 2 ಸಮುವೇಲನು 7:2ಅರ ಸನು ಪ್ರವಾದಿಯಾದ ನಾತಾನನಿಗೆ--ನೋಡು, ನಾನು ದೇವದಾರುಗಳ ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಮಂಜೂಷವು ತೆರೆಗಳ ಮಧ್ಯದಲ್ಲಿ ವಾಸವಾಗಿದೆ ಅಂದನು.
- Psalm 81:10 ಕೀರ್ತನೆಗಳು 81:10ಐಗುಪ್ತದೇಶದಿಂದ ನಿನ್ನನ್ನು ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ; ನಿನ್ನ ಬಾಯನ್ನು ಅಗಲವಾಗಿ ತೆರೆ; ಆಗ ನಾನು ಅದನ್ನು ತುಂಬಿಸುವೆನು.
- Zechariah 14:16–19 ಜೆಕರ್ಯ 14:16–19ಆಗುವದೇನಂದರೆ--ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗ ಗಳಲ್ಲಿ ಉಳಿದವರೆಲ್ಲಾ ವರುಷ ವರುಷಕ್ಕೆ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೂ ಗುಡಾ ರಗಳ ಹಬ್ಬವನ್ನು ಆಚರಿಸುವದಕ್ಕೂ ಹೋಗುವರು. ಆಗುವದೇನಂದರೆ, ಭೂಮಿಯ ಗೋತ್ರಗಳಲ್ಲಿ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೆ ಯೆರೂಸಲೇಮಿಗೆ ಹೋಗದೆ ಇರುವವರ್ಯಾರೋ ಅವರ ಮೇಲೆ ಮಳೆ ಇಲ್ಲದೆ ಇರುವದು. ಮಳೆ ಇಲ್ಲದ ಐಗುಪ್ತದ ಗೋತ್ರದವರು ಹೋಗದಿದ್ದರೆ ಗುಡಾರಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದ ಅನ್ಯಜನಾಂಗಗಳನ್ನು ಕರ್ತನು ಹೊಡೆಯುವ ವ್ಯಾಧಿಯು ಅವರ ಮೇಲೆ ಇರುವದು. ಇದೇ ಐಗುಪ್ತದ ದಂಡನೆಯೂ ಗುಡಾರಗಳ ಹಬ್ಬ ವನ್ನು ಆಚರಿಸುವದಕ್ಕೆ ಬಾರದ ಎಲ್ಲಾ ಜನಾಂಗಗಳ ದಂಡನೆಯೂ ಆಗಿರುವದು.
- Nehemiah 8:15–17 ನೆಹೆಮೀಯ 8:15–17ಏನಂದರೆ, ಬರೆದಿರುವ ಪ್ರಕಾರ ಗುಡಾರ ಹಾಕುವ ಹಾಗೆ ಬೆಟ್ಟಕ್ಕೆ ಹೋಗಿ ಇಪ್ಪೆಯ ಕೊಂಬೆಗಳನ್ನೂ ತೈಲಗಿಡದ ಕೊಂಬೆ ಗಳನ್ನೂ ಗಂಧದ ಗಿಡದ ಕೊಂಬೆಗಳನ್ನೂ ತಾಳೆಯ ಕೊಂಬೆಗಳನ್ನೂ ದಟ್ಟವಾಗಿರುವ ಗಿಡದ ಕೊಂಬೆಗಳನ್ನೂ ತಕ್ಕೊಂಡು ಬನ್ನಿರಿ ಎಂದು ತಮ್ಮ ಎಲ್ಲಾ ಪಟ್ಟಣಗಳ ಲ್ಲಿಯೂ ಯೆರೂಸಲೇಮಿನಲ್ಲಿಯೂ ಬಹಿರಂಗವಾಗಿ ಸಾರಬೇಕು ಎಂಬದೇ. ಹಾಗೆಯೇ ಜನರು ಹೊರಟು ಹೋಗಿ ತಕ್ಕೊಂಡು ಬಂದು ಅವರವರು ತಮ್ಮ ಮನೆ ಗಳ ಮೇಲೆಯೂ ತಮ್ಮ ಅಂಗಳಗಳಲ್ಲಿಯೂ ದೇವರ ಮನೆಯ ಅಂಗಳಗಳಲ್ಲಿಯೂ ನೀರಿನ ಬಾಗಲ ಬೀದಿಯಲ್ಲಿಯೂ ಎಫ್ರಾಯಾಮಿನ ಬಾಗಲ ಬೀದಿಯ ಲ್ಲಿಯೂ ತಮಗೆ ಗುಡಾರಗಳನ್ನು ಹಾಕಿದರು. ಈ ಪ್ರಕಾರ ಸೆರೆಯಿಂದ ತಿರಿಗಿ ಬಂದ ಸಭೆಯವರೆಲ್ಲರೂ ಗುಡಾರಗಳನ್ನು ಹಾಕಿ ಗುಡಾರಗಳಲ್ಲಿ ವಾಸವಾಗಿದ್ದರು. ನೂನನ ಮಗನಾದ ಯೆಹೋಶುವನ ದಿನವು ಮೊದಲ ಗೊಂಡು ಆ ದಿವಸದ ವರೆಗೂ ಇಸ್ರಾಯೇಲ್ ಮಕ್ಕಳು ಹಾಗೆ ಮಾಡಿರಲಿಲ್ಲ. ಅಲ್ಲಿ ಅವರಿಗೆ ಬಹಳ ಸಂತೋಷ ಇತ್ತು.ಎಜ್ರನು ಮೊದಲನೇ ದಿವಸದಿಂದ ಕಡೇ ದಿವಸದವರೆಗೂ ದಿನ ದಿನವೂ ದೇವರ ನ್ಯಾಯ ಪ್ರಮಾಣದ ಪುಸ್ತಕವನ್ನು ಓದುತ್ತಿದ್ದನು. ಹೀಗೆಯೇ ಅವರು ಏಳು ದಿವಸ ಹಬ್ಬವನ್ನು ಆಚರಿಸಿದರು. ಎಂಟನೇ ದಿವಸದಲ್ಲಿ ಪದ್ಧತಿಯ ಪ್ರಕಾರ ಪರಿಶುದ್ಧ ಸಭೆಯು ಸೇರಿತ್ತು.
- Genesis 25:27 ಆದಿಕಾಂಡ 25:27ಆ ಹುಡುಗರು ಬೆಳೆದಾಗ ಏಸಾವನು ಬೇಟೆ ಯಾಡುವದರಲ್ಲಿ ಜಾಣನಾಗಿದ್ದು ಅಡವಿಯ ಮನುಷ್ಯ ನಾದನು; ಯಾಕೋಬನು ಗುಡಾರಗಳಲ್ಲಿ ವಾಸ ಮಾಡುವ ಸಾಧುಮನುಷ್ಯನಾಗಿದ್ದನು.
- Leviticus 26:13 ಯಾಜಕಕಾಂಡ 26:13ಐಗುಪ್ತ ದೇಶದವರಿಗೆ ನೀವು ದಾಸರಾಗಿರದ ಹಾಗೆ ಅವರ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ ನಿಮ್ಮ ನೊಗದ ಕಟ್ಟುಗಳನ್ನು ಮುರಿದು ನಿಮ್ಮನ್ನು ನೆಟ್ಟಗೆ ನಡೆಯಮಾಡಿದ ನಿಮ್ಮ ದೇವರಾದ ಕರ್ತನು ನಾನೇ.
- Jeremiah 35:7 ಯೆರೆಮೀಯ 35:7ಮನೆಗಳನ್ನು ಕಟ್ಟಬೇಡಿರಿ; ಬೀಜವನ್ನು ಬಿತ್ತಬೇಡಿರಿ; ದ್ರಾಕ್ಷೇ ತೋಟಗಳನ್ನು ನೆಡಬೇಡಿರಿ; ಅಂಥದ್ದು ನಿಮಗಿರಬಾರದು; ಆದರೆ ನೀವು ಪರಕೀಯರ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗಿರುವ ಹಾಗೆ ನಿಮ್ಮ ದಿನಗಳಲ್ಲೆಲ್ಲಾ ಗುಡಾರಗಳಲ್ಲಿ ವಾಸಮಾಡಬೇಕು.
- Leviticus 19:36 ಯಾಜಕಕಾಂಡ 19:36ನ್ಯಾಯದತ್ರಾಸು, ನ್ಯಾಯದ ಕಲ್ಲುಗಳು, ನ್ಯಾಯದಎಫವು ಮತ್ತು ನ್ಯಾಯದಹೀನ್ ನಿಮಗಿರಬೇಕು. ಐಗುಪ್ತದೇಶದೊಳಗಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಕರ್ತನು ನಾನೇ.ಆದದರಿಂದ ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯ ಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು ಎಂದು ಹೇಳಿದನು.
- John 7:2 ಯೋಹಾನನು 7:2ಆಗ ಯೆಹೂದ್ಯರ ಗುಡಾರಗಳ ಹಬ್ಬವು ಹತ್ತಿರವಾಗಿತ್ತು.
- Exodus 20:2 ವಿಮೋಚನಕಾಂಡ 20:2ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ.