Hosea · chapter 13 · verse 14
Hosea 13:14 in Kannada
ನಾನು ಸಮಾಧಿಯ ಶಕ್ತಿಯಿಂದ ಅವರನ್ನು ಈಡು ಕೊಟ್ಟು ವಿಮೋಚಿಸುವೆನು; ಮರಣದಿಂದ ಅವರನ್ನು ಬಿಡಿಸುವೆನು. ಓ ಮರಣವೇ, ನಾನು ನಿನ್ನ ಬಾಧೆಗ ಳಾಗಿರುವೆನು; ಓ ಸಮಾಧಿಯೇ, ನಾನು ನಿನ್ನ ನಾಶನ ವಾಗಿದ್ದೇನೆ; ಪಶ್ಚಾತ್ತಾಪವು ನನ್ನ ಕಣ್ಣುಗಳಿಂದ ಮರೆ ಯಾಗಿದೆ.
Naanu samaadhiya shaktiyinda avarannu eedu kottu vimochisuvenu; maranadinda avarannu bidisuvenu. O maranave, naanu ninna baadhega laagiruvenu; o samaadhiye, naanu ninna naashana vaagiddene; pashchaattaapavu nanna kannugalinda mare yaagide.
Hosea 13:14 in English
- King James Version (KJV)
- I will ransom them from the power of the grave; I will redeem them from death: O death, I will be thy plagues; O grave, I will be thy destruction: repentance shall be hid from mine eyes.
- World English Bible (WEB)
- I will ransom them from the power of Sheol. I will redeem them from death! Death, where are your plagues? Sheol, where is your destruction? “Compassion will be hidden from my eyes.
- American Standard Version (ASV)
- I will ransom them from the power of Sheol; I will redeem them from death: O death, where are thy plagues? O Sheol, where is thy destruction? repentance shall be hid from mine eyes.
- Bible in Basic English (BBE)
- I will give the price to make them free from the power of the underworld, I will be their saviour from death: O death! where are your pains? O underworld! where is your destruction? my eyes will have no pity.
- Darby Translation (DBY)
- I will ransom them from the power of Sheol. I will redeem them from death: where, O death, are thy plagues? where, O Sheol, is thy destruction? Repentance shall be hid from mine eyes.
- Webster's Bible (WBS)
- I will ransom them from the power of the grave; I will redeem them from death: O death, I will be thy plagues, O grave, I will be thy destruction: repentance shall be hid from my eyes.
- Young's Literal Translation (YLT)
- From the hand of Sheol I do ransom them, From death I redeem them, Where [is] thy plague, O death? Where thy destruction, O Sheol? Repentance is hid from Mine eyes.
Read in context
- 12ಎಫ್ರಾ ಯಾಮಿನ ದುಷ್ಕೃತ್ಯವು ಕಟ್ಟಲ್ಪಟ್ಟಿದೆ, ಅವನ ಪಾಪವು ಬಚ್ಚಿಡಲ್ಪಟ್ಟಿದೆ.
- 13ಹೆರು ವವಳ ಸಂಕಟಗಳು ಅವನ ಮೇಲೆಯೇ ಬರುವವು. ಅವನು ಬುದ್ಧಿಹೀನ ಮಗನಾಗಿದ್ದಾನೆ; ಮಕ್ಕಳು ಹುಟ್ಟುವ ಸ್ಥಳದಲ್ಲಿ ಅವನು ಬಹಳ ಹೊತ್ತು ನಿಲ್ಲುವದಿಲ್ಲ.
- 14ನಾನು ಸಮಾಧಿಯ ಶಕ್ತಿಯಿಂದ ಅವರನ್ನು ಈಡು ಕೊಟ್ಟು ವಿಮೋಚಿಸುವೆನು; ಮರಣದಿಂದ ಅವರನ್ನು ಬಿಡಿಸುವೆನು. ಓ ಮರಣವೇ, ನಾನು ನಿನ್ನ ಬಾಧೆಗ ಳಾಗಿರುವೆನು; ಓ ಸಮಾಧಿಯೇ, ನಾನು ನಿನ್ನ ನಾಶನ ವಾಗಿದ್ದೇನೆ; ಪಶ್ಚಾತ್ತಾಪವು ನನ್ನ ಕಣ್ಣುಗಳಿಂದ ಮರೆ ಯಾಗಿದೆ.
- 15ಅವನು ತನ್ನ ಸಹೋದರರ ಮಧ್ಯದಲ್ಲಿ ಫಲಭರಿತನಾಗಿದ್ದರೂ ಪೂರ್ವದ ಗಾಳಿಯು ಬರಲು ಕರ್ತನ ಗಾಳಿಯು ಅರಣ್ಯದಿಂದ ಏರಿಬರುವದು, ಆಗ ಅವನ ಬುಗ್ಗೆಯು ಒಣಗಿ ಅವನ ಒರತೆಯು ಬತ್ತಿ ಹೋಗುವದು. ಅವನು ಎಲ್ಲಾ ಪ್ರಿಯ ವಸ್ತುಗಳ ನಿಧಿಯನ್ನು ಹಾಳು ಮಾಡುವನು.ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.
- 16ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.
Cross references
- Isaiah 25:8 ಯೆಶಾಯ 25:8ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ.
- 1 Corinthians 15:52–57 1 ಕೊರಿಂಥದವರಿಗೆ 15:52–57ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು. ಲಯ ವಾಗುವಂಥದ್ದು (ಈ ದೇಹವು) ನಿರ್ಲಯತ್ವವನ್ನು ಧರಿಸಿಕೊಳ್ಳುವದೂ ಮರಣಾಧೀನವಾಗಿರುವಂಥ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವದೂ ಅವಶ್ಯ. ಲಯವಾಗುವಂಥದ್ದು ನಿರ್ಲಯತ್ವವನ್ನು ಧರಿಸಿ ಕೊಳ್ಳುವದು, ಮರಣಾಧೀನವಾಗಿರುವಂಥದ್ದು ಅಮರ ತ್ವವನ್ನು ಧರಿಸಿಕೊಳ್ಳುವದು; ಆಗ ಬರೆದಿರುವ ಮಾತು ನೆರವೇರುವದು, ಆ ಮಾತು ಏನಂದರೆ--ಜಯವು ಮರಣವನ್ನು ನುಂಗಿತು ಎಂಬದೇ. ಓ ಮರಣವೇ, ನಿನ್ನ ಕೊಂಡಿಯೆಲ್ಲಿ? ಓ ಸಮಾಧಿಯೇ ನಿನ್ನ ಜಯವೆಲ್ಲಿ? ಮರಣದ ಕೊಂಡಿ ಪಾಪವೇ; ಪಾಪದ ಬಲವು ನ್ಯಾಯಪ್ರಮಾಣವೇ. ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ.ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
- Revelation 21:4 ಪ್ರಕಟನೆ 21:4ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.
- James 1:17 ಯಾಕೋಬನು 1:17ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
- Psalm 49:15 ಕೀರ್ತನೆಗಳು 49:15ಆದರೆ ದೇವರು ನನ್ನ ಪ್ರಾಣವನ್ನು ಸಮಾಧಿಯ ಬಲದಿಂದ ವಿಮೋಚನೆ ಮಾಡುವನು, ಆತನು ನನ್ನನ್ನು ಅಂಗೀಕರಿಸುವನು. ಸೆಲಾ.
- Isaiah 26:19 ಯೆಶಾಯ 26:19ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.
- 1 Corinthians 15:21–22 1 ಕೊರಿಂಥದವರಿಗೆ 15:21–22ಮನುಷ್ಯನ ಮೂಲಕ ಮರಣವುಂಟಾದ ಕಾರಣ ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನ ವುಂಟಾಗುವದು. ಯಾವ ಪ್ರಕಾರ ಆದಾಮನಲ್ಲಿ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಕ್ರಿಸ್ತನಲ್ಲಿ ಎಲ್ಲರೂ ಜೀವಿತರಾಗುವರು.
- Romans 11:29 ರೋಮಾಪುರದವರಿಗೆ 11:29ದೇವರ ದಾನಗಳೂ ಕರೆಯುವಿಕೆಯೂ ಪಶ್ಚಾತ್ತಾಪವಿಲ್ಲದವು ಗಳಾಗಿವೆ.
- Psalm 30:3 ಕೀರ್ತನೆಗಳು 30:3ಓ ಕರ್ತನೇ, ನನ್ನ ಪ್ರಾಣವನ್ನು ಸಮಾಧಿಯಿಂದ ಎತ್ತಿದ್ದೀ; ನಾನು ತಗ್ಗಿಗೆ ಇಳಿಯದಂತೆ ನನ್ನನ್ನು ಜೀವದಲ್ಲಿ ಕಾಪಾಡಿದ್ದೀ.
- Job 33:24 ಯೋಬನು 33:24ಆಗ ಆತನು ಅವನಿಗೆ ಕೃಪಾಳುವಾಗಿದ್ದು ಕುಣಿಗೆ ಇಳಿಯು ವದರಿಂದ ಅವನನ್ನು ಬಿಡಿಸುತ್ತಾನೆ; ನಾನು ವಿಮೋ ಚನೆಯ ಕ್ರಯವನ್ನು ಕಂಡುಕೊಂಡೆನು.
- 1 Samuel 15:29 1 ಸಮುವೇಲನು 15:29ಇಸ್ರಾ ಯೇಲಿನ ನಿತ್ಯ ಬಲವಾದಾತನು ಸುಳ್ಳು ಹೇಳುವಾತ ನಲ್ಲ, ಪಶ್ಚಾತ್ತಾಪಪಡುವಾತನೂ ಅಲ್ಲ. ಯಾಕಂದರೆ ಆತನು ಪಶ್ಚಾತ್ತಾಪಪಡುವಂತೆ ಮನುಷ್ಯನಲ್ಲ ಅಂದನು.
- Ezekiel 37:11–14 ಯೆಹೆಜ್ಕೇಲನು 37:11–14ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ; ಇಗೋ, ನಮ್ಮ ಎಲುಬುಗಳು ಒಣಗಿಸಲ್ಪಟ್ಟಿವೆ ಮತ್ತು ನಮ್ಮ ನಿರೀಕ್ಷೆಯು ಕಳೆದುಹೋಗಿದೆ; ನಾವು ಶುದ್ಧವಾಗಿ ನಮ್ಮ ಭಾಗಗಳನ್ನು ಕತ್ತರಿಸಿಕೊಂಡಿದ್ದೇವೆ ಎಂದು ಅವರು ಹೇಳುವರು. ಆದದರಿಂದ ನೀನು ಪ್ರವಾದಿಸು ಮತ್ತು ಅವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆಯುವೆನು ಮತ್ತು ಸಮಾಧಿಗಳಿಂದ ನೀವು ಹೊರಗೆ ಬರುವಂತೆ ಮಾಡುವೆನು. ಇಸ್ರಾ ಯೇಲ್ ದೇಶಕ್ಕೆ ನಿಮ್ಮನ್ನು ತರುವೆನು. ಓ ನನ್ನ ಜನರೇ, ಯಾವಾಗ ನಾನು ನಿಮ್ಮ ಸಮಾಧಿಗಳನ್ನು ತೆರೆದು ಹೊರಗೆ ಬರಮಾಡುವೆನೋ ಆಗ ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ. ನನ್ನ ಆತ್ಮ ವನ್ನು ನಿಮ್ಮೊಳಗೆ ಇಟ್ಟಾಗ ನೀವು ಬದುಕುವಿರಿ ಮತ್ತು ನಾನು ನಿಮ್ಮನ್ನು ನಿಮ್ಮ ಸ್ವಂತ ದೇಶದಲ್ಲಿರಿಸುವೆನು; ಆಮೇಲೆ ನಾನೇ ಕರ್ತನು ಮಾತನಾಡಿ ನಡೆಸಿದ್ದೇನೆಂ ದು ನೀವು ತಿಳಿಯುವಿರಿ ಎಂದು ಕರ್ತನು ಹೇಳುತ್ತಾನೆ.
Original words (Hebrew)
- ransom · H6299פָּדָה pâdâh
- power · H3027יָד yâd
- grave · H7585שְׁאוֹל shᵉʼôwl
- redeem · H1350גָּאַל gâʼal
- death · H4194מָוֶת mâveth
- death · H4194מָוֶת mâveth
- will · H165אֱהִי ʼĕhîy
- plagues · H1698דֶּבֶר deber
- grave · H7585שְׁאוֹל shᵉʼôwl
- will · H165אֱהִי ʼĕhîy
- destruction · H6987קֹטֶב qôṭeb
- repentance · H5164נֹחַם nôcham
- hid · H5641סָתַר çâthar
- eyes · H5869עַיִן ʻayin