Hosea · chapter 13 · verse 5
Hosea 13:5 in Kannada
ನಾನು ನಿನ್ನನ್ನು ಅರಣ್ಯದಲ್ಲಿಯೂ ಬಹು ಬಾಯಾರಿಕೆಯ ದೇಶದಲ್ಲಿಯೂ ತಿಳಿದುಕೊಂಡಿದ್ದೇನೆ.
Naanu ninnannu aranyadalliyoo bahu baayaarikeya deshadalliyoo tilidukondiddene.
Hosea 13:5 in English
- King James Version (KJV)
- I did know thee in the wilderness, in the land of great drought.
- World English Bible (WEB)
- I knew you in the wilderness, in the land of great drought.
- American Standard Version (ASV)
- I did know thee in the wilderness, in the land of great drought.
- Bible in Basic English (BBE)
- I had knowledge of you in the waste land where no water was.
- Darby Translation (DBY)
- I knew thee in the wilderness, in the land of drought.
- Webster's Bible (WBS)
- I did know thee in the wilderness, in the land of great drouth.
- Young's Literal Translation (YLT)
- I — I have known thee in a wilderness, In a land of droughts.
Read in context
- 3ಆದದರಿಂದ ಅವರು ಪ್ರಾತಃ ಕಾಲದ ಮೇಘದ ಹಾಗೆಯೂ ಬೇಗನೆ ಮಾಯ ವಾಗುವ ಇಬ್ಬನಿ ಹಾಗೆಯೂ ಸುಳಿಗಾಳಿಯು ನೆಲದಿಂದ ಬಡಿದುಕೊಂಡು ಹೋಗುವ ಹೊಟ್ಟಿನ ಹಾಗೆಯೂ ಚಿಮಿಣಿಗೆಯಿಂದ ಹೊರಡುವ ಹೊಗೆಯ ಹಾಗೆಯೂ ಇರುವರು.
- 4ಆದಾಗ್ಯೂ ನಾನು ಐಗುಪ್ತದಿಂದ ನಿನ್ನ ದೇವರಾಗಿರುವ ಕರ್ತನಾಗಿದ್ದೇನೆ, ನೀನು ನನ್ನ ಹೊರತು ಯಾವ ದೇವರನ್ನೂ ತಿಳಿದುಕೊಳ್ಳಬಾರದು; ಯಾಕಂದರೆ ನನ್ನ ಹೊರತು ನಿನಗೆ ಬೇರೆ ರಕ್ಷಕನು ಇಲ್ಲ.
- 5ನಾನು ನಿನ್ನನ್ನು ಅರಣ್ಯದಲ್ಲಿಯೂ ಬಹು ಬಾಯಾರಿಕೆಯ ದೇಶದಲ್ಲಿಯೂ ತಿಳಿದುಕೊಂಡಿದ್ದೇನೆ.
- 6ಅವರ ಆಹಾರದ ಪ್ರಕಾರ ತೃಪ್ತರಾದರು, ಅದರಿಂದ ಅವರ ಹೃದಯಗಳು ಉಬ್ಬಿಕೊಂಡಿತು; ಆದಕಾರಣ ಅವರು ನನ್ನನ್ನು ಮರೆತುಬಿಟ್ಟರು.
- 7ಆದದರಿಂದ ನಾನು ಅವರಿಗೆ ಸಿಂಹದ ಹಾಗೆ ಆಗುವೆನು; ಮಾರ್ಗದಲ್ಲಿ ಚಿರತೆಯ ಹಾಗೆ ಅವರಿಗಾಗಿ ಹೊಂಚಿಹಾಕುವೆನು.
Cross references
- Deuteronomy 32:10 ಧರ್ಮೋಪದೇಶಕಾಂಡ 32:10ಆತನು ಅರಣ್ಯದ ಭೂಮಿಯಲ್ಲಿಯೂ ಕಿರುಚುವ ಅಡವಿಯ ಕಾಡಿನಲ್ಲಿಯೂ ಅವನನ್ನು ಕಂಡುಕೊಂಡನು; ಆತನು ಅವನನ್ನು ನಡಿಸಿ, ಉಪದೇಶಿಸಿದನು. ತನ್ನ ಕಣ್ಣುಗುಡ್ಡೆಯಂತೆ ಕಾಪಾಡಿದನು.
- Deuteronomy 8:15 ಧರ್ಮೋಪದೇಶಕಾಂಡ 8:15ಅಗ್ನಿ ಸರ್ಪಗಳೂ ಚೇಳುಗಳೂ ಬರವೂ ಉಳ್ಳ ನೀರಿಲ್ಲದ ಆ ಮಹಾ ಭಯಂಕರವಾದ ಅರಣ್ಯದಲ್ಲಿ ನಿನ್ನನ್ನು ನಡಿಸಿದಂಥ, ಬಿಳೀಕಲ್ಲಿನ ಬಂಡೆಯೊಳಗಿಂದ ನಿನಗೆ ನೀರು ಬರ ಮಾಡಿದಂಥ,
- Deuteronomy 2:7 ಧರ್ಮೋಪದೇಶಕಾಂಡ 2:7ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸಿದ್ದಾನೆ; ನೀನು ಈ ದೊಡ್ಡ ಅರಣ್ಯದಲ್ಲಿ ಸಂಚಾರ ಮಾಡಿದ್ದನ್ನು ಆತನು ಬಲ್ಲನು; ಈ ನಾಲ್ವತ್ತು ವರುಷ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ; ನಿನಗೆ ಏನೂ ಕಡಿಮೆ ಆಗಲಿಲ್ಲ ಎಂದು ಹೇಳಿದನು.
- Psalm 142:3 ಕೀರ್ತನೆಗಳು 142:3ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ ನೀನು ನನ್ನ ದಾರಿಯನ್ನು ತಿಳುಕೊಂಡಿದ್ದೀ; ನಾನು ನಡೆಯುವ ದಾರಿಯಲ್ಲಿ ಗುಪ್ತವಾಗಿ ನನಗೆ ಉರ್ಲನ್ನು ಒಡ್ಡಿದ್ದಾರೆ.
- Galatians 4:9 ಗಲಾತ್ಯದವರಿಗೆ 4:9ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ; ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ?
- Psalm 63:1 ಕೀರ್ತನೆಗಳು 63:1ಓ ದೇವರೇ, ನೀನೇ ನನ್ನ ದೇವರು ಹೊತ್ತಾರೆ ನಿನ್ನನ್ನು ಹುಡುಕುತ್ತೇನೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿ ಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರ ಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ.
- Exodus 2:25 ವಿಮೋಚನಕಾಂಡ 2:25ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
- Jeremiah 2:2 ಯೆರೆಮೀಯ 2:2ನೀನು ಹೋಗಿ ಯೆರೂಸಲೇಮಿನ ಕಿವಿಗಳಲ್ಲಿ ಕೂಗಿ ಹೇಳ ಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ನಾನು ನಿನ್ನನ್ನು ನಿನ್ನ ಯೌವನದ ವಾತ್ಸಲ್ಯವನ್ನೂ ನಿನ್ನ ನಿಶ್ಚಿತಾರ್ಥದ ಪ್ರೀತಿಯನ್ನೂ ನೀನು ಅರಣ್ಯದಲ್ಲಿ ಬಿತ್ತಲ್ಪಡದ ದೇಶದಲ್ಲಿ ನನ್ನನ್ನು ಹಿಂಬಾಲಿಸಿದ್ದನ್ನೂ ಜ್ಞಾಪಕಮಾಡಿಕೊಳ್ಳುತ್ತೇನೆ.
- Nahum 1:7 ನಹೂಮ 1:7ಕರ್ತನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಬಲವಾದ ಕೋಟೆಯಾಗಿದ್ದಾನೆ; ತನ್ನಲ್ಲಿ ನಂಬಿಕೆಯಿಡು ವವರನ್ನು ಬಲ್ಲನು.
- Psalm 31:7 ಕೀರ್ತನೆಗಳು 31:7ನಿನ್ನ ಕರುಣೆ ಯಲ್ಲಿ ಉಲ್ಲಾಸಿಸಿ ಸಂತೋಷಪಡುವೆನು; ಯಾಕಂ ದರೆ ನೀನು ನನ್ನ ಕಷ್ಟವನ್ನು ಲಕ್ಷ್ಯಕ್ಕೆ ತಂದು ನನ್ನ ಪ್ರಾಣವು ಇಕ್ಕಟ್ಟುಗಳಲ್ಲಿರುವದನ್ನು ಅರಿತಿದ್ದೀಯಲ್ಲಾ.
- Jeremiah 2:6 ಯೆರೆಮೀಯ 2:6ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ನಮ್ಮನ್ನು ಅರಣ್ಯದಲ್ಲಿ ಕಾಡೂ ಕುಣಿಗಳೂ ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದು ಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡಿಸಿದ ಕರ್ತನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲ.
- Psalm 1:6 ಕೀರ್ತನೆಗಳು 1:6ನೀತಿವಂತರ ಮಾರ್ಗವನ್ನು ಕರ್ತನು ಅರಿತಿದ್ದಾನೆ; ಆದರೆ ಭಕ್ತಿಹೀನರ ಮಾರ್ಗವು ನಾಶವಾಗುವದು.