Hosea · chapter 13 · verse 9
Hosea 13:9 in Kannada
ಓ ಇಸ್ರಾಯೇಲೇ, ನಿನ್ನನ್ನು ನೀನು ಹಾಳುಮಾಡಿಕೊಂಡಿದ್ದೀ, ಆದರೆ ನನ್ನಲ್ಲಿ ನಿನಗೆ ಸಹಾಯ ಉಂಟು.
O israayele, ninnannu neenu haalumaadikondiddee, aadare nannalli ninage sahaaya untu.
Hosea 13:9 in English
- King James Version (KJV)
- O Israel, thou hast destroyed thyself; but in me [is] thine help.
- World English Bible (WEB)
- You are destroyed, Israel, because you are against me, against your helper.
- American Standard Version (ASV)
- It is thy destruction, O Israel, that [thou art] against me, against thy help.
- Bible in Basic English (BBE)
- I have sent destruction on you, O Israel; who will be your helper?
- Darby Translation (DBY)
- It is thy destruction, O Israel, that [thou art] against me, against thy help.
- Webster's Bible (WBS)
- O Israel, thou hast destroyed thyself; but in me [is] thy help.
- Young's Literal Translation (YLT)
- And I consume them there as a lioness, A beast of the field doth rend them.
Read in context
- 7ಆದದರಿಂದ ನಾನು ಅವರಿಗೆ ಸಿಂಹದ ಹಾಗೆ ಆಗುವೆನು; ಮಾರ್ಗದಲ್ಲಿ ಚಿರತೆಯ ಹಾಗೆ ಅವರಿಗಾಗಿ ಹೊಂಚಿಹಾಕುವೆನು.
- 8ಮರಿಗಳನ್ನು ಕಳೆದುಕೊಂಡ ಕರಡಿಯಂತೆ ನಾನು ಅವರನ್ನು ಎದುರುಗೊಳ್ಳುವೆನು; ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. ಅಲ್ಲಿ ನಾನು ಸಿಂಹದ ಹಾಗೆ ಅವರನ್ನು ನುಂಗುವೆನು; ಕಾಡುಮೃಗವು ಅವರನ್ನು ಸೀಳಿಹಾಕುವದು.
- 9ಓ ಇಸ್ರಾಯೇಲೇ, ನಿನ್ನನ್ನು ನೀನು ಹಾಳುಮಾಡಿಕೊಂಡಿದ್ದೀ, ಆದರೆ ನನ್ನಲ್ಲಿ ನಿನಗೆ ಸಹಾಯ ಉಂಟು.
- 10ನಾನೇ ನಿನ್ನ ಅರಸನಾಗಿ ರುವೆನು; ನಿನ್ನ ಎಲ್ಲಾ ಪಟ್ಟಣಗಳಲ್ಲಿ ನಿನ್ನನ್ನು ರಕ್ಷಿಸುವ ಬೇರೆಯ ವನು ಎಲ್ಲಿದ್ದಾನೆ? ಮತ್ತು--ರಾಜನನ್ನೂ ಪ್ರಧಾನ ರನ್ನೂ ನನಗೆ ದಯಪಾಲಿಸು ಎಂದು ನೀನು ಹೇಳಿದ ನ್ಯಾಯಾಧಿಪತಿಗಳು ಎಲ್ಲಿದ್ದಾರೆ?
- 11ನನ್ನ ಕೋಪದಲ್ಲಿ ನಿನಗೆ ಅರಸನನ್ನು ಕೊಟ್ಟೆನು, ನನ್ನ ರೌದ್ರದಲ್ಲಿ ಅವನನ್ನು ತೆಗೆದುಹಾಕಿದೆನು.
Cross references
- Jeremiah 2:17 ಯೆರೆಮೀಯ 2:17ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡಿ ಅಲ್ಲವೋ?
- Jeremiah 2:19 ಯೆರೆಮೀಯ 2:19ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.
- Deuteronomy 33:26 ಧರ್ಮೋಪದೇಶಕಾಂಡ 33:26ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ಆತನು ನಿನ್ನ ಸಹಾಯಕ್ಕೆ ಪರಲೋಕದಲ್ಲಿಯೂ ತನ್ನ ಘನತೆಯಲ್ಲಿಯೂ ಆಕಾಶದ ಮೇಲೆಯೂ ಬರುತ್ತಾನೆ.
- Isaiah 3:11 ಯೆಶಾಯ 3:11ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
- Proverbs 6:32 ಜ್ಞಾನೋಕ್ತಿಗಳು 6:32ಒಬ್ಬ ಸ್ತ್ರೀಯೊಂದಿಗೆ ವ್ಯಭಿಚಾರ ಮಾಡುವವನು ವಿವೇಕವಿಲ್ಲದವನಾಗಿದ್ದಾನೆ. ಅದನ್ನು ಮಾಡುವವನು ತನ್ನ ಪ್ರಾಣವನ್ನೇ ನಾಶಪಡಿಸಿಕೊಳ್ಳುವನು.
- Jeremiah 5:25 ಯೆರೆಮೀಯ 5:25ನಿಮ್ಮ ಅಕ್ರಮಗಳು ಇವುಗಳನ್ನು ತಪ್ಪಿಸಿ ಅವೆ; ನಿಮ್ಮ ಪಾಪ ಗಳು ಒಳ್ಳೆಯವುಗಳನ್ನು ನಿಮ್ಮಿಂದ ಹಿಂದೆಳೆದಿವೆ.
- Psalm 146:5 ಕೀರ್ತನೆಗಳು 146:5ಯಾಕೋಬನ ದೇವರನ್ನು ತನ್ನ ಸಹಾಯವನ್ನಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಕರ್ತನ ಮೇಲೆ ತನ್ನ ನಿರೀಕ್ಷೆ ಇಡುವನು.
- Deuteronomy 33:29 ಧರ್ಮೋಪದೇಶಕಾಂಡ 33:29ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
- Hosea 14:1 ಹೋಶೇಯ 14:1ಓ ಇಸ್ರಾಯೇಲೇ, ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊ, ಯಾಕಂದರೆ ನೀನು ನಿನ್ನ ದುಷ್ಕೃತ್ಯದಿಂದ ಬಿದ್ದಿದ್ದೀ;
- Psalm 121:1–2 ಕೀರ್ತನೆಗಳು 121:1–2ನಾನು ಕಣ್ಣೆತ್ತಿ ಬೆಟ್ಟಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವದು? ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನ ಬಳಿಯಿಂದಲೇ ನನ್ನ ಸಹಾ ಯವು ಬರುತ್ತದೆ.
- Malachi 1:9 ಮಲಾಕಿಯ 1:9ಹಾಗಾದರೆ ಈಗ ದೇವರು ನಮ್ಮನ್ನು ಕನಿಕರಿಸುವ ಹಾಗೆ ಆತನನ್ನು ಬೇಡಿಕೊಳ್ಳಿರಿ ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು --ಇದು ನಿಮ್ಮಿಂದಲೇ ಆಯಿತು; ನಿಮಗೆ ಆತನು ಮುಖದಾಕ್ಷಿಣ್ಯ ತೋರಿಸುವನೋ?
- Hosea 13:4 ಹೋಶೇಯ 13:4ಆದಾಗ್ಯೂ ನಾನು ಐಗುಪ್ತದಿಂದ ನಿನ್ನ ದೇವರಾಗಿರುವ ಕರ್ತನಾಗಿದ್ದೇನೆ, ನೀನು ನನ್ನ ಹೊರತು ಯಾವ ದೇವರನ್ನೂ ತಿಳಿದುಕೊಳ್ಳಬಾರದು; ಯಾಕಂದರೆ ನನ್ನ ಹೊರತು ನಿನಗೆ ಬೇರೆ ರಕ್ಷಕನು ಇಲ್ಲ.