Hosea · chapter 14 · verse 4
Hosea 14:4 in Kannada
ನಾನು ಅವರ ಹಿಂಜರಿಯುವಿಕೆಯನ್ನು ಸ್ವಸ್ಥ ಮಾಡುವೆನು. ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. ಯಾಕಂದರೆ ನನ್ನ ಕೋಪವು ಅವನ ಕಡೆಯಿಂದ ತಿರುಗಿಕೊಂಡಿದೆ.
Naanu avara hinjariyuvikeyannu svastha maaduvenu. Naanu avarannu manahpoorvakavaagi preetisuvenu. Yaakandare nanna kopavu avana kadeyinda tirugikondide.
Hosea 14:4 in English
- King James Version (KJV)
- I will heal their backsliding, I will love them freely: for mine anger is turned away from him.
- World English Bible (WEB)
- “I will heal their waywardness. I will love them freely; for my anger is turned away from them.
- American Standard Version (ASV)
- I will heal their backsliding, I will love them freely; for mine anger is turned away from him.
- Bible in Basic English (BBE)
- I will put right their errors; freely will my love be given to them, for my wrath is turned away from him.
- Darby Translation (DBY)
- I will heal their backsliding, I will love them freely; for mine anger is turned away from him.
- Webster's Bible (WBS)
- I will heal their backsliding, I will love them freely: for my anger is turned away from him.
- Young's Literal Translation (YLT)
- I heal their backsliding, I love them freely, For turned back hath Mine anger from him.
Read in context
- 2ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಕರ್ತನ ಕಡೆಗೆ ತಿರಿಗಿಕೊಂಡು ಆತನಿಗೆ--ಎಲ್ಲಾ ದುಷ್ಕತ್ಯವನ್ನು ತೆಗೆದು ಹಾಕಿ ನಮ್ಮನ್ನು ಕೃಪೆಯಿಂದ ಸ್ವೀಕರಿಸು; ಆಗ ನಮ್ಮ ತುಟಿಗಳ ಯಜ್ಞಗಳನ್ನು ನಿನಗೆ ಅರ್ಪಿಸುವೆವು.
- 3ಅಶ್ಯೂರ್ಯವು ನಮ್ಮನ್ನು ರಕ್ಷಿಸುವದಿಲ್ಲ; ನಾವು ಕುದುರೆಗಳ ಮೇಲೆ ಸವಾರಿ ಮಾಡುವದಿಲ್ಲ; ಇಲ್ಲವೆ ನಮ್ಮ ಕೈಗಳಿಂದ ಆದ ಕೆಲಸಕ್ಕೆ--ನೀವು ನಮ್ಮ ದೇವರು ಗಳೇ ಎಂದು ನಾವು ಇನ್ನು ಮುಂದೆ ಹೇಳುವದೇ ಇಲ್ಲ; ನಿನ್ನಲ್ಲಿ ತಂದೆಗಳಿಲ್ಲದವರಿಗೆ ಕರುಣೆಯುಂಟು ಎಂದು ಆತನಿಗೆ ಹೇಳಿರಿ.
- 4ನಾನು ಅವರ ಹಿಂಜರಿಯುವಿಕೆಯನ್ನು ಸ್ವಸ್ಥ ಮಾಡುವೆನು. ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. ಯಾಕಂದರೆ ನನ್ನ ಕೋಪವು ಅವನ ಕಡೆಯಿಂದ ತಿರುಗಿಕೊಂಡಿದೆ.
- 5ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು; ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಹರಡುವನು.
- 6ಅವನ ಕೊಂಬೆಗಳು ಹರಡಿಕೊಂಡು ಅವನ ಸೌಂದರ್ಯವು ಎಣ್ಣೆಯ ಮರಗಳ ಹಾಗೆಯೂ ಅವನ ಪರಿಮಳವು ಲೆಬನೋನಿನ ಹಾಗೆಯೂ ಇರುವದು.
Cross references
- Isaiah 57:18 ಯೆಶಾಯ 57:18ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ ಅವನನ್ನು ನಡಿಸುತ್ತೇನೆ ಮತ್ತು ಅವನಿಗೂ ಅವನ ದುಃಖಿತರಿಗೂ ಆದರಣೆಗಳನ್ನು ಪುನಃ ಸ್ಥಾಪಿಸುವೆನು.
- Jeremiah 3:22 ಯೆರೆಮೀಯ 3:22ಹಿಂಜರಿದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಹಿಂಜರಿಯುವಿಕೆಯನ್ನು ನಾನು ಸ್ವಸ್ಥಮಾಡುವೆನು ಎಂದು ಕರ್ತನು ಅನ್ನುತ್ತಾನೆ. ಇಗೋ, ನಿನ್ನ ಬಳಿಗೆ ಬರುತ್ತೇವೆ; ನೀನು ದೇವರಾದ ನಮ್ಮ ಕರ್ತನಾಗಿದ್ದೀ.
- Isaiah 12:1 ಯೆಶಾಯ 12:1ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ.
- Ephesians 2:4–9 ಎಫೆಸದವರಿಗೆ 2:4–9ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;) ನಮ್ಮನ್ನು ಆತನ ಕೂಡ ಎಬ್ಬಿಸಿ ಕ್ರಿಸ್ತ ಯೇಸುವಿನಲ್ಲಿ ಆತನೊಂದಿಗೆ ಪರ ಲೋಕದ ಸ್ಥಳಗಳಲ್ಲಿ ಕೂಡ್ರಿಸಿದ್ದಾನೆ. ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು. ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ. ಅದು ಕ್ರಿಯೆಗಳಿಂದ ಉಂಟಾದದ್ದಲ್ಲ; ಆದದರಿಂದ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದ ವಿಲ್ಲ.
- Zephaniah 3:17 ಚೆಫನ್ಯ 3:17ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.
- Hosea 6:1 ಹೋಶೇಯ 6:1ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ.
- 2 Corinthians 5:19–21 2 ಕೊರಿಂಥದವರಿಗೆ 5:19–21ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ. ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು. ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Jeremiah 8:22 ಯೆರೆಮೀಯ 8:22ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಮಗಳಿಗೆ ಯಾಕೆ ಸ್ವಸ್ಥವಾಗಲಿಲ್ಲ?
- Titus 3:4 ತೀತನಿಗೆ 3:4ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ
- Exodus 15:26 ವಿಮೋಚನಕಾಂಡ 15:26ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
- Psalm 78:38 ಕೀರ್ತನೆಗಳು 78:38ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ.
- Jeremiah 5:6 ಯೆರೆಮೀಯ 5:6ಹೀಗಿರುವದರಿಂದ ಅಡವಿಯ ಸಿಂಹವು ಅವರನ್ನು ಕೊಲ್ಲುವದು; ಸಂಜೆಯ ತೋಳವು ಅವರನ್ನು ಸೂರೆ ಮಾಡುವದು; ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವದು; ಅಲ್ಲಿಂದ ಹೊರಗೆ ಬರುವವ ರೆಲ್ಲರೂ ಸೀಳಲ್ಪಡುವರು; ಅವರ ದ್ರೋಹಗಳು ಬಹಳವಾಗಿವೆ; ಅವರ ಹಿಂತಿರುಗುವಿಕೆಯು ಹೆಚ್ಚಾಗಿದೆ.