Hosea · chapter 2 · verse 10
Hosea 2:10 in Kannada
ಈಗ ಅವಳ ತುಚ್ಛತನವನ್ನು ಅವಳ ಮಿಂಡರ ಕಣ್ಣುಗಳ ಮುಂದೆ ಬಯಲು ಪಡಿಸುವೆನು; ನನ್ನ ಕೈಯೊಳಗಿಂದ ಅವಳನ್ನು ಯಾರೂ ಬಿಡಿಸರು.
Eega avala tuchchhatanavannu avala mindara kannugala munde bayalu padisuvenu; nanna kaiyolaginda avalannu yaaroo bidisaru.
Hosea 2:10 in English
- King James Version (KJV)
- And now will I discover her lewdness in the sight of her lovers, and none shall deliver her out of mine hand.
- World English Bible (WEB)
- Now I will uncover her lewdness in the sight of her lovers, and no one will deliver her out of my hand.
- American Standard Version (ASV)
- And now will I uncover her lewdness in the sight of her lovers, and none shall deliver her out of my hand.
- Bible in Basic English (BBE)
- And now I will make her shame clear before the eyes of her lovers, and no one will take her out of my hand.
- Darby Translation (DBY)
- And now will I discover her impiety in the sight of her lovers, and none shall deliver her out of my hand.
- Webster's Bible (WBS)
- And now will I disclose her lewdness in the sight of her lovers, and none shall deliver her out of my hand.
- Young's Literal Translation (YLT)
- And now do I reveal her dishonour before the eyes of her lovers, And none doth deliver her out of My hand.
Read in context
- 8ಅವರು ಬಾಳನಿಗಾಗಿ ಸಿದ್ಧಮಾಡಿದ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ನಾನು ಕೊಟ್ಟು ಅವ ಳಿಗೆ ಬೆಳ್ಳಿ ಬಂಗಾರವನ್ನು ನಾನೇ ಹೆಚ್ಚಿಸಿದ್ದೇನೆಂದು ಅವಳಿಗೆ ತಿಳಿಯಲಿಲ್ಲ.
- 9ಆದ್ದರಿಂದ ನಾನು ತಿರುಗಿ ಕೊಂಡು ನನ್ನ ಧಾನ್ಯವನ್ನು ಅದರ ಕಾಲದಲ್ಲಿಯೂ ನನ್ನ ದ್ರಾಕ್ಷಾರಸವನ್ನು ಅದರ ಸಮಯದಲ್ಲಿಯೂ ತೆಗೆದಹಾಗೆ ಅವಳ ಬೆತ್ತಲೆತನವನ್ನು ಮುಚ್ಚುವದ ಕ್ಕಿದ್ದ ನನ್ನ ಉಣ್ಣೆಯನ್ನೂ ನನ್ನ ನಾರು ಬಟ್ಟೆಯನ್ನೂ ತೆಗೆದುಕೊಳ್ಳುವೆನು.
- 10ಈಗ ಅವಳ ತುಚ್ಛತನವನ್ನು ಅವಳ ಮಿಂಡರ ಕಣ್ಣುಗಳ ಮುಂದೆ ಬಯಲು ಪಡಿಸುವೆನು; ನನ್ನ ಕೈಯೊಳಗಿಂದ ಅವಳನ್ನು ಯಾರೂ ಬಿಡಿಸರು.
- 11ನಾನು ಅವಳ ಉಲ್ಲಾಸವನ್ನೆಲ್ಲಾ ಅಂದರೆ ಅವಳ ಹಬ್ಬ ಅವಳ ಅಮಾವಾಸ್ಯೆ ಅವಳ ಸಬ್ಬತ್ತು ಅವಳ ಪರಿಶುದ್ಧ ಹಬ್ಬಗಳನ್ನೆಲ್ಲಾ ನಿಲ್ಲಿಸಿಬಿಡುವೆನು.
- 12ಮತ್ತು--ನನ್ನ ಮಿಂಡರಿಂದಾದ ಪ್ರತಿಫಲ ಇವುಗಳೇ ಎಂದು ಅವಳು ಹೇಳಿದ ಅವಳ ದ್ರಾಕ್ಷೇ ಬಳ್ಳಿಗಳನ್ನು ಅವಳ ಅಂಜೂರದ ಮರಗಳನ್ನು ನಾನು ಹಾಳುಮಾಡಿ ಅವುಗಳನ್ನು ಕಾಡನ್ನಾಗಿ ಮಾಡುವೆನು; ಅಡವಿಯ ಮೃಗಗಳು ಅವುಗಳನ್ನು ತಿನ್ನುವವು.
Cross references
- Luke 12:2–3 ಲೂಕನು 12:2–3ಪ್ರಕಟವಾಗದಂತೆ ಯಾವದೂ ಮರೆಯಾಗಿರು ವದಿಲ್ಲ; ಇಲ್ಲವೆ ತಿಳಿಯುವದಕ್ಕಾಗದಂತೆ ಯಾವದೂ ಗುಪ್ತವಾಗಿರುವದಿಲ್ಲ. ಆದದರಿಂದ ನೀವು ಕತ್ತಲೆಯಲ್ಲಿ ಯಾವದನ್ನು ಮಾತನಾಡಿದ್ದೀರೋ ಅದು ಬೆಳಕಿನಲ್ಲಿ ಕೇಳಲ್ಪಡುವದು; ಕೋಣೆಗಳೊಳಗೆ ನೀವು ಕಿವಿಯಲ್ಲಿ ಮಾತನಾಡಿದ್ದು ಮಾಳಿಗೆಗಳ ಮೇಲೆ ಪ್ರಕಟಿಸ ಲ್ಪಡುವದು ಎಂದು ಹೇಳಲಾರಂಭಿಸಿದನು.
- Ezekiel 23:29 ಯೆಹೆಜ್ಕೇಲನು 23:29ಅವರು ನಿನ್ನ ವಿಷಯದಲ್ಲಿ ಹಗೆಯವರಾಗಿ ನಡೆಯುವರು; ನಿನ್ನ ಕಷ್ಟಾರ್ಜಿತವನ್ನು ತೆಗೆದುಕೊಂಡು ನಿನ್ನನ್ನು ಬೆತ್ತಲೆಯಾಗಿಯೂ ಬರಿದಾಗಿಯೂ ಮಾಡಿ ಬಿಡುವರು. ಆಗ ನಿನ್ನ ವ್ಯಭಿಚಾರವೂ ದುಷ್ಕರ್ಮವೂ ಜಾರತ್ವವೂ ಪ್ರಕಟವಾಗುವದು.
- Psalm 50:22 ಕೀರ್ತನೆಗಳು 50:22ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
- Jeremiah 13:26 ಯೆರೆಮೀಯ 13:26ಆದದರಿಂದ ನಾನು ನಿನ್ನ ಬಟ್ಟೆಗಳನ್ನು ನಿನ್ನ ನಾಚಿಕೆ ಕಾಣುವ ಹಾಗೆ ನಿನ್ನ ಮುಖದ ಮೇಲೆ ಎತ್ತುವೆನು.ನಿನ್ನ ವ್ಯಭಿಚಾರಗಳನ್ನೂ ಬುಸುಗುಟ್ಟು ವಿಕೆಗಳನ್ನೂ ಸೂಳೆತನದ ದೋಷವನ್ನೂ ಹೊಲಗಳ ಲ್ಲಿರುವ ಗುಡ್ಡಗಳ ಮೇಲೆ ಆಗುವ ನಿನ್ನ ಅಸಹ್ಯಗಳನ್ನೂ ನೋಡಿದ್ದೇನೆ, ಓ ಯೆರೂಸಲೇಮೇ, ನಿನಗೆ ಅಯ್ಯೋ, ನೀನು ಶುದ್ಧವಾಗುವದಿಲ್ಲವೋ? ಒಂದು ಸಾರಿ ಇದು ಯಾವಾಗ ಆದೀತು?
- Ezekiel 16:36–37 ಯೆಹೆಜ್ಕೇಲನು 16:36–37ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಅಸಹ್ಯವು ಸುರಿಯಲ್ಪಟ್ಟ ಕಾರಣ ದಿಂದಲೂ ನಿನ್ನ ಬೆತ್ತಲೆತನವು ಪ್ರಕಟವಾಗುವಂತೆ ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ ನಿನ್ನ ಎಲ್ಲಾ ಅಸಹ್ಯವಾದ ವಿಗ್ರಹಗಳಿಂದಲೂ ನೀನು ಅವರಿಗೆ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ ಇಗೋ, ನೀನು ಆನಂದ ಪಟ್ಟವರೊಂದಿಗೆ ಪ್ರೀತಿ ಮಾಡಿದವರೆ ಲ್ಲರನ್ನೂ ಹಗೆಮಾಡಿದವರೆಲ್ಲರನ್ನೂ ಸಹ ಕೂಡಿಸು ವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ ಅವರಿಗೆ ನಿನ್ನ ಬೆತ್ತಲೆಯನ್ನು ಪ್ರಕಟಪಡಿಸು ವೆನು. ಆಗ ಅವರು ನಿನ್ನ ಬೆತ್ತಲೆಯನ್ನು ನೋಡುವರು.
- Proverbs 11:21 ಜ್ಞಾನೋಕ್ತಿಗಳು 11:21ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ; ನೀತಿವಂತರ ವಂಶವು ತಪ್ಪಿಸಿಕೊಳ್ಳುವದು.
- Hosea 5:13–14 ಹೋಶೇಯ 5:13–14ಎಫ್ರಾಯಾಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ ಎಫ್ರಾಯೀಮ್ ಅಶ್ಯೂರಕ್ಕೆ ಹೋಗಿ ಅರಸನಾದ ಯಾರೇಬನ ಬಳಿಗೆ ಕಳುಹಿಸಿತು; ಆದಾಗ್ಯೂ ಅವನು ನಿಮ್ಮನ್ನು ಸ್ವಸ್ಥಮಾಡ ಲಿಲ್ಲ, ಇಲ್ಲವೆ ನಿಮ್ಮ ಗಾಯವನ್ನು ಗುಣಪಡಿಸಲೂ ಇಲ್ಲ. ನಾನು ಎಫ್ರಾಯಾಮಿಗೆ ಸಿಂಹದ ಹಾಗೆಯೂ ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ಹೌದು, ನಾನು, ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಅವನನ್ನು ಯಾರೂ ಬಿಡಿಸಲಾರರು.ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
- 1 Corinthians 4:5 1 ಕೊರಿಂಥದವರಿಗೆ 4:5ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
- Hosea 2:3 ಹೋಶೇಯ 2:3ಇಲ್ಲದಿದ್ದರೆ ನಾನು ಅವಳನ್ನು ಬೆತ್ತಲೆಯಾಗಿ ಮಾಡಿ ಅವಳು ಹುಟ್ಟಿದ ದಿನದಲ್ಲಾದ ಹಾಗೆ ನಿಲ್ಲಿಸಿ ಅವಳನ್ನು ಅರಣ್ಯ ದಂತೆ ಮಾಡುವೆನು. ಅವಳನ್ನು ಒಣಗಿದ ಭೂಮಿ ಯಂತೆ ಇಟ್ಟು ದಾಹದಿಂದ ಅವಳನ್ನು ಕೊಲ್ಲುತ್ತೇನೆ.
- Hosea 13:7–8 ಹೋಶೇಯ 13:7–8ಆದದರಿಂದ ನಾನು ಅವರಿಗೆ ಸಿಂಹದ ಹಾಗೆ ಆಗುವೆನು; ಮಾರ್ಗದಲ್ಲಿ ಚಿರತೆಯ ಹಾಗೆ ಅವರಿಗಾಗಿ ಹೊಂಚಿಹಾಕುವೆನು. ಮರಿಗಳನ್ನು ಕಳೆದುಕೊಂಡ ಕರಡಿಯಂತೆ ನಾನು ಅವರನ್ನು ಎದುರುಗೊಳ್ಳುವೆನು; ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. ಅಲ್ಲಿ ನಾನು ಸಿಂಹದ ಹಾಗೆ ಅವರನ್ನು ನುಂಗುವೆನು; ಕಾಡುಮೃಗವು ಅವರನ್ನು ಸೀಳಿಹಾಕುವದು.
- Isaiah 3:17 ಯೆಶಾಯ 3:17ಚೀಯೋನ್ ಕುಮಾ ರ್ತೆಯರ ತಲೆಯ ಮೇಲ್ಭಾಗವನ್ನು ಕಜ್ಜಿಯಿಂದ ಕರ್ತನು ಹೊಡೆಯುವನು, ಅವರ ಗುಪ್ತಾಂಗಗಳನ್ನು ಬೈಲುಪಡಿಸುವನು.
- Micah 5:8 ಮೀಕ 5:8ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ, ಜನಾಂಗಗಳೊಳಗೆ ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವದು; ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸ ಲಾರರು.