Hosea · chapter 2 · verse 3
Hosea 2:3 in Kannada
ಇಲ್ಲದಿದ್ದರೆ ನಾನು ಅವಳನ್ನು ಬೆತ್ತಲೆಯಾಗಿ ಮಾಡಿ ಅವಳು ಹುಟ್ಟಿದ ದಿನದಲ್ಲಾದ ಹಾಗೆ ನಿಲ್ಲಿಸಿ ಅವಳನ್ನು ಅರಣ್ಯ ದಂತೆ ಮಾಡುವೆನು. ಅವಳನ್ನು ಒಣಗಿದ ಭೂಮಿ ಯಂತೆ ಇಟ್ಟು ದಾಹದಿಂದ ಅವಳನ್ನು ಕೊಲ್ಲುತ್ತೇನೆ.
Illadiddare naanu avalannu bettaleyaagi maadi avalu huttida dinadallaada haage nillisi avalannu aranya dante maaduvenu. Avalannu onagida bhoomi yante ittu daahadinda avalannu kolluttene.
Hosea 2:3 in English
- King James Version (KJV)
- Lest I strip her naked, and set her as in the day that she was born, and make her as a wilderness, and set her like a dry land, and slay her with thirst.
- World English Bible (WEB)
- lest I strip her naked, and make her bare as in the day that she was born, and make her like a wilderness, and set her like a dry land, and kill her with thirst.
- American Standard Version (ASV)
- lest I strip her naked, and set her as in the day that she was born, and make her as a wilderness, and set her like a dry land, and slay her with thirst.
- Bible in Basic English (BBE)
- For fear that I may take away her robe from her, making her uncovered as in the day of her birth; making her like a waste place and a dry land, causing her death through need of water.
- Darby Translation (DBY)
- lest I strip her naked, and set her as in the day that she was born, and make her as a wilderness, and set her as a dry land, and slay her with thirst.
- Webster's Bible (WBS)
- Lest I strip her naked, and set her as in the day that she was born, and make her as a wilderness, and set her like a dry land, and kill her with thirst.
- Young's Literal Translation (YLT)
- Lest I strip her naked. And have set her up as [in] the day of her birth, And have made her as a wilderness, And have set her as a dry land, And have put her to death with thirst.
Read in context
- 1ನೀವು ನಿಮ್ಮ ಸಹೋದರರಿಗೆ ಅಮ್ಮಿ ಎಂದೂ ನಿಮ್ಮ ಸಹೋದರಿಯರಿಗೆ ರುಹಾಮ ಎಂದೂ ಹೇಳಿರಿ.
- 2ನಿಮ್ಮ ತಾಯಿಯ ಸಂಗಡ ವಾದಿಸಿರಿ, ವಾದಿಸಿರಿ; ಅವಳು ನನ್ನ ಹೆಂಡತಿಯಲ್ಲ; ಇಲ್ಲವೆ ನಾನು ಅವಳ ಗಂಡನಲ್ಲ; ಆದದರಿಂದ ಅವಳು ತನ್ನ ದೃಷ್ಟಿಯಿಂದ ತನ್ನ ವ್ಯಭಿಚಾರತ್ವಗಳನ್ನು ತನ್ನ ಸ್ತನಗಳ ಮಧ್ಯದಿಂದ ತನ್ನ ವ್ಯಭಿಚಾರಗಳನ್ನು ತೊಲಗಿಸಲಿ.
- 3ಇಲ್ಲದಿದ್ದರೆ ನಾನು ಅವಳನ್ನು ಬೆತ್ತಲೆಯಾಗಿ ಮಾಡಿ ಅವಳು ಹುಟ್ಟಿದ ದಿನದಲ್ಲಾದ ಹಾಗೆ ನಿಲ್ಲಿಸಿ ಅವಳನ್ನು ಅರಣ್ಯ ದಂತೆ ಮಾಡುವೆನು. ಅವಳನ್ನು ಒಣಗಿದ ಭೂಮಿ ಯಂತೆ ಇಟ್ಟು ದಾಹದಿಂದ ಅವಳನ್ನು ಕೊಲ್ಲುತ್ತೇನೆ.
- 4ಅವಳ ಮಕ್ಕಳನ್ನು ಸಹ ಕರುಣಿಸುವದಿಲ್ಲ; ಅವರು ಸೂಳೆತನದಿಂದಾದ ಮಕ್ಕಳೇ,
- 5ಅವರ ತಾಯಿ ಸೂಳೆ ತನ ಮಾಡಿದ್ದಾಳೆ; ಅವರನ್ನು ಹೆತ್ತವಳು ನಾಚಿಕೆಯಿ ಲ್ಲದೆ ನಡೆದಿದ್ದಾಳೆ; ಯಾಕಂದರೆ ಅವಳು--ನನ್ನ ರೊಟ್ಟಿ ಯನ್ನೂ ನನ್ನ ನೀರನ್ನೂ ನನ್ನ ಉಣ್ಣೆನಾರು ಗಳನ್ನೂ ನನ್ನ ತೈಲವನ್ನೂ ಪಾನವನ್ನೂ ನನಗೆ ಕೊಡುವ ನನ್ನ ಪ್ರಿಯರ ಹಿಂದೆ ಹೋಗುತ್ತೇನೆಂದು ಅಂದುಕೊಂಡಿದ್ದಾಳೆ.
Cross references
- Ezekiel 16:22 ಯೆಹೆಜ್ಕೇಲನು 16:22ನಿನ್ನ ಎಲ್ಲಾ ಅಸಹ್ಯಗಳ ಲ್ಲಿಯೂ ನಿನ್ನ ವ್ಯಭಿಚಾರಗಳಲ್ಲಿಯೂ ನಿನ್ನ ಎಳೆಯ ಪ್ರಾಯದ ದಿವಸಗಳನ್ನು ನೀನು ಬರೀ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದದ್ದನ್ನು ನೀನು ಜ್ಞಾಪಕ ಮಾಡಲಿಲ್ಲ.
- Ezekiel 19:13 ಯೆಹೆಜ್ಕೇಲನು 19:13ಈಗ ಅದು ಅರಣ್ಯದಲ್ಲಿ ಒಣಗಿ ನೀರಿಲ್ಲದಂಥ ಪ್ರದೇಶದಲ್ಲಿ ನೆಡಲ್ಪಟ್ಟಿದೆ.ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು ಅದರಲ್ಲಿ ಫಲವನ್ನು ತಿಂದು ಬಿಟ್ಟಿದೆ; ಅದರಲ್ಲಿ ಆಳುವದಕ್ಕೆ ರಾಜದಂಡಕ್ಕಾಗಿ ತಕ್ಕದಾದ ಬಲವುಳ್ಳ ಬಳ್ಳಿಯು ಈಗ ಇಲ್ಲ; ಇದು ಪ್ರಲಾಪವಾಗಿದೆ; ಪ್ರಲಾಪಕ್ಕಾಗಿಯೇ ಇದೆ.
- Isaiah 32:13–14 ಯೆಶಾಯ 32:13–14ನನ್ನ ಜನರ ಭೂಮಿಯ ಮೇಲೂ ಹೌದು, ಉತ್ಸಾಹ ಪಟ್ಟಣದಲ್ಲಿ ಉಲ್ಲಾಸಗೊಳ್ಳುವ ಎಲ್ಲಾ ಮನೆ ಗಳ ಮೇಲೂ ಮುಳ್ಳು ಮತ್ತು ದತ್ತೂರಿ ಬೆಳೆಯುವವು. ಅರಮನೆಗಳು ಕೈಬಿಡಲ್ಪಡುವವು. (ವಿಸರ್ಜಿಸು ವವು) ಸಮೂಹಗಳಿಂದ ತುಂಬಿದ್ದ ಪಟ್ಟಣವು ನಿರ್ಜನ ವಾಗುವದು. ದುರ್ಗಗಳೂ ಕೋಟೆಗಳೂ ಯಾವಾ ಗಲೂ ಗುಹೆ (ಗವಿ)ಗಳಾಗಿಯೂ ಕಾಡುಕತ್ತೆಗಳಿಗೆ ಸಂತೋಷವಾಗಿಯೂ ಮಂದೆಗಳಿಗೆ ಮೇಯುವ ಸ್ಥಳವಾಗಿಯೂ ಇರುವವು.
- Amos 8:11–13 ಆಮೋಸ 8:11–13ಇಗೋ, ದಿನಗಳು ಬರುವವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ; ಕರ್ತನ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮ ವನ್ನೇ ಎಂಬದಾಗಿ ದೇವರಾದ ಕರ್ತನು ಹೇಳುತ್ತಾನೆ. ಆಗ ಅವರು ಸಮುದ್ರದಿಂದ ಸಮುದ್ರಕ್ಕೂ ಉತ್ತರ ದಿಂದ ಪೂರ್ವಕ್ಕೂ ಅಲೆದು ಕರ್ತನ ವಾಕ್ಯವನ್ನು ಹುಡುಕುವದಕ್ಕೆ ಅತ್ತಿತ್ತ ಓಡಾಡಿ ಅದನ್ನು ಕಾಣದೆ ಹೋಗುವರು. ಆ ದಿನದಲ್ಲಿ ಸೌಂದರ್ಯವತಿಯ ರಾದ ಕನ್ಯೆಯರು ಮತ್ತು ಯೌವನಸ್ಥರು ಸಹ ದಾಹ ದಿಂದ ಕುಗ್ಗಿ ಹೋಗುವರು.ಅವರು ಸಮಾರ್ಯದ ಪಾಪದ ಮೇಲೆ ಆಣೆಯಿಟ್ಟುಕೊಂಡು--ಓ ದಾನೇ, ನಿನ್ನ ದೇವರ ಜೀವದಾಣೆ ಎಂದೂ ಬೇರ್ಷೆಬ ಮಾರ್ಗದ ಜೀವದಾಣೆ ಎಂದೂ ಹೇಳುವವರು ಬಿದ್ದು ಮತ್ತೆ ಮೇಲೆ ಏಳಲಾರರು.
- Jeremiah 13:22 ಯೆರೆಮೀಯ 13:22ಇವು ನನಗೆ ಯಾಕೆ ಸಂಭವಿಸಿದವೆಂದು ನೀನು ನಿನ್ನ ಹೃದಯದಲ್ಲಿ ಅಂದುಕೊಂಡರೆ, ಬಹಳವಾದ ನಿನ್ನ ಅಕ್ರಮದ ನಿಮಿತ್ತ ನಿನ್ನ ಬಟ್ಟೆಗಳು ತೆಗೆಯಲ್ಪಟ್ಟು ನಿನ್ನ ಹಿಮ್ಮಡಿಗಳು ಬೆತ್ತಲೆಯಾದವು.
- Jeremiah 22:6 ಯೆರೆಮೀಯ 22:6ಕರ್ತನು ಯೆಹೂದದ ಅರಸನ ಮನೆಗೆ ಹೀಗೆ ಹೇಳುತ್ತಾನೆ --ನೀನು ನನಗೆ ಗಿಲ್ಯಾದೂ ಲೆಬನೋನಿನ ತಲೆಯೂ ಆಗಿದ್ದೀ; ಆದರೂ ನಿಶ್ಚಯವಾಗಿ ನಿನ್ನನ್ನು ಅರಣ್ಯ ವಾಗಿಯೂ ನಿವಾಸಿಗಳಿಲ್ಲದ ಪಟ್ಟಣಗಳಾಗಿಯೂ ಮಾಡುವೆನು.
- Exodus 17:3 ವಿಮೋಚನಕಾಂಡ 17:3ಅಲ್ಲಿ ಜನರು ದಾಹಗೊಂಡು ಮೋಶೆಗೆ ವಿರುದ್ಧವಾಗಿ ಗುಣು ಗುಟ್ಟಿ--ನಮ್ಮನ್ನೂ ನಮ್ಮ ಮಕ್ಕಳನ್ನೂ ನಮ್ಮ ದನಗಳನ್ನೂ ದಾಹದಿಂದ ಕೊಲ್ಲುವದಕ್ಕಾಗಿ ಯಾಕೆ ಐಗುಪ್ತದೊಳ ಗಿಂದ ಇಲ್ಲಿಗೆ ಬರಮಾಡಿದಿ ಅಂದರು.
- Revelation 17:16 ಪ್ರಕಟನೆ 17:16ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು.
- Jeremiah 4:26 ಯೆರೆಮೀಯ 4:26ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಅರಣ್ಯವಾಯಿತು; ಅದರ ಪಟ್ಟಣಗಳೆಲ್ಲಾ ಕರ್ತನ ಮುಂದೆಯೂ ಆತನ ಕೋಪದ ಉರಿಯ ಮುಂದೆಯೂ ಕೆಡವಲ್ಪಟ್ಟಿದ್ದವು.
- Ezekiel 16:4–8 ಯೆಹೆಜ್ಕೇಲನು 16:4–8ನಿನ್ನ ಜನನವನ್ನು ಕುರಿತು ನೀನು ಹುಟ್ಟಿದ ದಿನದಲ್ಲಿ ನಿನ್ನ ಹೊಕ್ಕಳು ಕತ್ತರಿಸ ಲ್ಪಡಲಿಲ್ಲ; ಶುದ್ಧವಾಗುವ ಹಾಗೆ ನೀರಿನಿಂದ ತೊಳೆ ಯಲ್ಪಡಲಿಲ್ಲ, ನಿನಗೆ ಉಪ್ಪು ಹಾಕಲಿಲ್ಲ, ನಿನ್ನನ್ನು ಬಟ್ಟೆಯಿಂದ ಸುತ್ತಲಿಲ್ಲ. ನಿನ್ನನ್ನು ಕರುಣಿಸಿ ಕಟಾಕ್ಷಿಸಿ ಯಾರೂ ನಿನಗೆ ಇಂಥ ಒಂದು ಸಹಾಯವನ್ನು ಮಾಡ ಲಿಲ್ಲ, ಆದರೆ ನೀನು ಹುಟ್ಟಿದ ದಿನದಲ್ಲಿ ಅಸಹ್ಯಪಟ್ಟು ನಿನ್ನನ್ನು ಹೊಲದಲ್ಲಿ ಬಿಸಾಡಿದರು. ನಾನು ನಿನ್ನ ಬಳಿಯಲ್ಲಿ ಹಾದು ಹೋಗುವಾಗ ನೀನು ನಿನ್ನ ಸ್ವಂತ ರಕ್ತದಲ್ಲಿ ಬಿದ್ದು ಹೊರಳಾಡುತ್ತಿದ್ದ ನಿನ್ನನ್ನು ನಾನು ನಿನ್ನ ರಕ್ತದಲ್ಲಿ ನೋಡಿದಾಗ ಬದುಕು ಎಂದೆನು; ಹೌದು, ನೀನು ನಿನ್ನ ರಕ್ತದಲ್ಲಿ ಬಿದ್ದಿರುವಾಗ ನಾನು ಬದುಕು ಅಂದೆನು. ಭೂಮಿಯಲ್ಲಿಯ ಮೊಳಿಕೆಯೋ ಎಂಬಂತೆ ನಾನು ನಿನ್ನನ್ನು ಬೆಳೆಸಲು (ಹೆಚ್ಚಿಸಲು) ನೀನು ಬಲಿತು ಪ್ರಾಯವು ತುಂಬಿ ಅತಿ ಸೌಂದರ್ಯವಂತೆಯಾದೆ; ನಿನ್ನ ಸ್ತನಗಳು ರೂಪಗೊಂಡವು; ನಿನ್ನ ಕೂದಲು ಬೆಳೆಯಿತು; ಆದರೆ ಮೊದಲು ನೀನು ಬರೀ ಬೆತ್ತಲೆ ಯಾಗಿದ್ದೆ. ಈಗ ನಾನು ನಿನ್ನ ಬಳಿ ಹಾದು ಹೋಗು ವಾಗ ನಿನ್ನನ್ನು ನೋಡಲು ಇಗೋ, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು; ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಬೆತ್ತಲೆಯನ್ನು ಮುಚ್ಚಿದೆನು. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡದ್ದರಿಂದ ನೀನು ನನ್ನವಳಾದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- Isaiah 64:10 ಯೆಶಾಯ 64:10ನಿನ್ನ ಪರಿಶುದ್ಧ ಪಟ್ಟಣಗಳು ಅಡವಿ ಯಾದವು; ಚೀಯೋನು ಅಡವಿಯಾಯಿತು; ಯೆರೂ ಸಲೇಮು ಹಾಳಾಯಿತು.
- Jeremiah 51:43 ಯೆರೆಮೀಯ 51:43ಅದರ ಪಟ್ಟಣಗಳು ಹಾಳಾದವು; ಅವು ಒಣನೆಲವೂ ಅಡವಿಯೂ ಯಾರೂ ವಾಸಮಾಡದೆ, ಮನುಷ್ಯನ ಮಗನು ಹಾದುಹೋಗದೆ ಇರುವ ದೇಶವೂ ಆಗಿವೆ.