Hosea · chapter 2 · verse 8
Hosea 2:8 in Kannada
ಅವರು ಬಾಳನಿಗಾಗಿ ಸಿದ್ಧಮಾಡಿದ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ನಾನು ಕೊಟ್ಟು ಅವ ಳಿಗೆ ಬೆಳ್ಳಿ ಬಂಗಾರವನ್ನು ನಾನೇ ಹೆಚ್ಚಿಸಿದ್ದೇನೆಂದು ಅವಳಿಗೆ ತಿಳಿಯಲಿಲ್ಲ.
Avaru baalanigaagi siddhamaadida dhaanyavannoo draakshaarasavannoo enneyannoo naanu kottu ava lige belli bangaaravannu naane hechchisiddenendu avalige tiliyalilla.
Hosea 2:8 in English
- King James Version (KJV)
- For she did not know that I gave her corn, and wine, and oil, and multiplied her silver and gold, [which] they prepared for Baal.
- World English Bible (WEB)
- For she didn’t know that I gave her the grain, the new wine, and the oil, and multiplied to her silver and gold, which they used for Baal.
- American Standard Version (ASV)
- For she did not know that I gave her the grain, and the new wine, and the oil, and multiplied unto her silver and gold, which they used for Baal.
- Bible in Basic English (BBE)
- For she had no knowledge that it was I who gave her the grain and the wine and the oil, increasing her silver and gold which they gave to the Baal.
- Darby Translation (DBY)
- And she did not know that I had given her the corn and the new wine and the oil, and had multiplied to her the silver and gold, which they employed for Baal.
- Webster's Bible (WBS)
- For she did not know that I gave her corn, and wine, and oil, and multiplied her silver and gold, [which] they prepared for Baal.
- Young's Literal Translation (YLT)
- And she knew not that I had given to her, The corn, and the new wine, and the oil. Yea, silver I did multiply to her, And the gold they prepared for Baal.
Read in context
- 6ಆದದರಿಂದ ಇಗೋ, ನಾನು ನಿನ್ನ ಮಾರ್ಗಕ್ಕೆ ಮುಳ್ಳುಗಳ ಬೇಲಿ ಹಾಕುವೆನು; ಅವಳು ತನ್ನ ಹಾದಿಗಳನ್ನು ಕಾಣದ ಹಾಗೆ ಗೋಡೆಯನ್ನು ಕಟ್ಟುವೆನು.
- 7ಅವಳು ತನ್ನ ಮಿಂಡರನ್ನು ಹಿಂಬಾಲಿಸಿದರೂ ಅವರನ್ನು ಸಂಧಿಸುವದಿಲ್ಲ, ಹುಡುಕಿದರೂ ಅವರು ಸಿಕ್ಕುವದಿಲ್ಲ; ಆಗ ಅವಳು--ನನ್ನ ಮೊದಲನೆಯ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು; ಈಗಿರುವದಕ್ಕಿಂತ ಆಗ ನನಗೆ ಎಷ್ಟೋ ಚೆನ್ನಾಗಿತ್ತು ಎಂದು ಅಂದುಕೊಳ್ಳುವಳು.
- 8ಅವರು ಬಾಳನಿಗಾಗಿ ಸಿದ್ಧಮಾಡಿದ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ನಾನು ಕೊಟ್ಟು ಅವ ಳಿಗೆ ಬೆಳ್ಳಿ ಬಂಗಾರವನ್ನು ನಾನೇ ಹೆಚ್ಚಿಸಿದ್ದೇನೆಂದು ಅವಳಿಗೆ ತಿಳಿಯಲಿಲ್ಲ.
- 9ಆದ್ದರಿಂದ ನಾನು ತಿರುಗಿ ಕೊಂಡು ನನ್ನ ಧಾನ್ಯವನ್ನು ಅದರ ಕಾಲದಲ್ಲಿಯೂ ನನ್ನ ದ್ರಾಕ್ಷಾರಸವನ್ನು ಅದರ ಸಮಯದಲ್ಲಿಯೂ ತೆಗೆದಹಾಗೆ ಅವಳ ಬೆತ್ತಲೆತನವನ್ನು ಮುಚ್ಚುವದ ಕ್ಕಿದ್ದ ನನ್ನ ಉಣ್ಣೆಯನ್ನೂ ನನ್ನ ನಾರು ಬಟ್ಟೆಯನ್ನೂ ತೆಗೆದುಕೊಳ್ಳುವೆನು.
- 10ಈಗ ಅವಳ ತುಚ್ಛತನವನ್ನು ಅವಳ ಮಿಂಡರ ಕಣ್ಣುಗಳ ಮುಂದೆ ಬಯಲು ಪಡಿಸುವೆನು; ನನ್ನ ಕೈಯೊಳಗಿಂದ ಅವಳನ್ನು ಯಾರೂ ಬಿಡಿಸರು.
Cross references
- Isaiah 1:3 ಯೆಶಾಯ 1:3ಎತ್ತು ತನ್ನ ಯಜಮಾನನನ್ನು ಮತ್ತು ಕತ್ತೆಯು ತನ್ನ ಒಡೆ ಯನ ಕೊಟ್ಟಿಗೆಯನ್ನು ತಿಳಿದಿರುವವು; ಆದರೆ ಇಸ್ರಾ ಯೇಲಿಗೆ ತಿಳಿದಿಲ್ಲ; ನನ್ನ ಜನರು ಆಲೋಚಿಸುವ ದಿಲ್ಲ.
- Romans 1:28 ರೋಮಾಪುರದವರಿಗೆ 1:28ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
- Hosea 13:2 ಹೋಶೇಯ 13:2ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ; ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ. ಅವೆಲ್ಲವೂ ಶಿಲ್ಪಿಗಳ ಕೈಕೆಲಸವೇ, ಬಲಿ ಅರ್ಪಿಸುವ ಮನುಷ್ಯರು ಹಸುಗಳಿಗೆ ಮುದ್ದಿಡಲೆಂದು ಅವರು ಅವರ ವಿಷಯ ವಾಗಿ ಹೇಳಿದರು.
- Hosea 4:11 ಹೋಶೇಯ 4:11ವ್ಯಭಿಚಾರವೂ ದ್ರಾಕ್ಷಾರಸವೂ ಹೊಸ ದ್ರಾಕ್ಷಾರಸವೂ ಹೃದಯವನ್ನು ಕೆಡಿಸುತ್ತದೆ.
- Hosea 8:4 ಹೋಶೇಯ 8:4ಅವರು ಅರಸುಗಳನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ, ಪ್ರಧಾನರನ್ನು ನೇಮಿಸಿದ್ದಾರೆ, ಅದು ನನಗೆ ತಿಳಿಯಲಿಲ್ಲ; ಅವರು ಕಡಿದುಬಿಡಲ್ಪಡುವ ಹಾಗೆ ತಮ್ಮ ಬೆಳ್ಳಿಯಿಂದಲೂ ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ.
- Ezekiel 16:16–19 ಯೆಹೆಜ್ಕೇಲನು 16:16–19ನಿನ್ನ ವಸ್ತ್ರಗಳನ್ನು ತೆಗೆದುಕೊಂಡು ಚಿತ್ರ ವಿಚಿತ್ರ ಮಾಡಿ ಅಲಂಕರಿಸಿಕೊಂಡು ಪೂಜಾಸ್ಥಳದಲ್ಲಿ ವ್ಯಭಿಚಾರ ಮಾಡಿದೆ, ಇದು ನಡೆಯತಕ್ಕದ್ದಲ್ಲ ಮತ್ತು ನಡೆಯಬಾರದಂಥ ಕೆಲಸವಾಗಿದೆ. ಇದಲ್ಲದೆ ನಾನು ನಿನಗೆ ಬೆಳ್ಳಿ ಬಂಗಾರದಿಂದ ಮಾಡಿಸಿಕೊಟ್ಟಿದ್ದ ನಿನ್ನ ಅಂದವಾದ ಆಭರಣಗಳನ್ನು ತೆಗೆದು ಅವುಗಳಿಂದ ಪುರುಷ ರೂಪಗಳನ್ನು ಮಾಡಿಕೊಂಡು ಅದರ ಸಂಗಡ ವ್ಯಭಿಚಾರ ಮಾಡಿದಿ. ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಅವರಿಗೆ ಹೊದಿಸಿ ನನ್ನ ಎಣ್ಣೆಯನ್ನೂ ಧೂಪ ವನ್ನೂ ಅವರ ಮುಂದೆ ಇಟ್ಟೆ. ನಾನು ನಿನಗೆ ನನ್ನ ಆಹಾರವನ್ನೂ ನಿನಗೆ ನಯವಾದ ಹಿಟ್ಟನ್ನೂ ಎಣ್ಣೆ ಮತ್ತು ಜೇನುಗಳನ್ನೂ ಸುವಾಸನೆಗಾಗಿ ಕೊಟ್ಟೆ. ಆದರೆ ನೀನು ಅವುಗಳನ್ನು ಅವರ ಮುಂದೆ ಇಟ್ಟೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- Habakkuk 1:16 ಹಬಕ್ಕೂಕ 1:16ತಮ್ಮ ಬಲೆಗೆ ಬಲಿ ಅರ್ಪಿಸಿ ತಮ್ಮ ಜಾಲಕ್ಕೆ ಧೂಪವನ್ನು ಸುಡುತ್ತಾರೆ; ಇವುಗಳಿಂದ ಅವರ ಪಾಲು ಕೊಬ್ಬಾಗಿಯೂ ಅವರ ಆಹಾರ ಪುಷ್ಟಿ ಯುಳ್ಳದ್ದಾಗಿಯೂ ಇದೆ.ಹೀಗಿರುವದರಿಂದ ಅವರು ತಮ್ಮ ಬಲೆಯನ್ನು ಬರಿದುಮಾಡಿ ನಿತ್ಯವಾಗಿ ಜನಾಂಗ ಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?
- Judges 9:27 ನ್ಯಾಯಸ್ಥಾಪಕರು 9:27ಹೊರಗೆ ಹೋಗಿ ತಮ್ಮ ದ್ರಾಕ್ಷೇ ಫಲಗಳನ್ನು ಕೊಯಿದು ಅವು ಗಳನ್ನು ತುಳಿದು ಸಂತೋಷಪಟ್ಟು ತಮ್ಮ ದೇವರ ಮನೆಯೊಳಗೆ ಹೋಗಿ ತಿಂದು ಕುಡಿದು ಅಬೀಮೆಲೆಕ ನನ್ನು ಶಪಿಸಿದರು.
- Luke 16:1–2 ಲೂಕನು 16:1–2ತರುವಾಯ ಆತನು ತನ್ನ ಶಿಷ್ಯರಿಗೂ ಆಗ ಅವನು ಆ ಮನೆವಾರ್ತೆ ಯವನನ್ನು ಕರೆದು ಅವನಿಗೆ--ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವದು? ಮನೆವಾರ್ತೆಯ ನಿನ್ನ ಲೆಕ್ಕವನ್ನು ಒಪ್ಪಿಸು; ಯಾಕಂದರೆ ನೀನು ಇನ್ನು ಮೇಲೆ ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಅಂದನು.
- Acts 17:23–25 ಅಪೊಸ್ತಲರ ಕೃತ್ಯಗಳು 17:23–25ನಾನು ಹಾದು ಹೋಗುತ್ತಿರಲು ನಿಮ್ಮ ಧ್ಯಾನಗಳನ್ನು ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ--ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿ ಸುತ್ತೇನೆ. ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯ ನಾಗಿರುವದರಿಂದ ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವಾತನಲ್ಲ. ಇಲ್ಲವೆ ತಾನೇ ಎಲ್ಲರಿಗೆ ಜೀವವನ್ನು ಶ್ವಾಸವನ್ನು ಎಲ್ಲವನ್ನು ಕೊಡುವಾತ ನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಆರಾಧನೆ ಹೊಂದುವಾತನಲ್ಲ;
- Daniel 5:3–4 ದಾನಿಯೇಲನು 5:3–4ಆಗ ಅವರು ಯೆರೂಸಲೇಮಿನ ದೇವಾಲಯದೊಳಗಿಂದ ತೆಗೆದ ಬಂಗಾರದ ಪಾತ್ರೆ ಗಳನ್ನು ತಂದರು. ಅರಸನೂ ಅವನ ಪ್ರಭುಗಳೂ ಪತ್ನಿ ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು. ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಹೊಗಳತೊಡಗಿದರು.
- Daniel 5:23 ದಾನಿಯೇಲನು 5:23ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.