Hosea · chapter 4 · verse 10
Hosea 4:10 in Kannada
ಅವರು ತಿಂದರೂ ಸಾಕಾಗುವದಿಲ್ಲ; ಅವರು ವ್ಯಭಿಚಾರ ಮಾಡಿದರೂ ಅಭಿವೃದ್ಧಿಯಾಗುವದಿಲ್ಲ; ಯಾಕಂದರೆ ಅವರು ಕರ್ತನ ಕಡೆಗೆ ಗಮನಿಸುವದನ್ನು ಬಿಟ್ಟುಬಿಟ್ಟಿದ್ದಾರೆ.
Avaru tindaroo saakaaguvadilla; avaru vyabhichaara maadidaroo abhivruddhiyaaguvadilla; yaakandare avaru kartana kadege gamanisuvadannu bittubittiddaare.
Hosea 4:10 in English
- King James Version (KJV)
- For they shall eat, and not have enough: they shall commit whoredom, and shall not increase: because they have left off to take heed to the LORD.
- World English Bible (WEB)
- They will eat, and not have enough. They will play the prostitute, and will not increase; because they have abandoned listening to the LORD.
- American Standard Version (ASV)
- And they shall eat, and not have enough; they shall play the harlot, and shall not increase; because they have left off taking heed to Jehovah.
- Bible in Basic English (BBE)
- They will have food, but they will not be full; they will be false to me, but they will not be increased, because they no longer give thought to the Lord.
- Darby Translation (DBY)
- and they shall eat, and not have enough; they shall commit whoredom, and shall not increase: for they have left off taking heed to Jehovah.
- Webster's Bible (WBS)
- For they shall eat, and not have enough: they shall be guilty of lewdness, and shall not increase: because they have ceased to take heed to the LORD.
- Young's Literal Translation (YLT)
- And they have eaten, and are not satisfied, They have gone a-whoring, and increase not, For they have left off taking heed to Jehovah.
Read in context
- 8ಅವರು ನನ್ನ ಜನರ ಪಾಪವನ್ನು ತಿನ್ನುತ್ತಾರೆ ಮತ್ತು ಅವರು ದುಷ್ಟತನದ ಮೇಲೆ ಮನಸ್ಸಿಡುತ್ತಾರೆ.
- 9ಯಾಜಕನು ಹೇಗೋ, ಹಾಗೆಯೇ ಜನರು ಇರು ವರು; ನಾನು ಅವರ ಮಾರ್ಗಗಳಿಗೋಸ್ಕರ ಅವರನ್ನು ಶಿಕ್ಷಿಸಿ, ಅವರ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡು ವೆನು.
- 10ಅವರು ತಿಂದರೂ ಸಾಕಾಗುವದಿಲ್ಲ; ಅವರು ವ್ಯಭಿಚಾರ ಮಾಡಿದರೂ ಅಭಿವೃದ್ಧಿಯಾಗುವದಿಲ್ಲ; ಯಾಕಂದರೆ ಅವರು ಕರ್ತನ ಕಡೆಗೆ ಗಮನಿಸುವದನ್ನು ಬಿಟ್ಟುಬಿಟ್ಟಿದ್ದಾರೆ.
- 11ವ್ಯಭಿಚಾರವೂ ದ್ರಾಕ್ಷಾರಸವೂ ಹೊಸ ದ್ರಾಕ್ಷಾರಸವೂ ಹೃದಯವನ್ನು ಕೆಡಿಸುತ್ತದೆ.
- 12ನನ್ನ ಜನರು ಮರದ ತುಂಡುಗಳಿಗೆ ಆಲೋಚನೆ ಕೇಳುತ್ತಾರೆ; ಅವರ ಕೋಲು ಅವರಿಗೆ ತಿಳಿಸುತ್ತದೆ. ವ್ಯಭಿಚಾರದ ಆತ್ಮಗಳು ಅವರನ್ನು ತಪ್ಪಿಸಿಬಿಟ್ಟಿದೆ; ಅವರು ತಮ್ಮ ದೇವರ ಕೈಕೆಳಗಿರದೆ ವ್ಯಭಿಚಾರ ಮಾಡಿದ್ದಾರೆ.
Cross references
- Micah 6:14 ಮೀಕ 6:14ನೀನು ಉಂಡು ತೃಪ್ತಿಯಾಗದೆ ಇರುವಿ; ನಿನ್ನೊಳಗೆ ನಿನ್ನ ಬೀಳ್ವಿಕೆಯು ಇರುವದು; ನೀನು ಹಿಡಿದು ತಪ್ಪಿಸದೆ ಇರುವಿ; ನೀನು ತಪ್ಪಿಸುವಂಥದ್ದನ್ನು ನಾನು ಕತ್ತಿಗೆ ಒಪ್ಪಿಸುವೆನು.
- Leviticus 26:26 ಯಾಜಕಕಾಂಡ 26:26ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ.
- Haggai 1:6 ಹಗ್ಗಾಯ 1:6ನೀವು ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ತಂದಿದ್ದೀರಿ; ನೀವು ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿ ಯಾಗಲಿಲ್ಲ; ಧರಿಸುತ್ತೀರಿ, ಆದರೆ ಬೆಚ್ಚಗಾಗಲಿಲ್ಲ; ಸಂಬಳವನ್ನು ಸಂಪಾದಿಸುವವನು ಅದನ್ನು ತೂತು ಗಳುಳ್ಳ ಚೀಲದಲ್ಲಿ ಹಾಕುವದಕ್ಕೆ ಸಂಪಾದಿಸುತ್ತಾನೆ.
- Psalm 36:3 ಕೀರ್ತನೆಗಳು 36:3ಅವನ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿವೆ; ಬುದ್ಧಿ ಯಿಂದ ನಡೆಯುವದನ್ನೂ ಒಳ್ಳೇದು ಮಾಡುವದನ್ನೂ ಬಿಟ್ಟಿದ್ದಾನೆ.
- Psalm 125:5 ಕೀರ್ತನೆಗಳು 125:5ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.
- Proverbs 13:25 ಜ್ಞಾನೋಕ್ತಿಗಳು 13:25ತನಗೆ ತೃಪ್ತಿಯಾಗುವ ವರೆಗೆ ನೀತಿವಂತನು ತಿನ್ನುತ್ತಾನೆ; ದುಷ್ಟರ ಹೊಟ್ಟೆಗೆ ಕೊರತೆಯಾಗುವದು.
- Zephaniah 1:6 ಚೆಫನ್ಯ 1:6ಕರ್ತನ ಕಡೆಯಿಂದ ಹಿಂತಿ ರುಗಿದವರನ್ನೂ ಕರ್ತನನ್ನು ಹುಡುಕದೆಯೂ ವಿಚಾರಿಸ ದೆಯೂ ಇರುವವರನ್ನೂ ಕಡಿದುಬಿಡುವೆನು.
- Hosea 9:11–17 ಹೋಶೇಯ 9:11–17ಎಫ್ರಾಯಾಮ್ಯರ ಘನತೆಯು ಹಾರಿಹೋಗುವ ಪಕ್ಷಿಯ ಹಾಗೆ ಇದೆ. ಜನ್ಮವಾಗಲಿ, ಗರ್ಭಧರಿಸುವದಾಗಲಿ ಉತ್ಪತ್ತಿಯಾಗಲಿ ಅವರಿಗೆ ಇರು ವದಿಲ್ಲ. ಅವರು ತಮ್ಮ ಮಕ್ಕಳನ್ನು ಬೆಳೆಸಿದಾಗ್ಯೂ ಒಬ್ಬ ಮನುಷ್ಯನು ಉಳಿಯದ ಹಾಗೆ ನಾನು ಅವರನ್ನು ಅನಾಥರನ್ನಾಗಿ ಮಾಡುವೆನು. ಹೌದು, ನಾನು ಅವ ರನ್ನು ಬಿಟ್ಟು ಹೋಗುವಾಗ ಅವರಿಗೆ ಅಯ್ಯೋ! ನಾನು ತೂರನ್ನು ನೊಡಿದಂತೆ ಎಫ್ರಾಯಾಮು ರಮ್ಯ ಸ್ಥಳದಲ್ಲಿ ನೆಡಲ್ಪಟ್ಟಿದೆ; ಆದರೆ ಎಫ್ರಾಯಾಮು ಕೊಲ್ಲುವವನಿಗೆ ತನ್ನ ಮಕ್ಕಳನ್ನು ಹೊರಗೆ ತರುವದು. ಓ ಕರ್ತನೇ, ಅವರಿಗೆ ಕೊಡು; ಅವರಿಗೆ ನೀನು ಏನು ಕೊಡುತ್ತೀ? ಗರ್ಭಸ್ರಾವವನ್ನು ಮಾಡು ಮತ್ತು ಬತ್ತಿದ ಸ್ತನಗಳನ್ನು ಅವರಿಗೆ ಕೊಡು. ಅವರ ಕೆಟ್ಟತನ ವೆಲ್ಲಾ ಗಿಲ್ಗಾಲಿನಲ್ಲಿದೆ. ಅಲ್ಲಿ ನಾನು ಅವರನ್ನು ಹಗೆ ಮಾಡಿದ್ದೇನೆ. ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರನ್ನು ನನ್ನ ಆಲಯದೊಳಗಿಂದ ಹೊರಡಿಸಿ ಅವ ರನ್ನು ಇನ್ನು ಪ್ರೀತಿಮಾಡುವದೇ ಇಲ್ಲ; ಅವರ ಪ್ರಭು ಗಳೆಲ್ಲಾ ತಿರುಗಿ ಬೀಳುವವರೇ. ಎಫ್ರಾಯಾಮ್ಯರು ಹೊಡೆಯಲ್ಪಟ್ಟಿದ್ದಾರೆ, ಅವರ ಬೇರು ಒಣಗಿ ಹೋಗಿದೆ, ಅವರು ಫಲವನ್ನು ಕೊಡುವದಿಲ್ಲ; ಹೌದು, ಅವರು ಹೆತ್ತರೂ ಅವರ ಗರ್ಭದ ಪ್ರಿಯಕರವಾದ ಫಲವನ್ನು ಸಹ ನಾನು ಕೊಲ್ಲುವೆನು.ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು. ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.
- Ezekiel 18:24 ಯೆಹೆಜ್ಕೇಲನು 18:24ಆದರೆ ನೀತಿ ವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡಿ ದುಷ್ಟನು ಮಾಡುವ ಎಲ್ಲಾ ಅಸಹ್ಯವಾದವುಗಳ ಹಾಗೆ ಮಾಡಿದರೆ ಅವನು ಬದುಕುವನೇ? ಅವನು ಮಾಡಿ ರುವ ಎಲ್ಲಾ ನೀತಿಯು ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿರುವ ಅಪರಾಧದಿಂದಲೂ ಪಾಪ ದಿಂದಲೂ ಅವುಗಳಲ್ಲಿ ಸಾಯುವನು.
- 2 Chronicles 24:17 2 ಪೂರ್ವಕಾಲವೃತ್ತಾಂತ 24:17ಆದರೆ ಯೆಹೋಯಾದನು ಸತ್ತತರುವಾಯ ಯೆಹೂದದ ಪ್ರಧಾನರು ಬಂದು ಅರಸನಿಗೆ ಅಡ್ಡ ಬಿದ್ದರು. ಆಗ ಅರಸನು ಅವರ ಮಾತನ್ನು ಕೇಳಿದನು.
- Malachi 2:1–3 ಮಲಾಕಿಯ 2:1–3ಈಗ ಓ ಯಾಜಕರೇ, ಈ ಆಜ್ಞೆ ನಿಮಗಾಗಿ ಅದೆ. ಸೈನ್ಯಗಳ ಕರ್ತನು ಹೇಳುವದೇ ನಂದರೆ ನೀವು ಕೇಳದೆ, ಹೃದಯದಲ್ಲಿ ಇಟ್ಟುಕೊಳ್ಳದೆ, ನನ್ನ ಹೆಸರಿಗೆ ಮಹಿಮೆಯನ್ನು ಕೊಡದೆ ಹೋದರೆ ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು, ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು; ಹೌದು, ಅವು ಗಳನ್ನು ಆಗಲೇ ಶಪಿಸಿದ್ದಾಯಿತು; ನೀವು ಅವುಗಳನ್ನು ಹೃದಯದಲ್ಲಿ ಇಟ್ಟುಕೊಳ್ಳುವದಿಲ್ಲ. ಇಗೋ, ನಾನು ನಿಮ್ಮ ಸಂತತಿಯನ್ನು ಕೆಡಿಸಿ, ನಿಮ್ಮ ಮುಖಗಳ ಮೇಲೆ ಕಸವನ್ನು ಚೆಲ್ಲುತ್ತೇನೆ; ನಿಮ್ಮ ಪವಿತ್ರ ಹಬ್ಬಗಳನ್ನು ಸಹ ಕಸವೆಂದು ಚೆಲ್ಲುತ್ತೇನೆ. ಆಗ ಒಬ್ಬನು ನಿಮ್ಮನ್ನು ಅದರೊಂದಿಗೆ ತೆಗೆದುಬಿಡುವನು.
- Isaiah 65:13–16 ಯೆಶಾಯ 65:13–16ಹೀಗಿರುವದರಿಂದ ದೇವರಾದ ಕರ್ತನು ಹೇಳು ವದೇನಂದರೆ--ಇಗೋ, ನನ್ನ ಸೇವಕರು ತಿನ್ನುವರು ಆದರೆ ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ಆದರೆ ನೀವು ಬಾಯಾರಿರುವಿರಿ; ಇಗೋ, ನನ್ನ ಸೇವಕರು ಸಂತೋಷಪಡುವರು; ಆದರೆ ನೀವು ನಾಚಿಕೆಪಡುವಿರಿ; ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ. ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು. ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳು ವವನು ಸತ್ಯ ದೇವರಲ್ಲಿ ಆಶೀರ್ವದಿಸಿಕೊಳ್ಳುವನು. ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು; ಸತ್ಯದೇವರ ಮೇಲೆ ಆಣೆ ಇಟ್ಟುಕೊಳ್ಳುವನು; ಮುಂಚಿನ ಕಷ್ಟಗಳು ಮರೆತುಹೋಗಿವೆ ಮತ್ತು ಅವು ನನ್ನ ಕಣ್ಣುಗಳಿಗೆ ಮರೆಯಾಗಿವೆ.