Hosea · chapter 4 · verse 12
Hosea 4:12 in Kannada
ನನ್ನ ಜನರು ಮರದ ತುಂಡುಗಳಿಗೆ ಆಲೋಚನೆ ಕೇಳುತ್ತಾರೆ; ಅವರ ಕೋಲು ಅವರಿಗೆ ತಿಳಿಸುತ್ತದೆ. ವ್ಯಭಿಚಾರದ ಆತ್ಮಗಳು ಅವರನ್ನು ತಪ್ಪಿಸಿಬಿಟ್ಟಿದೆ; ಅವರು ತಮ್ಮ ದೇವರ ಕೈಕೆಳಗಿರದೆ ವ್ಯಭಿಚಾರ ಮಾಡಿದ್ದಾರೆ.
Nanna janaru marada tundugalige aalochane keluttaare; avara kolu avarige tilisuttade. Vyabhichaarada aatmagalu avarannu tappisibittide; avaru tamma devara kaikelagirade vyabhichaara maadiddaare.
Hosea 4:12 in English
- King James Version (KJV)
- My people ask counsel at their stocks, and their staff declareth unto them: for the spirit of whoredoms hath caused [them] to err, and they have gone a whoring from under their God.
- World English Bible (WEB)
- My people consult with their wooden idol, and answer to a stick of wood. Indeed the spirit of prostitution has led them astray, and they have been unfaithful to their God.
- American Standard Version (ASV)
- My people ask counsel at their stock, and their staff declareth unto them; for the spirit of whoredom hath caused them to err, and they have played the harlot, [departing] from under their God.
- Bible in Basic English (BBE)
- My people get knowledge from their tree, and their rod gives them news; for a false spirit is the cause of their wandering, and they have been false to their God.
- Darby Translation (DBY)
- My people ask counsel of their stock, and their staff declareth unto them; for the spirit of whoredoms causeth [them] to err, and they have gone a whoring from under their God:
- Webster's Bible (WBS)
- My people ask counsel at their stocks, and their staff declareth to them: for the spirit of lewdness hath caused [them] to err, and they have gone astray from under their God.
- Young's Literal Translation (YLT)
- My people at its staff asketh and its rod declareth to it, For a spirit of whoredoms hath caused to err, And they go a-whoring from under their God.
Read in context
- 10ಅವರು ತಿಂದರೂ ಸಾಕಾಗುವದಿಲ್ಲ; ಅವರು ವ್ಯಭಿಚಾರ ಮಾಡಿದರೂ ಅಭಿವೃದ್ಧಿಯಾಗುವದಿಲ್ಲ; ಯಾಕಂದರೆ ಅವರು ಕರ್ತನ ಕಡೆಗೆ ಗಮನಿಸುವದನ್ನು ಬಿಟ್ಟುಬಿಟ್ಟಿದ್ದಾರೆ.
- 11ವ್ಯಭಿಚಾರವೂ ದ್ರಾಕ್ಷಾರಸವೂ ಹೊಸ ದ್ರಾಕ್ಷಾರಸವೂ ಹೃದಯವನ್ನು ಕೆಡಿಸುತ್ತದೆ.
- 12ನನ್ನ ಜನರು ಮರದ ತುಂಡುಗಳಿಗೆ ಆಲೋಚನೆ ಕೇಳುತ್ತಾರೆ; ಅವರ ಕೋಲು ಅವರಿಗೆ ತಿಳಿಸುತ್ತದೆ. ವ್ಯಭಿಚಾರದ ಆತ್ಮಗಳು ಅವರನ್ನು ತಪ್ಪಿಸಿಬಿಟ್ಟಿದೆ; ಅವರು ತಮ್ಮ ದೇವರ ಕೈಕೆಳಗಿರದೆ ವ್ಯಭಿಚಾರ ಮಾಡಿದ್ದಾರೆ.
- 13ಅವರು ಬೆಟ್ಟಗಳ ತುದಿಯಲ್ಲಿ ಬಲಿಗಳನ್ನು ಅರ್ಪಿಸು ತ್ತಾರೆ; ಗುಡ್ಡಗಳ ಮೇಲೆ ಧೂಪವನ್ನು ಸುಡುತ್ತಾರೆ. ಅಲ್ಲೋನ್, ಲಿಬ್ನೆ, ಏಲಾ ಮರಗಳ ಕೆಳಗೆ ಅವುಗಳ ನೆರಳು ಚೆನ್ನಾಗಿರುವದರಿಂದ ಹಾಗೆ ಮಾಡುತ್ತಾರೆ; ಆದದರಿಂದ ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವರು; ನಿಮ್ಮ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವರು.
- 14ನಿಮ್ಮ ಕುಮಾರ್ತೆಯರು ವ್ಯಭಿಚಾರ ಮಾಡುವಾಗಲೂ ನಿಮ್ಮ ಹೆಂಡತಿಯರು ವ್ಯಭಿಚಾರ ಮಾಡುವಾಗಲೂ ನಾನು ಶಿಕ್ಷಿಸುವದಿಲ್ಲ. ಯಾಕಂದರೆ ಸೂಳೆಯರ ಸಂಗಡ ತಮ್ಮನ್ನು ಬೇರ್ಪಡಿಸಿಕೊಂಡಿ ದ್ದಾರೆ; ಸೂಳೆಯರ ಸಂಗಡ ಬಲಿಅರ್ಪಿಸುತ್ತಾರೆ; ಆದದರಿಂದ ವಿವೇಕವಿಲ್ಲದ ಜನರು ಬಿದ್ದು ಹೋಗು ವರು.
Cross references
- Jeremiah 2:27 ಯೆರೆಮೀಯ 2:27ಅವರು ಮರಕ್ಕೆ ನೀನು ನನ್ನ ತಂದೆ ಎಂದೂ ಕಲ್ಲಿಗೆ--ನೀನು ನನ್ನನ್ನು ಹೆತ್ತಿದ್ದೀ ಎಂದೂ ಹೇಳುತ್ತಾರಲ್ಲಾ? ಯಾಕಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ಅವರ ಕಷ್ಟ ಕಾಲದಲ್ಲಿ--ಎದ್ದು, ನಮ್ಮನ್ನು ರಕ್ಷಿಸು ಎಂದು ಹೇಳುವರು.
- Hosea 5:4 ಹೋಶೇಯ 5:4ಅವರು ತಮ್ಮ ದೇವರ ಬಳಿಗೆ ತಿರುಗಿಕೊಳ್ಳುವ ಹಾಗೆ ತಮ್ಮ ಕ್ರಿಯೆಗಳನ್ನು ಸರಿ ಮಾಡುವದಿಲ್ಲ; ಯಾಕಂದರೆ ವ್ಯಭಿಚಾರಗಳ ಆತ್ಮವು ಅವರ ಮಧ್ಯದಲ್ಲಿ ಉಂಟು; ಅವರು ಕರ್ತನನ್ನು ತಿಳಿದುಕೊಳ್ಳಲಿಲ್ಲ.
- Habakkuk 2:19 ಹಬಕ್ಕೂಕ 2:19ಮರಕ್ಕೆ--ಎಚ್ಚರವಾಗು; ಮೂಕವಾದ ಕಲ್ಲಿಗೆ--ಎದ್ದು ಬೋಧಿಸಲಿ ಎಂದು ಹೇಳುವವನಿಗೆ ಅಯ್ಯೋ! ಇಗೋ, ಅದು ಬಂಗಾರದಿಂದಲೂ ಬೆಳ್ಳಿಯಿಂದಲೂ ಹೊದಿಸಲ್ಪಟ್ಟಿದೆ, ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.
- Numbers 15:39 ಅರಣ್ಯಕಾಂಡ 15:39ಅದನ್ನು ನೀವು ಗೊಂಡೆಯಾಗಿ ಇಟ್ಟುಕೊಂಡು ಅದನ್ನು ನೋಡುವಾಗ ಕರ್ತನ ಸಕಲ ಆಜ್ಞೆಗಳನ್ನು ನೆನಸಿ ಅವುಗಳ ಪ್ರಕಾರ ಮಾಡಿ ನಿಮ್ಮ ಹೃದಯವನ್ನೂ ಕಣ್ಣುಗಳನ್ನೂ ಅವು ಗಳಿಗನುಸಾರವಾಗಿ ಜಾರತ್ವಮಾಡುವಂತೆ ಹಿಂಬಾ ಲಿಸದೆ
- Isaiah 44:18–20 ಯೆಶಾಯ 44:18–20ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ. ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು. ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.
- Deuteronomy 31:16 ಧರ್ಮೋಪದೇಶಕಾಂಡ 31:16ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು.
- Leviticus 17:7 ಯಾಜಕಕಾಂಡ 17:7ಅವರು ಜಾರತ್ವ ಮಾಡುವಂತೆ ಯಾರ ಹಿಂದೆ ಹೋದರೋ ಆ ದೆವ್ವ ಗಳಿಗೆ ಇನ್ನೆಂದಿಗೂ ಅವರು ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೆ ಅವರ ತಲ ತಲಾಂತರಗಳ ವರೆಗೆ ಶಾಶ್ವತವಾದ ನಿಯಮವಾಗಿ ರುವದು.
- 2 Chronicles 21:13 2 ಪೂರ್ವಕಾಲವೃತ್ತಾಂತ 21:13ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದು ಅಹಾಬನ ಮನೆಯ ವ್ಯಭಿಚಾರಿ ಗಳ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ವ್ಯಭಿಚಾರ ಮಾಡಲು ಪ್ರೇರೇಪಿಸಿ ನಿನಗಿಂತ ಉತ್ತಮರಾಗಿರುವ ನಿನ್ನ ತಂದೆಯ ಮನೆ ಯವರಾದ ನಿನ್ನ ಸಹೋದರರನ್ನು ಕೊಂದುಹಾಕಿ ದ್ದರಿಂದ
- Micah 2:11 ಮೀಕ 2:11ಒಬ್ಬನು ಆತ್ಮದಲ್ಲಿಯೂ ವಂಚನೆಯಲ್ಲಿಯೂ ನಡೆದು ಸುಳ್ಳು ಹೇಳಿ--ನಿನಗೆ ದ್ರಾಕ್ಷಾರಸವನ್ನೂ ಮತ್ತಾಗುವದನ್ನೂ ಕುರಿತು ಪ್ರವಾದಿಸುವೆನೆಂದು ಹೇಳಿ ದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.
- Jeremiah 10:8 ಯೆರೆಮೀಯ 10:8ಅವರು ಒಟ್ಟಾರೆ ಕ್ರೂರಿಗಳೂ ಮೂರ್ಖರೂ ಆಗಿದ್ದಾರೆ; ಮರವು ವ್ಯರ್ಥವಾದ ಬೋಧನೆಯಾಗಿವೆ.
- Ezekiel 23:1–49 ಯೆಹೆಜ್ಕೇಲನು 23:1–49ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ-- ಮನುಷ್ಯಪುತ್ರನೇ, ಒಬ್ಬ ತಾಯಿಯ ಮಕ್ಕಳಾದ ಇಬ್ಬರು ಹೆಂಗಸರಿದ್ದರು; ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಅವರು ಎಳೆಯ ಪ್ರಾಯದಲ್ಲಿ ವ್ಯಭಿಚಾರ ಮಾಡಿದ್ದ ರಿಂದ ಕನ್ಯಾವಸ್ಥೆಯ ಅವರ ಸ್ತನಗಳು ಹಿಸುಕಲ್ಪಟ್ಟವು; ಅವುಗಳ ತೊಟ್ಟುಗಳು ನಸುಕಲ್ಪಟ್ಟವು. ಅವರುಗಳ ಹೆಸರುಗಳೇನಂದರೆ ಒಹೊಲ ಎಂಬವಳು ದೊಡ್ಡವಳು ಒಹೊಲೀಬ ಎಂಬವಳು ಚಿಕ್ಕವಳು; ಅವರು ನನ್ನವ ರಾಗಿದ್ದು ಕುಮಾರ ಮತ್ತು ಕುಮಾರ್ತೆಯರನ್ನು ಹೆತ್ತರು; ಅವರ ಹೆಸರು ಹೀಗೆ--ಒಹೋಲ ಎಂಬದು ಸಮಾ ರ್ಯವು ಮತ್ತು ಒಹೊಲೀಬ ಎಂಬದು ಯೆರೂಸ ಲೇಮು. ಒಹೊಲಳು ನನ್ನ ವಶವಾಗಿರುವಾಗ ಅವಳು ತನ್ನ ಪ್ರಿಯರನ್ನು, ತನ್ನ ನೆರೆಯವರಾದ ಅಶ್ಶೂರ್ಯ ದವರನ್ನು, ಅವರೆಲ್ಲರೂ ನೀಲಿಯಿಂದ ಹೊದಿಸಲ್ಪಟ್ಟ (ಧರಿಸಲ್ಪಟ್ಟ) ಯೋಧರು (ಮುಖಂಡರೂ) ಅಧಿಕಾರ ಸ್ಥರೂ ಅಪೇಕ್ಷಿಸತಕ್ಕ ಯೌವನಸ್ಥರೂ ಕುದುರೆಗಳ ಮೇಲೆ ಸವಾರಿ ಮಾಡುವ ರಾಹುತರೂ ಆಗಿರುವ ಅಂಥವರನ್ನು, ಮೋಹಿಸಿದಳು. ಅವರಿಗೆ ಅವಳು ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು, ಅವರೆಲ್ಲರೂ ಅಶ್ಶೂರದಲ್ಲಿ ಆರಿಸಲ್ಪಟ್ಟವರಾಗಿದ್ದರು. (ನೇಮಿಸ ಲ್ಪಟ್ಟವರು) ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರಪಡಿಸಿಕೊಂಡಳು. ಇಲ್ಲವೆ ಅವಳು ಐಗುಪ್ತದಲ್ಲಿದ್ದಂದಿನಿಂದಲೂ ವ್ಯಭಿ ಚಾರವನ್ನು ಸಹ ಬಿಡಲಿಲ್ಲ. ಅವಳ ಯೌವನದಲ್ಲಿ ಅವರು ಅವಳ ಸಂಗಡ ಇದ್ದರು; ಅವರೆಲ್ಲರೂ ಅವಳ ಕನ್ಯತ್ವದ ಸ್ತನಗಳನ್ನು ಒತ್ತಿ, ತಮ್ಮ ವ್ಯಭಿಚಾರಗಳನ್ನು ಅವಳ ಮೇಲೆ ನಡೆಸಿದರು. ಆದದರಿಂದ ನಾನು ಅವಳನ್ನು ಅವಳ ಪ್ರಿಯರಿಂದಲೂ ಒಪ್ಪಿಸುವ ಅವಳ ಅಶ್ಶೂರ್ಯರಿಂದಲೂ ಅವರೆಲ್ಲರಿಂದಲೂ ಮೋಹಿಸ ಲ್ಪಟ್ಟಳು; ಅವರು ಅವಳ ಬೆತ್ತಲೆತನವನ್ನು ಬಯಲು ಪಡಿಸಿದರು ಅವಳ ಪುತ್ರರನ್ನೂ ಹೆಣ್ಣು ಮಕ್ಕಳನ್ನೂ ತೆಗೆದುಕೊಂಡು ಖಡ್ಗದಿಂದ ಕೊಂದುಹಾಕಿದರು; ಸ್ತ್ರೀಯರಲ್ಲಿ (ಕೆಟ್ಟತನಕ್ಕೆ) ಹೆಸರುಗೊಂಡಳು; ಅವಳಲ್ಲಿ ನ್ಯಾಯ ತೀರ್ಪುಮಾಡಿದರು. ಅವಳ ಸಹೋದರಿ ಒಹೊಲೀಬಳು ಇದನ್ನು ನೋಡಿದಾಗ ಅವಳಿಗಿಂತ ಅಧಿಕವಾಗಿ ಮೋಹಗೊಂಡಳು. ತನ್ನ ಸಹೋದರಿಯ ವ್ಯಭಿಚಾರಕ್ಕಿಂತಲೂ ಹೆಚ್ಚಾಗಿ ವ್ಯಭಿಚಾರಗಳನ್ನು ನಡೆ ಸಿದಳು. ಅವಳು ತನ್ನ ನೆರೆಯವರಾದ ಅಶ್ಶೂರ್ಯ ರನ್ನೂ ನಾಯಕರು ಮತ್ತು ಅಧಿಕಾರಸ್ಥರು ಗಂಭೀರವಾಗಿ ಧರಿಸಲ್ಪಟ್ಟು ಕುದುರೆಗಳ ಮೇಲೆ ಸವಾರಿಮಾಡುವ ರಾಹುತರಾಗಿಯೂ ಅಪೇಕ್ಷಿಸತಕ್ಕ ಯೌವನಸ್ಥರಾ ಗಿಯೂ ಇರುವಂಥ ಅವರನ್ನು ಮೋಹಿಸಿದಳು. ಆಗ ನಾನು ಅವಳು ಅಪವಿತ್ರವಾದಳೆಂದು ನೋಡಿದೆನು; ಅವರಿಬ್ಬರೂ ಒಂದೇ ಮಾರ್ಗವನ್ನು ಹಿಡಿದರು. ಅವಳು ತನ್ನ ವ್ಯಭಿಚಾರವನ್ನು ಇನ್ನು ಹೆಚ್ಚಿಸಿದಳು; ಗೋಡೆಯ ಮೇಲೆ ಬರೆಯಲ್ಪಟ್ಟ ಮನುಷ್ಯರನ್ನೂ ಕುಂಕುಮ ಇಟ್ಟುಕೊಂಡ ಕಸ್ದೀಯರ ಹಾಗೆ ಕಂಡು ಬರುವ ಪ್ರತಿಮೆಗಳನ್ನೂ (ಮನುಷ್ಯ ಆಕಾರಗಳನ್ನೂ) ನೋಡಿದಾಗ, ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ ಕೊಂಡಂಥ ತನ್ನ ತಲೆಗಳಲ್ಲಿ ಅಲಂಕಾರವಾದ ರುಮಾ ಲನ್ನು ಧರಿಸಿದಂಥ ಎಲ್ಲರೂ ನೋಟದಲ್ಲಿ ಅವರ ಸ್ವದೇಶವಾದ ಕಸ್ದೀಯಕ್ಕೆ ಸೇರಿದ ಬಾಬೆಲಿನ ಕುಮಾರರ ಹಾಗಿರುವದನ್ನು; ಅವಳು ಅವಳ ಕಣ್ಣುಗಳಿಂದ ತಕ್ಷಣವೇ ಅವರನ್ನು ನೋಡಿದಾಗ ಅವರನ್ನು ಮೋಹಿಸಿ ದಳು; ಅವರ ಬಳಿಗೆ ಕಸ್ದೀಯಕ್ಕೆ ದೂತರನ್ನು ಕಳುಹಿಸಿ ದಳು. ಬಾಬೆಲಿನವರು ಅವಳ, ಪ್ರೀತಿಯ ಹಾಸಿ ಗೆಯ ಮೇಲೆ ಬಂದು ಅವಳನ್ನು ವ್ಯಭಿಚಾರದಿಂದ ಅಪವಿತ್ರಪಡಿಸಿದರು; ಅವಳು ಅವರಿಂದ ಹಾಳಾದ ಮೇಲೆ ತನ್ನ ಮನಸ್ಸನ್ನು ಅವರ ಕಡೆಯಿಂದ ಅಗಲಿಸಿ ಕೊಂಡಳು. ಹೀಗೆ ಅವಳು ವ್ಯಭಿಚಾರವನ್ನು ಕಂಡುಹಿಡಿದು ತನ್ನ ಬೆತ್ತಲೆತನವನು ಬಯಲುಪಡಿಸಿ ಕೊಂಡಾಗ, ತನ್ನ ಅನುರಾಗವು ಮೊದಲು ಇವಳ ಸಹೋದರಿಯಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು. ಆದರೂ ಅವಳು ಐಗುಪ್ತದೇಶದಲ್ಲಿ ವ್ಯಭಿಚಾರ ಮಾಡಿದಾಗ ತನ್ನ ಯೌವನದ ದಿನಗಳನ್ನು ಜ್ಞಾಪಕಮಾಡಿಕೊಂಡು ತನ್ನ ವ್ಯಭಿಚಾರವನ್ನು ಹೆಚ್ಚಿಸಿ ದಳು. ಹೇಗಂದರೆ, ಕತ್ತೆಗಳ ಮಾಂಸದಂತೆ ಮಾಂಸ ವುಳ್ಳವರಾಗಿಯೂ ಕುದುರೆಗಳ ವೀರ್ಯದಂತೆ ವೀರ್ಯ ವುಳ್ಳವರಾಗಿಯೂ ಇರುವ ತನ್ನ ಉಪಪತಿಗಳನ್ನು ಮೋಹಿಸಿದರು. ಹೀಗೆ ಐಗುಪ್ತರಿಂದ ನಿನ್ನ ಯೌವ ನದ ಸ್ತನಗಳ ತೊಟ್ಟುಗಳನ್ನು ಒತ್ತಿಸಿಕೊಂಡು ನಿನ್ನ ಯೌವನದ ದುಷ್ಕರ್ಮವನ್ನು ನೆನಪಿಗೆ ತಂದುಕೋ. ಆದದರಿಂದ ಒಹೊಲೀಬಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಯಾರಿಂದ ನಿನ್ನ ಮನಸ್ಸು ಅಗಲಿಹೋಯಿತೋ ಆ ನಿನ್ನ ಪ್ರಿಯನನ್ನು ನಾನು ನಿನಗೆ ವಿರೋಧವಾಗಿ ಎಬ್ಬಿಸುತ್ತೇನೆ, ನಾನು ಅವರನ್ನು ಪ್ರತಿಯೊಂದು ಕಡೆಗೂ ವಿರೋಧವಾಗಿ ತರುತ್ತೇನೆ. ಬಾಬೆಲಿನವರು, ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು ಕೋಯದವರು, ಮತ್ತು ಎಲ್ಲಾ ಅಶ್ಶೂರ್ಯರ ಜೊತೆಗೆ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ ಸೈನ್ಯಾಧಿಪತಿಗಳೂ ಅಧಿಕಾರಸ್ಥರೂ ಯುದ್ಧಶಾಲಿಗಳೂ ಖ್ಯಾತಿಹೊಂದಿ ದವರೂ ಎಲ್ಲರೂ ಕುದುರೆಗಳ ಮೇಲೆ ಸವಾರಿಮಾಡಿ ದವರೇ. ಅವರೆಲ್ಲರೂ ರಥಗಳ ಸಂಗಡಲೂ ಬಂಡಿ ಗಳ ಸಂಗಡಲೂ ಜನಗಳ ಸಮೂಹದ ಸಂಗಡಲೂ ಬಲವುಳ್ಳವರಾಗಿ ನಿನಗೆ ವಿರುದ್ಧವಾಗಿ ಬರುವರು. ಸುತ್ತಲೂ ಖೇಡ್ಯವನ್ನೂ ಗುರಾಣಿಯನ್ನೂ ಶಿರಸ್ತ್ರಾಣ ವನ್ನೂ ನಿನಗೆ ವಿರುದ್ಧವಾಗಿರಿಸುವೆನು. ಇದಲ್ಲದೆ ನಾನು ಅವರ ಮುಂದೆ ನ್ಯಾಯವನ್ನು ಇಡುವೆನು; ಅವರು ತಮ್ಮ ನ್ಯಾಯಗಳ ಪ್ರಕಾರ ನಿನಗೆ ನ್ಯಾಯತೀರಿಸುವರು. ಇದಲ್ಲದೆ ನನ್ನ ಅಸೂಯೆಯನ್ನು ನಿನಗೆ ವಿರುದ್ಧವಾಗಿ ಬರಮಾಡುವೆನು; ಅವರು ನಿನ್ನಲ್ಲಿ ಕೋಪತೀರಿಸಿ ಕೊಳ್ಳುವರು; ನಿನ್ನ ಮೂಗನ್ನೂ ಕಿವಿಗಳನ್ನೂ ತೆಗೆದು ಹಾಕುವರು; ನಿನ್ನಲ್ಲಿ ಉಳಿದವರು ಕತ್ತಿಯಿಂದ ಬೀಳು ವರು; ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನಲ್ಲಿ ಉಳಿದವರೆಲ್ಲರೂ ಅಗ್ನಿಗೆ ಆಹುತಿಯಾಗುವರು. ಇದಲ್ಲದೆ ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸೌಂದರ್ಯದ ಒಡವೆಗಳನ್ನು ಕಸಿದುಕೊಳ್ಳುವರು; ಹೀಗೆ ನಾನು ನಿನ್ನ ದುಷ್ಕರ್ಮವನ್ನು ನೀನು ಐಗುಪ್ತದಲ್ಲಿದ್ದಂದಿನಿಂದ ನಡೆಸಿದ ವ್ಯಭಿಚಾರವನ್ನು ನಿನ್ನಿಂದ ತೊಲಗಿಸುವೆನು; ಆಮೇಲೆ ನೀನು ಅವರ ಕಡೆಗೆ ಕಣ್ಣೆತ್ತದೆ, ಐಗುಪ್ತವನ್ನು ಜ್ಞಾಪಕಕ್ಕೆ ತರದೇ ಇರುವಿ. ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಇಗೋ, ನೀನು ಹಗೆಮಾಡುವವರ ಕೈಯಲ್ಲಿಯೂ ಯಾರ ಕಡೆಯಿಂದ ನಿನ್ನ ಮನಸ್ಸು ಅಗಲಿ ಹೋಯಿತೋ ಅವರ ಕೈಯಲ್ಲಿಯೂ ನಿನ್ನನ್ನು ಒಪ್ಪಿಸುತ್ತೇನೆ. ಅವರು ನಿನ್ನ ವಿಷಯದಲ್ಲಿ ಹಗೆಯವರಾಗಿ ನಡೆಯುವರು; ನಿನ್ನ ಕಷ್ಟಾರ್ಜಿತವನ್ನು ತೆಗೆದುಕೊಂಡು ನಿನ್ನನ್ನು ಬೆತ್ತಲೆಯಾಗಿಯೂ ಬರಿದಾಗಿಯೂ ಮಾಡಿ ಬಿಡುವರು. ಆಗ ನಿನ್ನ ವ್ಯಭಿಚಾರವೂ ದುಷ್ಕರ್ಮವೂ ಜಾರತ್ವವೂ ಪ್ರಕಟವಾಗುವದು. ನೀನು ಅನ್ಯಜನಾಂಗಗಳ ಹಿಂದೆ ಹೋಗಿ ವ್ಯಭಿಚರಿಸಿದ್ದರಿಂದಲೂ ಅವರ ವಿಗ್ರಹ ಗಳಿಂದ ನಿನ್ನನ್ನು ಅಪವಿತ್ರಪಡಿಸಿಕೊಂಡಿದ್ದರಿಂದಲೂ ಇವುಗಳನ್ನು ನಾನು ನಿನಗೆ ಮಾಡುತ್ತೇನೆ. ನೀನು ನಿನ್ನ ಸಹೋದರಿಯ ಮಾರ್ಗದಲ್ಲಿಯೇ ನಡೆದದ್ದರಿಂದ ಅವಳ ಪಾತ್ರೆಯನ್ನು ನಿನ್ನ ಕೈಗೆ ಕೊಡುತ್ತೇನೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಸಹೋದರಿಯ ಆಳವಾದ ದೊಡ್ಡ ಪಾತ್ರೆಯಲ್ಲಿ ಕುಡಿಯುವಿ. ನೀನು ಹಾಸ್ಯಕ್ಕೂ ನಿಂದೆಗೂ ಗುರಿ ಯಾಗುವಿ. ಅದೇ ನಿನಗೆ ಹೆಚ್ಚಾಗುವದು. ನಿನ್ನ ಸಹೋದರಿಯಾದ ಸಮಾರ್ಯದ ಪಾತ್ರೆಯಿಂದಲೇ ವಿಸ್ಮಯವೂ ನಾಶನವೂ ಆಗುವದು; ನೀನು ಅಮಲೇರಿ ದುಃಖದಿಂದಲೂ ತುಂಬಿರುವಿ. ನೀನು ಅದರಲ್ಲಿ ಸ್ವಲ್ಪವೂ ಉಳಿಯದಂತೆ ಹೀರಿ ಕುಡಿದು ಅದನ್ನು ಬೋಕಿಗಳ ಹಾಗೆ ಒಡೆದುಹಾಕುವಿ ಮತ್ತು ನೀನೇ ನಿನ್ನ ಸ್ತನಗಳನ್ನು ಕಿತ್ತುಕೊಳ್ಳುವಿ; ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳಿದ್ದಾನೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನನ್ನು ಮರೆತುಬಿಟ್ಟು ನನ್ನನ್ನು ನಿನ್ನ ಬೆನ್ನ ಹಿಂದಕ್ಕೆ ಎಸೆದು ಮರೆತದ್ದರಿಂದ ನಿನ್ನ ದುಷ್ಕರ್ಮವನ್ನೂ ವ್ಯಭಿಚಾರವನ್ನೂ ಅನುಭವಿಸಲೇಬೇಕು. ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಒಹೊಲಳಿಗೂ ಒಹೊಲೀ ಬಳಿಗೂ ನ್ಯಾಯತೀರಿಸುವಿಯೋ? ಹೌದು, ಅವರ ಅಸಹ್ಯಗಳನ್ನು ಅವರಿಗೆ ತಿಳಿಸು. ಹೇಗಂದರೆ, ಅವರು ವ್ಯಭಿಚಾರ ಮಾಡಿದ್ದಾರೆ, ರಕ್ತವು ಅವರ ಕೈಗಳಲ್ಲಿ ಅದೆ; ತಮ್ಮ ವಿಗ್ರಹಗಳಿಂದ ವ್ಯಭಿಚಾರ ಮಾಡಿದ್ದಾರೆ, ನನಗೆ ಹೆತ್ತ ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬಲಿಯಾಗಿ ಕೊಟ್ಟಿದ್ದಾರೆ. ಇದಲ್ಲದೆ ಇದನ್ನು ಮಾಡಿದ ದಿನದಲ್ಲಿಯೇ ನನ್ನ ಪರಿಶುದ್ಧಸ್ಥಳವನ್ನು ಅಪವಿತ್ರಪಡಿಸಿ ನನ್ನ ಸಬ್ಬತ್ತುಗಳನ್ನು ಕೆಡಿಸಿದ್ದಾರೆ. ತಮ್ಮ ಮಕ್ಕಳನ್ನು ವಿಗ್ರಹಗಳಿಗೋಸ್ಕರ ಕೊಂದು ಹಾಕಿದ ಮೇಲೆ ಅದೇ ದಿನದಲ್ಲಿ ನನ್ನ ಪರಿಶುದ್ಧ ಸ್ಥಳವನ್ನು ಕೆಡಿಸುವದಕ್ಕೆ ಬಂದರು. ಇಗೋ, ಅವರು ನನ್ನ ಆಲಯದ ಮಧ್ಯದಲ್ಲಿಯೇ ಹೀಗೆ ಮಾಡಿದ್ದಾರೆ; ದೂತನನ್ನು ಕಳುಹಿಸಿ ದೂರದಿಂದ ಬರಬೇಕೆಂದು ಮನುಷ್ಯರನ್ನು ಕರೇ ಕಳುಹಿಸಿದ್ದಾರೆ; ಇಗೋ, ಬಂದರು. ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ನಿನ್ನನ್ನು ಆಭರಣಗಳಿಂದ ಅಲಂಕರಿಸಿ ಕೊಂಡೆ. ವೈಭವದ ಮಂಚದ ಮೇಲೆ ಕೂತು ಕೊಂಡೆ; ಅವರ ಮುಂದೆ ನನ್ನ ಧೂಪವೂ ನನ್ನ ಎಣ್ಣೆಯೂ ಇರಿಸಲ್ಪಟ್ಟ ಮೇಜೂ ಸಿದ್ಧಮಾಡಲ್ಪಟ್ಟಿತು. ಅವಳ ಸಂಗಡ ಸುಖವುಳ್ಳ ಸಮೂಹದ ಶಬ್ದವು ಇತ್ತು; ಸಾಧಾರಣ ಮನುಷ್ಯರ ಸಂಗಡ ಅರಣ್ಯದಿಂದ ಸಿಬಾಯರು ಕರೆಯಲ್ಪಟ್ಟು ಅವರು ತಮ್ಮ ಕೈಗಳ ಮೇಲೆ ಕಡಗಗಳನ್ನೂ ತಮ್ಮ ತಲೆಗಳ ಮೇಲೆ ಶೃಂಗಾರವಾದ ಕಿರೀಟವನ್ನೂ ಇಟ್ಟರು. ಆಮೇಲೆ ನಾನು ಅವಳಿಗೆ ಹೇಳಿದ್ದೇನಂದರೆ, ವ್ಯಭಿಚಾರದಿಂದ ಸವೆದು ಹೋದ ವಳು ಅವಳೇ, ಮತ್ತೆ ಅವರು ಅವಳ ಸಂಗಡ ವ್ಯಭಿಚರಿಸಬಹುದೇ? ಆದರೂ ವ್ಯಭಿಚಾರಿಣಿ ಯನ್ನು ಸೇರುವ ಹಾಗೆ ಅವರು ಅವಳನ್ನು ಸೇರಿದರು. ಹಾಗೆಯೇ ದುಷ್ಕರ್ಮಿ ಸ್ತ್ರೀಯರಾದ ಒಹೊಲಳ ಬಳಿಗೂ ಒಹೊಲೀಬಳ ಬಳಿಗೂ ಹೋದರು. ನೀತಿ ಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ ವ್ಯಭಿ ಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿ ಯರು, ಅವರ ಕೈ ರಕ್ತವಾಗಿದೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರಿಗೆ ವಿರೋಧವಾಗಿ ಸಂಘವನ್ನು ಕೂಡಿಸಿ ಅವರನ್ನು ತೆಗೆದುಹಾಕಲ್ಪಡು ವದಕ್ಕೂ ಸೂರೆಗೂ ಒಪ್ಪಿಸುವೆನು. ಆ ಸಂಘದವರು ಅವರ ಮೇಲೆ ಕಲ್ಲೆಸೆದು ತಮ್ಮ ಕತ್ತಿಗಳಿಂದ ಕೊಯ್ದು ಅವರ ಕುಮಾರರನ್ನೂ ಕುಮಾರ್ತೆಯರನ್ನೂ ಕೊಂದು ಹಾಕಿ ಬೆಂಕಿಯಿಂದ ಅವರ ಮನೆಗಳನ್ನೆಲ್ಲಾ ಸುಟ್ಟು ಬಿಡುವರು. ಹೀಗೆ ಸ್ತ್ರೀಯರೆಲ್ಲರೂ ನಿಮ್ಮ ದುಷ್ಕ ರ್ಮದ ಪ್ರಕಾರ ಮಾಡದಿರಲೆಂದು ಬೋಧಿಸಿ ದೇಶ ದೊಳಗಿಂದ ದುಷ್ಕರ್ಮವನ್ನು ತೆಗೆದುಹಾಕುವೆನು.ನಿಮ್ಮ ದುಷ್ಕರ್ಮದ ಫಲವನ್ನು ನಿಮ್ಮ ಮೇಲೆಯೇ ಮುಯ್ಯಿ ತೀರಿಸುವೆನು. ನೀವು ನಿಮ್ಮ ವಿಗ್ರಹಗಳ ಪಾಪಗಳನ್ನು ಹೊರುವಿರಿ; ಆಗ ದೇವರಾದ ಕರ್ತನು ನಾನೇ ಎಂದು ತಿಳಿದುಕೊಳ್ಳುವಿರಿ. ನಿಮ್ಮ ದುಷ್ಕರ್ಮದ ಫಲವನ್ನು ನಿಮ್ಮ ಮೇಲೆಯೇ ಮುಯ್ಯಿ ತೀರಿಸುವೆನು. ನೀವು ನಿಮ್ಮ ವಿಗ್ರಹಗಳ ಪಾಪಗಳನ್ನು ಹೊರುವಿರಿ; ಆಗ ದೇವರಾದ ಕರ್ತನು ನಾನೇ ಎಂದು ತಿಳಿದುಕೊಳ್ಳುವಿರಿ.
- Leviticus 20:5 ಯಾಜಕಕಾಂಡ 20:5ಆಗ ನಾನು ಆ ಮನುಷ್ಯನಿಗೂ ಅವನ ಕುಟುಂಬಕ್ಕೂ ವಿರೋಧವಾ ಗಿಯೂ ವಿಮುಖನಾಗಿಯೂ ಇರುವೆನು. ಮೋಲೆಕ ನೊಂದಿಗೆ ವ್ಯಭಿಚಾರಮಾಡಿದ್ದಕ್ಕಾಗಿ ಅವನನೂ ವ್ಯಭಿಚಾರಮಾಡುವದಕ್ಕೆ ಹಿಂಬಾಲಿಸುವವರೆಲ್ಲರನ್ನೂ ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.