Hosea · chapter 4 · verse 2
Hosea 4:2 in Kannada
ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ;
Aaneyiduvadoo sullu helu vadoo kolluvadoo kadiyuvadoo vyabhichaara maaduvadoo hechchaagibittive; raktakke rakta seruttade;
Hosea 4:2 in English
- King James Version (KJV)
- By swearing, and lying, and killing, and stealing, and committing adultery, they break out, and blood toucheth blood.
- World English Bible (WEB)
- There is cursing, lying, murder, stealing, and committing adultery; they break boundaries, and bloodshed causes bloodshed.
- American Standard Version (ASV)
- There is nought but swearing and breaking faith, and killing, and stealing, and committing adultery; they break out, and blood toucheth blood.
- Bible in Basic English (BBE)
- There is cursing and broken faith, violent death and attacks on property, men are untrue in married life, houses are broken into, and there is blood touching blood.
- Darby Translation (DBY)
- Swearing, and lying, and killing, and stealing, and committing adultery, — they break out; and blood toucheth blood.
- Webster's Bible (WBS)
- By swearing, and lying, and killing, and stealing, and committing adultery, they break out, and blood toucheth blood.
- Young's Literal Translation (YLT)
- Swearing, and lying, and murdering, And stealing, and committing adultery — have increased, And blood against blood hath touched.
Read in context
- 1ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ.
- 2ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ;
- 3ಆದದರಿಂದ ದೇಶವು ದುಃಖಪಡುವದು; ಅದರಲ್ಲಿ ವಾಸಿಸುವ ಪ್ರತಿಯೊಬ್ಬನೂ ಕುಗ್ಗಿ ಹೋಗುವನು; ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ ಸಮುದ್ರದ ವಿಾನುಗಳೂ ತೆಗೆದುಹಾಕಲ್ಪಡುವವು.
- 4ಆದಾಗ್ಯೂ ಯಾವನಾದರೂ ವಾದಿಸದಿರಲಿ ಇಲ್ಲವೆ ಬೇರೆಯವ ರನ್ನು ಖಂಡಿಸದಿರಲಿ; ನಿಮ್ಮ ಜನರೆಲ್ಲರೂ ಯಾಜಕ ನೊಂದಿಗೆ ವಾದಿಸುವವರ ಹಾಗಿದ್ದಾರೆ.
Cross references
- Hosea 6:9 ಹೋಶೇಯ 6:9ಕಳ್ಳರ ಗುಂಪು ಮನುಷ್ಯನಿಗೋಸ್ಕರ ಕಾಯುವ ಪ್ರಕಾರ ಯಾಜಕರ ಗುಂಪು ಒಪ್ಪಿಗೆಯಿಂದ ದಾರಿಯಲ್ಲಿ ಕೊಲೆಮಾಡುತ್ತಾರೆ. ಅವರು ನೀಚತನವನ್ನು ಮಾಡುವವರಾಗಿದ್ದಾರೆ.
- 1 Thessalonians 2:15 1 ಥೆಸಲೊನೀಕದವರಿಗೆ 2:15ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
- Jeremiah 6:7 ಯೆರೆಮೀಯ 6:7ಬುಗ್ಗೆಯು ತನ್ನ ನೀರನ್ನು ಹರಿಯ ಮಾಡುವ ಹಾಗೆ ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ; ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳಬರುತ್ತವೆ. ದುಃಖವೂ ಗಾಯಗಳೂ ಯಾವಾ ಗಲೂ ನನ್ನ ಮುಂದೆ ಅವೆ.
- Micah 7:2 ಮೀಕ 7:2ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.
- Jeremiah 5:26–27 ಯೆರೆಮೀಯ 5:26–27ನನ್ನ ಜನರಲ್ಲಿ ದುಷ್ಟರು ಸಿಕ್ಕಿದ್ದಾರೆ; ಉರುಲು ಇಡುವವನ ಹಾಗೆ ಹೊಂಚು ಹಾಕುತ್ತಾರೆ; ಬೋನು ಹಾಕಿ ಮನುಷ್ಯರನ್ನು ಹಿಡಿಯು ತ್ತಾರೆ. ಪಂಜರವು ಪಕ್ಷಿಗಳಿಂದ ತುಂಬಿರುವ ಪ್ರಕಾರ ಅವರ ಮನೆಗಳು ಮೋಸದಿಂದ ತುಂಬಿಯವೆ. ಆದದರಿಂದ ಅವರು ದೊಡ್ಡವರೂ ಐಶ್ವರ್ಯವಂತರೂ ಆಗಿದ್ದಾರೆ;
- Jeremiah 7:6–10 ಯೆರೆಮೀಯ 7:6–10ಪರದೇಶಿಯನ್ನೂ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಸಂಕಟಪಡಿಸದೆ ಈ ಸ್ಥಳದಲ್ಲಿ ಅಪರಾಧ ವಿಲ್ಲದ ರಕ್ತವನ್ನು ಚೆಲ್ಲದಿದ್ದರೆ ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ಅಂದರೆ ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು. ಇಗೋ, ನೀವು ಪ್ರಯೋಜನವಿಲ್ಲದ ಸುಳ್ಳಾದ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ. ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ?
- Jeremiah 5:7–9 ಯೆರೆಮೀಯ 5:7–9ಇದಕ್ಕಾಗಿ ನಾನು ನಿನ್ನನ್ನು ಹೇಗೆ ಮನ್ನಿಸಲಿ? ನಿನ್ನ ಮಕ್ಕಳು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆ ಇಟ್ಟುಕೊಂಡಿದ್ದಾರೆ; ನಾನು ಅವರನ್ನು ತೃಪ್ತಿಪಡಿ ಸಿದ ಮೇಲೆ ಅವರು ವ್ಯಭಿಚಾರಮಾಡಿ ಸೂಳೆಯರ ಮನೆಗಳಲ್ಲಿ ಗುಂಪಾಗಿ ಕೂಡಿಕೊಂಡರು. ಬೆಳಗಿ ನಲ್ಲಿ ಕೊಬ್ಬಿದ ಕುದುರೆಗಳ ಹಾಗಿದ್ದಾರೆ; ತಮ್ಮ ತಮ್ಮ ನೆರೆಯವರ ಹೆಂಡತಿಯರಿಗೋಸ್ಕರ ಹೂಂಕರಿ ಸುತ್ತಾರೆ. ಇವುಗಳ ನಿಮಿತ್ತ ನಾನು ವಿಚಾರಿಸುವ ದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ? ಎಂದು ಕರ್ತನು ಅನ್ನುತ್ತಾನೆ.
- Hosea 7:1 ಹೋಶೇಯ 7:1ನಾನು ಇಸ್ರಾಯೇಲನ್ನು ಗುಣಮಾಡ ಬೇಕೆಂದಿರುವಾಗ ಎಫ್ರಾಯಾಮಿನ ದುಷ್ಕೃತ್ಯವನ್ನೂ ಸಮಾರ್ಯದ ಕೆಟ್ಟತನವನ್ನೂ ಕಂಡು ಹಿಡಿಯುತ್ತೇನೆ; ಅವರು ಸುಳ್ಳನ್ನು ನಡಿಸುತ್ತಾರೆ; ಕಳ್ಳನು ಒಳಗೆ ಬರುತ್ತಾನೆ. ಕಳ್ಳರ ಗುಂಪು ಹೊರಗೆ ಸುಲುಕೊಳ್ಳು ತ್ತದೆ.
- Acts 7:52 ಅಪೊಸ್ತಲರ ಕೃತ್ಯಗಳು 7:52ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
- Isaiah 59:2–8 ಯೆಶಾಯ 59:2–8ನಿಮ್ಮ ಅಕ್ರಮಗಳೇ ನಿಮ್ಮನ್ನು ನಿಮ್ಮ ದೇವರಿಂದ ಅಗಲಿಸಿಯವೆ; ನಿಮ್ಮ ಪಾಪಗಳೇ ಆತನು ಕೇಳದ ಹಾಗೆ ಆತನ ಮುಖವನ್ನು ನಿಮಗೆ ಮರೆಮಾಡಿಯವೆ. ನಿಮ್ಮ ಕೈಗಳು ರಕ್ತದಿಂದಲೂ ನಿಮ್ಮ ಬೆರಳುಗಳು ಅಕ್ರಮದಿಂದಲೂ ಮೈಲಿಗೆಯಾಗಿವೆ; ನಿಮ್ಮ ತುಟಿಗಳು ಸುಳ್ಳನ್ನು ಮಾತಾಡುತ್ತವೆ; ನಿಮ್ಮ ನಾಲಿಗೆ ಅನ್ಯಾಯವನ್ನು ನುಡಿಯುತ್ತದೆ. ನ್ಯಾಯಕ್ಕೋಸ್ಕರ ಕರೆಯುವವನು ಯಾವನೂ ಇಲ್ಲ; ಇಲ್ಲವೆ ಸತ್ಯಕ್ಕೋಸ್ಕರ ಬೇಡು ವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡು ತ್ತಾರೆ. ಸುಳ್ಳನ್ನು ಮಾತಾಡುತ್ತಾರೆ; ಕೇಡನ್ನು ಗರ್ಭಧರಿಸಿ ಕೊಳ್ಳುತ್ತಾರೆ ಅಕ್ರಮವನ್ನು ಹೆರುತ್ತಾರೆ. ಹಾವಿನಂತೆ ಮೊಟ್ಟೆಗಳನ್ನು ಮರಿ ಮಾಡುತ್ತಾರೆ, ಜೇಡಹುಳದ ನೂಲನ್ನು ನೇಯುತ್ತಾರೆ; ಅದರ ಮೊಟ್ಟೆಗಳನ್ನು ತಿನ್ನುವವನು ಸಾಯುವನು; ಒಡೆಯುವಂಥಾದ್ದರಿಂದ ವಿಷದ ಮರಿಯು ಹೊರಡುವದು. ಅವರ ನೂಲು ವಸ್ತ್ರಕ್ಕಾಗದು; ತಮ್ಮ ಕೆಲಸಗಳಿಂದ ತಮ್ಮನ್ನು ಹೊದ್ದು ಕೊಳ್ಳರು; ಅವರ ಕೆಲಸಗಳು ಅಕ್ರಮದ ಕೆಲಸಗಳೇ; ಅವರ ಕೈಗಳಲ್ಲಿ ಹಿಂಸೆಯ ಕ್ರಿಯೆಗಳು ಅವೆ. ಅವರ ಕಾಲುಗಳು ಕೇಡಿಗೆ ಓಡುತ್ತವೆ; ಅಪರಾಧವಿಲ್ಲದ ರಕ್ತ ವನ್ನು ಚೆಲ್ಲುವದಕ್ಕೆ ತ್ವರೆಪಡುತ್ತವೆ. ಅವರ ಆಲೋ ಚನೆ ಗಳು ದುಷ್ಟತನದ ಆಲೋಚನೆಗಳೇ; ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿ ಅವೆ. ಸಮಾ ಧಾನದ ಮಾರ್ಗವನ್ನರಿಯರು; ಅವರ ದಾರಿಗಳಲ್ಲಿ ನ್ಯಾಯವಿಲ್ಲ; ತಮ್ಮ ಹಾದಿಗಳನ್ನು ಡೊಂಕು ಮಾಡಿ ಕೊಂಡಿದ್ದಾರೆ; ಅವುಗಳಲ್ಲಿ ನಡೆಯುವವರೆಲ್ಲರು ಸಮಾ ಧಾನವನ್ನರಿಯರು.
- Lamentations 4:13 ಪ್ರಲಾಪಗಳು 4:13ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ ಅವಳ ಯಾಜಕರ ಅಕ್ರಮಗಳಿ ಗೋಸ್ಕರವೂ ಹೀಗಾಯಿತು. ಯಾಕಂದರೆ ಇವರು ನೀತಿವಂತರ ರಕ್ತವನ್ನು ಅವಳ ಮಧ್ಯ ಚೆಲ್ಲಿದ್ದರು.
- Ezekiel 22:25–30 ಯೆಹೆಜ್ಕೇಲನು 22:25–30ಕೊಳ್ಳೆಯನ್ನು ಸುಲಿದುಕೊಳ್ಳುವ ಘರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ. ಸಂಪತ್ತನ್ನೂ ಅಮೂಲ್ಯವಾದ ವಸ್ತುವನ್ನೂ ದೋಚಿ ಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ. ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ; ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ; ಪರಿಶುದ್ಧ ವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಭೇದವೆಣಿಸಲಿಲ್ಲ; ಶುದ್ಧಾಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ, ನನ್ನ ಸಬ್ಬತ್ತುಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದದರಿಂದ ನಾನು ಅವರಲ್ಲಿ ಅಪವಿತ್ರನಾದೆನು. ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ. ಅವರ ಪ್ರವಾದಿಗಳು ಅವರಿಗೆ ಸುಣ್ಣ ಹಚ್ಚುತ್ತಾರೆ, ಮೋಸವನ್ನು ದರ್ಶಿಸಿ ಸುಳ್ಳು ಶಕುನ ಹೇಳುತ್ತಾರೆ; ಕರ್ತನು ಮಾತನಾಡದಿರುವದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು ತ್ತಾರೆ. ದೇಶದ ಜನರು ಬಲಾತ್ಕಾರ ಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ ದರಿದ್ರ ರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯವಿಲ್ಲದೆ ಒಬ್ಬ ಅಪರಿಚಿತನನ್ನು ಬಲಾತ್ಕಾರಪಡಿಸಿದ್ದಾರೆ. ಬೇಲಿ ಕಟ್ಟುವ ಮನುಷ್ಯನನ್ನು ದೇಶಕ್ಕೋಸ್ಕರ ನಾನು ಅದನು ನಾಶಮಾಡದ ಹಾಗೆ ಪೌಳಿಯ ಒಡಕಿನಲ್ಲಿ ನಿಲ್ಲತಕ್ಕ ವನನ್ನು ಹುಡುಕಿದೆನು, ಆದರೆ ಸಿಕ್ಕಲಿಲ್ಲ.ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.