Hosea · chapter 4 · verse 3
Hosea 4:3 in Kannada
ಆದದರಿಂದ ದೇಶವು ದುಃಖಪಡುವದು; ಅದರಲ್ಲಿ ವಾಸಿಸುವ ಪ್ರತಿಯೊಬ್ಬನೂ ಕುಗ್ಗಿ ಹೋಗುವನು; ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ ಸಮುದ್ರದ ವಿಾನುಗಳೂ ತೆಗೆದುಹಾಕಲ್ಪಡುವವು.
Aadadarinda deshavu duhkhapaduvadu; adaralli vaasisuva pratiyobbanoo kuggi hoguvanu; adaviya mrugagaloo aakaashada pakshigaloo samudrada viాnugaloo tegeduhaakalpaduvavu.
Hosea 4:3 in English
- King James Version (KJV)
- Therefore shall the land mourn, and every one that dwelleth therein shall languish, with the beasts of the field, and with the fowls of heaven; yea, the fishes of the sea also shall be taken away.
- World English Bible (WEB)
- Therefore the land will mourn, and everyone who dwells in it will waste away, with all living things in her, even the animals of the field and the birds of the sky; yes, the fish of the sea also die.
- American Standard Version (ASV)
- Therefore shall the land mourn, and every one that dwelleth therein shall languish, with the beasts of the field and the birds of the heavens; yea, the fishes of the sea also shall be taken away.
- Bible in Basic English (BBE)
- Because of this the land will be dry, and everyone living in it will be wasted away, with the beasts of the field and the birds of heaven; even the fishes of the sea will be taken away.
- Darby Translation (DBY)
- For this shall the land mourn, and every one that dwelleth therein shall languish, with the beasts of the field, and with the fowl of the heavens, yea, the fishes of the sea also shall be taken away.
- Webster's Bible (WBS)
- Therefore shall the land mourn, and every one that dwelleth in it shall languish, with the beasts of the field, and with the fowls of heaven; yes, the fishes of the sea also shall be taken away.
- Young's Literal Translation (YLT)
- Therefore mourn doth the land, And weak is every dweller in it, With the beast of the field, And with the fowl of the heavens, And the fishes of the sea — they are removed.
Read in context
- 1ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ.
- 2ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ;
- 3ಆದದರಿಂದ ದೇಶವು ದುಃಖಪಡುವದು; ಅದರಲ್ಲಿ ವಾಸಿಸುವ ಪ್ರತಿಯೊಬ್ಬನೂ ಕುಗ್ಗಿ ಹೋಗುವನು; ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ ಸಮುದ್ರದ ವಿಾನುಗಳೂ ತೆಗೆದುಹಾಕಲ್ಪಡುವವು.
- 4ಆದಾಗ್ಯೂ ಯಾವನಾದರೂ ವಾದಿಸದಿರಲಿ ಇಲ್ಲವೆ ಬೇರೆಯವ ರನ್ನು ಖಂಡಿಸದಿರಲಿ; ನಿಮ್ಮ ಜನರೆಲ್ಲರೂ ಯಾಜಕ ನೊಂದಿಗೆ ವಾದಿಸುವವರ ಹಾಗಿದ್ದಾರೆ.
- 5ಆದದರಿಂದ ನೀನು ಹಗಲಿನಲ್ಲಿ ಬೀಳುವಿ; ಪ್ರವಾದಿಯೂ ನಿನ್ನ ಸಂಗಡ ರಾತ್ರಿಯಲ್ಲಿ ಬೀಳುವನು; ನಾನು ನಿನ್ನ ತಾಯಿ ಯನ್ನು ನಾಶ ಮಾಡುವೆನು.
Cross references
- Zephaniah 1:3 ಚೆಫನ್ಯ 1:3ಮನುಷ್ಯರನ್ನೂ ಮೃಗಗಳನ್ನೂ ನಾಶ ಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ವಿಾನುಗಳನ್ನೂ ದುಷ್ಟರ ಸಂಗಡ ಅಭ್ಯಂತರ ಮಾಡುವ ವುಗಳನ್ನೂ ಹಾಳುಮಾಡುವೆನು: ಮನುಷ್ಯರನ್ನು ದೇಶದೊಳಗಿಂದ ಕಡಿದುಬಿಡುವೆನು ಎಂದು ಕರ್ತನು ಅನ್ನುತ್ತಾನೆ.
- Nahum 1:4 ನಹೂಮ 1:4ಆತನು ಸಮುದ್ರವನ್ನು ಗದರಿಸಿ ಅದನ್ನು ಒಣಗುವಂತೆ ಮಾಡುತ್ತಾನೆ; ನದಿಗಳನ್ನೆಲ್ಲಾ ಬತ್ತಿಹೋಗುವಂತೆ ಮಾಡುತ್ತಾನೆ; ಬಾಷಾನೂ ಕರ್ಮೆಲೂ ಬಾಡಿಹೋಗುತ್ತವೆ, ಲೆಬನೋನಿನ ಹೂವು ಬಾಡಿಹೋಗುತ್ತದೆ.
- Isaiah 24:4–12 ಯೆಶಾಯ 24:4–12ಭೂಮಿಯು ಪ್ರಲಾಪಿಸುತ್ತಾ ಬಾಡಿಹೋಗುವದು. ಲೋಕವು ಸೊರಗಿ ಬಾಡಿಹೋಗುವದು ಭೂಮಿಯ ಗರ್ವಿಷ್ಠರು ಕುಗ್ಗಿಹೋಗುವರು. ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು. ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅದರಲ್ಲಿ ವಾಸವಾಗಿರು ವವರು ಧ್ವಂಸವಾಗುವರು; ಆದ್ದರಿಂದ ಭೂನಿವಾಸಿ ಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ. ದ್ರಾಕ್ಷಾರಸವು ದುಃಖಿಸುತ್ತದೆ, ದ್ರಾಕ್ಷೆಯು ಕ್ಷೀಣಿಸು ವದು; ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ. ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು. ಇನ್ನು ಗಾನದೊಡನೆ ದ್ರಾಕ್ಷಾರಸ ವನ್ನು ಕುಡಿಯರು; ಕುಡಿಯುವವರಿಗೆ ಮದ್ಯಪಾನವು ಕಹಿಯಾಗುವದು. ಗಲಿಬಿಲಿಗುಂಟಾದ ಪಟ್ಟಣವು ಹಾಳಾಗಿದೆ. ಯಾರು ಒಳಗೆ ಬಾರದಂತೆ ಪ್ರತಿಯೊಂದು ಮನೆಯು ಮುಚ್ಚಿದೆ. ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲ ಅಸ್ತಮಿಸಿದೆ; ದೇಶದ ಸಡಗರವು ತೊಲಗಿಹೋಗಿದೆ. ಪಟ್ಟಣ ದಲ್ಲಿ ಹಾಳೇ ಉಳಿದಿವೆ; ನಾಶನವು ಹೆಬ್ಬಾಗಿಲಿಗೆ ತಟ್ಟಿದೆ.
- Amos 5:16 ಆಮೋಸ 5:16ಆದದ ರಿಂದ ಕರ್ತನು, ಸೈನ್ಯಗಳ ದೇವರಾದ ಕರ್ತನು, ಹೀಗೆ ಹೇಳುತ್ತಾನೆ ಎಲ್ಲಾ ಬೀದಿಗಳಲ್ಲೂ ಗೋಳಾಟ ಗಳು, ಹೆದ್ದಾರಿಗಳಲ್ಲೂ ಅಯ್ಯೋ, ಅಯ್ಯೋ ಅನ್ನು ವರು. ಒಕ್ಕಲಿಗರನ್ನು ದುಃಖಿಸುವದಕ್ಕೂ ಪ್ರಲಾಪಿ ಸುವದಕ್ಕೆ ತಿಳಿದವರನ್ನು ಗೋಳಾಟಕ್ಕೂ ಕರೆಯುವರು.
- Jeremiah 12:4 ಯೆರೆಮೀಯ 12:4ದೇಶವು ಅದರ ನಿವಾಸಿಗಳ ಕೆಟ್ಟತನ ಕ್ಕಾಗಿ ದುಃಖಿಸುವದೂ ಎಲ್ಲಾ ಹೊಲಗಳ ಹುಲ್ಲು ಒಣಗುವದೂ ಎಷ್ಟರ ಮಟ್ಟಿಗೆ? ಮೃಗಗಳೂ ಪಕ್ಷಿಗಳೂ ನಾಶವಾಗುತ್ತವೆ; ಅವರು--ಒಬ್ಬರೂ ನಮ್ಮ ಅಂತ್ಯವನ್ನು ನೋಡುವದಿಲ್ಲ ಎಂದು ಅಂದುಕೊಂಡಿದ್ದಾರೆ.
- Ezekiel 38:20 ಯೆಹೆಜ್ಕೇಲನು 38:20ಆಗ ಸಮುದ್ರದ ವಿಾನುಗಳು ಆಕಾಶದ ಪಕ್ಷಿಗಳು ಬಯಲಿನ ಮೃಗಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಜಂತುಗಳು, ಭೂಮಿಯ ಎಲ್ಲಾ ಮನುಷ್ಯರ ಸಂಗಡ ನನ್ನ ಸಮ್ಮುಖದಲ್ಲಿ ನಡುಗುವವು; ಪರ್ವತಗಳು ಕೆಡವಲ್ಪಡುವವು, ಇಳಿ ಜಾರುಗಳು ಬೀಳುವವು, ಪ್ರತಿಯೊಂದು ಗೋಡೆಯೂ ನೆಲಕ್ಕೆ ಉರುಳುವವು.
- Jeremiah 4:27–28 ಯೆರೆಮೀಯ 4:27–28ಕರ್ತನು ಹೀಗೆ ಹೇಳಿದ್ದಾನೆ--ದೇಶವೆಲ್ಲಾ ಹಾಳಾಗುವದು; ಆದಾಗ್ಯೂ ನಾನು ಅದನ್ನು ಪೂರ್ಣ ಮಾಡಿಲ್ಲ. ಇದರ ನಿಮಿತ್ತ ಭೂಮಿಯು ದುಃಖಿಸುವದು; ಮೇಲಿರುವ ಆಕಾಶವು ಕಪ್ಪಾಗುವದು; ನಾನು ಅದನ್ನು ಹೇಳಿ ನಿಶ್ಚಯಿಸಿದ್ದೇನೆ; ಮಾನಸಾಂತರಪಡುವದಿಲ್ಲ; ಇಲ್ಲವೆ ಅದರಿಂದ ಹಿಂತಿರುಗುವದಿಲ್ಲ;
- Amos 8:8 ಆಮೋಸ 8:8ಇದಕ್ಕಾಗಿ ದೇಶವು ನಡುಗುವದಿಲ್ಲವೇ? ಅದರಲ್ಲಿ ವಾಸಿಸುವವರೆಲ್ಲರೂ ಗೋಳಾಡುವದಿಲ್ಲವೇ? ಅದು ಪ್ರವಾಹದಂತೆ ಉಬ್ಬಿ ಐಗುಪ್ತದ ಪ್ರವಾಹದಂತೆ ಬಡುಕೊಂಡು ಇಳಿಯು ವದು.
- Isaiah 33:9 ಯೆಶಾಯ 33:9ದೇಶವು ಪ್ರಲಾಪಿಸಿ ಕುಗ್ಗುತ್ತದೆ. ಲೆಬನೋನ್ ನಾಚಿಕೆಪಟ್ಟು ಕಡಿದು ಬೀಳುವದು. ಶಾರೋನ್ ಬೆಂಗಾ ಡಾಗಿದೆ. ಬಾಷಾನ್ ಮತ್ತು ಕರ್ಮೆಲ್ ಹಣ್ಣುಗಳನ್ನು ಉದುರಿಸಿಬಿಟ್ಟಿವೆ.
- Jeremiah 4:25 ಯೆರೆಮೀಯ 4:25ನಾನು ನೋಡಿದೆನು, ಇಗೋ, ಮನುಷ್ಯನು ಇರಲಿಲ್ಲ; ಆಕಾಶದ ಪಕ್ಷಿಗಳೆಲ್ಲಾ ಹಾರಿಹೋಗಿದ್ದವು.
- Joel 1:10–13 ಯೋವೇಲ 1:10–13ಹೊಲವು ಹಾಳಾಗಿದೆ; ಭೂಮಿಯು ಗೋಳಾಡುತ್ತದೆ; ಧಾನ್ಯವು ಹಾಳಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ಬಾಡಿಹೋಗಿದೆ. ಓ ಒಕ್ಕಲಿಗರೇ, ನಾಚಿಕೆಪಡಿರಿ; ಗೋಧಿ, ಜವೆ ಗೋಧಿಗಳ ನಿಮಿತ್ತ ದ್ರಾಕ್ಷೇ ತೋಟದವರೇ, ಗೋಳಾ ಡಿರಿ; ಹೊಲದ ಪೈರು ನಾಶವಾಯಿತು. ದ್ರಾಕ್ಷೇ ಬಳ್ಳಿ ಒಣಗಿಹೋಗಿದೆ; ಅಂಜೂರದಮರ ಬಾಡಿ ಹೋಗಿದೆ; ದಾಳಿಂಬರದಗಿಡವೂ ಖರ್ಜೂರದ ಗಿಡವೂ ಸೇಬು ಗಿಡವೂ ಹೊಲದ ಮರಗಳೆಲ್ಲವೂ ಒಣಗಿಹೋಗಿವೆ; ಸಂತೋಷವು ಮನುಷ್ಯರ ಪುತ್ರರನ್ನು ಬಿಟ್ಟು ಒಣಗಿಹೋಗಿದೆ. ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ.
- Amos 1:2 ಆಮೋಸ 1:2ಅವನು ಹೇಳಿದ್ದೇನಂದರೆ--ಕರ್ತನು ಚೀಯೋನಿ ನಿಂದ ಘರ್ಜಿಸಿ ಯೆರೂಸಲೇಮಿನಿಂದ ತನ್ನ ಧ್ವನಿಗೈಯು ವನು; ಕುರುಬರ ವಾಸದ ಸ್ಥಳಗಳು ಗೋಳಾಡುತ್ತವೆ ಮತ್ತು ಕರ್ಮೆಲಿನ ತುದಿಯು ಒಣಗಿ ಹೋಗುತ್ತದೆ ಎಂದು ಹೇಳುತ್ತಾನೆ.