Hosea · chapter 4 · verse 5
Hosea 4:5 in Kannada
ಆದದರಿಂದ ನೀನು ಹಗಲಿನಲ್ಲಿ ಬೀಳುವಿ; ಪ್ರವಾದಿಯೂ ನಿನ್ನ ಸಂಗಡ ರಾತ್ರಿಯಲ್ಲಿ ಬೀಳುವನು; ನಾನು ನಿನ್ನ ತಾಯಿ ಯನ್ನು ನಾಶ ಮಾಡುವೆನು.
Aadadarinda neenu hagalinalli beeluvi; pravaadiyoo ninna sangada raatriyalli beeluvanu; naanu ninna taayi yannu naasha maaduvenu.
Hosea 4:5 in English
- King James Version (KJV)
- Therefore shalt thou fall in the day, and the prophet also shall fall with thee in the night, and I will destroy thy mother.
- World English Bible (WEB)
- You will stumble in the day, and the prophet will also stumble with you in the night; and I will destroy your mother.
- American Standard Version (ASV)
- And thou shalt stumble in the day, and the prophet also shall stumble with thee in the night; and I will destroy thy mother.
- Bible in Basic English (BBE)
- You will not be able to keep on your feet by day, and by night the prophet will be falling down with you, and I will give your mother to destruction.
- Darby Translation (DBY)
- And thou shalt stumble by day; and the prophet also shall stumble with thee by night: and I will destroy thy mother.
- Webster's Bible (WBS)
- Therefore shalt thou fall in the day, and the prophet also shall fall with thee in the night, and I will destroy thy mother.
- Young's Literal Translation (YLT)
- And thou hast stumbled in the day, And stumbled hath also a prophet with thee in the night, And I have cut off thy mother.
Read in context
- 3ಆದದರಿಂದ ದೇಶವು ದುಃಖಪಡುವದು; ಅದರಲ್ಲಿ ವಾಸಿಸುವ ಪ್ರತಿಯೊಬ್ಬನೂ ಕುಗ್ಗಿ ಹೋಗುವನು; ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ ಸಮುದ್ರದ ವಿಾನುಗಳೂ ತೆಗೆದುಹಾಕಲ್ಪಡುವವು.
- 4ಆದಾಗ್ಯೂ ಯಾವನಾದರೂ ವಾದಿಸದಿರಲಿ ಇಲ್ಲವೆ ಬೇರೆಯವ ರನ್ನು ಖಂಡಿಸದಿರಲಿ; ನಿಮ್ಮ ಜನರೆಲ್ಲರೂ ಯಾಜಕ ನೊಂದಿಗೆ ವಾದಿಸುವವರ ಹಾಗಿದ್ದಾರೆ.
- 5ಆದದರಿಂದ ನೀನು ಹಗಲಿನಲ್ಲಿ ಬೀಳುವಿ; ಪ್ರವಾದಿಯೂ ನಿನ್ನ ಸಂಗಡ ರಾತ್ರಿಯಲ್ಲಿ ಬೀಳುವನು; ನಾನು ನಿನ್ನ ತಾಯಿ ಯನ್ನು ನಾಶ ಮಾಡುವೆನು.
- 6ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು.
- 7ಅವರು ಹೆಚ್ಚಿದ ಹಾಗೆಲ್ಲಾ ನನಗೆ ವಿರೋಧವಾಗಿ ಪಾಪಮಾಡಿದರು; ಆದದರಿಂದ ನಾನು ಅವರ ಮಾನವನ್ನು ನಾಚಿಕೆಗೆ ಮಾರ್ಪಡಿಸುವೆನು.
Cross references
- Hosea 2:2 ಹೋಶೇಯ 2:2ನಿಮ್ಮ ತಾಯಿಯ ಸಂಗಡ ವಾದಿಸಿರಿ, ವಾದಿಸಿರಿ; ಅವಳು ನನ್ನ ಹೆಂಡತಿಯಲ್ಲ; ಇಲ್ಲವೆ ನಾನು ಅವಳ ಗಂಡನಲ್ಲ; ಆದದರಿಂದ ಅವಳು ತನ್ನ ದೃಷ್ಟಿಯಿಂದ ತನ್ನ ವ್ಯಭಿಚಾರತ್ವಗಳನ್ನು ತನ್ನ ಸ್ತನಗಳ ಮಧ್ಯದಿಂದ ತನ್ನ ವ್ಯಭಿಚಾರಗಳನ್ನು ತೊಲಗಿಸಲಿ.
- Jeremiah 15:8 ಯೆರೆಮೀಯ 15:8ಅವರ ವಿಧವೆಗಳು ಸಮುದ್ರದ ಮರಳಿಗಿಂತ ನನಗೆ ಹೆಚ್ಚಾದರು. ನಾನು ಅವರ ಬಳಿಗೆ ಪ್ರಾಯದವರ ತಾಯಿಯ ಮೇಲೆ ಮಧ್ಯಾಹ್ನದಲ್ಲಿ ನಾಶನ ಮಾಡು ವವನನ್ನು ತರಿಸಿದ್ದೇನೆ; ಪಕ್ಕನೆ ಅವನು ಅವಳ ಮೇಲೆ ಬೀಳುವಂತೆ ಮಾಡುವೆನು, ಹೆದರಿಕೆಯನ್ನು ಪಟ್ಟಣದ ಮೇಲೆ ಬೀಳಮಾಡಿದ್ದೇನೆ.
- Galatians 4:26 ಗಲಾತ್ಯದವರಿಗೆ 4:26ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮ್ಮೆಲ್ಲರಿಗೆ ತಾಯಿ.
- Zechariah 13:2 ಜೆಕರ್ಯ 13:2ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ.
- Jeremiah 6:12–15 ಯೆರೆಮೀಯ 6:12–15ಅವರ ಮನೆಗಳೂ ಹೊಲಗಳೂ ಹೆಂಡತಿಯರೂ ಸಹಿತವಾಗಿ ಬೇರೊಬ್ಬ ರಿಗೆ ಆಗುವವು; ದೇಶದ ನಿವಾಸಿಗಳ ಮೇಲೆ ನನ್ನ ಕೈ ಚಾಚುವೆನು ಎಂದು ಕರ್ತನು ಅನ್ನುತ್ತಾನೆ. ಅವ ರಲ್ಲಿ ಚಿಕ್ಕವನು ಮೊದಲುಗೊಂಡು ದೊಡ್ಡವರ ವರೆಗೆ ಅವರೆಲ್ಲರೂ ತಮ್ಮನ್ನು ಲೋಭಕ್ಕೆ ಒಪ್ಪಿಸಿ ಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರ ವರೆಗೆ ಪ್ರತಿ ಯೊಬ್ಬನು ಸುಳ್ಳಾಗಿ ನಡಕೊಳ್ಳುತ್ತಾನೆ. ಸಮಾಧಾನ ವಿಲ್ಲದಿರುವಾಗ--ಸಮಾಧಾನ ಎಂದು ಹೇಳಿ ನನ್ನ ಜನರ ಕುಮಾರ್ತೆಯ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ. ಅಸಹ್ಯವನ್ನು ಮಾಡಿದ ಮೇಲೆ ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆಪಡ ಲಿಲ್ಲ; ಇಲ್ಲವೆ ಲಜ್ಜೆಯನ್ನು ಅರಿಯರು; ಆದದರಿಂದ ಅವರು ಬೀಳುವವರೊಳಗೆ ಬೀಳುವರು; ನಾನು ಅವ ರನ್ನು ವಿಚಾರಿಸುವ ಕಾಲದಲ್ಲಿ ಅವರು ಕೆಳಗೆ ಹಾಕ ಲ್ಪಡುವರು ಎಂದು ಕರ್ತನು ಹೇಳುತ್ತಾನೆ.
- Jeremiah 8:10–12 ಯೆರೆಮೀಯ 8:10–12ಆದದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ ಅವರ ಹೊಲಗಳನ್ನು ಸ್ವಾಧೀನಮಾಡಿಕೊಳ್ಳುವವರಿಗೂ ನಾನು ಕೊಡುವೆನು; ಚಿಕ್ಕವನು ಮೊದಲುಗೊಂಡು ದೊಡ್ಡವನ ತನಕ ಅವರೆಲ್ಲರು ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕನ ವರೆಗೂ ಪ್ರತಿ ಯೊಬ್ಬನು ಮೋಸದಿಂದ ವರ್ತಿಸುತ್ತಾನೆ. ಅವರು ನನ್ನ ಜನರ ಮಗಳ ಗಾಯವನ್ನು ಸ್ವಲ್ಪವಾಗಿ ಸ್ವಸ್ಥಮಾಡಿ ಸಮಾಧಾನವಿಲ್ಲದಿರುವಾಗ--ಸಮಾಧಾನ, ಸಮಾ ಧಾನ ಎಂದನ್ನುತ್ತಾರೆ. ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪ ವಾದರೂ ನಾಚಿಕೆಪಡಲಿಲ್ಲ; ಇಲ್ಲವೆ ಅವರು ಲಜ್ಜೆ ಯನ್ನು ಅರಿಯರು. ಆದದರಿಂದ ಬೀಳುವವರೊಳಗೆ ಅವರು ಬೀಳುವರು; ಅವರು ವಿಚಾರಿಸಲ್ಪಡುವ ಕಾಲದಲ್ಲಿ ಕೆಳಗೆ ಹಾಕಲ್ಪಡು ವರು ಎಂದು ಕರ್ತನು ಹೇಳುತ್ತಾನೆ.
- Hosea 9:7–8 ಹೋಶೇಯ 9:7–8ವಿಚಾರಣೆಯ ದಿನಗಳು ಬಂದಿವೆ, ಮುಯ್ಯಿ ತೀರಿಸುವ ದಿನಗಳೂ ಬಂದಿವೆ. ಇಸ್ರಾ ಯೇಲು ಅದನ್ನು ತಿಳಿದುಕೊಳ್ಳುವದು, ನಿನ್ನ ಅಕ್ರಮ ಗಳು ಬಹಳವಾಗಿರುವದರಿಂದಲೂ ಹಗೆತನವು ಹೆಚ್ಚಾ ಗಿರುವದರಿಂದಲೂ ಪ್ರವಾದಿ ಮೂರ್ಖನೂ ಆತ್ಮೀಯ ಮನುಷ್ಯನೂ ಹುಚ್ಚನೂ ಎಂದು ಇಸ್ರಾಯೇಲು ತಿಳಿದುಕೊಳ್ಳುತ್ತದೆ. ಎಫ್ರಾಯಾಮಿನ ಕಾವಲುಗಾ ರನು ನನ್ನ ದೇವರೊಂದಿಗೆ ಇದ್ದನು; ಆದರೆ ಪ್ರವಾ ದಿಯು ತನ್ನ ಎಲ್ಲಾ ದಾರಿಗಳಲ್ಲಿ ಬೇಟೆಯ ಬಲೆಯಾಗಿ ದ್ದಾನೆ; ಅವನ ದೇವರ ಆಲಯದಲ್ಲಿ ಹಗೆತನವು ಉಂಟು.
- Isaiah 50:1 ಯೆಶಾಯ 50:1ಕರ್ತನು ಹೀಗನ್ನುತ್ತಾನೆ--ನಾನು ಬಿಟ್ಟು ಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ಇಲ್ಲವೆ ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೇನು? ಇಗೋ, ನಿಮ್ಮ ಅಕ್ರಮ ಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ; ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.
- Ezekiel 13:9–16 ಯೆಹೆಜ್ಕೇಲನು 13:9–16ವ್ಯರ್ಥವಾದದ್ದನ್ನು ದರ್ಶಿಸಿ, ಸುಳ್ಳು ಭವಿಷ್ಯಗಳನ್ನು ಹೇಳುವ ಪ್ರವಾದಿಗಳ ಮೇಲೆ ನನ್ನ ಕೈ ಮಾಡುವೆನು. ಅವರು ನನ್ನ ಜನರ ಸಭೆಯಲ್ಲಿ ಇರುವದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲ್ಪಡುವದೂ ಇಲ್ಲ; ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವದೂ ಇಲ್ಲ; ನಾನೇ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವಿರಿ. ಸಮಾಧಾನ ವಿಲ್ಲದಿರುವಾಗ ಅವರು ಸಮಾಧಾನವೆಂದು ಹೇಳಿದ್ದರಿಂ ದಲೂ ಮತ್ತು ಇಗೋ, ಒಬ್ಬನು ಗೋಡೆಯನ್ನು ಕಟ್ಟಿದರೆ ಮತ್ತೊಬ್ಬನು ಅದಕ್ಕೆ ಸುಣ್ಣ ಹಚ್ಚಿದ್ದರಿಂದಲೂ ಸುಣ್ಣ ಹಚ್ಚುತ್ತಿರುವವನಿಗೆ--ಅದು ಬೀಳುವದೆಂದು ಹೇಳು; ಅಲ್ಲಿ ವಿಪರೀತ ಮಳೆ ಬರುವದು ಮತ್ತು ದೊಡ್ಡ ಕಲ್ಮಳೆಯು ಬೀಳುವದು; ಬಿರುಗಾಳಿಯು ಅದನ್ನು ಸೀಳಿಬಿಡುವದು. ಇಗೋ, ಗೋಡೆ ಬಿದ್ದು ಹೋದಮೇಲೆ--ನೀವು ಹಚ್ಚಿದ ಸುಣ್ಣ ಎಲ್ಲಿ ಎಂದು ನಿಮಗೆ ಹೇಳುವರಲ್ಲಾ? ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅದನ್ನು ನನ್ನ ಉರಿಯಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶ ಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳೂ ಸುರಿಯುವವು; ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಈಗ ಕೆಡವಿ ನೆಲಸಮ ಮಾಡಿ ಅದರ ಅಸ್ತಿವಾರ ವನ್ನು ಕಾಣದ ಹಾಗೆ ಮಾಡುವೆನು. ಅದು ಬಿದ್ದು ಹೋಗುವದು, ನೀವು ಅದರಲ್ಲಿ ನಾಶ ಮಾಡಲ್ಪಡು ವಿರಿ. ಆಗ ನಾನೇ ಕರ್ತನೆಂದು ನಿಮಗೆ ತಿಳಿದು ಬರುವದು. ಹೀಗೆ ನಾನು ಗೋಡೆಯಲ್ಲಿಯೂ ಅದಕ್ಕೆ ಸುಣ್ಣ ಬಳಿದವರಲ್ಲಿಯೂ ರೋಷವನ್ನು ತೀರಿಸಿ ಕೊಂಡು ಇನ್ನು ಗೋಡೆಯಾದರೂ ಅದಕ್ಕೆ ಸುಣ್ಣ ಹಚ್ಚಿದವರಾದರೂ ಇಲ್ಲವೆಂದು ಯೆರೂಸಲೇಮಿನ ವಿಷಯ ಪ್ರವಾದಿಸಿ ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ನಿಮಗೆ ಇಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.
- Isaiah 9:13–17 ಯೆಶಾಯ 9:13–17ಹೀಗಿದ್ದಾಗ್ಯೂ ಆ ಜನರು ತಮ್ಮನ್ನು ಹೊಡೆ ದಾತನ ಕಡೆಗೆ ತಿರುಗದೆಯೂ ಇಲ್ಲವೆ ಸೈನ್ಯಗಳ ಕರ್ತನನ್ನು ಹುಡುಕದೆಯೂ ಇದ್ದಾರೆ. ಆದದರಿಂದ ಕರ್ತನು ಇಸ್ರಾಯೇಲಿನಿಂದ ತಲೆಬಾಲಗಳನ್ನೂ ಕೊಂಬೆ ರೆಂಬೆಗಳನ್ನೂ ಒಂದು ದಿನದಲ್ಲಿ ಕತ್ತರಿಸಿ ಹಾಕುವನು. ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು; ಸುಳ್ಳುಬೋಧಿಸುವ ಪ್ರವಾ ದಿಯು ಬಾಲವಾಗಿರುವನು. ಈ ಜನರನ್ನು ನಡಿಸು ವವರು ದಾರಿತಪ್ಪಿಸುವವರಾಗಿದ್ದಾರೆ; ಅವರಿಂದ ನಡಿ ಸಲ್ಪಟ್ಟವರು ನಾಶವಾಗಿದ್ದಾರೆ. ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಆನಂದಿಸುವದಿಲ್ಲ; ಅವರ ಅನಾಥರನ್ನೂ ವಿಧವೆಯರನ್ನೂ ಕರುಣಿಸುವದಿಲ್ಲ; ಪ್ರತಿಯೊಬ್ಬನು ಕಪಟಿಯೂ ಕೇಡು ಮಾಡುವವನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದದರಿಂದ ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.
- Jeremiah 50:12 ಯೆರೆಮೀಯ 50:12ನಿಮ್ಮ ತಾಯಿ ಬಹಳವಾಗಿ ನಾಚಿಕೆಪಡುವಳು; ನಿಮ್ಮನ್ನು ಹೆತ್ತವಳು ಲಜ್ಜೆ ಹೊಂದುವಳು; ಇಗೋ, ಜನಾಂಗ ಗಳಲ್ಲಿ ಅಂತ್ಯವಾದದ್ದು ಕಾಡೂ ಒಣ ಭೂಮಿಯೂ ಅರಣ್ಯವೂ ಆಗುವದು.
- Jeremiah 14:15–16 ಯೆರೆಮೀಯ 14:15–16ಆದದರಿಂದ ಕರ್ತನು ತಾನು ಕಳುಹಿಸದೆ ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು ಈ ದೇಶದಲ್ಲಿ ಕತ್ತಿಯೂ ಬರವೂ ಇರುವದಿಲ್ಲವೆಂದು ಹೇಳುವಂಥ ಪ್ರವಾದಿಗಳನ್ನು ಕುರಿತು ಹೇಳುವದೇನಂದರೆ--ಕತ್ತಿ ಯಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ. ಅವರ ಪ್ರವಾದನೆಯನು ಕೇಳುವ ಜನರು ಕ್ಷಾಮದ ಮತ್ತು ಕತ್ತಿಯ ನಿಮಿತ್ತ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಹೆಂಡತಿಯರನ್ನೂ ಕುಮಾರರನ್ನೂ ಕುಮಾರ್ತೆಯರನ್ನೂ ಹೂಣಿಡುವದಕ್ಕೆ ಯಾರೂ ಇರು ವದಿಲ್ಲ; ನಾನು ಅವರ ಕೆಟ್ಟತನವನ್ನು ಅವರ ಮೇಲೆ ಹೊಯಿದು ಬಿಡುವೆನು.