Hosea · chapter 4 · verse 9
Hosea 4:9 in Kannada
ಯಾಜಕನು ಹೇಗೋ, ಹಾಗೆಯೇ ಜನರು ಇರು ವರು; ನಾನು ಅವರ ಮಾರ್ಗಗಳಿಗೋಸ್ಕರ ಅವರನ್ನು ಶಿಕ್ಷಿಸಿ, ಅವರ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡು ವೆನು.
Yaajakanu hego, haageye janaru iru varu; naanu avara maargagaligoskara avarannu shikshisi, avara krutyagalige takkante pratiphala kodu venu.
Hosea 4:9 in English
- King James Version (KJV)
- And there shall be, like people, like priest: and I will punish them for their ways, and reward them their doings.
- World English Bible (WEB)
- It will be like people, like priest; and I will punish them for their ways, and will repay them for their deeds.
- American Standard Version (ASV)
- And it shall be, like people, like priest; and I will punish them for their ways, and will requite them their doings.
- Bible in Basic English (BBE)
- And the priest will be like the people; I will give them punishment for their evil ways, and the reward of their acts.
- Darby Translation (DBY)
- And it shall be as the people so the priest; and I will visit their ways upon them, and recompense to them their doings;
- Webster's Bible (WBS)
- And there shall be, like people, like priest: and I will punish them for their ways, and reward them their doings.
- Young's Literal Translation (YLT)
- And it hath been, like people, like priest, And I have charged on it its ways, And its habitual doings I return to it.
Read in context
- 7ಅವರು ಹೆಚ್ಚಿದ ಹಾಗೆಲ್ಲಾ ನನಗೆ ವಿರೋಧವಾಗಿ ಪಾಪಮಾಡಿದರು; ಆದದರಿಂದ ನಾನು ಅವರ ಮಾನವನ್ನು ನಾಚಿಕೆಗೆ ಮಾರ್ಪಡಿಸುವೆನು.
- 8ಅವರು ನನ್ನ ಜನರ ಪಾಪವನ್ನು ತಿನ್ನುತ್ತಾರೆ ಮತ್ತು ಅವರು ದುಷ್ಟತನದ ಮೇಲೆ ಮನಸ್ಸಿಡುತ್ತಾರೆ.
- 9ಯಾಜಕನು ಹೇಗೋ, ಹಾಗೆಯೇ ಜನರು ಇರು ವರು; ನಾನು ಅವರ ಮಾರ್ಗಗಳಿಗೋಸ್ಕರ ಅವರನ್ನು ಶಿಕ್ಷಿಸಿ, ಅವರ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡು ವೆನು.
- 10ಅವರು ತಿಂದರೂ ಸಾಕಾಗುವದಿಲ್ಲ; ಅವರು ವ್ಯಭಿಚಾರ ಮಾಡಿದರೂ ಅಭಿವೃದ್ಧಿಯಾಗುವದಿಲ್ಲ; ಯಾಕಂದರೆ ಅವರು ಕರ್ತನ ಕಡೆಗೆ ಗಮನಿಸುವದನ್ನು ಬಿಟ್ಟುಬಿಟ್ಟಿದ್ದಾರೆ.
- 11ವ್ಯಭಿಚಾರವೂ ದ್ರಾಕ್ಷಾರಸವೂ ಹೊಸ ದ್ರಾಕ್ಷಾರಸವೂ ಹೃದಯವನ್ನು ಕೆಡಿಸುತ್ತದೆ.
Cross references
- Jeremiah 5:31 ಯೆರೆಮೀಯ 5:31ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
- Matthew 15:14 ಮತ್ತಾಯನು 15:14ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು.
- Isaiah 24:2 ಯೆಶಾಯ 24:2ಜನಗಳಿಗೆ ಹೇಗೋ ಹಾಗೆಯೇ ಯಾಜಕರಿಗೂ ದಾಸನಿಗೆ ಹೇಗೋ ಹಾಗೆಯೇ ಅವನ ಯಜಮಾನನಿಗೆ, ದಾಸಿಗೆ ಹೇಗೋ ಹಾಗೆಯೇ ಅವಳ ಯಜಮಾನಿಗೆ; ಕೊಳ್ಳುವವನಿಗೆ ಹೇಗೋ ಹಾಗೆಯೇ ಮಾರುವವನಿಗೆ; ಸಾಲಕೊಡುವವನಿಗೆ ಹೇಗೋ ಹಾಗೆಯೇ ತರುವ ವನಿಗೆ; ಬಡ್ಡಿಕೊಡುವವನಿಗೆ ಹೇಗೋ ಹಾಗೆಯೇ ತಕ್ಕೊಳ್ಳುವವನಿಗೆ ಆಗುವದು.
- Hosea 1:4 ಹೋಶೇಯ 1:4ಆಗ ಕರ್ತನು ಅವನಿಗೆ--ಅವನನ್ನು ಇಜ್ರೇಲ್ ಎಂಬ ಹೆಸರಿನಿಂದ ಕರೆ. ಇನ್ನೂ ಸ್ವಲ್ಪಕಾಲದಲ್ಲಿಯೇ ನಾನು ಇಜ್ರೇಲಿನ ರಕ್ತವನ್ನು ಯೆಹೂವಿನ ಮನೆತನದವರ ಮೇಲೆ ಸೇಡು ತೀರಿಸಿಕೊಳ್ಳುವೆನು; ಇಸ್ರಾಯೇಲಿನ ಮನೆತನದ ರಾಜ್ಯವು ನಿಂತುಹೋಗುವಂತೆ ಮಾಡು ವೆನು.
- Jeremiah 23:11–12 ಯೆರೆಮೀಯ 23:11–12ಪ್ರವಾದಿಯೂ ಯಾಜಕನೂ ಕೂಡ ಭ್ರಷ್ಟರೇ; ಹೌದು, ನನ್ನ ಆಲಯದಲ್ಲಿ ಅವರ ಕೆಟ್ಟತನವನ್ನು ಕಂಡಿದ್ದೇನೆಂದು ಕರ್ತನು ಅನ್ನುತ್ತಾನೆ. ಆದದರಿಂದ ಅವರ ಮಾರ್ಗವು ಕತ್ತಲೆಯಲ್ಲಿರುವ ಜಾರುವ ಸ್ಥಳಗಳ ಹಾಗೆ ಅವರಿಗಿರುವದು; ಅವರು ತಳ್ಳಲ್ಪಟ್ಟು ಬೀಳುವರು; ಕೇಡನ್ನು, ಅವರ ವಿಚಾರಣೆಯ ವರುಷವನ್ನು ಅವರ ಮೇಲೆ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ.
- Jeremiah 8:10–12 ಯೆರೆಮೀಯ 8:10–12ಆದದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ ಅವರ ಹೊಲಗಳನ್ನು ಸ್ವಾಧೀನಮಾಡಿಕೊಳ್ಳುವವರಿಗೂ ನಾನು ಕೊಡುವೆನು; ಚಿಕ್ಕವನು ಮೊದಲುಗೊಂಡು ದೊಡ್ಡವನ ತನಕ ಅವರೆಲ್ಲರು ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕನ ವರೆಗೂ ಪ್ರತಿ ಯೊಬ್ಬನು ಮೋಸದಿಂದ ವರ್ತಿಸುತ್ತಾನೆ. ಅವರು ನನ್ನ ಜನರ ಮಗಳ ಗಾಯವನ್ನು ಸ್ವಲ್ಪವಾಗಿ ಸ್ವಸ್ಥಮಾಡಿ ಸಮಾಧಾನವಿಲ್ಲದಿರುವಾಗ--ಸಮಾಧಾನ, ಸಮಾ ಧಾನ ಎಂದನ್ನುತ್ತಾರೆ. ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪ ವಾದರೂ ನಾಚಿಕೆಪಡಲಿಲ್ಲ; ಇಲ್ಲವೆ ಅವರು ಲಜ್ಜೆ ಯನ್ನು ಅರಿಯರು. ಆದದರಿಂದ ಬೀಳುವವರೊಳಗೆ ಅವರು ಬೀಳುವರು; ಅವರು ವಿಚಾರಿಸಲ್ಪಡುವ ಕಾಲದಲ್ಲಿ ಕೆಳಗೆ ಹಾಕಲ್ಪಡು ವರು ಎಂದು ಕರ್ತನು ಹೇಳುತ್ತಾನೆ.
- Isaiah 9:14–16 ಯೆಶಾಯ 9:14–16ಆದದರಿಂದ ಕರ್ತನು ಇಸ್ರಾಯೇಲಿನಿಂದ ತಲೆಬಾಲಗಳನ್ನೂ ಕೊಂಬೆ ರೆಂಬೆಗಳನ್ನೂ ಒಂದು ದಿನದಲ್ಲಿ ಕತ್ತರಿಸಿ ಹಾಕುವನು. ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು; ಸುಳ್ಳುಬೋಧಿಸುವ ಪ್ರವಾ ದಿಯು ಬಾಲವಾಗಿರುವನು. ಈ ಜನರನ್ನು ನಡಿಸು ವವರು ದಾರಿತಪ್ಪಿಸುವವರಾಗಿದ್ದಾರೆ; ಅವರಿಂದ ನಡಿ ಸಲ್ಪಟ್ಟವರು ನಾಶವಾಗಿದ್ದಾರೆ.
- Hosea 8:13 ಹೋಶೇಯ 8:13ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ; ಆದರೆ ಕರ್ತನು ಅವುಗಳಿಗೆ ಮೆಚ್ಚುವದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕ ಮಾಡಿಕೊಂಡು ಅವರ ಪಾಪಗಳನ್ನು ವಿಚಾ ರಿಸುವನು; ಅವರು ಐಗುಪ್ತಕ್ಕೆ ಹಿಂದಿರುಗುವರು.ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.
- Hosea 9:9 ಹೋಶೇಯ 9:9ಗಿಬ್ಯದ ದಿನಗಳಲ್ಲಿ ಆದ ಹಾಗೆ ತಮ್ಮನ್ನು ಬಹಳವಾಗಿ ಕೆಡಿಸಿಕೊಂಡಿದ್ದಾರೆ; ಆದದರಿಂದ ಅವರ ಅಕ್ರಮವನ್ನು ಆತನು ಜ್ಞಾಪಕಮಾಡಿಕೊಳ್ಳುವನು, ಅವರ ಪಾಪಗಳನ್ನು ವಿಚಾರಿಸುವನು.
- Psalm 109:17–18 ಕೀರ್ತನೆಗಳು 109:17–18ಅವನು ಶಾಪವನ್ನು ಪ್ರೀತಿ ಮಾಡಿದನು; ಅದು ಅವನಿಗೆ ಬರಲಿ. ಆಶೀರ್ವಾದಕ್ಕೆ ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ. ಅವನು ತನ್ನ ವಸ್ತ್ರದಂತೆ ಶಾಪವನ್ನು ಹೊದ್ದುಕೊಂಡನು; ಅದು ನೀರಿನಂತೆ ಅವನ ಅಂತರಂಗದಲ್ಲಿಯೂ ಎಣ್ಣೆಯಂತೆ ಅವನ ಎಲುಬುಗಳಲ್ಲಿಯೂ ಸೇರಲಿ.
- Proverbs 5:22 ಜ್ಞಾನೋಕ್ತಿಗಳು 5:22ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
- Zechariah 1:6 ಜೆಕರ್ಯ 1:6ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.