Hosea · chapter 6 · verse 3
Hosea 6:3 in Kannada
ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು.
Naavu kartanannu tilidukollalu aatanannu himbaa lisidare naavu tilidukolluvevu; arunoda yada haage aatana horadonavu siddhavaagide; aatanu maleyanteyoo mungaarinanteyoo bhoomige tampumaaduva hingaarinanteyoo namma balige baruvanu.
Hosea 6:3 in English
- King James Version (KJV)
- Then shall we know, [if] we follow on to know the LORD: his going forth is prepared as the morning; and he shall come unto us as the rain, as the latter [and] former rain unto the earth.
- World English Bible (WEB)
- Let’s acknowledge the LORD. Let’s press on to know the LORD. As surely as the sun rises, the LORD will appear. He will come to us like the rain, like the spring rain that waters the earth.”
- American Standard Version (ASV)
- And let us know, let us follow on to know Jehovah: his going forth is sure as the morning; and he will come unto us as the rain, as the latter rain that watereth the earth.
- Bible in Basic English (BBE)
- And let us have knowledge, let us go after the knowledge of the Lord; his going out is certain as the dawn, his decisions go out like the light; he will come to us like the rain, like the spring rain watering the earth.
- Darby Translation (DBY)
- and we shall know, — we shall follow on to know Jehovah: his going forth is assured as the morning dawn; and he will come unto us as the rain, as the latter rain which watereth the earth.
- Webster's Bible (WBS)
- Then shall we know, [if] we follow on to know the LORD: his going forth is prepared as the morning; and he will come to us as the rain, as the latter [and] former rain to the earth.
- Young's Literal Translation (YLT)
- And we know — we pursue to know Jehovah, As the dawn prepared is His going forth, And He cometh in as a shower to us, As gathered rain — sprinkling earth.'
Read in context
- 1ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ.
- 2ಆತನು ಎರಡು ದಿನಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು; ಮೂರನೆಯ ದಿನದಲ್ಲಿ ಆತನೇ ನಮ್ಮನ್ನು ಎಬ್ಬಿಸುವನು; ನಾವು ಆತನ ದೃಷ್ಟಿಯಲ್ಲಿ ಜೀವಿಸುವೆವು.
- 3ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು.
- 4ಓ ಎಫ್ರಾಯಾಮೇ, ನಿನಗೆ ನಾನು ಏನು ಮಾಡಲಿ? ಓ ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಒಳ್ಳೇತನವು ಹೊತ್ತಾ ರೆಯ ಮೇಘದ ಹಾಗೆಯೂ ಮುಂಜಾನೆಯ ಮಂಜಿ ನಂತೆಯೂ ಹೋಗಿಬಿಡುತ್ತದೆ.
- 5ಆದದರಿಂದ ನಾನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು ನನ್ನ ಬಾಯಿ ಮಾತುಗಳಿಂದ ಅವರನ್ನು ಕೊಂದುಹಾಕಿದ್ದೇನೆ; ನಿನ್ನ ನ್ಯಾಯತೀರ್ಪುಗಳು ಬೆಳಕಿನ ಹಾಗೆ ಹೊರಟವು.
Cross references
- Jeremiah 24:7 ಯೆರೆಮೀಯ 24:7ನಾನೇ ಕರ್ತನೆಂದು ನನ್ನನ್ನು ತಿಳುಕೊಳ್ಳುವದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿ ರುವರು; ನಾನು ಅವರ ದೇವರಾಗಿರುವೆನು; ತಮ್ಮ ಪೂರ್ಣ ಹೃದಯದಿಂದ ನನ್ನ ಬಳಿಗೆ ಹಿಂತಿರುಗಿಕೊಳ್ಳು ವರು.
- Hosea 14:5 ಹೋಶೇಯ 14:5ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು; ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಹರಡುವನು.
- Psalm 72:6 ಕೀರ್ತನೆಗಳು 72:6ಕೊಯ್ದ ಹುಲ್ಲಿನ ಮೇಲೆ ಬೀಳುವ ಮಳೆಯ ಹಾಗೆಯೂ ಭೂಮಿಯನ್ನು ನೆನಸುವ ಸುರಿಯುವ ಮಳೆಗಳ ಹಾಗೆಯೂ ಆತನು ಇಳಿದು ಬರುವನು.
- Proverbs 2:1–5 ಜ್ಞಾನೋಕ್ತಿಗಳು 2:1–5ನನ್ನ ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಬಚ್ಚಿಟ್ಟುಕೊಂಡರೆ ನೀನು ಜ್ಞಾನಕ್ಕೆ ಕಿವಿಗೊಡು ವಂತೆಯೂ ತಿಳುವಳಿಕೆಗೆ ನಿನ್ನ ಹೃದಯವನ್ನು ತಿರು ಗಿಸುವಂತೆಯೂ ಹೌದು, ತಿಳುವಳಿಕೆಗಾಗಿ ಮೊರೆ ಯಿಟ್ಟು ವಿವೇಕಕ್ಕಾಗಿ ನಿನ್ನ ಸ್ವರವನ್ನು ಎತ್ತಿ ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ, ನೀನು ಕರ್ತನ ಭಯವನ್ನು ತಿಳಿದುಕೊಳ್ಳುವಿ. ದೇವರ ಜ್ಞಾನವನ್ನು ಕಂಡುಕೊಳ್ಳುವಿ.
- Philippians 3:13–15 ಫಿಲಿಪ್ಪಿಯವರಿಗೆ 3:13–15ಸಹೋದರರೇ, ನಾನಂತೂ ಹಿಡಿದುಕೊಂಡವ ನೆಂದು ನನ್ನನ್ನು ಎಣಿಸಿಕೊಳ್ಳುವದಿಲ್ಲ; ಆದರೆ ಇದೊಂ ದನ್ನು ಮಾಡುತ್ತೇನೆ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ದೇವರ ಉನ್ನತವಾದ ಕರೆಯುವಿಕೆಯ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ. ಆದದರಿಂದ ನಮ್ಮಲ್ಲಿ ಪರಿ ಪೂರ್ಣರಾದವರು ಇದೇ ಅಭಿಪ್ರಾಯವುಳ್ಳವರಾಗಿ ರೋಣ; ಯಾವದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನೂ ದೇವರು ನಿಮಗೆ ತೋರಿಸಿಕೊಡುವನು.
- Matthew 13:11 ಮತ್ತಾಯನು 13:11ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.
- Revelation 22:16 ಪ್ರಕಟನೆ 22:16ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.
- Zechariah 10:1 ಜೆಕರ್ಯ 10:1ಕರ್ತನಿಂದ ಹಿಂಗಾರುಮಳೆಯ ಕಾಲದಲ್ಲಿ ಮಳೆಗಾಗಿ ಬೇಡಿಕೊಳ್ಳಿರಿ. ಹೀಗೆ ಕರ್ತನು ಮಿಂಚುವ ಮೋಡಗಳನ್ನು ಮಾಡಿ ಅವರಿಗೆ ಜಡಿ ಮಳೆಯನ್ನೂ ಒಬ್ಬೊಬ್ಬನಿಗೆ ಹೊಲದಲ್ಲಿ ಹುಲ್ಲನ್ನೂ ಕೊಡುವನು.
- 2 Peter 1:19 2 ಪೇತ್ರನು 1:19ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.
- Luke 1:78 ಲೂಕನು 1:78ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ
- Malachi 4:2 ಮಲಾಕಿಯ 4:2ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
- Micah 4:2 ಮೀಕ 4:2ಅನೇಕ ಜನಾಂಗಗಳು ಬಂದು ಹೇಳುವ ದೇನಂದರೆ--ಬನ್ನಿರಿ; ಕರ್ತನ ಬೆಟ್ಟಕ್ಕೆ ಯಾಕೋಬಿನ ದೇವರ ಆಲಯಕ್ಕೆ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ಹಾದಿಗಳಲ್ಲಿ ನಡೆಯುವೆವು; ಯಾಕಂದರೆ ಚೀಯೋನಿನೊಳಗಿಂದ ನ್ಯಾಯಪ್ರಮಾಣವೂ ಯೆರೂ ಸಲೇಮಿನೊಳಗಿಂದ ದೇವರ ವಾಕ್ಯವೂ ಹೊರಡು ವದು.