Hosea · chapter 6 · verse 4
Hosea 6:4 in Kannada
ಓ ಎಫ್ರಾಯಾಮೇ, ನಿನಗೆ ನಾನು ಏನು ಮಾಡಲಿ? ಓ ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಒಳ್ಳೇತನವು ಹೊತ್ತಾ ರೆಯ ಮೇಘದ ಹಾಗೆಯೂ ಮುಂಜಾನೆಯ ಮಂಜಿ ನಂತೆಯೂ ಹೋಗಿಬಿಡುತ್ತದೆ.
O ephraayaame, ninage naanu enu maadali? O yehoodave, ninage naanu enu maadali? Nimma olletanavu hottaa reya meghada haageyoo munjaaneya manji nanteyoo hogibiduttade.
Hosea 6:4 in English
- King James Version (KJV)
- O Ephraim, what shall I do unto thee? O Judah, what shall I do unto thee? for your goodness [is] as a morning cloud, and as the early dew it goeth away.
- World English Bible (WEB)
- “Ephraim, what shall I do to you? Judah, what shall I do to you? For your love is like a morning cloud, and like the dew that disappears early.
- American Standard Version (ASV)
- O Ephraim, what shall I do unto thee? O Judah, what shall I do unto thee? for your goodness is as a morning cloud, and as the dew that goeth early away.
- Bible in Basic English (BBE)
- O Ephraim, what am I to do to you? O Judah, what am I to do to you? For your love is like a morning cloud, and like the dew which goes early away.
- Darby Translation (DBY)
- What shall I do unto thee, Ephraim? What shall I do unto thee, Judah? For your goodness is as a morning cloud, and as the dew that early passeth away.
- Webster's Bible (WBS)
- O Ephraim, what shall I do to thee? O Judah, what shall I do to thee? for your goodness [is] as the morning cloud, and as the early dew it goeth away.
- Young's Literal Translation (YLT)
- What do I do to thee, O Ephraim? What do I do to thee, O Judah? Your goodness [is] as a cloud of the morning, And as dew rising early — going.
Read in context
- 2ಆತನು ಎರಡು ದಿನಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು; ಮೂರನೆಯ ದಿನದಲ್ಲಿ ಆತನೇ ನಮ್ಮನ್ನು ಎಬ್ಬಿಸುವನು; ನಾವು ಆತನ ದೃಷ್ಟಿಯಲ್ಲಿ ಜೀವಿಸುವೆವು.
- 3ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು.
- 4ಓ ಎಫ್ರಾಯಾಮೇ, ನಿನಗೆ ನಾನು ಏನು ಮಾಡಲಿ? ಓ ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಒಳ್ಳೇತನವು ಹೊತ್ತಾ ರೆಯ ಮೇಘದ ಹಾಗೆಯೂ ಮುಂಜಾನೆಯ ಮಂಜಿ ನಂತೆಯೂ ಹೋಗಿಬಿಡುತ್ತದೆ.
- 5ಆದದರಿಂದ ನಾನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು ನನ್ನ ಬಾಯಿ ಮಾತುಗಳಿಂದ ಅವರನ್ನು ಕೊಂದುಹಾಕಿದ್ದೇನೆ; ನಿನ್ನ ನ್ಯಾಯತೀರ್ಪುಗಳು ಬೆಳಕಿನ ಹಾಗೆ ಹೊರಟವು.
- 6ನಾನು ಬಲಿಯನ್ನಲ್ಲ ಕರುಣೆಯನ್ನೇ ಮತ್ತು ದಹನ ಬಲಿಗಳಿಗಿಂತ ದೇವರ ತಿಳುವಳಿಕೆಯನ್ನೇ ಹೆಚ್ಚಾಗಿ ಅಪೇಕ್ಷಿಸಿದ್ದೇನೆ.
Cross references
- Psalm 78:34–37 ಕೀರ್ತನೆಗಳು 78:34–37ಅವರನ್ನು ಕೊಲ್ಲುವಾಗ ಅವರು ಆತನನ್ನು ಹುಡುಕಿ ತಿರುಗಿಕೊಂಡು ದೇವರನ್ನು ಹೊತ್ತಾರೆ ವಿಚಾರಿಸಿ ದೇವರು ತಮ್ಮ ಬಂಡೆ ಎಂದೂ ಮಹೋನ್ನತ ನಾದ ದೇವರು ತಮ್ಮ ವಿಮೋಚಕನೆಂದೂ ಜ್ಞಾಪಕ ಮಾಡಿಕೊಂಡರು. ಆದಾಗ್ಯೂ ತಮ್ಮ ಬಾಯಿಗಳಿಂದ ಆತನಿಗೆ ಮುಖಸ್ತುತಿ ಮಾಡಿ ತಮ್ಮ ನಾಲಿಗೆಯಿಂದ ಆತನಿಗೆ ಸುಳ್ಳು ಹೇಳಿದರು. ಅವರ ಹೃದಯವು ಆತನ ಸಂಗಡ ಇರಲಿಲ್ಲ ಅವರು ಆತನ ಒಡಂಬಡಿ ಕೆಯಲ್ಲೂ ಸ್ಥಿರವಾಗಿರಲಿಲ್ಲ
- Hosea 13:3 ಹೋಶೇಯ 13:3ಆದದರಿಂದ ಅವರು ಪ್ರಾತಃ ಕಾಲದ ಮೇಘದ ಹಾಗೆಯೂ ಬೇಗನೆ ಮಾಯ ವಾಗುವ ಇಬ್ಬನಿ ಹಾಗೆಯೂ ಸುಳಿಗಾಳಿಯು ನೆಲದಿಂದ ಬಡಿದುಕೊಂಡು ಹೋಗುವ ಹೊಟ್ಟಿನ ಹಾಗೆಯೂ ಚಿಮಿಣಿಗೆಯಿಂದ ಹೊರಡುವ ಹೊಗೆಯ ಹಾಗೆಯೂ ಇರುವರು.
- Hosea 11:8 ಹೋಶೇಯ 11:8ಎಫ್ರಾಯಾಮೇ, ನಾನು ನಿನ್ನನ್ನು ಬಿಟ್ಟು ಬಿಡುವದು ಹೇಗೆ? ಇಸ್ರಾಯೇಲೇ, ನಿನ್ನನ್ನು ನಾನು ಬಿಡಿಸುವದು ಹೇಗೆ? ನಾನು ನಿನ್ನನ್ನು ಅದ್ಮದ ಹಾಗೆ ಮಾಡುವದು ಹೇಗೆ? ನಾನು ನಿನ್ನನ್ನು ಜೆಬೋಯಾಮಿನ ಹಾಗೆ ಸ್ಥಾಪಿಸುವದು ಹೇಗೆ? ನನ್ನ ಹೃದಯವು ನನ್ನಲ್ಲಿ ತಿರುಗಿಕೊಂಡಿದೆ. ನನ್ನ ಪಶ್ಚಾತ್ತಾಪಗಳು ಒಟ್ಟಿಗೆ ಹತ್ತಿ ಕೊಂಡಿವೆ.
- Psalm 106:12–13 ಕೀರ್ತನೆಗಳು 106:12–13ಆಗ ಅವರು ಆತನ ಮಾತುಗಳನ್ನು ನಂಬಿ ಆತನ ಸ್ತೋತ್ರ ವನ್ನು ಹಾಡಿದರು. ಆತನ ಕೆಲಸಗಳನ್ನು ಬೇಗ ಮರೆತುಬಿಟ್ಟು ಆತನ ಆಲೋಚನೆಗೆ ಅವರು ಕಾದುಕೊಳ್ಳದೆ ಇದ್ದರು.
- 2 Peter 2:20–22 2 ಪೇತ್ರನು 2:20–22ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ. ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು. ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
- Luke 13:7–9 ಲೂಕನು 13:7–9ಆಗ ಅವನು ತನ್ನ ದ್ರಾಕ್ಷೇತೋಟ ಮಾಡು ವವನಿಗೆ--ಇಗೋ, ಈ ಮೂರು ವರುಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕಿದರೂ ಒಂದನ್ನೂ ಕಂಡುಕೊಳ್ಳಲಿಲ್ಲ; ಇದನ್ನು ಕಡಿದುಹಾಕು; ಭೂಮಿಗೆ ಇದು ಯಾಕೆ ಭಾರವಾಗಿರಬೇಕು ಎಂದು ಹೇಳಿದನು. ಆದರೆ ಅವನು ಪ್ರತ್ಯುತ್ತರವಾಗಿ ಅವ ನಿಗೆ--ಒಡೆಯನೇ, ನಾನು ಅದರ ಸುತ್ತಲೂ ಅಗೆದು ಗೊಬ್ಬರ ಹಾಕುವ ವರೆಗೆ ಈ ವರುಷವೂ ಇದನ್ನು ಬಿಡು; ಇದು ಫಲ ಫಲಿಸಿದರೆ ಸರಿ; ಇಲ್ಲವಾದರೆ ನೀನು ಇದನ್ನು ಕಡಿದುಹಾಕಬಹುದು ಅಂದನು.
- Matthew 13:21 ಮತ್ತಾಯನು 13:21ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು; ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು.
- Luke 19:41–42 ಲೂಕನು 19:41–42ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು-- ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ.
- Jeremiah 3:10 ಯೆರೆಮೀಯ 3:10ಇದೆಲ್ಲಾ ಆದಾಗ್ಯೂ ವಂಚನೆಯುಳ್ಳ ಅವಳ ಸಹೋ ದರಿಯಾದ ಯೆಹೂದಳು ಪೂರ್ಣ ಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ ಎಂದು ಕರ್ತನು ಅನ್ನುತ್ತಾನೆ.
- Jeremiah 34:15 ಯೆರೆಮೀಯ 34:15ಈಗ ನೀವು ತಿರುಗಿ ಕೊಂಡು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಒಬ್ಬೊಬ್ಬನು ತನ್ನ ತನ್ನ ನೆರೆಯವನಿಗೆ ಬಿಡುಗಡೆಯನ್ನು ಸಾರಿದಿರಿ; ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಮನೆ ಯಲ್ಲಿ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಿರಿ.
- Hosea 7:1 ಹೋಶೇಯ 7:1ನಾನು ಇಸ್ರಾಯೇಲನ್ನು ಗುಣಮಾಡ ಬೇಕೆಂದಿರುವಾಗ ಎಫ್ರಾಯಾಮಿನ ದುಷ್ಕೃತ್ಯವನ್ನೂ ಸಮಾರ್ಯದ ಕೆಟ್ಟತನವನ್ನೂ ಕಂಡು ಹಿಡಿಯುತ್ತೇನೆ; ಅವರು ಸುಳ್ಳನ್ನು ನಡಿಸುತ್ತಾರೆ; ಕಳ್ಳನು ಒಳಗೆ ಬರುತ್ತಾನೆ. ಕಳ್ಳರ ಗುಂಪು ಹೊರಗೆ ಸುಲುಕೊಳ್ಳು ತ್ತದೆ.
- Jeremiah 5:9 ಯೆರೆಮೀಯ 5:9ಇವುಗಳ ನಿಮಿತ್ತ ನಾನು ವಿಚಾರಿಸುವ ದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ? ಎಂದು ಕರ್ತನು ಅನ್ನುತ್ತಾನೆ.