Hosea · chapter 7 · verse 12
Hosea 7:12 in Kannada
ಅವರು ಹೋಗುವಾಗ, ನಾನು ಅವರ ಮೇಲೆ ನನ್ನ ಬಲೆಯನ್ನು ಹಾಸುವೆನು; ಆಕಾಶದ ಪಕ್ಷಿಗಳ ಹಾಗೆ ಅವರನ್ನು ಕೆಳಗೆ ಇಳಿಸಿ ಅವರ ಸಭೆಯು ಕೇಳಿರುವ ಪ್ರಕಾರ ಅವರನ್ನು ಶಿಕ್ಷಿಸುವೆನು.
Avaru hoguvaaga, naanu avara mele nanna baleyannu haasuvenu; aakaashada pakshigala haage avarannu kelage ilisi avara sabheyu keliruva prakaara avarannu shikshisuvenu.
Hosea 7:12 in English
- King James Version (KJV)
- When they shall go, I will spread my net upon them; I will bring them down as the fowls of the heaven; I will chastise them, as their congregation hath heard.
- World English Bible (WEB)
- When they go, I will spread my net on them. I will bring them down like the birds of the sky. I will chastise them, as their congregation has heard.
- American Standard Version (ASV)
- When they shall go, I will spread my net upon them; I will bring them down as the birds of the heavens; I will chastise them, as their congregation hath heard.
- Bible in Basic English (BBE)
- When they go, my net will be stretched out over them; I will take them like the birds of heaven, I will give them punishment, I will take them away in the net for their sin.
- Darby Translation (DBY)
- When they go, I will spread my net upon them; I will bring them down as the fowl of the heavens; I will chastise them, according as their assembly hath heard.
- Webster's Bible (WBS)
- When they shall go, I will spread my net upon them; I will bring them down as the fowls of the heaven; I will chastise them, as their congregation hath heard.
- Young's Literal Translation (YLT)
- When they go I spread over them My net, As the fowl of the heavens I bring them down, I chastise them as their company hath heard.
Read in context
- 10ಇಸ್ರಾಯೇಲಿನ ಗರ್ವವು ತನ್ನ ಮುಖದ ಮುಂದೆ ಸಾಕ್ಷಿ ಕೊಡುತ್ತದೆ; ಆದರೆ ಅವರು ತಮ್ಮ ಕರ್ತನಾದ ದೇವರ ಕಡೆಗೆ ತಿರುಗದೆ ಇದ್ದಾರೆ, ಇಲ್ಲವೆ ಆತನನ್ನು ಇದಕ್ಕೆಲ್ಲಾ ಹುಡು ಕುವದಿಲ್ಲ.
- 11ಎಫ್ರಾಯಾಮು ಸಹ ಹೃದಯವಿಲ್ಲದ ಬುದ್ಧಿಹೀನವಾದ ಪಾರಿವಾಳದ ಹಾಗಿದ್ದಾನೆ; ಅವರು ಐಗುಪ್ತವನ್ನು ಕರೆಯುತ್ತಾರೆ, ಅವರು ಅಶ್ಯೂರಕ್ಕೆ ಹೋಗುತ್ತಾರೆ.
- 12ಅವರು ಹೋಗುವಾಗ, ನಾನು ಅವರ ಮೇಲೆ ನನ್ನ ಬಲೆಯನ್ನು ಹಾಸುವೆನು; ಆಕಾಶದ ಪಕ್ಷಿಗಳ ಹಾಗೆ ಅವರನ್ನು ಕೆಳಗೆ ಇಳಿಸಿ ಅವರ ಸಭೆಯು ಕೇಳಿರುವ ಪ್ರಕಾರ ಅವರನ್ನು ಶಿಕ್ಷಿಸುವೆನು.
- 13ಅವರಿಗೆ ಅಯ್ಯೋ, ಅವರು ನನ್ನನ್ನು ಬಿಟ್ಟು ಓಡಿ ಹೋಗಿದ್ದಾರೆ; ಅವರು ನಾಶವಾಗಲಿ! ಯಾಕಂದರೆ ನನಗೆ ಅವರು ವಿರುದ್ಧವಾಗಿ ದ್ರೋಹ ಮಾಡಿದ್ದಾರೆ; ನಾನು ಅವರಿಗೆ ವಿಮೋಚನೆ ಮಾಡಿದ್ದಾಗ್ಯೂ ಅವರು ನನಗೆ ವಿರುದ್ಧ ವಾಗಿ ಸುಳ್ಳು ಹೇಳಿದ್ದಾರೆ.
- 14ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ; ಕಾಳು ಮತ್ತು ದ್ರಾಕ್ಷಾರಸಗಳ ನಿಮಿತ್ತ ಕೂಡಿ ಬಂದು ನನಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದಾರೆ.
Cross references
- Ezekiel 12:13 ಯೆಹೆಜ್ಕೇಲನು 12:13ನನ್ನ ಬಲೆಯನ್ನು ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯ ದೇಶದ ಬಾಬೆಲಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು.
- Deuteronomy 28:15–68 ಧರ್ಮೋಪದೇಶಕಾಂಡ 28:15–68ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು. ಪಟ್ಟಣದಲ್ಲಿ ನಿನಗೆ ಶಾಪ; ಹೊಲದಲ್ಲಿ ನಿನಗೆ ಶಾಪ; ನಿನ್ನ ಪುಟ್ಟಿಗೂ ಕಣಜಕ್ಕೂ ಶಾಪ. ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಶಾಪ. ಬರು ವಾಗ ನಿನಗೆ ಶಾಪ; ಹೊರಡುವಾಗ ನಿನಗೆ ಶಾಪ. ನೀನು ನನ್ನನ್ನು ಬಿಟ್ಟು ನಿನ್ನ ದುಷ್ಕ್ರಿಯೆಗಳ ಕೆಟ್ಟತ ನದ ನಿಮಿತ್ತ ನೀನು ನಾಶವಾಗುವ ವರೆಗೂ ಶೀಘ್ರ ವಾಗಿ ಕೆಟ್ಟುಹೋಗುವ ವರೆಗೂ ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಶಾಪವನ್ನೂ ಗಾಬರಿಯನ್ನೂ ಗದರಿಕೆಯನ್ನೂ ಕರ್ತನು ನಿನ್ನ ಮೇಲೆ ಕಳುಹಿಸುವನು. ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿಂದ ಹಾಳಾಗಿ ಹೋಗುವ ವರೆಗೆ ವ್ಯಾಧಿಯು ನಿನಗೆ ಅಂಟಿಕೊಳ್ಳುವಂತೆ ಕರ್ತನು ಮಾಡುವನು. ಕ್ಷಯರೋಗದಿಂದಲೂ ಜ್ವರದಿಂದಲೂ ಉರಿಪಾತ ದಿಂದಲೂ ಮಹಾತಾಪದಿಂದಲೂ ಕತ್ತಿಯಿಂದಲೂ ಕಾಡಿಗೆಯಿಂದಲೂ ಬಾಣಂತಿ ರೋಗದಿಂದಲೂ ಕರ್ತನು ನಿನ್ನನ್ನು ಹೊಡೆಯುವನು; ನೀನು ನಾಶ ವಾಗುವ ಪರ್ಯಂತರ ಅವು ನಿನ್ನನ್ನು ಹಿಂದಟ್ಟುವವು. ನಿನ್ನ ತಲೆಯ ಮೇಲಿರುವ ಆಕಾಶವು ತಾಮ್ರ ವಾಗಿಯೂ ನಿನ್ನ ಕೆಳಗಿರುವ ಭೂಮಿಯು ಕಬ್ಬಿಣ ವಾಗಿಯೂ ಇರುವವು. ಕರ್ತನು ನಿನ್ನ ದೇಶದ ಮಳೆಯನ್ನು ಹುಡಿಯೂ ಧೂಳೂ ಆಗುವಂತೆ ಮಾಡು ವನು; ನೀನು ನಾಶವಾಗುವ ವರೆಗೆ ಅದು ಆಕಾಶದಿಂದ ನಿನ್ನ ಮೇಲೆ ಇಳಿದು ಬರುವದು. ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ. ನಿಮ್ಮ ಹೆಣಗಳು ಆಕಾಶದ ಎಲ್ಲಾ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗು ವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ. ಕರ್ತನು ನಿನ್ನನ್ನು ಐಗುಪ್ತದ ಹುಣ್ಣುಗಳಿಂದಲೂ ಗಡ್ಡೆವ್ಯಾಧಿಯಿಂದಲೂ ಕಜ್ಜಿಯಿಂದಲೂ ಇಸಬಿನಿಂದ ಲೂ ನೀನು ವಾಸಿಯಾಗಕೂಡದ ಹಾಗೆ ಹೊಡೆ ಯುವನು. ಕರ್ತನು ನಿನ್ನನ್ನು ಹುಚ್ಚುತನದಿಂದಲೂ ಕುರುಡುತನದಿಂದಲೂ ಹೃದಯದ ವಿಸ್ಮಯದಿಂದಲೂ ಹೊಡೆಯುವನು. ಕುರುಡನು ಕತ್ತಲಲ್ಲಿ ತಡವರಿಸು ವಂತೆ ಮಧ್ಯಾಹ್ನದಲ್ಲಿ ತಡವರಿಸುತ್ತಾ ಇರುವಿ; ನಿನ್ನ ಮಾರ್ಗಗಳಲ್ಲಿ ಸಫಲವಾಗುವದಿಲ್ಲ; ನೀನು ಯಾವಾ ಗಲೂ ರಕ್ಷಿಸುವವನಿಲ್ಲದೆ ಬಲಾತ್ಕಾರವನ್ನೂ ಸುಲಿಗೆ ಯನ್ನೂ ಅನುಭವಿಸುವವನಾಗುವಿ. ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು; ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ; ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ. ನಿನ್ನ ಎತ್ತು ನಿನ್ನ ಕಣ್ಣುಗಳ ಮುಂದೆ ಕೊಯ್ಯಲ್ಪಟ್ಟಾಗ ನೀನು ಅದರಲ್ಲಿ ತಿನ್ನುವದಿಲ್ಲ; ನಿನ್ನ ಕತ್ತೆ ನಿನ್ನ ಕಣ್ಣುಗಳ ಮುಂದೆ ಬಲಾತ್ಕಾರವಾಗಿ ಒಯ್ಯಲ್ಪಟ್ಟು ನಿನಗೆ ಮತ್ತೆ ಸಿಕ್ಕುವದಿಲ್ಲ; ನಿನ್ನ ಕುರಿಗಳು ನಿನ್ನ ಶತ್ರುವಿಗೆ ಕೊಡಲ್ಪಡುವವು; ಅವುಗಳನ್ನು ರಕ್ಷಿಸುವದಕ್ಕೆ ಯಾರೂ ಇರುವದಿಲ್ಲ. ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು. ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ. ನಿನ್ನ ಕಣ್ಣುಗಳು ನೋಡುವ ನೋಟದಿಂದ ಹುಚ್ಚನಾಗುವಿ. ಕರ್ತನು ನಿನ್ನನ್ನು ಮೊಣಕಾಲುಗಳಲ್ಲಿಯೂ ಕಾಲು ಗಳಲ್ಲಿಯೂ ವಾಸಿಮಾಡಕೂಡದ ಕೆಟ್ಟ ಉರಿ ಹುಣ್ಣಿ ನಿಂದ ಅಂಗಾಲು ಮೊದಲುಗೊಂಡು ನೆತ್ತಿಯ ವರೆಗೆ ಹೊಡೆಯುವನು. ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ. ಇದಲ್ಲದೆ ದೇವರು ನಿನ್ನನ್ನು ನಡಿಸುವ ಎಲ್ಲಾ ಜನಾಂಗಗಳಲ್ಲಿ ವಿಸ್ಮಯಕ್ಕೂ ಗಾದೆಗೂ ಹಾಸ್ಯಕ್ಕೂ ಗುರಿಯಾಗುವಿ. ಬಹಳ ಬೀಜವನ್ನು ಹೊಲಕ್ಕೆ ತಂದು ಸ್ವಲ್ಪ ಕೂಡಿಸುವಿ; ಯಾಕಂದರೆ ಮಿಡತೆ ಅದನ್ನು ತಿಂದು ಬಿಡುವದು. ದ್ರಾಕ್ಷೇತೋಟಗಳನ್ನು ನೆಟ್ಟು ಕಾಪಾ ಡುವಿ; ಆದರೆ ದ್ರಾಕ್ಷಾರಸವನ್ನು ಕುಡಿಯುವದಿಲ್ಲ. ಹಣ್ಣು ಕೂಡಿಸುವದಿಲ್ಲ; ಯಾಕಂದರೆ ಹುಳ ಅದನ್ನು ತಿಂದುಬಿಡುವದು. ಎಣ್ಣೇ ಮರಗಳು ನಿನ್ನ ಎಲ್ಲಾ ಮೇರೆಗಳಲ್ಲಿ ಇರುವವು. ಆದರೆ ನೀನು ಎಣ್ಣೆ ಹಚ್ಚಿಕೊಳ್ಳುವದಿಲ್ಲ; ಯಾಕಂದರೆ ನಿನ್ನ ಎಣ್ಣೇ ಫಲಗಳು ಉದುರುವವು. ಕುಮಾರ ಕುಮಾರ್ತೆಯರನ್ನು ಪಡೆಯುವಿ; ಆದರೆ ಅವರ ಕೂಡ ಸಂತೋಷಿಸು ವದಿಲ್ಲ; ಯಾಕಂದರೆ ಅವರು ಸೆರೆಯಾಗಿ ಹೋಗು ವರು. ನಿನ್ನ ಎಲ್ಲಾ ಮರಗಳನ್ನೂ ಹೊಲದ ಪೈರನ್ನೂ ಈ ಮಿಡತೆ ತಿಂದುಬಿಡುವದು. ನಿನ್ನ ಮಧ್ಯದಲ್ಲಿರುವ ಪರವಾಸಿ ಮೇಲೆ ಮೇಲಕ್ಕೆ ನಿನ್ನ ಮೇಲೆ ಏರುವನು; ಆದರೆ ನೀನು ಕೆಳ ಕೆಳಗೆ ಇಳಿಯುವಿ. ಅವನು ನಿನಗೆ ಸಾಲಕೊಡುವನು; ನೀನು ಅವನಿಗೆ ಸಾಲ ಕೊಡುವದಿಲ್ಲ. ಅವನು ತಲೆಯಾಗುವನು, ನೀನು ಬಾಲವಾಗುವಿ. ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳದೆ ಆತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ನಿಯಮಗಳನ್ನೂ ಕೈಕೊಳ್ಳದೆ ಇದ್ದದರಿಂದ ಈ ಶಾಪಗಳೆಲ್ಲಾ ನಿನ್ನ ಮೇಲೆ ಬಂದು ನಿನ್ನನ್ನು ನಾಶಮಾಡುವ ವರೆಗೂ ನಿನ್ನನ್ನು ಹಿಂದಟ್ಟಿ ನಿನಗೆ ಪ್ರಾಪ್ತವಾಗುವವು. ಅವು ನಿನ್ನ ಮೇಲೆಯೂ ನಿನ್ನ ಸಂತತಿಯ ಮೇಲೆಯೂ ನಿತ್ಯವಾಗಿ ಗುರುತೂ ಅದ್ಭುತವೂ ಆಗಿರುವವು. ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದ ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು. ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು. ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು. ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು. ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ. ನಿನ್ನಲ್ಲಿ ಮೃದುವಾದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಯಾವನೋ ಅವನ ಕಣ್ಣು ತನ್ನ ಸಹೋದರನ ಕಡೆಗೂ ತನ್ನ ಮಗ್ಗುಲಲ್ಲಿರುವ ತನ್ನ ಹೆಂಡತಿಯ ಕಡೆಗೂ ಅವನು ಉಳಿಸಿಕೊಳ್ಳುವ ಮಕ್ಕಳ ಕಡೆಗೂ ಕಠಿಣವಾಗುವದು. ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ತನಗೆ ಸಾಕಾಗುವದಿಲ್ಲ ಅಂದುಕೊಂಡು ಅವನು ತಿನ್ನುವ ತನ್ನ ಮಕ್ಕಳ ಮಾಂಸದಲ್ಲಿ ಅವರೊಳಗೆ ಒಬ್ಬನಿಗಾದರೂ ಏನೂ ಕೊಡುವದಿಲ್ಲ. ನಿನ್ನಲ್ಲಿ ಮೃದುವಾದವಳೂ ಬಹಳ ಸೂಕ್ಷ್ಮಗುಣವುಳ್ಳವಳೂ ಯಾವಳೋ ಮೃದುತನ ದಿಂದಲೂ ಸೂಕ್ಷ್ಮಗುಣದಿಂದಲೂ ನೆಲಕ್ಕೆ ಅಂಗಾಲನ್ನು ನಿಲ್ಲಿಸಲಾರದವಳು ಯಾವಳೋ ಅವಳು ತನ್ನ ಮಗ್ಗುಲ ಲ್ಲಿರುವ ಗಂಡನ ಕಡೆಗೂ ತನ್ನ ಮಗನ, ಮಗಳ ಕಡೆಗೂ ತನ್ನ ಕಾಲುಗಳ ನಡುವೆಯಿಂದ ಬರುವ ಶಿಶುವಿನ ಕಡೆಗೂ ತಾನು ಹೆತ್ತಮಕ್ಕಳ ಕಡೆಗೂ ಕಠಿಣ ಕಣ್ಣುಳ್ಳವಳಾಗಿರುವಳು; ಯಾಕಂದರೆ ಎಲ್ಲಾದರ ಕೊರತೆಯಲ್ಲಿಯೂ ಮುತ್ತಿಗೆಯಲ್ಲಿಯೂ ನಿನ್ನ ಶತ್ರು ನಿನಗೆ ನಿನ್ನ ಬಾಗಲುಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ ಅವರನ್ನು ಗುಪ್ತವಾಗಿ ತಿಂದು ಬಿಡುವಳು. ನಿನ್ನ ದೇವರಾದ ಕರ್ತನೆಂಬ ಈ ಘನವುಳ್ಳ ಭಯಂಕರವಾದ ಹೆಸರಿಗೆ ಭಯಪಡಬೇಕೆಂದು ಈ ಪುಸ್ತಕದಲ್ಲಿ ಬರೆದಿರುವ ಈ ನ್ಯಾಯಪ್ರಮಾಣದ ಮಾತುಗಳನ್ನು ಕಾಪಾಡದೆ, ಕೈಕೊಳ್ಳದೆ ಹೋದರೆ ಕರ್ತನು ನಿನ್ನ ಬಾಧೆಗಳನ್ನೂ ನಿನ್ನ ಸಂತತಿಯ ಬಾಧೆಗಳನ್ನೂ ಆಶ್ಚರ್ಯವಾಗ ಮಾಡುವನು; ಅವು ದೊಡ್ಡದಾದ ಮತ್ತು ಸ್ಥಿರವಾದ ಬಾಧೆಗಳೂ ಘೋರ ವಾದ ಮತ್ತು ಸ್ಥಿರವಾದ ರೋಗಗಳೂ ಆಗುವವು. ಇದಲ್ಲದೆ ನೀನು ಹೆದರಿಕೊಂಡ ಐಗುಪ್ತದ ರೋಗ ಗಳನ್ನೆಲ್ಲಾ ಆತನು ತಿರಿಗಿ ನಿನ್ನ ಮೇಲೆ ಬರಮಾಡು ವನು; ಅವು ನಿನ್ನನ್ನು ಅಂಟಿಕೊಳ್ಳುವವು. ನೀನು ಪೂರ್ಣವಾಗಿ ನಾಶವಾಗುವ ವರೆಗೆ ಈ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆಯದ ರೋಗಗಳನ್ನೂ ಬೇನೆಗಳನ್ನೂ ಕರ್ತನು ನಿನ್ನ ಮೇಲೆ ತರುವನು. ಆಗ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ಇರುವದರಿಂದ ನೀವು ಅಸಂಖ್ಯವಾದ ಆಕಾಶದ ನಕ್ಷತ್ರಗಳ ಹಾಗಿದ್ದದ್ದಕ್ಕೆ ಬದಲಾಗಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ. ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ. ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ. ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು. ನಿನ್ನ ಜೀವವು ನಿನ್ನ ಮುಂದೆ ತೂಗಾಡುವದು. ರಾತ್ರಿ ಹಗಲು ನಿನ್ನ ಜೀವನಕ್ಕೆ ನಿಶ್ಚಯವಿಲ್ಲದೆ ಹೆದರುವಿ. ನಿನ್ನ ಹೃದಯದಲ್ಲಿ ಆಗುವ ಹೆದರಿಕೆಯ ನಿಮಿತ್ತವೂ ನಿನ್ನ ಕಣ್ಣುಗಳು ನೋಡುವ ನೋಟದ ನಿಮಿತ್ತವೂ ಮುಂಜಾನೆಯಲ್ಲಿ--ಅಯ್ಯೋ, ಸಂಜೆ ಆಗ ಬೇಕು ಅನ್ನುವಿ. ಸಂಜೆಯಲ್ಲಿ--ಅಯ್ಯೋ, ಮುಂಜಾನೆ ಆಗಬೇಕು ಅನ್ನುವಿ.ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ. ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.
- Deuteronomy 29:22–28 ಧರ್ಮೋಪದೇಶಕಾಂಡ 29:22–28ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ ದೂರ ದೇಶದಿಂದ ಬರುವ ಅನ್ಯನೂ ಆ ದೇಶದ ಬಾಧೆಗಳನ್ನೂ ಕರ್ತನು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡಿ ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ-- ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು. ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು, ಹೋಗಿ ಬೇರೆ ದೇವರುಗಳನ್ನೂ ತಮಗೆ ತಿಳಿಯದಂಥ, ಆತನು ತಮಗೆ ನೇಮಿಸದಂಥ ದೇವರುಗಳನ್ನೂ ಸೇವಿಸಿ ಅಡ್ಡಬಿದ್ದ ದರಿಂದ ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು. ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ.ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
- Jeremiah 16:16 ಯೆರೆಮೀಯ 16:16ಇಗೋ, ನಾನು ಅನೇಕ ವಿಾನುಗಾರರನ್ನು ಕಳುಹಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಇವರು ಅವರನ್ನು ಹಿಡಿಯುವರು; ಆಮೇಲೆ ಅನೇಕ ಬೇಟೆ ಗಾರರನ್ನು ಕಳುಹಿಸುವೆನು; ಇವರು ಎಲ್ಲಾ ಬೆಟ್ಟಗುಡ್ಡಗಳ ಮೇಲೆಯೂ ಎಲ್ಲಾ ಗುಡ್ಡಗಳ ಮೇಲೆಯೂ ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡು ವರು.
- Deuteronomy 31:16–29 ಧರ್ಮೋಪದೇಶಕಾಂಡ 31:16–29ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು. ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು. ಅವರು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತವೂ ಅನ್ಯದೇವರುಗಳ ಕಡೆಗೆ ತಿರುಗಿದ್ದರಿಂದಲೂ ನಾನು ಆ ದಿವಸದಲ್ಲಿ ನನ್ನ ಮುಖವನ್ನು ಖಂಡಿತವಾಗಿ ಮರೆಮಾಡುವೆನು. ಹೀಗಿರುವದರಿಂದ ಈಗ ಈ ಹಾಡನ್ನು ಬರೆದು ಕೊಳ್ಳಿರಿ; ಇಸ್ರಾಯೇಲ್ ಮಕ್ಕಳಿಗೆ ಅದನ್ನು ಕಲಿಸು; ಇಸ್ರಾಯೇಲ್ ಮಕ್ಕಳಲ್ಲಿ ಈ ಹಾಡು ನನಗೆ ಸಾಕ್ಷಿಯಾ ಗಿರುವ ಹಾಗೆ ಅದನ್ನು ಅವರ ಬಾಯಿಗಳಲ್ಲಿ ಇಡು. ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ ಅವರು ತಿಂದು ತೃಪ್ತಿಯಾಗಿ ಕೊಬ್ಬಿದವ ರಾದಾಗ ಅವರು ಅನ್ಯದೇವರುಗಳ ಕಡೆಗೆ ತಿರುಗಿ ಕೊಂಡು ಅವುಗಳನ್ನು ಸೇವಿಸಿ ನನಗೆ ಕೋಪವನ್ನೆಬ್ಬಿಸಿ ನನ್ನ ಒಡಂಬಡಿಕೆಯನ್ನು ವಿಾರುವರು. ಅನಂತರ ಬಹಳ ಕೇಡುಗಳೂ ಇಕ್ಕಟ್ಟುಗಳೂ ಅವರಿಗೆ ಸಂಭವಿಸು ವಾಗ ಈ ಹಾಡು ಅವರಿಗೆ ವಿರೋಧವಾಗಿ ಸಾಕ್ಷಿಯಾಗಿ ಉತ್ತರ ಕೊಡುವದು; ಯಾಕಂದರೆ ಅದು ಅವರ ಸಂತತಿಯ ಬಾಯಿಯಲ್ಲಿಂದ ಮರೆತುಹೋಗುವದಿಲ್ಲ; ನಾನು ಪ್ರಮಾಣಮಾಡಿದ ದೇಶದಲ್ಲಿ ಅವರನ್ನು ತರುವದಕ್ಕಿಂತ ಮುಂಚೆ ಅವರು ಈಹೊತ್ತು ಮಾಡುವ ಕಲ್ಪನೆಗಳನ್ನು ನಾನು ಬಲ್ಲೆನು. ಆದದರಿಂದ ಮೋಶೆ ಅದೇ ದಿವಸದಲ್ಲಿ ಈ ಹಾಡನ್ನು ಬರೆದು ಇಸ್ರಾಯೇಲ್ ಮಕ್ಕಳಿಗೆ ಕಲಿಸಿದನು. ಆತನು ನೂನನ ಮಗನಾದ ಯೆಹೋಶುವನಿಗೆ ಆಜ್ಞೆಕೊಟ್ಟು--ಬಲವಾಗಿರು; ಧೈರ್ಯವಾಗಿರು; ನಾನು ಇಸ್ರಾಯೇಲ್ ಮಕ್ಕಳಿಗೆ ಪ್ರಮಾಣಮಾಡಿದ ದೇಶಕ್ಕೆ ನೀನು ತರುವಿ; ನಾನು ನಿನ್ನ ಸಂಗಡ ಇರುವೆನು ಅಂದನು. ಇದಲ್ಲದೆ ಮೋಶೆ ಈ ನ್ಯಾಯಪ್ರಮಾಣದ ವಾಕ್ಯಗಳನ್ನು ಪುಸ್ತಕದಲ್ಲಿ ಬರೆದು ಮುಗಿಸಿದಾಗ ಮೋಶೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಿಗೆ ಆಜ್ಞಾಪಿಸಿ-- ನ್ಯಾಯ ಪ್ರಮಾಣದ ಈ ಪುಸ್ತಕವನ್ನು ತಕ್ಕೊಂಡು ನಿಮ್ಮ ದೇವ ರಾದ ಕರ್ತನ ಒಡಂಬಡಿಕೆಯ ಮಂಜೂಷದ ಒಂದು ಪಾರ್ಶ್ವದಲ್ಲಿ ಇಡಿರಿ; ಅದು ನಿಮಗೆ ವಿರೋಧವಾದ ಸಾಕ್ಷಿಗೆ ಅಲ್ಲಿ ಇರಲಿ. ನಿನ್ನ ದ್ರೋಹವನ್ನೂ ನಿನ್ನ ಬಗ್ಗದ ಕುತ್ತಿಗೆಯನ್ನೂ ನಾನು ಬಲ್ಲೆನು; ಇಗೋ, ಈಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರು ವಾಗಲೇ ಕರ್ತನಿಗೆ ದ್ರೋಹಮಾಡಿದವರಾದಿರಿ; ನಾನು ಸತ್ತ ಮೇಲೆ ಇನ್ನೇನ್ನಾಗುವದು? ನಿಮ್ಮ ಗೋತ್ರಗಳ ಎಲ್ಲಾ ಹಿರಿಯರನ್ನೂ ನಿಮ್ಮ ಅಧಿಕಾರಿ ಗಳನ್ನೂ ನನ್ನ ಬಳಿಗೆ ಕೂಡಿಸಿರಿ; ಆಗ ಈ ಮಾತುಗಳನ್ನು ಅವರು ಕೇಳುವಹಾಗೆ ಆಡುವೆನು; ಆಕಾಶವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆಯುವೆನು. ನಾನು ಸತ್ತ ಮೇಲೆ ನೀವು ಪೂರ್ಣವಾಗಿ ನಿಮ್ಮನ್ನು ನೀವು ಕೆಡಿಸಿ ಕೊಂಡು ನಾನು ನಿಮಗೆ ಆಜ್ಞಾಪಿಸಿದ ಮಾರ್ಗದಿಂದ ತೊಲಗಿ ಹೋಗುವಿರೆಂದು ನಾನು ಬಲ್ಲೆನು; ನೀವು ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ನಿಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನೆಬ್ಬಿಸುವ ಕಾರಣ ಕಡೇ ದಿವಸಗಳಲ್ಲಿ ನಿಮಗೆ ಕೇಡುಸಂಭವಿಸುವದು ಎಂದು ಹೇಳಿದನು.ಆಗ ಮೋಶೆ ಇಸ್ರಾಯೇಲ್ ಸಭೆಗೆ ಕೇಳುವ ಹಾಗೆ ಈ ಹಾಡಿನ ಮಾತುಗಳನ್ನು ಹೇಳಿ ಮುಗಿಸಿದನು.
- Ezekiel 32:3 ಯೆಹೆಜ್ಕೇಲನು 32:3ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಆದುದ ರಿಂದ ನಾನು ಗುಂಪಾಗಿ ಕೂಡಿದ ಬಹಳ ಜನಾಂಗಗಳ ಮೇಲೆ ಬಲೆಯನ್ನು ಬೀಸುವೆನು; ಅವರು ನಿನ್ನನ್ನು ನನ್ನ ಬಲೆಯಲ್ಲಿ ಮೇಲಕ್ಕೆಳೆಯುವರು.
- Revelation 3:19 ಪ್ರಕಟನೆ 3:19ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.
- Jeremiah 44:4 ಯೆರೆಮೀಯ 44:4ಆದಾಗ್ಯೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಬೆಳಿಗ್ಗೆ ಎದ್ದು ಕಳುಹಿಸಿ--ಓ, ನಾನು ಹಗೆಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇ ಬೇಡಿರೆಂದು ಹೇಳಿದೆನು.
- Leviticus 26:14–46 ಯಾಜಕಕಾಂಡ 26:14–46ನೀವು ನನ್ನ ಮಾತನ್ನು ಕೇಳದೆ ಈ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ ನನ್ನ ನಿಯಮಗಳನ್ನು ನೀವು ಅಸಡ್ಡೆಮಾಡಿದರೆ ಇಲ್ಲವೆ ನನ್ನ ನಿರ್ಣಯಗಳಲ್ಲಿ ನಿಮ್ಮ ಪ್ರಾಣವು ಅಸಹ್ಯಪಟ್ಟರೆ ನೀವು ನನ್ನ ಒಡಂಬಡಿ ಕೆಯನ್ನು ವಿಾರಿ ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ ನಾನು ಸಹ ಇದನ್ನು ನಿಮಗೆ ಮಾಡು ವೆನು; ನಿಮ್ಮ ಮೇಲೆ ಭೀತಿಯನ್ನೂ ಕಣ್ಣುಗಳನ್ನು ಕ್ಷೀಣಿಸು ವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗು ವಂತೆಯೂ ಮಾಡುವ ಕ್ಷಯರೋಗವನ್ನು ಚಳಿಜ್ವರ ವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ನಿಮ್ಮ ಬೀಜವನ್ನು ಬಿತ್ತುವಿರಿ; ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು. ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ. ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು. ನಿಮ್ಮ ಬಲದ ಗರ್ವವನ್ನು ಮುರಿದು ಹಾಕಿ ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಹಿತ್ತಾಳೆಯಂತೆಯೂ ಮಾಡುವೆನು. ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದು ಹೋಗುವದು. ನಿಮ್ಮ ಭೂಮಿಯು ತನ್ನ ಬೆಳೆಯನ್ನೂ ಮರಗಳ ಫಲಗಳನ್ನೂ ಕೊಡದೆ ಇರುವದು. ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧ ವಾಗಿ ನಡೆದರೆ ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ನಿಮ್ಮ ಮೇಲೆ ವ್ಯಾಧಿಗಳನ್ನು ಬರಮಾಡುವೆನು. ನಿಮ್ಮ ಮೇಲೆ ಕಾಡುಮೃಗಗಳು ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದ ವರನ್ನಾಗಿ ಮಾಡಿ ನಿಮ್ಮ ದನಗಳನ್ನು ತಿಂದುಬಿಡುವವು ಮತ್ತು ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವವು; ನಿಮ್ಮ ಮಾರ್ಗಗಳು ಹಾಳಾಗಿಹೋಗುವವು. ನನ್ನಿಂದಾಗುವ ಇವುಗಳಿಂದ ನೀವು ಶಿಕ್ಷಿತರಾಗದೆ ನನಗೆ ವಿರೋಧವಾಗಿ ನಡೆದರೆ ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು. ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ. ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿ ದಾಗ ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ; ನಿಮಗೆ ತೃಪ್ತಿಯಾಗುವದಿಲ್ಲ. ಇದೆಲ್ಲಾ ಆದಾಗ್ಯೂ ನೀವು ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು. ನೀವು ನಿಮ್ಮ ಕುಮಾರ ಕುಮಾರ್ತೆಯರ ಮಾಂಸವನ್ನು ತಿನ್ನುವಿರಿ. ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳುಮಾಡಿ ನಿಮ್ಮ ಪ್ರತಿಮೆಗಳನ್ನು ಕಡಿದುಹಾಕಿ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು; ನನ್ನ ಪ್ರಾಣವು ನಿಮ್ಮನ್ನು ಹೇಸಿಕೊಳ್ಳು ವದು. ನಿಮ್ಮ ಪಟ್ಟಣಗಳನ್ನು ಕೆಡವಿಹಾಕಿ, ನಿಮ್ಮ ಪರಿಶುದ್ಧ ಸ್ಥಳಗಳನ್ನು ಹಾಳುಮಾಡಿ, ನಿಮ್ಮ ಸುವಾಸನೆ ಗಳನ್ನು ಮೂಸಿ ನೋಡದೆ ಇರುವೆನು. ನಾನು ದೇಶವನ್ನು ಹಾಳುಮಾಡುವೆನು; ಅದರಲ್ಲಿ ವಾಸ ವಾಗುವ ನಿಮ್ಮ ಶತ್ರುಗಳು ಅದಕ್ಕೆ ಆಶ್ಚರ್ಯಪಡುವರು. ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು. ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವ ವರೆಗೂ ಭೂಮಿ ಹಾಳಾಗಿರುವ ಎಲ್ಲಾ ದಿನಗಳಲ್ಲಿಯೂ ತನ್ನ ಸಬ್ಬತ್ತುಗಳನ್ನು ಅನುಭವಿಸುವದು; ಆಗ ಭೂಮಿ ವಿಶ್ರಮಿಸಿಕೊಂಡು ತನ್ನ ಸಬ್ಬತ್ತುಗಳನ್ನು ಅನುಭವಿ ಸುವದು. ನೀವು ಅದರಲ್ಲಿ ವಾಸವಾಗಿದ್ದಾಗ ನಿಮ್ಮ ಸಬ್ಬತ್ತುಗಳಲ್ಲಿ ಅದಕ್ಕೆ ವಿಶ್ರಾಂತಿ ದೊರೆಯದ ಕಾರಣ ಅದು ಹಾಳುಬಿದ್ದಿರುವ ಕಾಲವೆಲ್ಲಾ ಅನುಭವಿಸುವದು. ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು. ಓಡಿಸುವವ ನಿಲ್ಲದೆ ಒಬ್ಬರ ಮೇಲೊಬ್ಬರು ಕತ್ತಿಯ ಭಯದಿಂದಾದ ಹಾಗೆ ಬೀಳುವರು; ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವದು ನಿಮ್ಮಿಂದಾಗದು. ಜನಾಂಗಗ ಳೊಳಗೆ ನಾಶವಾಗುವಿರಿ; ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ತಿಂದುಬಿಡುವದು. ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು; ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು. ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವ ರಿಗೆ ಮಾಡಿದ ನನ್ನ ಒಡಂಬಡಿಕೆಯನ್ನೂ ಅವರ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು. ಅವರು ದೇಶದೊಳಗಿಂದ ಹೊರಡಿಸಲ್ಪಟ್ಟು ಅವರಿಲ್ಲದೆ ಹಾಳಾದ ವೇಳೆಯಲ್ಲಿ ಅದು ತನ್ನ ಸಬ್ಬತ್ತು ಗಳನ್ನು ಅನುಭವಿಸುವದು; ಅವರು ತಮ್ಮ ಅಕ್ರಮ ದಿಂದಾದ ಶಿಕ್ಷೆಗೆ ಒಪ್ಪಿಕೊಳ್ಳುವರು; ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ಅಸಹ್ಯಿಸಿದ್ದರಿಂದಲೇ. ಆದಾಗ್ಯೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ತಳ್ಳಿಬಿಡದೆಯೂ ಅಸಹ್ಯಿಸದೆಯೂ ಸಂಪೂರ್ಣವಾಗಿ ನಾಶಮಾಡದೆಯೂ ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು; ಅವರ ದೇವರಾಗಿರುವ ಕರ್ತನು ನಾನೇ. ನಾನು ಅವರಿಗೆ ದೇವರಾಗಿರುವದರಿಂದ ಜನಾಂಗಗಳ ಮುಂದೆ ಐಗುಪ್ತದೇಶದಿಂದ ಹೊರಗೆ ಬರಮಾಡಿದ ಅವರ ಪಿತೃಗಳ ಒಡಂಬಡಿಕೆಯನ್ನು ಅವರಿಗೊಸ್ಕರ ಜ್ಞಾಪಕ ಮಾಡಿಕೊಳ್ಳುವೆನು; ನಾನೇ ಕರ್ತನು.ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ. ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ.
- 2 Kings 17:13–18 2 ಅರಸುಗಳು 17:13–18ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು. ಆದರೆ ಅವರು ಕೇಳ ದೆಯೂ ತಮ್ಮ ದೇವರಾದ ಕರ್ತನಲ್ಲಿ ನಂಬಿಕೆ ಇಡ ದೆಯೂ ತಮ್ಮ ಪಿತೃಗಳ ಕುತ್ತಿಗೆಯ ಹಾಗೆ ತಮ್ಮ ಕುತ್ತಿಗೆಯನ್ನು ಕಠಿಣಪಡಿಸಿ ಆತನ ಕಟ್ಟಳೆಗಳನ್ನೂ ಆತನು ತಮ್ಮ ಪಿತೃಗಳ ಸಂಗಡ ಮಾಡಿದ ಆತನ ಒಡಂಬಡಿಕೆಯನ್ನೂ ಆತನು ಅವರಿಗೆ ಹೇಳಿದ ಸಾಕ್ಷಿ ಗಳನ್ನೂ ಅಲಕ್ಷ್ಯಮಾಡಿ ವ್ಯರ್ಥವಾದದ್ದನ್ನು ಹಿಂಬಾ ಲಿಸಿ ವ್ಯರ್ಥವಾದವರಾಗಿ -- ನೀವು ಅವರ ಹಾಗೆ ಮಾಡಬೇಡಿರೆಂದು ಕರ್ತನು ಅವರಿಗೆ ಆಜ್ಞಾಪಿಸಿದರೂ ಅವರ ಸುತ್ತಲಿರುವ ಅನ್ಯಜನಾಂಗಗಳ ಹಿಂದೆ ಹೋದರು. ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿ ತಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ಬೆಂಕಿಯಲ್ಲಿ ದಾಟಮಾಡಿ ಕಣಿಗಳನ್ನೂ ಶಕುನಗಳನ್ನೂ ಬಳಸಿ ಕರ್ತ ನಿಗೆ ಕೋಪ ಬರುವಂತೆ ಆತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು. ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಬಹುಕೋಪ ಗೊಂಡು ಅವರನ್ನು ತನ್ನ ಸಮ್ಮುಖದಿಂದ ತೆಗೆದುಹಾಕಿ ದನು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿದದ್ದಿಲ್ಲ.
- Ezekiel 17:20 ಯೆಹೆಜ್ಕೇಲನು 17:20ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ; ಆಗ ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು; ನಾನು ಅವನನ್ನು ಬಾಬೆಲಿಗೆ ಒಯ್ದು ಅವನು ನನಗೆ ವಿರೋಧವಾಗಿ ಮಾಡಿರುವ ಅಪರಾಧದ ವಿಷಯದಲ್ಲಿ ನಾನು ಅವರೊಂದಿಗೆ ವಾದಿಸುವೆನು.
- Deuteronomy 32:15–43 ಧರ್ಮೋಪದೇಶಕಾಂಡ 32:15–43ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು. ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು. ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು. ನಿನ್ನನ್ನು ಹುಟ್ಟಿಸಿದ ಬಂಡೆಯನ್ನು ನೆನಸದೆ ನಿನ್ನನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿದ್ದಿ. ಕರ್ತನು ಅದನ್ನು ನೋಡಿ ಕೋಪದಿಂದ ತನ್ನ ಕುಮಾರ ಕುಮಾರ್ತೆಯರನ್ನು ಅಸಹ್ಯಿಸಿಕೊಂಡನು. ಆತನು--ನನ್ನ ಮುಖವನ್ನು ಅವರಿಗೆ ಮರೆ ಮಾಡುವೆನು; ಅವರ ಅಂತ್ಯವು ಏನೆಂದು ನೋಡು ವೆನು; ಅವರು ಮೂರ್ಖ ಸಂತತಿಯೇ, ನಂಬಿಕೆಯಿಲ್ಲದ ಮಕ್ಕಳೇ. ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು. ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು. ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿ ಡುವೆನು; ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು. ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು. ಹೊರಗೆ ಕತ್ತಿಯೂ ಒಳಗೆ ಭಯವೂ ಪ್ರಾಯ ಸ್ಥನನ್ನೂ ಕನ್ನಿಕೆಯನ್ನೂ ನರೇಕೂದಲಿನವನ ಸಂಗಡ ಮೊಲೆ ಕೂಸನ್ನೂ ಸಂಹರಿಸುವವು. ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು. ಅವರ ಶತ್ರುಗಳು--ನಮ್ಮ ಕೈಗಳು ಉನ್ನತವಾಗಿವೆ ಎಂದೂ ಕರ್ತನು ಇವುಗಳನ್ನೆಲ್ಲಾ ಮಾಡಲಿಲ್ಲವೆಂದೂ ಅಂದುಕೊಂಡು ಗರ್ವದಿಂದ ನಡೆಯುವ ಶತ್ರುವಿನ ಕೋಪಕ್ಕೆ ಹೆದರದೆ ಹೋದೆನು. ಅವರು ಆಲೋಚನೆಯಿಲ್ಲದ ಜನಾಂಗವೇ; ಅವರಲ್ಲಿ ಗ್ರಹಿಕೆ ಇಲ್ಲ. ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು! ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು? ನಮ್ಮ ಬಂಡೆಯ ಹಾಗೆ ಅವರ ಬಂಡೆ ಅಲ್ಲ. ಇದಕ್ಕೆ ನಮ್ಮ ಶತ್ರುಗಳೇ ಸಾಕ್ಷಿ. ಅವರ ದ್ರಾಕ್ಷೇಗಿಡ ಸೊದೋಮಿನ ದ್ರಾಕ್ಷೇಗಿಡ ದಿಂದಲೂ ಗೊಮೋರದ ಹೊಲಗಳೊಳಗಿಂದಲೂ ಅವೆ; ಅವರ ಹಣ್ಣುಗಳು ವಿಷದ ಹಣ್ಣುಗಳು; ಅವರ ಗೊಂಚಲುಗಳು ಕಹಿಯಾಗಿವೆ. ಅವರ ದ್ರಾಕ್ಷಾರಸವು ಘಟಸರ್ಪಗಳ ವಿಷವೂ ಹಾವುಗಳ ಕ್ರೂರ ವಿಷವೂ ಆಗಿದೆ. ಅದು ನನ್ನ ಸಂಗಡ ಬಚ್ಚಿಡಲ್ಪಟ್ಟದ್ದಾಗಿದ್ದು ನನ್ನ ಉಗ್ರಾಣಗಳಲ್ಲಿ ಮುದ್ರೆ ಹಾಕಲ್ಪಟ್ಟದ್ದಲ್ಲವೋ? ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ. ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು. ಆಗ ಅವನು ಹೇಳುವದೇನಂದರೆ--ಅವರ ದೇವರುಗಳು ಎಲ್ಲಿ? ಅವರು ನಂಬಿಕೊಂಡಂಥ, ಅವರ ಬಲಿಗಳ ಕೊಬ್ಬನ್ನು ತಿಂದಂಥ, ಅವರ ಪಾನದ ಅರ್ಪಣೆಗಳ ದ್ರಾಕ್ಷಾರಸ ಕುಡಿದಂಥ ಅವರ ಬಂಡೆಯು ಎಲ್ಲಿ? ಅವರು ಎದ್ದು ನಿಮಗೆ ಸಹಾಯ ಮಾಡಲಿ; ನಿಮಗೋಸ್ಕರ ಕಾವಲಾಗಲಿ. ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ. ನಾನು ಆಕಾಶಕ್ಕೆ ನನ್ನ ಕೈಯನ್ನು ಎತ್ತಿ--ನಾನು ನಿತ್ಯವಾಗಿ ಬದುಕುತ್ತೇನೆಂದು ಹೇಳುತ್ತೇನೆ. ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು. ಸತ್ತವರ ಮತ್ತು ಸೆರೆಯವರ ರಕ್ತದಿಂದಲೂ ಆರಂಭದ ಶತ್ರುವಿನ ಪ್ರತೀಕಾರದಿಂದಲೂ ನನ್ನ ಬಾಣಗಳನ್ನು ರಕ್ತದಿಂದ ಅಮಲೇರುವಂತೆ ಮಾಡು ವೆನು. ನನ್ನ ಕತ್ತಿ ಮಾಂಸವನ್ನು ತಿನ್ನುವದು. ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.