Hosea · chapter 7 · verse 5
Hosea 7:5 in Kannada
ನಮ್ಮ ಅರಸನ ದಿನದಲ್ಲಿ ಪ್ರಧಾನರು ದ್ರಾಕ್ಷಾರಸದ ಬುದ್ದಲಿಗಳಿಂದ ಅಸ್ವಸ್ಥರಾ ಗುತ್ತಾರೆ, ಅವನು ಪರಿಹಾಸ್ಯಗಾರರ ಸಂಗಡ ತನ್ನ ಕೈಚಾಚುತ್ತಾನೆ.
Namma arasana dinadalli pradhaanaru draakshaarasada buddaligalinda asvastharaa guttaare, avanu parihaasyagaarara sangada tanna kaichaachuttaane.
Hosea 7:5 in English
- King James Version (KJV)
- In the day of our king the princes have made [him] sick with bottles of wine; he stretched out his hand with scorners.
- World English Bible (WEB)
- On the day of our king, the princes made themselves sick with the heat of wine. He joined his hand with mockers.
- American Standard Version (ASV)
- On the day of our king the princes made themselves sick with the heat of wine; he stretched out his hand with scoffers.
- Bible in Basic English (BBE)
- On the day of our king, the rulers made him ill with the heat of wine; his hand was stretched out with the men of pride.
- Darby Translation (DBY)
- In the day of our king, the princes made themselves sick with the heat of wine: he stretched out his hand to scorners.
- Webster's Bible (WBS)
- In the day of our king the princes have made [him] sick with bottles of wine; he stretched out his hand with scorners.
- Young's Literal Translation (YLT)
- A day of our king! Princes have polluted themselves [with] the poison of wine, He hath drawn out his hand with scorners.
Read in context
- 3ಅವರು ತಮ್ಮ ಕೆಟ್ಟತನದಿಂದ ಅರಸನನ್ನೂ ಸುಳ್ಳುಗ ಳಿಂದ ಪ್ರಧಾನರನ್ನೂ ಸಂತೋಷಪಡಿಸುತ್ತಾರೆ.
- 4ಅವರೆ ಲ್ಲರೂ ವ್ಯಭಿಚಾರಿಗಳು; ರೊಟ್ಟಿಗಾರನು ಬಿಸಿಮಾಡಿದ ಒಲೆಯ ಹಾಗೆ ಇದ್ದಾರೆ, ಅವನು ಹಿಟ್ಟು ನಾದಿದ ಮೇಲೆ ಅದು ಹುಳಿಯಾಗುವ ತನಕ ಬಿಸಿಮಾಡುವ ದನ್ನು ಬಿಟ್ಟುಬಿಡುತ್ತಾನೆ.
- 5ನಮ್ಮ ಅರಸನ ದಿನದಲ್ಲಿ ಪ್ರಧಾನರು ದ್ರಾಕ್ಷಾರಸದ ಬುದ್ದಲಿಗಳಿಂದ ಅಸ್ವಸ್ಥರಾ ಗುತ್ತಾರೆ, ಅವನು ಪರಿಹಾಸ್ಯಗಾರರ ಸಂಗಡ ತನ್ನ ಕೈಚಾಚುತ್ತಾನೆ.
- 6ಅವರು ಹೊಂಚು ಹಾಕಿಕೊಂಡಿ ರುವಾಗ ತಮ್ಮ ಹೃದಯವನ್ನು ಅವರು ಒಲೆಯ ಹಾಗೆ ಸಿದ್ಧಮಾಡಿದ್ದಾರೆ; ಅವರ ರೊಟ್ಟಿಗಾರನು ರಾತ್ರಿ ಯೆಲ್ಲಾ ನಿದ್ರೆ ಮಾಡುತ್ತಾನೆ, ಬೆಳಿಗ್ಗೆ ಅದು ಪ್ರಜ್ವಲಿ ಸುವ ಬೆಂಕಿಯ ಹಾಗೆ ಉರಿಯುತ್ತದೆ.
- 7ಅವರೆಲ್ಲರೂ ಒಲೆಯ ಹಾಗೆ ಬಿಸಿಯಾಗಿದ್ದಾರೆ; ತಮ್ಮ ನ್ಯಾಯಾ ಧಿಪತಿಗಳನ್ನು ನುಂಗಿಬಿಟ್ಟಿದ್ದಾರೆ; ಅವರ ಅರಸುಗಳೆಲ್ಲಾ ಬಿದ್ದು ಹೋಗಿದ್ದಾರೆ; ಅವರಲ್ಲಿ ಒಬ್ಬನಾದರೂ ನನ್ನನ್ನು ಪ್ರಾರ್ಥಿಸುವದೇ ಇಲ್ಲ.
Cross references
- 1 Peter 4:3–4 1 ಪೇತ್ರನು 4:3–4ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು. ತಾವು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಅವರೊಂದಿಗೆ ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯ ಪಟ್ಟು ನಿಮ್ಮನ್ನು ದೂಷಿಸುತ್ತಾರೆ.
- Isaiah 28:1 ಯೆಶಾಯ 28:1ಎಫ್ರಾಯಾಮ್ಯರ ಕುಡುಕರ ಗರ್ವದ ಕಿರೀಟಕ್ಕೆ ಅಯ್ಯೋ! ದ್ರಾಕ್ಷಾರಸದಿಂದ ಅಮಲೇರಿದವರ ಕೊಬ್ಬುಳ್ಳ ತಗ್ಗಿನ ತಲೆಯ ಮೇಲಿ ರುವ ಅವರ ಅಹಂಕಾರದ ಕಿರೀಟವು ಬಾಡಿದ ಹೂವಾಗಿದೆ.
- Daniel 5:23 ದಾನಿಯೇಲನು 5:23ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
- Psalm 1:1 ಕೀರ್ತನೆಗಳು 1:1ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ
- Ephesians 5:18 ಎಫೆಸದವರಿಗೆ 5:18ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.
- Genesis 40:20 ಆದಿಕಾಂಡ 40:20ಮೂರನೆಯ ದಿನದಲ್ಲಿ ಫರೋಹನ ಜನನದ ದಿನವಾಗಿದ್ದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯ ಪಾನದಾಯಕನನ್ನೂ ಮುಖ್ಯ ರೊಟ್ಟಿಗಾರನನ್ನೂ ತನ್ನ ಸೇವಕರ ಮುಂದೆ ನಿಲ್ಲಿಸಿದನು.
- Proverbs 20:1 ಜ್ಞಾನೋಕ್ತಿಗಳು 20:1ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ. ಇದ ರಿಂದ ಮೋಸಹೋದವನು ಜ್ಞಾನಿಯಲ್ಲ.
- Isaiah 28:7–8 ಯೆಶಾಯ 28:7–8ಆದರೆ ಇವರು ಸಹ ದ್ರಾಕ್ಷಾರಸದಿಂದ ತಪ್ಪಿ ಮಧ್ಯದಿಂದ ಮೋಸಹೋಗಿದ್ದಾರೆ; ಯಾಜಕನೂ ಪ್ರವಾದಿಯೂ ಮದ್ಯದಿಂದ ತಪ್ಪಿ ದ್ರಾಕ್ಷಾರಸದ ವಶ ವಾಗಿದ್ದು ಮದ್ಯದಿಂದ ಮೋಸಹೋಗಿದ್ದಾರೆ; ದರ್ಶನ ದಲ್ಲಿ ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ. ಮೇಜುಗಳೆಲ್ಲಾ ಸ್ಥಳ ಉಳಿಯದ ಹಾಗೆ ಅಸಹ್ಯವಾದ ಕಕ್ಕುವಿಕೆಯಿಂದ ತುಂಬಿವೆ.
- Habakkuk 2:15–16 ಹಬಕ್ಕೂಕ 2:15–16ತನ್ನ ನೆರೆಯವ ನಿಗೆ ಕುಡಿಯಕೊಟ್ಟು ನಿನ್ನ ಬುಟ್ಟಿಯನ್ನು ಹೊಯಿದು ಅವರ ಬೆತ್ತಲೆತನವನ್ನು ನೋಡುವ ಹಾಗೆ ಅಮಲೇರಿ ಸುವವನಿಗೆ ಅಯ್ಯೋ! ಘನತೆಗೆ ಬದಲಾಗಿ ನಿಂದೆ ಯಿಂದ ತುಂಬಿದ್ದೀ; ನೀನು ಸಹ ಕುಡಿದು ನಿನ್ನ ಮುಂದೊಗಲು ಮುಚ್ಚಲ್ಪಡದಿರಲಿ. ಕರ್ತನ ಬಲಗೈಯ ಪಾತ್ರೆ ನಿನ್ನ ಕಡೆಗೆ ತಿರುಗುವದು. ನಿನ್ನ ಘನತೆಯ ಮೇಲೆ ಕಾರುವಿಕೆಯೂ ಲಜ್ಜೆಯೂ ಇರುವದು.
- Proverbs 13:20 ಜ್ಞಾನೋಕ್ತಿಗಳು 13:20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು.
- Mark 6:21 ಮಾರ್ಕನು 6:21ಹೀಗಿರಲಾಗಿ ಅನುಕೂಲವಾದ ಒಂದು ದಿನವು ಅಂದರೆ ಹೆರೋದನ ಹುಟ್ಟಿದ ದಿನದಲ್ಲಿ ಅವನು ತನ್ನ ಪ್ರಭುಗಳಿಗೂ ಸೈನ್ಯಾಧಿಪತಿಗಳಿಗೂ ಗಲಿಲಾಯದ ಪ್ರಮುಖರಿಗೂ ಔತಣವನ್ನು ಮಾಡಿಸಿದನು;
- Psalm 69:12 ಕೀರ್ತನೆಗಳು 69:12ಬಾಗಲಲ್ಲಿ ಕೂತು ಕೊಳ್ಳುವವರು ನನಗೆ ವಿರೋಧವಾಗಿ ಮಾತನಾಡು ತ್ತಾರೆ; ನಾನು ಮದ್ಯಪಾನಿಗಳಿಗೆ ಸಂಗೀತವಾದೆನು.