Hosea · chapter 7 · verse 8
Hosea 7:8 in Kannada
ಎಫ್ರಾಯಾಮು ಜನರೊಂದಿಗೆ ತನ್ನನ್ನು ಬೆರೆಸಿ ಕೊಂಡಿದ್ದಾನೆ; ಎಫ್ರಾಯಾಮು ತಿರುವಿ ಹಾಕದ ರೊಟ್ಟಿ ಯಾಗಿದ್ದಾನೆ.
Ephraayaamu janarondige tannannu beresi kondiddaane; ephraayaamu tiruvi haakada rotti yaagiddaane.
Hosea 7:8 in English
- King James Version (KJV)
- Ephraim, he hath mixed himself among the people; Ephraim is a cake not turned.
- World English Bible (WEB)
- Ephraim mixes himself among the nations. Ephraim is a pancake not turned over.
- American Standard Version (ASV)
- Ephraim, he mixeth himself among the peoples; Ephraim is a cake not turned.
- Bible in Basic English (BBE)
- Ephraim is mixed with the peoples; Ephraim is a cake not turned.
- Darby Translation (DBY)
- Ephraim, he mixeth himself with the peoples; Ephraim is a cake not turned.
- Webster's Bible (WBS)
- Ephraim, he hath mixed himself among the people; Ephraim is a cake not turned.
- Young's Literal Translation (YLT)
- Ephraim! among peoples he mixeth himself, Ephraim hath been a cake unturned.
Read in context
- 6ಅವರು ಹೊಂಚು ಹಾಕಿಕೊಂಡಿ ರುವಾಗ ತಮ್ಮ ಹೃದಯವನ್ನು ಅವರು ಒಲೆಯ ಹಾಗೆ ಸಿದ್ಧಮಾಡಿದ್ದಾರೆ; ಅವರ ರೊಟ್ಟಿಗಾರನು ರಾತ್ರಿ ಯೆಲ್ಲಾ ನಿದ್ರೆ ಮಾಡುತ್ತಾನೆ, ಬೆಳಿಗ್ಗೆ ಅದು ಪ್ರಜ್ವಲಿ ಸುವ ಬೆಂಕಿಯ ಹಾಗೆ ಉರಿಯುತ್ತದೆ.
- 7ಅವರೆಲ್ಲರೂ ಒಲೆಯ ಹಾಗೆ ಬಿಸಿಯಾಗಿದ್ದಾರೆ; ತಮ್ಮ ನ್ಯಾಯಾ ಧಿಪತಿಗಳನ್ನು ನುಂಗಿಬಿಟ್ಟಿದ್ದಾರೆ; ಅವರ ಅರಸುಗಳೆಲ್ಲಾ ಬಿದ್ದು ಹೋಗಿದ್ದಾರೆ; ಅವರಲ್ಲಿ ಒಬ್ಬನಾದರೂ ನನ್ನನ್ನು ಪ್ರಾರ್ಥಿಸುವದೇ ಇಲ್ಲ.
- 8ಎಫ್ರಾಯಾಮು ಜನರೊಂದಿಗೆ ತನ್ನನ್ನು ಬೆರೆಸಿ ಕೊಂಡಿದ್ದಾನೆ; ಎಫ್ರಾಯಾಮು ತಿರುವಿ ಹಾಕದ ರೊಟ್ಟಿ ಯಾಗಿದ್ದಾನೆ.
- 9ಪರಕೀಯರು ಅವನ ಶಕ್ತಿಯನ್ನು ನುಂಗಿಬಿಟ್ಟಿದ್ದಾರೆ; ಅದು ಅವನಿಗೆ ಗೊತ್ತಿಲ್ಲ; ಹೌದು, ನರೆ ಕೂದಲು ಅಲ್ಲಲ್ಲಿ ಅವನ ಮೇಲೆ ಅದೆ. ಆದಾಗ್ಯೂ ಅವನು ತಿಳಿಯದೇ ಇದ್ದಾನೆ.
- 10ಇಸ್ರಾಯೇಲಿನ ಗರ್ವವು ತನ್ನ ಮುಖದ ಮುಂದೆ ಸಾಕ್ಷಿ ಕೊಡುತ್ತದೆ; ಆದರೆ ಅವರು ತಮ್ಮ ಕರ್ತನಾದ ದೇವರ ಕಡೆಗೆ ತಿರುಗದೆ ಇದ್ದಾರೆ, ಇಲ್ಲವೆ ಆತನನ್ನು ಇದಕ್ಕೆಲ್ಲಾ ಹುಡು ಕುವದಿಲ್ಲ.
Cross references
- Psalm 106:35 ಕೀರ್ತನೆಗಳು 106:35ಆದರೆ ಅನ್ಯಜನಾಂಗ ಗಳ ಸಂಗಡ ಕೂಡಿಕೊಂಡು; ಅವರ ಕೆಲಸಗಳನ್ನು ಕಲಿತುಕೊಂಡರು.
- Nehemiah 13:23–25 ನೆಹೆಮೀಯ 13:23–25ಆ ದಿವಸಗಳಲ್ಲಿ ಅಮ್ಮೋನು ಮೋವಾಬು ಅಷ್ಡೋದು ಎಂಬ ದೇಶಗಳ ಸ್ತ್ರೀಯರನ್ನು ಮದುವೆ ಮಾಡಿಕೊಂಡ ಯೆಹೂದ್ಯರನ್ನು ಕಂಡೆನು. ಇವರ ಮಕ್ಕಳು ಅರ್ಧ ಅಷ್ಡೋದಿನ ಮಾತು ಆಡಿದರು; ಅವರು ಯೆಹೂದ್ಯರ ಮಾತು ಆಡಲಾರದೆ ಈ ಜನರು ಅನ್ಯರ ಮಾತನ್ನು ಆಡಿದರು. ಆಗ ನಾನು ಅವರನ್ನು ಗದರಿಸಿ ಶಪಿಸಿ ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲನ್ನು ಕಿತ್ತು--ನೀವು ನಿಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೂ ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೂ ನಿಮಗೂ ತಕ್ಕೊಳ್ಳದೆ ಮತ್ತು ಕೊಡದೆ ಇರ್ರಿ ಎಂದು ದೇವರ ಹೆಸರಿನಲ್ಲಿ ಅವರಿಗೆ ಆಣೆ ಇಟ್ಟೆನು;
- Ezra 9:12 ಎಜ್ರನು 9:12ಆದದರಿಂದ ನೀವು ಪ್ರಬಲವಾಗಿ ದೇಶದ ಒಳ್ಳೇ ದನ್ನು ತಿಂದು ಅದನ್ನು ಎಂದಿಗೂ ನಿಮ್ಮ ಮಕ್ಕಳಿಗೆ ಸ್ವಾಸ್ಥ್ಯವಾಗಿ ಕೊಡುವ ಹಾಗೆ ನೀವು ನಿಮ್ಮ ಕುಮಾರ್ತೆ ಯರನ್ನು ಅವರ ಕುಮಾರರಿಗೆ ಕೊಡಬೇಡಿರಿ; ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೆ ತಕ್ಕೊಳ್ಳ ಬೇಡಿರಿ. ಇಲ್ಲವೆ ಅವರ ಸಮಾಧಾನವನ್ನೂ ಅವರ ಮೇಲನ್ನೂ ಎಂದಿಗೂ ಬಯಸಬೇಡಿರಿ ಎಂಬದು.
- Ezra 9:1 ಎಜ್ರನು 9:1ಇವುಗಳಾದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು--ಇಸ್ರಾಯೇಲ್ ಜನರೂ ಯಾಜಕರೂ ಲೇವಿಯರೂ ದೇಶಗಳ ಜನ ಗಳೊಳಗಿಂದ ತಮ್ಮನ್ನು ಪ್ರತ್ಯೇಕಿಸದೆ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸ್ಯರು, ಅಮ್ಮೋ ನ್ಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಇವರ ಅಸಹ್ಯಗಳ ಪ್ರಕಾರ ಮಾಡುತ್ತಾ ಇದ್ದಾರೆ.
- Malachi 2:11 ಮಲಾಕಿಯ 2:11ಯೆಹೂದವು ವಂಚನೆಯಾಗಿ ನಡೆದುಕೊಂಡಿದೆ; ಇಸ್ರಾಯೇಲಿನ ಲ್ಲಿಯೂ ಯೆರೂಸಲೇಮಿನಲ್ಲಿಯೂ ಅಸಹ್ಯವಾದದ್ದನ್ನು ಮಾಡಿದೆ. ಕರ್ತನು ಪ್ರೀತಿ ಮಾಡಿದ ಪರಿಶುದ್ಧವಾ ದದ್ದನ್ನು ಯೆಹೂದವು ಅಪವಿತ್ರಮಾಡಿ ಅನ್ಯ ದೇವರ ಮಗಳನ್ನು ಮದುವೆ ಮಾಡಿಕೊಂಡಿದೆ.
- 1 Kings 18:21 1 ಅರಸುಗಳು 18:21ಆಗ ಎಲೀಯನು ಸಕಲ ಜನರ ಬಳಿಗೆ ಬಂದು--ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರ ವರೆಗೂ ನಿಂತವರಾಗಿ ಇರುವಿರಿ. ಕರ್ತನು ದೇವರಾಗಿದ್ದರೆ ಆತನನ್ನು ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನು ಹಿಂಬಾಲಿಸಿರಿ ಅಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.
- Hosea 8:2–4 ಹೋಶೇಯ 8:2–4ಇಸ್ರಾಯೇಲಿ ನವರು--ನನ್ನ ದೇವರೇ, ನಾವು ನಿನ್ನನ್ನು ತಿಳಿದಿದ್ದೇವೆ ಎಂದು ನನಗೆ ಕೂಗುವರು. ಇಸ್ರಾಯೇಲು ಒಳ್ಳೆಯ ಸಂಗತಿಯನ್ನು ತಳ್ಳಿಬಿಟ್ಟಿದೆ. ಶತ್ರುವು ಅವನನ್ನು ಹಿಂದಟ್ಟುವನು. ಅವರು ಅರಸುಗಳನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ, ಪ್ರಧಾನರನ್ನು ನೇಮಿಸಿದ್ದಾರೆ, ಅದು ನನಗೆ ತಿಳಿಯಲಿಲ್ಲ; ಅವರು ಕಡಿದುಬಿಡಲ್ಪಡುವ ಹಾಗೆ ತಮ್ಮ ಬೆಳ್ಳಿಯಿಂದಲೂ ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ.
- Matthew 6:24 ಮತ್ತಾಯನು 6:24ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.
- Hosea 9:3 ಹೋಶೇಯ 9:3ಅವರು ಕರ್ತನ ದೇಶದಲ್ಲಿ ನೆಲೆಸುವದಿಲ್ಲ; ಆದರೆ ಎಫ್ರಾಯಾಮು ಐಗುಪ್ತಕ್ಕೆ ತಿರುಗುವದು; ಅವರು ಅಶ್ಯೂರಿನಲ್ಲಿ ಅಶುದ್ಧ ವಾದವುಗಳನ್ನು ತಿನ್ನುವರು.
- Hosea 5:7 ಹೋಶೇಯ 5:7ದ್ರೋಹದಿಂದ ಅವರು ಕರ್ತನಿಗೆ ವಿರುದ್ಧವಾಗಿ ನಡೆಸಿದ್ದಾರೆ. ಯಾಕಂದರೆ ಅವರು ಅನ ್ಯಮಕ್ಕಳನ್ನು ಪಡೆದಿದ್ದಾರೆ. ಈಗ ತಿಂಗಳು ತಮ್ಮ ಪಾಲು ಗಳೊಂದಿಗೆ ಅವರನ್ನು ನುಂಗಿ ಬಿಡುವದು.
- Zephaniah 1:5 ಚೆಫನ್ಯ 1:5ಮಾಳಿಗೆಗಳ ಮೇಲೆ ಆಕಾಶದ ಸೈನ್ಯವನ್ನು ಆರಾಧಿಸುವವರನ್ನೂ ಕರ್ತನ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ
- Hosea 5:13 ಹೋಶೇಯ 5:13ಎಫ್ರಾಯಾಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ ಎಫ್ರಾಯೀಮ್ ಅಶ್ಯೂರಕ್ಕೆ ಹೋಗಿ ಅರಸನಾದ ಯಾರೇಬನ ಬಳಿಗೆ ಕಳುಹಿಸಿತು; ಆದಾಗ್ಯೂ ಅವನು ನಿಮ್ಮನ್ನು ಸ್ವಸ್ಥಮಾಡ ಲಿಲ್ಲ, ಇಲ್ಲವೆ ನಿಮ್ಮ ಗಾಯವನ್ನು ಗುಣಪಡಿಸಲೂ ಇಲ್ಲ.