Hosea · chapter 8 · verse 12
Hosea 8:12 in Kannada
ನಾನು ನನ್ನ ನ್ಯಾಯಪ್ರಮಾಣದ ದೊಡ್ಡ ಸಂಗತಿ ಗಳನ್ನು ಅವನಿಗೆ ಬರೆದಿದ್ದೇನೆ; ಆದರೆ ಅವುಗಳು ಅನ್ಯವಾದವುಗಳೆಂದು ಎಣಿಸಲ್ಪಟ್ಟಿವೆ.
Naanu nanna nyaayapramaanada dodda sangati galannu avanige barediddene; aadare avugalu anyavaadavugalendu enisalpattive.
Hosea 8:12 in English
- King James Version (KJV)
- I have written to him the great things of my law, [but] they were counted as a strange thing.
- World English Bible (WEB)
- I wrote for him the many things of my law, but they were regarded as a strange thing.
- American Standard Version (ASV)
- I wrote for him the ten thousand things of my law; but they are counted as a strange thing.
- Bible in Basic English (BBE)
- Though I put my law in writing for him in ten thousand rules, they are to him as a strange thing.
- Darby Translation (DBY)
- I have prescribed unto him the manifold things of my law: they are counted [as] a strange thing.
- Webster's Bible (WBS)
- I have written to him the great things of my law, [but] they were counted as a strange thing.
- Young's Literal Translation (YLT)
- I write for him numerous things of My law, As a strange thing they have been reckoned.
Read in context
- 10ಹೌದು, ಅವರು ಜನಾಂಗಗಳಲ್ಲಿ ಕೂಲಿ ಕೊಟ್ಟಿದ್ದರೂ ಅವರನ್ನು ನಾನು ಈಗ ಒಟ್ಟುಗೂಡಿ ಸುವೆನು; ಸ್ವಲ್ಪವಾದವರಲ್ಲಿ ಅವರು ಪ್ರಧಾನರು ಗಳ ಅರಸನ ಭಾರದಿಂದ ಕಷ್ಟಪಡುವರು.
- 11ಎಫ್ರಾ ಯಾಮು ಪಾಪಕ್ಕಾಗಿ ಅನೇಕ ಬಲಿಪೀಠಗಳನ್ನು ಮಾಡಿ ದ್ದರಿಂದ, ಬಲಿಪೀಠಗಳು ಅವನ ಪಾಪಕ್ಕಾಗಿ ಇರುವವು.
- 12ನಾನು ನನ್ನ ನ್ಯಾಯಪ್ರಮಾಣದ ದೊಡ್ಡ ಸಂಗತಿ ಗಳನ್ನು ಅವನಿಗೆ ಬರೆದಿದ್ದೇನೆ; ಆದರೆ ಅವುಗಳು ಅನ್ಯವಾದವುಗಳೆಂದು ಎಣಿಸಲ್ಪಟ್ಟಿವೆ.
- 13ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ; ಆದರೆ ಕರ್ತನು ಅವುಗಳಿಗೆ ಮೆಚ್ಚುವದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕ ಮಾಡಿಕೊಂಡು ಅವರ ಪಾಪಗಳನ್ನು ವಿಚಾ ರಿಸುವನು; ಅವರು ಐಗುಪ್ತಕ್ಕೆ ಹಿಂದಿರುಗುವರು.ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.
- 14ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.
Cross references
- Deuteronomy 4:6–8 ಧರ್ಮೋಪದೇಶಕಾಂಡ 4:6–8ಹೀಗಿರುವ ದರಿಂದ ನೀವು ಅವುಗಳನ್ನು ಕೈಕೊಂಡು ಅನುಸರಿಸಿರಿ; ಯಾಕಂದರೆ ಜನಾಂಗಗಳ ಮುಂದೆ ಇರುವ ನಿಮ್ಮ ಜ್ಞಾನವೂ ನಿಮ್ಮ ವಿವೇಕವೂ ಇದೇ ಆಗಿದೆ. ಅವರು ಈ ನಿಯಮಗಳನ್ನೆಲ್ಲಾ ಕೇಳಿ--ನಿಶ್ಚಯವಾಗಿ ಈ ದೊಡ್ಡ ಜನಾಂಗವು ಜ್ಞಾನವೂ ವಿವೇಕವೂ ಉಳ್ಳ ಜನವಾಗಿದೆ ಅನ್ನುವರು. ನಾವು ಆತನಿಗೆ ಮೊರೆ ಯಿಡುವ ಎಲ್ಲಾ ವಿಷಯಗಳಲ್ಲಿ ನಮ್ಮ ದೇವರಾದ ಕರ್ತನು ನಮಗೆ ಸವಿಾಪವಿರುವ ಪ್ರಕಾರ ಬೇರೆ ಸವಿಾಪವಾದ ದೇವರುಳ್ಳ ದೊಡ್ಡ ಜನಾಂಗ ಯಾವದು? ಇದಲ್ಲದೆ ನಾನು ಈಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನ್ಯಾಯಪ್ರಮಾಣದ ಪ್ರಕಾರ ನೀತಿಯುಳ್ಳ ನಿಯಮ ನ್ಯಾಯಗಳುಳ್ಳ ದೊಡ್ಡ ಜನಾಂಗ ಯಾವದು?
- Romans 7:12 ರೋಮಾಪುರದವರಿಗೆ 7:12ಹೀಗಿರಲಾಗಿ ನ್ಯಾಯಪ್ರಮಾಣವು ಪರಿ ಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ ನ್ಯಾಯವೂ ಹಿತವೂ ಆಗಿರುವಂಥದ್ದು ಸರಿ.
- Psalm 50:17 ಕೀರ್ತನೆಗಳು 50:17ನೀನು ಶಿಕ್ಷಣವನ್ನು ಹಗೆಮಾಡಿ ನನ್ನ ವಾಕ್ಯಗಳನ್ನು ನಿನ್ನ ಹಿಂದೆ ಹಾಕುತ್ತೀಯಲ್ಲಾ.
- Nehemiah 9:13–14 ನೆಹೆಮೀಯ 9:13–14ಸೀನಾಯ್ ಪರ್ವ ತದ ಮೇಲಕ್ಕೆ ಇಳಿದು ಬಂದಿ; ಆಕಾಶದಿಂದ ಅವರ ಸಂಗಡ ಮಾತನಾಡಿದಿ; ಸರಿಯಾದ ನ್ಯಾಯಗಳನ್ನೂ ಸತ್ಯವಾದ ನ್ಯಾಯಪ್ರಮಾಣಗಳನ್ನೂ ಉತ್ತಮವಾದ ಕಟ್ಟಳೆ ಗಳನ್ನೂ ಆಜ್ಞೆಗಳನ್ನೂ ಅವರಿಗೆ ಕೊಟ್ಟಿ. ನೀನು ಪರಿಶುದ್ಧ ಸಬ್ಬತ್ ದಿವಸವನ್ನು ಅವರಿಗೆ ತಿಳಿಸಿ ನಿನ್ನ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ನ್ಯಾಯಪ್ರಮಾಣವನ್ನೂ
- 2 Kings 17:15–16 2 ಅರಸುಗಳು 17:15–16ಕಠಿಣಪಡಿಸಿ ಆತನ ಕಟ್ಟಳೆಗಳನ್ನೂ ಆತನು ತಮ್ಮ ಪಿತೃಗಳ ಸಂಗಡ ಮಾಡಿದ ಆತನ ಒಡಂಬಡಿಕೆಯನ್ನೂ ಆತನು ಅವರಿಗೆ ಹೇಳಿದ ಸಾಕ್ಷಿ ಗಳನ್ನೂ ಅಲಕ್ಷ್ಯಮಾಡಿ ವ್ಯರ್ಥವಾದದ್ದನ್ನು ಹಿಂಬಾ ಲಿಸಿ ವ್ಯರ್ಥವಾದವರಾಗಿ -- ನೀವು ಅವರ ಹಾಗೆ ಮಾಡಬೇಡಿರೆಂದು ಕರ್ತನು ಅವರಿಗೆ ಆಜ್ಞಾಪಿಸಿದರೂ ಅವರ ಸುತ್ತಲಿರುವ ಅನ್ಯಜನಾಂಗಗಳ ಹಿಂದೆ ಹೋದರು. ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿ
- Jeremiah 6:16–17 ಯೆರೆಮೀಯ 6:16–17ಕರ್ತನು ಹೀಗೆ ಹೇಳುತ್ತಾನೆ--ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ; ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ; ಒಳ್ಳೇ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ; ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕು ವದು ಅಂದನು. ಆದರೆ ಅವರು--ನಾವು ನಡೆ ಯುವದಿಲ್ಲ ಅಂದರು. ಇದಲ್ಲದೆ ನಿಮ್ಮ ಮೇಲೆ ಕಾವಲುಗಾರರನ್ನು ಇರಿಸಿ ತುತೂರಿಯ ಶಬ್ದವನ್ನು ಆಲೈ ಸಿರಿ ಅಂದೆನು; ಆದರೆ ಅವರು--ನಾವು ಆಲೈಸುವ ದಿಲ್ಲ ಅಂದರು.
- Hosea 4:6 ಹೋಶೇಯ 4:6ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು.
- Psalm 147:19–20 ಕೀರ್ತನೆಗಳು 147:19–20ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ.ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ. ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.
- Ezekiel 20:11 ಯೆಹೆಜ್ಕೇಲನು 20:11ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು.
- Psalm 119:18 ಕೀರ್ತನೆಗಳು 119:18ನನ್ನ ಕಣ್ಣುಗಳನ್ನು ತೆರೆ; ಆಗ ನಿನ್ನ ನ್ಯಾಯಪ್ರಮಾಣದಲ್ಲಿನ ಅದ್ಭುತಗಳನ್ನು ನೋಡುವೆನು.
- Nehemiah 9:26 ನೆಹೆಮೀಯ 9:26ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.
- Isaiah 30:9 ಯೆಶಾಯ 30:9ಏನಂದರೆ, ಇವರು ತಿರುಗಿ ಬೀಳುವ ಜನರು. ಸುಳ್ಳಾಡುವ ಮಕ್ಕಳು, ಕರ್ತನ ನ್ಯಾಯಪ್ರಮಾಣವನ್ನು ಕೇಳಲೊಲ್ಲದ ಮಕ್ಕಳು.