Hosea · chapter 9 · verse 16
Hosea 9:16 in Kannada
ಎಫ್ರಾಯಾಮ್ಯರು ಹೊಡೆಯಲ್ಪಟ್ಟಿದ್ದಾರೆ, ಅವರ ಬೇರು ಒಣಗಿ ಹೋಗಿದೆ, ಅವರು ಫಲವನ್ನು ಕೊಡುವದಿಲ್ಲ; ಹೌದು, ಅವರು ಹೆತ್ತರೂ ಅವರ ಗರ್ಭದ ಪ್ರಿಯಕರವಾದ ಫಲವನ್ನು ಸಹ ನಾನು ಕೊಲ್ಲುವೆನು.ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.
Ephraayaamyaru hodeyalpattiddaare, avara beru onagi hogide, avaru phalavannu koduvadilla; haudu, avaru hettaroo avara garbhada priyakaravaada phalavannu saha naanu kolluvenu.nanna devaru avarannu tallibiduvanu; avaru aatanige kivigodalilla; avaru janaangagalalli aledaaduvavaraagiruvaru.
Hosea 9:16 in English
- King James Version (KJV)
- Ephraim is smitten, their root is dried up, they shall bear no fruit: yea, though they bring forth, yet will I slay [even] the beloved [fruit] of their womb.
- World English Bible (WEB)
- Ephraim is struck. Their root has dried up. They will bear no fruit. Even though they give birth, yet I will kill the beloved ones of their womb.”
- American Standard Version (ASV)
- Ephraim is smitten, their root is dried up, they shall bear no fruit: yea, though they bring forth, yet will I slay the beloved fruit of their womb.
- Bible in Basic English (BBE)
- The rod has come on Ephraim, their root is dry, let them have no fruit; even though they give birth, I will put to death the dearest fruit of their bodies.
- Darby Translation (DBY)
- Ephraim is smitten: their root is dried up, they shall bear no fruit; yea, though they should bring forth, yet will I slay the beloved [fruit] of their womb.
- Webster's Bible (WBS)
- Ephraim is smitten, their root is dried up, they shall bear no fruit: yes, though they bring forth, yet will I slay [even] the beloved [fruit] of their womb.
- Young's Literal Translation (YLT)
- Ephraim hath been smitten, Their root hath dried up, fruit they yield not, Yea, though they bring forth, I have put to death the desired of their womb.
Read in context
- 14ಓ ಕರ್ತನೇ, ಅವರಿಗೆ ಕೊಡು; ಅವರಿಗೆ ನೀನು ಏನು ಕೊಡುತ್ತೀ? ಗರ್ಭಸ್ರಾವವನ್ನು ಮಾಡು ಮತ್ತು ಬತ್ತಿದ ಸ್ತನಗಳನ್ನು ಅವರಿಗೆ ಕೊಡು.
- 15ಅವರ ಕೆಟ್ಟತನ ವೆಲ್ಲಾ ಗಿಲ್ಗಾಲಿನಲ್ಲಿದೆ. ಅಲ್ಲಿ ನಾನು ಅವರನ್ನು ಹಗೆ ಮಾಡಿದ್ದೇನೆ. ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರನ್ನು ನನ್ನ ಆಲಯದೊಳಗಿಂದ ಹೊರಡಿಸಿ ಅವ ರನ್ನು ಇನ್ನು ಪ್ರೀತಿಮಾಡುವದೇ ಇಲ್ಲ; ಅವರ ಪ್ರಭು ಗಳೆಲ್ಲಾ ತಿರುಗಿ ಬೀಳುವವರೇ.
- 16ಎಫ್ರಾಯಾಮ್ಯರು ಹೊಡೆಯಲ್ಪಟ್ಟಿದ್ದಾರೆ, ಅವರ ಬೇರು ಒಣಗಿ ಹೋಗಿದೆ, ಅವರು ಫಲವನ್ನು ಕೊಡುವದಿಲ್ಲ; ಹೌದು, ಅವರು ಹೆತ್ತರೂ ಅವರ ಗರ್ಭದ ಪ್ರಿಯಕರವಾದ ಫಲವನ್ನು ಸಹ ನಾನು ಕೊಲ್ಲುವೆನು.ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.
- 17ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.
Cross references
- Hosea 9:11–13 ಹೋಶೇಯ 9:11–13ಎಫ್ರಾಯಾಮ್ಯರ ಘನತೆಯು ಹಾರಿಹೋಗುವ ಪಕ್ಷಿಯ ಹಾಗೆ ಇದೆ. ಜನ್ಮವಾಗಲಿ, ಗರ್ಭಧರಿಸುವದಾಗಲಿ ಉತ್ಪತ್ತಿಯಾಗಲಿ ಅವರಿಗೆ ಇರು ವದಿಲ್ಲ. ಅವರು ತಮ್ಮ ಮಕ್ಕಳನ್ನು ಬೆಳೆಸಿದಾಗ್ಯೂ ಒಬ್ಬ ಮನುಷ್ಯನು ಉಳಿಯದ ಹಾಗೆ ನಾನು ಅವರನ್ನು ಅನಾಥರನ್ನಾಗಿ ಮಾಡುವೆನು. ಹೌದು, ನಾನು ಅವ ರನ್ನು ಬಿಟ್ಟು ಹೋಗುವಾಗ ಅವರಿಗೆ ಅಯ್ಯೋ! ನಾನು ತೂರನ್ನು ನೊಡಿದಂತೆ ಎಫ್ರಾಯಾಮು ರಮ್ಯ ಸ್ಥಳದಲ್ಲಿ ನೆಡಲ್ಪಟ್ಟಿದೆ; ಆದರೆ ಎಫ್ರಾಯಾಮು ಕೊಲ್ಲುವವನಿಗೆ ತನ್ನ ಮಕ್ಕಳನ್ನು ಹೊರಗೆ ತರುವದು.
- Ezekiel 24:21 ಯೆಹೆಜ್ಕೇಲನು 24:21ಇಸ್ರಾಯೇಲ್ಯರ ಮನೆ ತನದವರೊಂದಿಗೆ ಮಾತನಾಡಿ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು--ಇಗೋ, ನಾನು ನನ್ನ ಪರಿಶುದ್ಧ ಸ್ಥಳವನ್ನೂ ನಿಮ್ಮ ಬಲದ ಶ್ರೇಷ್ಠತ್ವವನ್ನೂ ನಿಮ್ಮ ನೇತ್ರಾನಂದಕರವಾದದ್ದನ್ನೂ ನಿಮ್ಮ ಮನಸ್ಸು ಅಭಿಲಾಷಿಸುವದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಕುಮಾರರೂ ಕುಮಾರ್ತೆಯರೂ ಕತ್ತಿಯಿಂದ ಬೀಳುವರು.
- Isaiah 5:24 ಯೆಶಾಯ 5:24ಅವರು ಸೈನ್ಯಗಳ ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದ್ದರಿಂದಲೂ ಇಸ್ರಾಯೇ ಲಿನ ಪರಿಶುದ್ಧನ ವಾಕ್ಯವನ್ನು ಅಸಡ್ಡೆಮಾಡಿದ್ದ ರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿಬಿಡುವ ಹಾಗೂ ಜ್ವಾಲೆಯು ಹೊಟ್ಟನ್ನು ಸುಟ್ಟುಬಿಡುವಂತೆಯೂ ಅದರ ಬೇರು ಕೊಳೆಯುವಂತೆಯೂ ಚಿಗುರು ಅವರ ಧೂಳಿನಂತೆಯೂ ತೂರಿಹೋಗುವವು.
- Isaiah 40:24 ಯೆಶಾಯ 40:24ಹೌದು, ಅವರು ನೆಡಲ್ಪಡುವದಿಲ್ಲ ಬಿತ್ತ ಲ್ಪಡುವದಿಲ್ಲ. ಹೌದು ಅವರ ಬುಡವು ಭೂಮಿ ಯಲ್ಲಿ ಬೇರೂರುವದಿಲ್ಲ. ಆತನು ಶ್ವಾಸವನ್ನು ಅವರ ಮೇಲೆ ಊದಲು ಒಣಗಿಹೋಗುವರು. ಬಿರು ಗಾಳಿಯು ಅವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವದು.
- Job 18:16 ಯೋಬನು 18:16ಕೆಳಗಿನಿಂದ ಅವನ ಬೇರುಗಳು ಒಣ ಗುವವು; ಮೇಲಿನಿಂದ ಅವನ ಕೊಂಬೆಯು ಕೊಯ್ಯ ಲ್ಪಡುವದು;
- Malachi 4:1 ಮಲಾಕಿಯ 4:1ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Hosea 5:11 ಹೋಶೇಯ 5:11ಎಫ್ರಾಯಾಮು ಆಜ್ಞೆಯಂತೆ ಇಷ್ಟ ಪೂರ್ವಕವಾಗಿ ನಡೆದ ಕಾರಣ ಅವನು ನ್ಯಾಯತೀರ್ಪಿನೊಳಗೆ ಕುಂದಿ ಹೋಗಿ ಜಜ್ಜಲ್ಪಟ್ಟನು.
- Hosea 8:7 ಹೋಶೇಯ 8:7ಅವರು ಗಾಳಿಯನ್ನು ಬಿತ್ತಿ ದ್ದಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅದಕ್ಕೆ ಕಾಂಡ ವಿಲ್ಲ; ಮೊಳಕೆಯು ಆಹಾರವನ್ನು ಕೊಡುವದಿಲ್ಲ. ಒಂದು ವೇಳೆ ಅದು ಕೊಟ್ಟರೂ ಪರಕೀಯರು ಅದನ್ನು ನುಂಗುತ್ತಾರೆ.