Hosea · chapter 9 · verse 17
Hosea 9:17 in Kannada
ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.
Nanna devaru avarannu tallibiduvanu; avaru aatanige kivigodalilla; avaru janaangagalalli aledaaduvavaraagiruvaru.
Hosea 9:17 in English
- King James Version (KJV)
- My God will cast them away, because they did not hearken unto him: and they shall be wanderers among the nations.
- World English Bible (WEB)
- My God will cast them away, because they didn’t listen to him; and they will be wanderers among the nations.
- American Standard Version (ASV)
- My God will cast them away, because they did not hearken unto him; and they shall be wanderers among the nations.
- Bible in Basic English (BBE)
- My God will give them up because they did not give ear to him; they will be wandering among the nations.
- Darby Translation (DBY)
- My God hath rejected them, because they hearkened not unto him; and they shall be wanderers among the nations.
- Webster's Bible (WBS)
- My God will cast them away, because they did not hearken to him: and they shall be wanderers among the nations.
- Young's Literal Translation (YLT)
- Reject them doth my God, Because they have not hearkened to Him, And they are wanderers among nations!
Read in context
- 15ಅವರ ಕೆಟ್ಟತನ ವೆಲ್ಲಾ ಗಿಲ್ಗಾಲಿನಲ್ಲಿದೆ. ಅಲ್ಲಿ ನಾನು ಅವರನ್ನು ಹಗೆ ಮಾಡಿದ್ದೇನೆ. ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರನ್ನು ನನ್ನ ಆಲಯದೊಳಗಿಂದ ಹೊರಡಿಸಿ ಅವ ರನ್ನು ಇನ್ನು ಪ್ರೀತಿಮಾಡುವದೇ ಇಲ್ಲ; ಅವರ ಪ್ರಭು ಗಳೆಲ್ಲಾ ತಿರುಗಿ ಬೀಳುವವರೇ.
- 16ಎಫ್ರಾಯಾಮ್ಯರು ಹೊಡೆಯಲ್ಪಟ್ಟಿದ್ದಾರೆ, ಅವರ ಬೇರು ಒಣಗಿ ಹೋಗಿದೆ, ಅವರು ಫಲವನ್ನು ಕೊಡುವದಿಲ್ಲ; ಹೌದು, ಅವರು ಹೆತ್ತರೂ ಅವರ ಗರ್ಭದ ಪ್ರಿಯಕರವಾದ ಫಲವನ್ನು ಸಹ ನಾನು ಕೊಲ್ಲುವೆನು.ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.
- 17ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.
Cross references
- Deuteronomy 28:64–65 ಧರ್ಮೋಪದೇಶಕಾಂಡ 28:64–65ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ. ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು.
- Hosea 7:13 ಹೋಶೇಯ 7:13ಅವರಿಗೆ ಅಯ್ಯೋ, ಅವರು ನನ್ನನ್ನು ಬಿಟ್ಟು ಓಡಿ ಹೋಗಿದ್ದಾರೆ; ಅವರು ನಾಶವಾಗಲಿ! ಯಾಕಂದರೆ ನನಗೆ ಅವರು ವಿರುದ್ಧವಾಗಿ ದ್ರೋಹ ಮಾಡಿದ್ದಾರೆ; ನಾನು ಅವರಿಗೆ ವಿಮೋಚನೆ ಮಾಡಿದ್ದಾಗ್ಯೂ ಅವರು ನನಗೆ ವಿರುದ್ಧ ವಾಗಿ ಸುಳ್ಳು ಹೇಳಿದ್ದಾರೆ.
- Zechariah 7:11–14 ಜೆಕರ್ಯ 7:11–14ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು. ಹೌದು, ಅವರು ನ್ಯಾಯಪ್ರಮಾಣ ವನ್ನೂ ಸೈನ್ಯಗಳ ಕರ್ತನು ತನ್ನ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯ ಗಳನ್ನೂ ಕೇಳದ ಹಾಗೆ ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಮಾಡಿಕೊಂಡರು. ಆದದರಿಂದ ಸೈನ್ಯಗಳ ಕರ್ತನಿಂದ ಮಹಾರೋಷವು ಬಂತು. ಆಗ ಆದದ್ದೇ ನಂದರೆ--ಅವನು ಕೂಗಲು ಅವರು ಕೇಳದೆ ಇದ್ದ ಪ್ರಕಾರ ಅವರು ಕೂಗಲು ನಾನು ಕೇಳದೆ ಇದ್ದೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು. ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
- Zechariah 1:4 ಜೆಕರ್ಯ 1:4ನೀವು ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ--ನಿಮ್ಮ ಕೆಟ್ಟ ಮಾರ್ಗಗಳನ್ನೂ ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ; ನನ್ನಲ್ಲಿ ಲಕ್ಷ್ಯ ವಿಡಲಿಲ್ಲವೆಂದು ಕರ್ತನು ಅನ್ನುತ್ತಾನೆ.
- Isaiah 48:18 ಯೆಶಾಯ 48:18ಓ, ನೀನು ನನ್ನ ಆಜ್ಞೆಗಳಿಗೆ ಕಿವಿಗೊಟ್ಟಿದ್ದರೆ ಚೆನ್ನಾಗಿತ್ತು! ಆಗ ನಿನ್ನ ಸಮಾಧಾನವು ನದಿಯಂತೆಯೂ ನಿನ್ನ ನೀತಿಯು ಸಮುದ್ರದ ಅಲೆಗಳಂತೆಯೂ ಇರುತ್ತಿದ್ದವು;
- Micah 7:7 ಮೀಕ 7:7ಆದರೆ ನಾನು ಕರ್ತನನ್ನು ಎದುರು ನೋಡುವೆನು; ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು; ನನ್ನ ದೇವರು ನನ್ನನ್ನು ಕೇಳುವನು.
- Acts 3:23 ಅಪೊಸ್ತಲರ ಕೃತ್ಯಗಳು 3:23ಆ ಪ್ರವಾದಿಗೆ ಕಿವಿಗೊಡದಿರುವ ಪ್ರತಿಯೊಬ್ಬನೂ ಜನ ರೊಳಗಿಂದ ನಾಶವಾಗುವನು ಎಂಬದು.
- Hosea 4:10 ಹೋಶೇಯ 4:10ಅವರು ತಿಂದರೂ ಸಾಕಾಗುವದಿಲ್ಲ; ಅವರು ವ್ಯಭಿಚಾರ ಮಾಡಿದರೂ ಅಭಿವೃದ್ಧಿಯಾಗುವದಿಲ್ಲ; ಯಾಕಂದರೆ ಅವರು ಕರ್ತನ ಕಡೆಗೆ ಗಮನಿಸುವದನ್ನು ಬಿಟ್ಟುಬಿಟ್ಟಿದ್ದಾರೆ.
- Jeremiah 35:15–17 ಯೆರೆಮೀಯ 35:15–17ಬೆಳಿಗ್ಗೆ ಎದ್ದು ನನ್ನ ಸಕಲ ಸೇವಕರಾದ ಪ್ರವಾದಿಗಳನ್ನು ಸಹ ನಿಮ್ಮ ಬಳಿಗೆ ಕಳುಹಿಸಿ--ಒಬ್ಬೊಬ್ಬನು ತನ್ನ ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿ ನಿಮ್ಮ ಕ್ರಿಯೆಗಳನ್ನು ಸರಿಮಾಡಿ ಬೇರೆ ದೇವರುಗಳನ್ನು ಸೇವಿಸದೆ ಅವುಗಳನ್ನು ಹಿಂಬಾಲಿಸದೆ ಇರ್ರಿ; ಆಗ ನಾನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ವಾಸವಾಗಿರುವಿರಿ ಎಂದು ನಿಮಗೆ ಹೇಳಿಸಿದರೂ ನೀವು ಕಿವಿಗೊಡಲಿಲ್ಲ ನನ್ನ ಮಾತನ್ನೂ ಕೇಳಲಿಲ್ಲ. ಆದುದರಿಂದ ತಮ್ಮ ಪಿತೃಗಳು ತಮಗೆ ಆಜ್ಞಾಪಿಸಿದ ಆಜ್ಞೆಯನ್ನು ರೇಕಾಬಿನ ಮಗನಾದ ಯೋನಾದಾಬನ ಕುಮಾರರು ಅನುಸರಿಸಿದ್ದರಲ್ಲಿ ಈ ಜನರು ನನ್ನ ಮಾತನ್ನು ಕೇಳದೆ ಹೋದದರಿಂದಲೂ ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರಾದ ಕರ್ತನೂ ಹೇಳುವದೇನಂದರೆ--ಇಗೋ, ನಾನು ಯೆಹೂದದ ಮೇಲೆಯೂ ಯೆರೂಸಲೇಮಿನ ನಿವಾಸಿ ಗಳೆಲ್ಲರ ಮೇಲೆಯೂ ಅವರ ವಿಷಯವಾಗಿ ಹೇಳಿದ ಕೇಡನ್ನೆಲ್ಲಾ ಬರಮಾಡುತ್ತೇನೆ; ನಾನು ಅವರ ಸಂಗಡ ಮಾತನಾಡುವಾಗ ಅವರು ಕೇಳಲಿಲ್ಲ ಅವರನ್ನು ಕರೆಯು ವಾಗ ಉತ್ತರ ಕೊಡಲಿಲ್ಲ.
- Amos 9:9 ಆಮೋಸ 9:9ಇಗೋ, ಮೊರದಲ್ಲಿ ಧಾನ್ಯವನ್ನು ಕೇರುವಂತೆ ನಾನು ಆಜ್ಞಾಪಿಸಿ ಇಸ್ರಾಯೇಲಿನ ಮನೆತನದವ ರನ್ನು ಎಲ್ಲಾ ಜನಾಂಗಗಳಲ್ಲಿ ಕೇರುವೆನು; ಆದಾಗ್ಯೂ ಒಂದು ಕಾಳಾದರೂ ನೆಲಕ್ಕೆ ಬೀಳುವದಿಲ್ಲ.
- Jeremiah 26:4–6 ಯೆರೆಮೀಯ 26:4–6ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ನೀವು ನನಗೆ ಕಿವಿಗೊಡದೆ ನಾನು ನಿಮ್ಮ ಮುಂದೆ ಇಟ್ಟ ನನ್ನ ನ್ಯಾಯಪ್ರಮಾಣದಂತೆ ನಡ ಕೊಳ್ಳದೆ ನಾನು ಬೆಳಿಗ್ಗೆ ನಿಮ್ಮ ಬಳಿಗೆ ಕಳುಹಿಸಿದಂಥ ನೀವು ಕೇಳದಂಥ ನನ್ನ ಸೇವಕರಾದ ಪ್ರವಾದಿಗಳ ವಾಕ್ಯಗಳನ್ನು ಕೇಳದೆಹೋದರೆ ಆಗ ನಾನು ಈ ಮನೆಯನ್ನು ಶಿಲೋವಿನ ಹಾಗೆ ಮಾಡುತ್ತೇನೆ; ಈ ಪಟ್ಟಣವನ್ನು ಭೂಮಿಯ ಎಲ್ಲಾ ಜನಾಂಗಗಳಿಗೆ ಶಾಪಕ್ಕೆ ಗುರಿಯಾಗುವಂತೆ ಮಾಡುತ್ತೇನೆ ಅಂದನು.
- 2 Kings 17:14–20 2 ಅರಸುಗಳು 17:14–20ಆದರೆ ಅವರು ಕೇಳ ದೆಯೂ ತಮ್ಮ ದೇವರಾದ ಕರ್ತನಲ್ಲಿ ನಂಬಿಕೆ ಇಡ ದೆಯೂ ತಮ್ಮ ಪಿತೃಗಳ ಕುತ್ತಿಗೆಯ ಹಾಗೆ ತಮ್ಮ ಕುತ್ತಿಗೆಯನ್ನು ಕಠಿಣಪಡಿಸಿ ಆತನ ಕಟ್ಟಳೆಗಳನ್ನೂ ಆತನು ತಮ್ಮ ಪಿತೃಗಳ ಸಂಗಡ ಮಾಡಿದ ಆತನ ಒಡಂಬಡಿಕೆಯನ್ನೂ ಆತನು ಅವರಿಗೆ ಹೇಳಿದ ಸಾಕ್ಷಿ ಗಳನ್ನೂ ಅಲಕ್ಷ್ಯಮಾಡಿ ವ್ಯರ್ಥವಾದದ್ದನ್ನು ಹಿಂಬಾ ಲಿಸಿ ವ್ಯರ್ಥವಾದವರಾಗಿ -- ನೀವು ಅವರ ಹಾಗೆ ಮಾಡಬೇಡಿರೆಂದು ಕರ್ತನು ಅವರಿಗೆ ಆಜ್ಞಾಪಿಸಿದರೂ ಅವರ ಸುತ್ತಲಿರುವ ಅನ್ಯಜನಾಂಗಗಳ ಹಿಂದೆ ಹೋದರು. ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿ ತಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ಬೆಂಕಿಯಲ್ಲಿ ದಾಟಮಾಡಿ ಕಣಿಗಳನ್ನೂ ಶಕುನಗಳನ್ನೂ ಬಳಸಿ ಕರ್ತ ನಿಗೆ ಕೋಪ ಬರುವಂತೆ ಆತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು. ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಬಹುಕೋಪ ಗೊಂಡು ಅವರನ್ನು ತನ್ನ ಸಮ್ಮುಖದಿಂದ ತೆಗೆದುಹಾಕಿ ದನು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿದದ್ದಿಲ್ಲ. ಆದರೆ ಯೆಹೂದದವರು ತಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳದೆ ಇಸ್ರಾ ಯೇಲು ಮಾಡಿಕೊಂಡ ಕಟ್ಟಳೆಗಳಲ್ಲಿ ನಡೆದರು. ಆದದರಿಂದ ಕರ್ತನು ಇಸ್ರಾಯೇಲಿನ ಸಂತತಿ ಯನ್ನೆಲ್ಲಾ ಅಲಕ್ಷ್ಯಮಾಡಿಬಿಟ್ಟು ಅವರನ್ನು ಕುಂದಿಸಿ ಅವರನ್ನು ತನ್ನ ಸಮ್ಮುಖದಿಂದ ತಳ್ಳಿಬಿಡುವ ವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು.