Hosea · chapter 9 · verse 8
Hosea 9:8 in Kannada
ಎಫ್ರಾಯಾಮಿನ ಕಾವಲುಗಾ ರನು ನನ್ನ ದೇವರೊಂದಿಗೆ ಇದ್ದನು; ಆದರೆ ಪ್ರವಾ ದಿಯು ತನ್ನ ಎಲ್ಲಾ ದಾರಿಗಳಲ್ಲಿ ಬೇಟೆಯ ಬಲೆಯಾಗಿ ದ್ದಾನೆ; ಅವನ ದೇವರ ಆಲಯದಲ್ಲಿ ಹಗೆತನವು ಉಂಟು.
Ephraayaamina kaavalugaa ranu nanna devarondige iddanu; aadare pravaa diyu tanna ellaa daarigalalli beteya baleyaagi ddaane; avana devara aalayadalli hagetanavu untu.
Hosea 9:8 in English
- King James Version (KJV)
- The watchman of Ephraim [was] with my God: [but] the prophet [is] a snare of a fowler in all his ways, [and] hatred in the house of his God.
- World English Bible (WEB)
- A prophet watches over Ephraim with my God. A fowler’s snare is on all of his paths, and hostility in the house of his God.
- American Standard Version (ASV)
- Ephraim [was] a watchman with my God: as for the prophet, a fowler’s snare is in all his ways, [and] enmity in the house of his God.
- Bible in Basic English (BBE)
- There is great hate against the watchman of Ephraim, the people of my God; as for the prophet, there is a net in all his ways, and hate in the house of his God.
- Darby Translation (DBY)
- Is Ephraim a watchman with my God? [nay] the prophet is a fowler's snare on all his ways, enmity in the house of his God.
- Webster's Bible (WBS)
- The watchman of Ephraim [was] with my God: [but] the prophet [is] a snare of a fowler in all his ways, [and] hatred in the house of his God.
- Young's Literal Translation (YLT)
- Ephraim is looking [away] from My God, The prophet! a snare of a fowler [is] over all his ways, Hatred [is] in the house of his God.
Read in context
- 6ಅವರು ಹಾಳಾದ ದೇಶವನ್ನು ಬಿಟ್ಟು ಹೋಗುವರು; ಐಗುಪ್ತವು ಅವರನ್ನು ಕೂಡಿಸುವದು, ಮೋಫ್ ಪಟ್ಟಣವು ಅವರನ್ನು ಹೂಣುವದು; ಅಪೇಕ್ಷಿ ಸಲ್ಪಟ್ಟ ಅವರ ಬೆಳ್ಳಿಯ ಒಡವೆಗಳು ದಬ್ಬೆಗಳ್ಳಿಗಳ ಪಾಲಾಗುವವು. ತುರುಚಿಯ ಗಿಡಗಳು ಅವರನ್ನು ಆವರಿಸಿಕೊಂಡಿವೆ; ಮುಳ್ಳುಗಳು ಅವರ ಗುಡಾರಗಳಲ್ಲಿ ಇರುವವು.
- 7ವಿಚಾರಣೆಯ ದಿನಗಳು ಬಂದಿವೆ, ಮುಯ್ಯಿ ತೀರಿಸುವ ದಿನಗಳೂ ಬಂದಿವೆ. ಇಸ್ರಾ ಯೇಲು ಅದನ್ನು ತಿಳಿದುಕೊಳ್ಳುವದು, ನಿನ್ನ ಅಕ್ರಮ ಗಳು ಬಹಳವಾಗಿರುವದರಿಂದಲೂ ಹಗೆತನವು ಹೆಚ್ಚಾ ಗಿರುವದರಿಂದಲೂ ಪ್ರವಾದಿ ಮೂರ್ಖನೂ ಆತ್ಮೀಯ ಮನುಷ್ಯನೂ ಹುಚ್ಚನೂ ಎಂದು ಇಸ್ರಾಯೇಲು ತಿಳಿದುಕೊಳ್ಳುತ್ತದೆ.
- 8ಎಫ್ರಾಯಾಮಿನ ಕಾವಲುಗಾ ರನು ನನ್ನ ದೇವರೊಂದಿಗೆ ಇದ್ದನು; ಆದರೆ ಪ್ರವಾ ದಿಯು ತನ್ನ ಎಲ್ಲಾ ದಾರಿಗಳಲ್ಲಿ ಬೇಟೆಯ ಬಲೆಯಾಗಿ ದ್ದಾನೆ; ಅವನ ದೇವರ ಆಲಯದಲ್ಲಿ ಹಗೆತನವು ಉಂಟು.
- 9ಗಿಬ್ಯದ ದಿನಗಳಲ್ಲಿ ಆದ ಹಾಗೆ ತಮ್ಮನ್ನು ಬಹಳವಾಗಿ ಕೆಡಿಸಿಕೊಂಡಿದ್ದಾರೆ; ಆದದರಿಂದ ಅವರ ಅಕ್ರಮವನ್ನು ಆತನು ಜ್ಞಾಪಕಮಾಡಿಕೊಳ್ಳುವನು, ಅವರ ಪಾಪಗಳನ್ನು ವಿಚಾರಿಸುವನು.
- 10ನಾನು ಅರಣ್ಯದಲ್ಲಿ ದ್ರಾಕ್ಷೆಯ ಫಲದ ಹಾಗೆ ಇಸ್ರಾಯೇಲನ್ನು ಕಂಡುಕೊಂಡೆನು. ಅಂಜೂರದ ಗಿಡ ದಲ್ಲಿ ಮೊದಲನೆಯ ಹಣ್ಣುಗಳ ಹಾಗೆ ನಿಮ್ಮ ಪಿತೃಗಳನ್ನು ನೋಡಿದೆನು; ಆದರೆ ಅವರು ಬಾಳ್ ಪೆಗೋರಿಗೆ ಹತ್ತಿರ ಬಂದು ನಾಚಿಕೆಯಾದದ್ದಕ್ಕೆ ತಮ್ಮನ್ನು ಪ್ರತ್ಯೇ ಕಿಸಿಕೊಂಡರು; ಅವರು ಪ್ರೀತಿಮಾಡಿದ್ದರ ಹಾಗೆ ಅಸಹ್ಯರಾದರು.
Cross references
- Hosea 5:1 ಹೋಶೇಯ 5:1ಓ ಯಾಜಕರೇ, ಇದನ್ನು ನೀವು ಕೇಳಿರಿ, ಇಸ್ರಾಯೇಲಿನ ಮನೆತನದವರೇ, ನೀವು ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ, ನೀವು ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರ್ಲಾಗಿಯೂ ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.
- John 15:24 ಯೋಹಾನನು 15:24ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ.
- Lamentations 4:13 ಪ್ರಲಾಪಗಳು 4:13ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ ಅವಳ ಯಾಜಕರ ಅಕ್ರಮಗಳಿ ಗೋಸ್ಕರವೂ ಹೀಗಾಯಿತು. ಯಾಕಂದರೆ ಇವರು ನೀತಿವಂತರ ರಕ್ತವನ್ನು ಅವಳ ಮಧ್ಯ ಚೆಲ್ಲಿದ್ದರು.
- Ezekiel 33:7 ಯೆಹೆಜ್ಕೇಲನು 33:7ಓ ಮನುಷ್ಯಪುತ್ರನೇ, ನಿನ್ನನ್ನು ನಾನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ಇಟ್ಟಿದ್ದೇನೆ; ಆದದರಿಂದ ನೀನು ನನ್ನ ಬಾಯಿಯ ವಾಕ್ಯವನ್ನು ಕೇಳು, ನನ್ನಿಂದ ಅವರನ್ನು ಎಚ್ಚರಿಸು.
- Ezekiel 3:17 ಯೆಹೆಜ್ಕೇಲನು 3:17ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು.
- Isaiah 62:6 ಯೆಶಾಯ 62:6ಓ ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲಿ ನಲ್ಲೂ ರಾತ್ರಿಯಲ್ಲೂ ಮೌನವಾಗಿರುವದೇ ಇಲ್ಲ. ಕರ್ತನನ್ನು ಜ್ಞಾಪಕಪಡಿಸುವವರೇ, ಸುಮ್ಮನಿರಬೇಡಿರಿ.
- 2 Kings 7:19 2 ಅರಸುಗಳು 7:19ಆ ಅಧಿಕಾರಿ ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ--ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಉಂಟುಮಾಡಿದರೂ ಹಾಗಾ ಗುವದೋ ಅಂದನು; ಅದಕ್ಕವನು--ಇಗೋ, ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನು ವದಿಲ್ಲ ಎಂದು ಹೇಳಿದ್ದನು.ಆ ಪ್ರಕಾರವೇ ಅವನಿಗೆ ಸಂಭವಿಸಿತು; ಏನಂದರೆ ಬಾಗಲಲ್ಲಿ ಜನರು ಅವನನ್ನು ತುಳಿದಿದ್ದರಿಂದ ಅವನು ಸತ್ತನು.
- Jeremiah 6:17 ಯೆರೆಮೀಯ 6:17ಇದಲ್ಲದೆ ನಿಮ್ಮ ಮೇಲೆ ಕಾವಲುಗಾರರನ್ನು ಇರಿಸಿ ತುತೂರಿಯ ಶಬ್ದವನ್ನು ಆಲೈ ಸಿರಿ ಅಂದೆನು; ಆದರೆ ಅವರು--ನಾವು ಆಲೈಸುವ ದಿಲ್ಲ ಅಂದರು.
- 2 Kings 4:43 2 ಅರಸುಗಳು 4:43ಆಗ ಅವನು--ಜನರಿಗೆ ಕೊಡು; ಅವರು ತಿನ್ನಲಿ ಅಂದನು. ಆದರೆ ಅವನ ಸೇವಕನು ಇದನ್ನು ನೂರು ಮಂದಿಗೆ ಬಡಿಸುವದು ಹೇಗೆ ಅಂದನು. ಅದಕ್ಕವನು -- ಜನರಿಗೆ ಕೊಡು; ಅವರು ತಿನ್ನಲಿ; ಅವರು ತಿಂದು ಇನ್ನೂ ಉಳಿಸಿ ಬಿಡುವರೆಂದು ಕರ್ತನು ಹೇಳುತ್ತಾನೆ ಅಂದನು.ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು.
- 2 Kings 3:15–20 2 ಅರಸುಗಳು 3:15–20ಆದರೆ ಈಗ ವಾದ್ಯ ಬಾರಿಸುವವನನ್ನು ನನ್ನ ಬಳಿಗೆ ಕರಕೊಂಡು ಬಾ ಅಂದನು. ಆಗ ವಾದ್ಯ ಬಾರಿಸುವ ವನು ಬಾರಿಸಿದಾಗ ಕರ್ತನ ಕೈ ಅವನ ಮೇಲೆ ಬಂತು. ಅವನು ಹೇಳಿದ್ದೇನಂದರೆ -- ಈ ತಗ್ಗನ್ನು ಹಳ್ಳ ಕೊಳ್ಳಗಳಾಗಿ ಮಾಡಿರೆಂದು ಕರ್ತನು ಹೇಳುತ್ತಾನೆ. ಕರ್ತನು ಹೀಗೆ ಹೇಳುತ್ತಾನೆ--ನೀನು ಗಾಳಿಯನ್ನೂ ಮಳೆಯನ್ನೂ ನೋಡುವದಿಲ್ಲ; ಆದರೆ ನೀವು ನಿಮ್ಮ ದನಗಳೂ ನಿಮ್ಮ ಪಶುಗಳೂ ಕುಡಿಯುವ ಹಾಗೆ ಈ ತಗ್ಗು ನೀರಿನಿಂದ ತುಂಬಲ್ಪಡುವದು. ಇದಲ್ಲದೆ ಇದು ಕರ್ತನ ದೃಷ್ಟಿಗೆ ಅಲ್ಪವಾಗಿರುವದು; ಆತನು ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ ಕೊಡುವನು. ನೀವು ಕೋಟೆಯುಳ್ಳ ಎಲ್ಲಾ ಪಟ್ಟಣಗಳನ್ನೂ ಆದು ಕೊಳ್ಳತಕ್ಕ ಎಲ್ಲಾ ಪಟ್ಟಣಗಳನ್ನೂ ಹೊಡೆದು ಬಿಟ್ಟು ಉತ್ತಮವಾದ ಎಲ್ಲಾ ಮರಗಳನ್ನು ಬೀಳಮಾಡಿ ನೀರು ಬಾವಿಗಳನ್ನೆಲ್ಲಾ ಮುಚ್ಚಿ ಉತ್ತಮವಾದ ಭೂಮಿಯಲ್ಲಿ ರುವ ಹೊಲಗಳನ್ನೆಲ್ಲಾ ಕಲ್ಲುಗಳಿಂದ ತುಂಬಿಸಿ ಕೆಡಿಸ ಬೇಕು ಅಂದನು. ಉದಯದಲ್ಲಿ ಕಾಣಿಕೆಯನ್ನು ಅರ್ಪಿಸುತ್ತಿರುವಾಗ ಏನಾಯಿತಂದರೆ, ಇಗೋ, ನೀರು ಎದೋಮಿನ ಮಾರ್ಗವಾಗಿ ಬಂದದರಿಂದ ದೇಶವು ನೀರಿನಿಂದ ತುಂಬಲ್ಪಟ್ಟಿತು.
- 2 Kings 7:2 2 ಅರಸುಗಳು 7:2ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ -- ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೂ ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ ಈ ಕಾರ್ಯವನ್ನು ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನುವದಿಲ್ಲ ಅಂದನು.
- 2 Kings 4:1–7 2 ಅರಸುಗಳು 4:1–7ಪ್ರವಾದಿಗಳ ಮಕ್ಕಳ ಹೆಂಡತಿಯರಲ್ಲಿ ಒಬ್ಬಳು ಎಲೀಷನಿಗೆ ಕೂಗಿ--ನಿನ್ನ ದಾಸ ನಾದ ನನ್ನ ಗಂಡನು ಸತ್ತನು; ನಿನ್ನ ದಾಸನು ಕರ್ತನಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ; ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸ ರಾಗಿ ತೆಗೆದುಕೊಳ್ಳಲು ಬಂದಿದ್ದಾನೆ ಅಂದಳು. ಎಲೀ ಷನು ಅವಳಿಗೆ--ನಾನು ನಿನಗೆ ಏನು ಮಾಡಬೇಕು? ಮನೆಯಲ್ಲಿ ನಿನಗೆ ಏನು ಉಂಟು, ನನಗೆ ತಿಳಿಸು ಅಂದನು. ಅವಳು--ನಿನ್ನ ಸೇವಕಳಿಗೆ ಒಂದು ಮೊಗೆ ಎಣ್ಣೆ ಅಲ್ಲದೆ ಮನೆಯಲ್ಲಿ ಮತ್ತೊಂದಿಲ್ಲ ಅಂದಳು. ಆಗ ಅವನು--ನೀನು ಹೋಗಿ ಹೊರಗಿರುವ ನಿನ್ನ ಎಲ್ಲಾ ನೆರೆಮನೆಯವರಿಂದ ಬರೀ ಪಾತ್ರೆಗಳನ್ನು ಕೇಳಿಕೋ; ಸ್ವಲ್ಪಮಾತ್ರ ತಕ್ಕೊಳ್ಳಬೇಡ. ನೀನು ಒಳಗೆ ಪ್ರವೇಶಿಸಿ ನೀನೂ ನಿನ್ನ ಕುಮಾರರೂ ಬಾಗಲು ಮುಚ್ಚಿ ಕೊಂಡು ಎಣ್ಣೆಯನ್ನು ಆ ಪಾತ್ರೆಗಳಲ್ಲೆಲ್ಲಾ ಹೊಯಿದು ತುಂಬಿದ್ದನ್ನು ಒಂದು ಕಡೆ ಇರಿಸು ಅಂದನು. ಹೀಗೆ ಅವಳು ಅವನನ್ನು ಬಿಟ್ಟು ಹೋಗಿ ತಾನೂ ತನ್ನ ಕುಮಾರರೂ ಬಾಗಲು ಮುಚ್ಚಿದರು; ಇವರು ಅವಳ ಬಳಿಗೆ ಪಾತ್ರೆಗಳನ್ನು ತಕ್ಕೊಂಡು ಬಂದರು; ಅವಳು ಹೊಯಿದಳು. ಆ ಪಾತ್ರೆಗಳು ತುಂಬಿದ ತರುವಾಯ ಏನಾಯಿತಂದರೆ, ಅವಳು ತನ್ನ ಮಗನಿಗೆ--ಇನ್ನೊಂದು ಪಾತ್ರೆಯನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದಳು. ಅವನು ಅವಳಿಗೆ--ಇನ್ನು ಪಾತ್ರೆ ಇಲ್ಲ ಅಂದನು. ಆಗ ಎಣ್ಣೆಯುಕ್ಕುವದು ನಿಂತು ಹೋಯಿತು. ಆಗ ಅವಳು ಬಂದು ದೇವರ ಮನುಷ್ಯನಿಗೆ ತಿಳಿಸಿದಳು. ಅವನು--ನೀನು ಹೋಗಿ ಆ ಎಣ್ಣೆಯನ್ನು ಮಾರಿ ನಿನ್ನ ಸಾಲವನ್ನು ತೀರಿಸಿ ಮಿಕ್ಕದ್ದರಿಂದ ನೀನೂ ನಿನ್ನ ಮಕ್ಕಳೂ ಜೀವನ ಮಾಡಿರಿ ಅಂದನು.