Isaiah · chapter 1 · verse 15
Isaiah 1:15 in Kannada
ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
Neevu nimma kaigalannu chaachalu naanu nanna kannugalannu nimage maremaaduvenu; haudu, neevu bahu praarthanegalannu maadi daroo naanu kelenu, nimma kaigalu raktadinda tumbiyave.
Isaiah 1:15 in English
- King James Version (KJV)
- And when ye spread forth your hands, I will hide mine eyes from you: yea, when ye make many prayers, I will not hear: your hands are full of blood.
- World English Bible (WEB)
- When you spread out your hands, I will hide my eyes from you. Yes, when you make many prayers, I will not hear. Your hands are full of blood.
- American Standard Version (ASV)
- And when ye spread forth your hands, I will hide mine eyes from you; yea, when ye make many prayers, I will not hear: your hands are full of blood.
- Bible in Basic English (BBE)
- And when your hands are stretched out to me, my eyes will be turned away from you: even though you go on making prayers, I will not give ear: your hands are full of blood.
- Darby Translation (DBY)
- And when ye spread forth your hands, I will hide mine eyes from you; yea, when ye make many prayers, I will not hear: your hands are full of blood.
- Webster's Bible (WBS)
- And when ye spread forth your hands, I will hide my eyes from you: yes, when ye make many prayers, I will not hear: your hands are full of blood.
- Young's Literal Translation (YLT)
- And in your spreading forth your hands, I hide mine eyes from you, Also when ye increase prayer, I do not hear, Your hands of blood have been full.
Read in context
- 13ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತಾರದಿರಿ, ಧೂಪವು ನನಗೆ ಅಸಹ್ಯ, ಹುಣ್ಣಿಮೆಗಳೂ ಸಬ್ಬತ್ತುಗಳೂ ಸಭೆಗಳು ಕೂಡುವದೂ ಇವು ಬೇಡ; ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ನಾನು ಸಹಿಸಲಾರೆನು.
- 14ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ.
- 15ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
- 16ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ;
- 17ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ.
Cross references
- Micah 3:4 ಮೀಕ 3:4ಆಗ ಅವರು ಕರ್ತನಿಗೆ ಮೊರೆಯಿಡುವರು; ಆದರೆ ಆತನು ಅವರಿಗೆ ಉತ್ತರ ಕೊಡುವದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತನ್ನ ಮುಖವನ್ನು ಮರೆಮಾಡುವನು.
- Isaiah 59:2–3 ಯೆಶಾಯ 59:2–3ನಿಮ್ಮ ಅಕ್ರಮಗಳೇ ನಿಮ್ಮನ್ನು ನಿಮ್ಮ ದೇವರಿಂದ ಅಗಲಿಸಿಯವೆ; ನಿಮ್ಮ ಪಾಪಗಳೇ ಆತನು ಕೇಳದ ಹಾಗೆ ಆತನ ಮುಖವನ್ನು ನಿಮಗೆ ಮರೆಮಾಡಿಯವೆ. ನಿಮ್ಮ ಕೈಗಳು ರಕ್ತದಿಂದಲೂ ನಿಮ್ಮ ಬೆರಳುಗಳು ಅಕ್ರಮದಿಂದಲೂ ಮೈಲಿಗೆಯಾಗಿವೆ; ನಿಮ್ಮ ತುಟಿಗಳು ಸುಳ್ಳನ್ನು ಮಾತಾಡುತ್ತವೆ; ನಿಮ್ಮ ನಾಲಿಗೆ ಅನ್ಯಾಯವನ್ನು ನುಡಿಯುತ್ತದೆ.
- Proverbs 1:28 ಜ್ಞಾನೋಕ್ತಿಗಳು 1:28ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ.
- Zechariah 7:13 ಜೆಕರ್ಯ 7:13ಆಗ ಆದದ್ದೇ ನಂದರೆ--ಅವನು ಕೂಗಲು ಅವರು ಕೇಳದೆ ಇದ್ದ ಪ್ರಕಾರ ಅವರು ಕೂಗಲು ನಾನು ಕೇಳದೆ ಇದ್ದೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
- Jeremiah 7:8–10 ಯೆರೆಮೀಯ 7:8–10ಇಗೋ, ನೀವು ಪ್ರಯೋಜನವಿಲ್ಲದ ಸುಳ್ಳಾದ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ. ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ?
- Psalm 66:18 ಕೀರ್ತನೆಗಳು 66:18ನನ್ನ ಹೃದಯದಲ್ಲಿ ಅಪರಾಧವನ್ನು ನಾನು ಆಶಿಸಿದ್ದರೆ ಕರ್ತನು ನನ್ನ ಪ್ರಾರ್ಥನೆಯನ್ನು ಕೇಳುವದಿಲ್ಲ.
- Isaiah 58:7 ಯೆಶಾಯ 58:7ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ?
- Jeremiah 14:12 ಯೆರೆಮೀಯ 14:12ಅವರು ಉಪವಾಸ ಮಾಡಿದಾಗ್ಯೂ ನಾನು ಅವರ ಮೊರೆಯನ್ನು ಕೇಳುವದಿಲ್ಲ; ಅವರು ದಹನಬಲಿಗಳನ್ನೂ ಕಾಣಿಕೆಗಳನ್ನೂ ಅರ್ಪಿಸಿದಾಗ್ಯೂ ನಾನು ಅವರನ್ನು ಅಂಗೀಕರಿಸುವದಿಲ್ಲ; ಆದರೆ ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ ಎಂದು ಹೇಳಿದನು.
- Luke 13:25–28 ಲೂಕನು 13:25–28ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು. ಆಗ ನೀವು--ನಿನ್ನ ಸನ್ನಿಧಿಯಲ್ಲಿ ನಾವು ತಿಂದು ಕುಡಿದೆವು; ಮತ್ತು ನೀನು ನಮ್ಮ ಬೀದಿಗಳಲ್ಲಿ ಬೋಧಿಸಿದಿ ಎಂದು ಹೇಳಲಾರಂಭಿಸುವಿರಿ. ಆದರೆ ಆತನು--ನೀವು ಎಲ್ಲಿ ಯವರೋ ನಾನರಿಯೆ; ಅಕ್ರಮ ಮಾಡುವವರಾದ ನೀವೆಲ್ಲರೂ ನನ್ನಿಂದ ಹೊರಟುಹೋಗಿರಿ ಎಂದು ಹೇಳುವನೆಂದು ನಾನು ನಿಮಗೆ ಹೇಳುತ್ತೇನೆ. ಆದರೆ ನೀವು ಅಬ್ರಹಾಮ ಇಸಾಕ ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರರಾಜ್ಯದಲ್ಲಿ ಇರುವದನ್ನೂ ನೀವು ಮಾತ್ರ ಹೊರಗೆ ದೊಬ್ಬಲ್ಪಟ್ಟಿರುವದನ್ನೂ ನೋಡು ವಾಗ ಅಲ್ಲಿ ನಿಮಗೆ ಗೋಳಾಟವೂ ಹಲ್ಲುಕಡಿ ಯೋಣವೂ ಇರುವವು.
- Matthew 23:13 ಮತ್ತಾಯನು 23:13ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
- Psalm 55:1 ಕೀರ್ತನೆಗಳು 55:1ಓ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗೆ ನಿನ್ನನ್ನು ಮರೆಮಾಡಿಕೊಳ್ಳಬೇಡ.
- 1 Kings 8:22 1 ಅರಸುಗಳು 8:22ಆಗ ಸೊಲೊಮೋನನು ಇಸ್ರಾಯೇಲಿನ ಸಭೆ ಯವರ ಸಮ್ಮುಖದಲ್ಲಿ ದೇವರ ಬಲಿಪೀಠದ ಮುಂದೆ ನಿಂತು ಆಕಾಶದ ಕಡೆಗೆ ತನ್ನ ಕೈಗಳನ್ನು ಎತ್ತಿ ಹೇಳಿದ್ದೇ ನಂದರೆ--