Isaiah · chapter 1 · verse 18
Isaiah 1:18 in Kannada
ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.
Eega banniri, naavu ottaagi vaadisona endu kartanu heluttaane; nimma paapagalu kadu kempaagiddaroo himadante bilupaaguvavu; kadu kempinante kempaagiddaroo unneyante aaguvavu.
Isaiah 1:18 in English
- King James Version (KJV)
- Come now, and let us reason together, saith the LORD: though your sins be as scarlet, they shall be as white as snow; though they be red like crimson, they shall be as wool.
- World English Bible (WEB)
- “Come now, and let’s reason together,” says the LORD: “Though your sins are as scarlet, they shall be as white as snow. Though they are red like crimson, they shall be as wool.
- American Standard Version (ASV)
- Come now, and let us reason together, saith Jehovah: though your sins be as scarlet, they shall be as white as snow; though they be red like crimson, they shall be as wool.
- Bible in Basic English (BBE)
- Come now, and let us have an argument together, says the Lord: how may your sins which are red like blood be white as snow? how may their dark purple seem like wool?
- Darby Translation (DBY)
- Come now, let us reason together, saith Jehovah: though your sins be as scarlet, they shall be as white as snow; though they be red like crimson, they shall be as wool.
- Webster's Bible (WBS)
- Come now, and let us reason together, saith the LORD: though your sins are as scarlet, they shall be white as snow, though they are red like crimson, they shall be as wool.
- Young's Literal Translation (YLT)
- Come, I pray you, and we reason, saith Jehovah, If your sins are as scarlet, as snow they shall be white, If they are red as crimson, as wool they shall be!
Read in context
- 16ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ;
- 17ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ.
- 18ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.
- 19ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ;
- 20ನೀವು ತಿರಸ್ಕರಿಸಿ ತಿರುಗಿಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಕರ್ತನ ಬಾಯಿಯೇ ಇದನ್ನು ನುಡಿದಿದೆ.
Cross references
- Isaiah 44:22 ಯೆಶಾಯ 44:22ನಾನು ನಿನ್ನ ದ್ರೋಹಗಳನ್ನು ಗಾಢವಾದ ಮೇಘದಂತೆ ಅಳಿಸಿಬಿಟ್ಟಿದ್ದೇನೆ; ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನನ್ನ ಕಡೆಗೆ ತಿರಿಗಿಕೋ, ನಾನು ನಿನ್ನನ್ನು ವಿಮೋಚಿಸಿದ್ದೇನೆ.
- Revelation 7:14 ಪ್ರಕಟನೆ 7:14ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.
- Psalm 51:7 ಕೀರ್ತನೆಗಳು 51:7ಹಿಸ್ಸೋಪ್ನಿಂದ ನನ್ನನ್ನು ತೊಳೆ; ಆಗ ನಾನು ಶುಚಿಯಾಗುವೆನು. ನನ್ನನ್ನು ತೊಳೆ, ಆಗ ಹಿಮಕ್ಕಿಂತ ಬಿಳುಪಾಗುವೆನು.
- Micah 7:18–19 ಮೀಕ 7:18–19ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ. ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ಅವರ ಪಾಪಗಳ ನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವಿ.ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
- Isaiah 43:24–26 ಯೆಶಾಯ 43:24–26ನೀನು ನನಗೋಸ್ಕರ ಹಣದಿಂದ ಗಂಧಕಾಷ್ಟವನ್ನು ಕೊಂಡು ಕೊಳ್ಳಲಿಲ್ಲ ಇಲ್ಲವೆ ನಿನ್ನ ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ತೊಂದರೆಗೊಳಿಸಿದ್ದೀ, ಅಕ್ರಮಗಳಿಂದ ನನ್ನನು ಬೇಸರಗೊಳಿಸಿದ್ದೀ. ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು. ನನಗೆ ಜ್ಞಾಪಕ ಪಡಿಸು, ನಾವಿಬ್ಬರೂ ವಾದಿಸುವಾ, ನೀನು ನೀತಿವಂತ ನೆಂದು ಪ್ರಚುರಪಡಿಸು.
- Ephesians 1:6–8 ಎಫೆಸದವರಿಗೆ 1:6–8ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ. ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು. ಹೀಗೆ ಆತನು ತನ್ನ ಕೃಪಾತಿಶಯದಲ್ಲಿ ಸಕಲ ಜ್ಞಾನವನ್ನೂ ಬುದ್ದಿಯನ್ನೂ ಇನ್ನೂ ಹೆಚ್ಚಾಗಿ ನಮ್ಮ ಕಡೆಗೆ ತೋರಿಸಿದ್ದಾನೆ.
- Isaiah 41:21 ಯೆಶಾಯ 41:21ನಿಮ್ಮ ವ್ಯಾಜ್ಯವನ್ನು ತನ್ನಿರಿ ಎಂದು ಕರ್ತನು ಅನ್ನುತ್ತಾನೆ; ನಿಮ್ಮ ಬಲವಾದ ಕಾರಣಗಳನ್ನು ತನ್ನಿರಿ ಎಂದು ಯಾಕೋಬ್ಯರ ಅರಸನು ಹೇಳುತ್ತಾನೆ.
- Isaiah 41:1 ಯೆಶಾಯ 41:1ಓ ದ್ವೀಪನಿವಾಸಿಗಳೇ, ನನ್ನ ಮುಂದೆ ಮೌನದಿಂದಿರ್ರಿ; ಜನಗಳು ಹೊಸ ಬಲ ವನ್ನು ಹೊಂದಿಕೊಳ್ಳಲಿ; ಅವರು ನನ್ನ ಸವಿಾಪಕ್ಕೆ ಬಂದು ಮಾತಾಡಲಿ; ನ್ಯಾಯತೀರ್ಪಿಗಾಗಿ ಸವಿಾಪಕ್ಕೆ ಒಟ್ಟಾಗಿ ಬರೋಣ.
- Romans 5:20 ರೋಮಾಪುರದವರಿಗೆ 5:20ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
- 1 Samuel 12:7 1 ಸಮುವೇಲನು 12:7ಆದದರಿಂದ ಈಗ ನಿಲ್ಲಿರಿ; ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಮಾಡಿದ ಸಮಸ್ತ ನೀತಿಯುಳ್ಳ ಕ್ರಿಯೆಗಳ ವಿಷಯ ಕರ್ತನ ಮುಂದೆ ನಿಮಗೆ ನ್ಯಾಯ ಹೇಳುತ್ತೇನೆ.
- Acts 17:2 ಅಪೊಸ್ತಲರ ಕೃತ್ಯಗಳು 17:2ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ಬರಹಗಳಿಂದ ಅವರ ಸಂಗಡ ವಾದಿಸಿ
- Acts 18:4 ಅಪೊಸ್ತಲರ ಕೃತ್ಯಗಳು 18:4ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.