Isaiah · chapter 1 · verse 25
Isaiah 1:25 in Kannada
ನನ್ನ ಕೈಯನ್ನು ನಿನ್ನ ಕಡೆಗೆ ತಿರುಗಿಸಿ ಮಲಿನವನ್ನು ಸ್ವಚ್ಚವಾಗಿ ಶುದ್ಧಮಾಡಿ ನಿನ್ನ ಎಲ್ಲಾ ಕಲ್ಮಷವನ್ನು ತೆಗೆದು ಬಿಡುವೆನು.
Nanna kaiyannu ninna kadege tirugisi malinavannu svachchavaagi shuddhamaadi ninna ellaa kalmashavannu tegedu biduvenu.
Isaiah 1:25 in English
- King James Version (KJV)
- And I will turn my hand upon thee, and purely purge away thy dross, and take away all thy tin:
- World English Bible (WEB)
- I will turn my hand on you, thoroughly purge away your dross, and will take away all your tin.
- American Standard Version (ASV)
- and I will turn my hand upon thee, and thoroughly purge away thy dross, and will take away all thy tin;
- Bible in Basic English (BBE)
- And my hand will again be on you, washing away what is unclean as with soap, and taking away all your false metal;
- Darby Translation (DBY)
- And I will turn my hand upon thee, and will thoroughly purge away thy dross, and take away all thine alloy;
- Webster's Bible (WBS)
- And I will turn my hand upon thee, and thoroughly purge away thy dross, and take away all thy tin:
- Young's Literal Translation (YLT)
- And I turn back My hand upon thee, And I refine as purity thy dross, And I turn aside all thy tin,
Read in context
- 23ನಿನ್ನ ಪ್ರಭುಗಳು ಎದುರು ಬೀಳುವವರೂ ಕಳ್ಳರ ಜೊತೆಗಾರರೂ ಆಗಿ ದ್ದಾರೆ; ಪ್ರತಿಯೊಬ್ಬನು ಲಂಚ ಪ್ರಿಯನೂ ಬಹು ಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ; ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವದಿಲ್ಲ.
- 24ಆದದರಿಂದ ಸೈನ್ಯಗಳ ಕರ್ತನೂ ಇಸ್ರಾಯೇಲಿನ ಪರಾಕ್ರಮಿಯೂ ಆದ ಕರ್ತನು ಹೇಳುವದೇನಂದರೆ ಹಾ, ನನ್ನ ವಿರೋಧಿಗಳಿಂದ ನಾನು ಶಾಂತನಾಗಿರು ವೆನು, ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು.
- 25ನನ್ನ ಕೈಯನ್ನು ನಿನ್ನ ಕಡೆಗೆ ತಿರುಗಿಸಿ ಮಲಿನವನ್ನು ಸ್ವಚ್ಚವಾಗಿ ಶುದ್ಧಮಾಡಿ ನಿನ್ನ ಎಲ್ಲಾ ಕಲ್ಮಷವನ್ನು ತೆಗೆದು ಬಿಡುವೆನು.
- 26ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ ನಿನ್ನ ಆಲೋಚನಾ ಪರರನ್ನು ಪ್ರಾರಂಭ ದಲ್ಲಿದ್ದ ಹಾಗೆಯೂ ತಿರಿಗಿ ಒದಗಿಸಿಕೊಡುವೆನು: ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ ನಂಬಿಗಸ್ತಿಕೆಯ ಪಟ್ಟಣವೆಂದೂ ಕರೆಯಲ್ಪಡುವಿ.
- 27ಚೀಯೋನು ನ್ಯಾಯತೀರ್ಪಿನಿಂದಲೂ ಅವಳ ಪರಿವರ್ತನೆಯನ್ನು ಹೊಂದಿದವರು ನೀತಿಯಿಂದಲೂ ಬಿಡುಗಡೆಯಾಗುವರು
Cross references
- Malachi 3:3 ಮಲಾಕಿಯ 3:3ಆತನು ಬೆಳ್ಳಿಯನ್ನು ಕರಗಿಸಿ ಶುದ್ಧಮಾಡುವವನ ಹಾಗೆ ಕುಳಿತು ಲೇವಿಯ ಕುಮಾರರನ್ನು ಶುದ್ಧಮಾಡಿ ಬಂಗಾರದ ಹಾಗೆಯೂ ಬೆಳ್ಳಿಯ ಹಾಗೆಯೂ ಅವ ರನ್ನು ಶುದ್ಧಮಾಡುವನು.
- Isaiah 4:4 ಯೆಶಾಯ 4:4ಕರ್ತನು ನ್ಯಾಯತೀರ್ಪಿನ ಆತ್ಮದಿಂದಲೂ ದಹಿಸುವ ಆತ್ಮದಿಂದಲೂ ಚೀಯೋನಿನ ಕುಮಾರ್ತೆ ಯರ ಕಲ್ಮಷವನ್ನು ತೊಳೆದು ಯೆರೂಸಲೇಮಿನ ಮಧ್ಯ ದಲ್ಲಿರುವ ರಕ್ತವನ್ನು ಶುದ್ಧೀಕರಿಸುವನು.
- Isaiah 1:22 ಯೆಶಾಯ 1:22ನಿನ್ನ ಬೆಳ್ಳಿಯು ಕಂದಾಯಿತು, ನಿನ್ನ ದ್ರಾಕ್ಷಾರಸವು ನೀರಿನೊಂದಿಗೆ ಬೆರಿಕೆಯಾಯಿತು.
- Jeremiah 9:7 ಯೆರೆಮೀಯ 9:7ಆದದರಿಂದ ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ಅವರನ್ನು ಕರಗಿಸಿ ಶೋಧಿ ಸುತ್ತೇನೆ; ನನ್ನ ಜನರ ಮಗಳಿಗೋಸ್ಕರ ನಾನು ಹೇಗೆ ಮಾಡಲಿ?
- Isaiah 6:11–13 ಯೆಶಾಯ 6:11–13ಆಗ ನಾನು ಕರ್ತನೇ, ಇದು ಎಷ್ಟರ ವರೆಗೆ ಅಂದೆನು. ಅದಕ್ಕೆ ಆತನು--ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯ ನಿಲ್ಲದೆ ದೇಶವು ಸಂಪೂರ್ಣವಾಗಿ ಹಾಳಾಗುವ ವರೆಗೆ ಕರ್ತನು ಮನುಷ್ಯರನ್ನು ದೂರಮಾಡುವ ವರೆಗೂ ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವ ವರೆಗೂ ಅದು ಇರುವುದು;ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು. ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.
- Zephaniah 3:11 ಚೆಫನ್ಯ 3:11ಆ ದಿನದಲ್ಲಿ ನೀನು ನನಗೆ ವಿರೋಧ ವಾಗಿ ಪಾಪ ಮಾಡಿದ ನಿನ್ನ ಎಲ್ಲಾ ಕ್ರಿಯೆಗಳ ನಿಮಿತ್ತ ನಾಚಿಕೆಪಡದೆ ಇರುವಿ; ಆಗ ನಿನ್ನ ಹೆಚ್ಚಳದಲ್ಲಿ ಸಂಭ್ರಮ ಪಡುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕು ವೆನು; ನನ್ನ ಪರಿಶುದ್ಧ ಪರ್ವತಕ್ಕೋಸ್ಕರ ಇನ್ನು ಮೇಲೆ ನೀನು ಗರ್ವಪಡುವದೇ ಇಲ್ಲ.
- Ezekiel 20:38 ಯೆಹೆಜ್ಕೇಲನು 20:38ಇದ ಲ್ಲದೆ ತಿರುಗಿಬಿದ್ದವರನ್ನೂ ನನಗೆ ವಿರೋಧವಾಗಿ ಅಪರಾಧಮಾಡಿದವರನ್ನೂ ನಿಮ್ಮೊಳಗಿಂದ ಶುದ್ಧಿ ಮಾಡುತ್ತೇನೆ. ಅವರು ತಂಗುವ ದೇಶದೊಳಗಿಂದ ಅವರನ್ನು ಹೊರಗೆ ತರುತ್ತೇನೆ. ಅವರು ಇಸ್ರಾಯೇಲ್ ದೇಶದೊಳಗೆ ಹೋಗದ ಹಾಗೆ ಮಾಡಿ ನಾನೇ ಕರ್ತ ನೆಂಬದನ್ನು ಅವರಿಗೆ ತಿಳಿಸುತ್ತೇನೆ.
- Ezekiel 22:22 ಯೆಹೆಜ್ಕೇಲನು 22:22ಬೆಳ್ಳಿಯು ಕುಲುಮೆಯಲ್ಲಿ ಕರಗುವ ಹಾಗೆ ನೀವು ನನ್ನ ರೋಷಾಗ್ನಿಯಲ್ಲಿ ಕರಗು ವಿರಿ; ನಿನ್ನ ಮೇಲೆ ರೋಷಾಗ್ನಿಯನ್ನು ಸುರಿಸಿದಾತನು ಕರ್ತನಾದ ನಾನೇ ಎಂದು ನಿಮಗೆ ತಿಳಿಯುತ್ತದೆ.
- Jeremiah 6:29 ಯೆರೆಮೀಯ 6:29ತಿದಿಯು ಸುಡುತ್ತದೆ, ಬೆಂಕಿಯೊಳಗಿಂದ ಸೀಸವು ಕರಗುತ್ತದೆ; ಪುಟಕ್ಕೆ ಹಾಕುವವನು ವ್ಯರ್ಥವಾಗಿ ಹಾಕುತ್ತಾನೆ; ಕೆಟ್ಟವರು ಕಿತ್ತು ತೆಗೆಯಲ್ಪಡಲಿಲ್ಲ;ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವದು; ಕರ್ತನು ಅವರನ್ನು ತಳ್ಳಿದ್ದಾನೆ.
- Zechariah 13:7–9 ಜೆಕರ್ಯ 13:7–9ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ. ಕರ್ತನು--ಇದಲ್ಲದೆ ಸಮಸ್ತ ದೇಶದಲ್ಲಿ ಆಗುವದೇನಂದರೆ-- ಅದರಲ್ಲಿ ಎರಡು ಪಾಲು ಕಡಿಯಲ್ಪಟ್ಟು ಸಾಯುವದು; ಆದರೆ ಮೂರನೇ ಪಾಲು ಅದರಲ್ಲಿ ಬಿಡಲ್ಪಡುವದು.ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ. ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
- Matthew 3:12 ಮತ್ತಾಯನು 3:12ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
- Revelation 3:19 ಪ್ರಕಟನೆ 3:19ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.