Isaiah · chapter 1 · verse 30
Isaiah 1:30 in Kannada
ನೀವು ಎಲೆ ಬಾಡಿದ ಏಲಾಮರದಂತೆಯೂ ನೀರಿಲ್ಲದ ತೋಟದಂತೆಯೂ ಇರುವಿರಿ.ನಿಮ್ಮಲ್ಲಿನ ಬಲಿಷ್ಠನೇ ಸಣಬಿನ ನಾರು, ಅದನ್ನು ಮಾಡುವವನು ಕಿಡಿ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.
Neevu ele baadida elaamaradanteyoo neerillada totadanteyoo iruviri.nimmallina balishthane sanabina naaru, adannu maaduvavanu kidi, averadoo seri yaaroo aarisalaagadante avu suttuhoguvavu.
Isaiah 1:30 in English
- King James Version (KJV)
- For ye shall be as an oak whose leaf fadeth, and as a garden that hath no water.
- World English Bible (WEB)
- For you shall be as an oak whose leaf fades, and as a garden that has no water.
- American Standard Version (ASV)
- For ye shall be as an oak whose leaf fadeth, and as a garden that hath no water.
- Bible in Basic English (BBE)
- For you will be like a tree whose leaves have become dry, and like a garden without water.
- Darby Translation (DBY)
- For ye shall be as a terebinth whose leaf fadeth, and as a garden that hath no water.
- Webster's Bible (WBS)
- For ye shall be as an oak whose leaf fadeth, and as a garden that hath no water.
- Young's Literal Translation (YLT)
- For ye are as an oak whose leaf is fading, And as a garden that hath no water.
Read in context
- 28ಆದರೆ ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ ನಾಶವಾಗುವರು ಮತ್ತು ಕರ್ತ ನನ್ನು ತೊರೆದವರು ದಹಿಸಲ್ಪಡುವರು.
- 29ನೀವು ಇಷ್ಟ ಪಟ್ಟ ಏಲಾಮರಗಳ ನಿಮಿತ್ತ ನಾಚಿಕೊಳ್ಳುವರು, ಆರಿಸಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.
- 30ನೀವು ಎಲೆ ಬಾಡಿದ ಏಲಾಮರದಂತೆಯೂ ನೀರಿಲ್ಲದ ತೋಟದಂತೆಯೂ ಇರುವಿರಿ.ನಿಮ್ಮಲ್ಲಿನ ಬಲಿಷ್ಠನೇ ಸಣಬಿನ ನಾರು, ಅದನ್ನು ಮಾಡುವವನು ಕಿಡಿ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.
- 31ನಿಮ್ಮಲ್ಲಿನ ಬಲಿಷ್ಠನೇ ಸಣಬಿನ ನಾರು, ಅದನ್ನು ಮಾಡುವವನು ಕಿಡಿ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.
Cross references
- Jeremiah 17:5–6 ಯೆರೆಮೀಯ 17:5–6ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯನಲ್ಲಿ ನಂಬಿಕೆ ಇಟ್ಟು ಅವನನ್ನು ತನ್ನ ಬಾಹುವನ್ನಾಗಿ ಮಾಡಿ ಕೊಂಡು ಕರ್ತನ ಕಡೆಯಿಂದ ಯಾವನ ಹೃದಯವು ತೊಲಗುವದೋ ಅವನು ಶಾಪಗ್ರಸ್ತನು. ಅವನು ಅಡವಿಯಲ್ಲಿರುವ ಕುರುಚಲ ಗಿಡದ ಹಾಗಿರುವನು; ಒಳ್ಳೇದು ಬರುವಾಗ ನೋಡದೆ ಇರುವನು; ನಿವಾಸಿ ಗಳಿಲ್ಲದ ಚೌಳುನೆಲವಾಗಿರುವ ಅರಣ್ಯದ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು.
- Matthew 21:19 ಮತ್ತಾಯನು 21:19ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ. ಆಗ ಆತನು ಅದಕ್ಕೆ--ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು. ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು.
- Ezekiel 17:24 ಯೆಹೆಜ್ಕೇಲನು 17:24ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
- Isaiah 5:6 ಯೆಶಾಯ 5:6ಅದನ್ನು ನಾನು ಹಾಳಾಗಲು ಬಿಡುವೆನು: ಅದನ್ನು ಯಾರೂ ಕುಡಿ ಕತ್ತರಿಸುವದಿಲ್ಲ; ಅಗೆಯುವದೂ ಇಲ್ಲ. ಆದರೆ ಅಲ್ಲಿ ಮುಳ್ಳುಪೊದೆಗಳು ಬೆಳೆಯುವವು; ಅಲ್ಲದೆ ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾ ಪಿಸುವೆನು.
- Isaiah 58:11 ಯೆಶಾಯ 58:11ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ.
- Ezekiel 31:4–18 ಯೆಹೆಜ್ಕೇಲನು 31:4–18ನೀರು ಅದನ್ನು ಬೆಳೆಸಿತು, ಅಗಾಧವು ತನ್ನ ನದಿಗಳನ್ನು ಅದರ ಸುತ್ತಲೂ ಹರಿಸಿ ತನ್ನ ಕಾಲುವೆಗಳನ್ನು ಬಯಲಿನ ಮರಗಳಿಗೆಲ್ಲಾ ಕಳುಹಿಸಿ, ಅದನ್ನು ಎತ್ತರವಾಗಿ ಬೆಳೆಯುವಂತೆ ಮಾಡಿತು. ಆದ ದರಿಂದ ಅದರ ಎತ್ತರವು ಬಯಲಿನ ಎಲ್ಲಾ ಮರ ಗಳಿಗಿಂತ ಎತ್ತರವಾಗಿತ್ತು; ಅದು ಹಬ್ಬಿದ್ದದರಿಂದ ಮತ್ತು ಹೆಚ್ಚು ನೀರಿನ ದೆಸೆಯಿಂದ ಅದರ ಕೊಂಬೆಗಳು ಅಧಿಕವಾದವು; ಅದರ ರೆಂಬೆಗಳು ಉದ್ದವಾದವು. ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಅದರ ರೆಂಬೆ ಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮಕೊಟ್ಟವು; ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು. ಹೀಗೆ ಅವನು ತನ್ನ ದೊಡ್ಡಸ್ತಿಕೆಯಲ್ಲಿ ತನ್ನ ಕೊಂಬೆಗಳ ಉದ್ದದಲ್ಲಿ ಸುಂದರವಾಗಿದ್ದನು; ಯಾಕಂದರೆ ಅವನ ಬೇರು ಮಹಾ ನೀರಿನಿಂದಾಗಿತ್ತು. ದೇವರ ತೋಟದ ದೇವದಾರುಗಳು ಅವನನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅವನ ಕೊಂಬೆಗಳಿಗೆ ಸಮ ವಾಗಲಿಲ್ಲ; ಆಲದ ಮರಗಳು ಅವನ ರೆಂಬೆಗಳಷ್ಟೂ ಇಲ್ಲ; ಆ ದೇವರ ತೋಟದ ಯಾವುದೇ ಮರವು ಇವನ ಸೌಂದರ್ಯಕ್ಕೆ ಸಮವಾಗಲಿಲ್ಲ. ನಾನು ಅವನನ್ನು ಅವನ ಕೊಂಬೆಗಳ ಸಮೂಹದಿಂದ ಸೌಂದರ್ಯಪಡಿಸಿದೆನು; ಅದರಿಂದ ದೇವರ ತೋಟ ದಲ್ಲಿನ ಏದೆನಿನ ಮರಗಳೆಲ್ಲಾ ಅವನ ಮೇಲೆ ಹೊಟ್ಟೇ ಕಿಚ್ಚುಪಟ್ಟವು. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಯಾಕಂದರೆ ನೀನು ನೀಳದಲ್ಲಿ ಎತ್ತರವಾಗಿ ಅವನು ತನ್ನ ತಲೆಯನ್ನು ಒತ್ತಿಕೊಂಡಿರುವ ಕೊಂಬೆಗಳ ಕಡೆಗೆ ಚಾಚಿದ ಕಾರಣದಿಂದ ಅವನ ಹೃದಯವು ತನ್ನ ಎತ್ತರದಲ್ಲಿ ಹೆಚ್ಚಿಸಲ್ಪಟ್ಟಿದೆ. ಆದದರಿಂದ ನಾನು ಅವನನ್ನು ಅನ್ಯಜನಾಂಗಗಳಲ್ಲಿ ಶೂರನಾದ ಒಬ್ಬನ ಕೈಗೆ ಒಪ್ಪಿಸಿದ್ದೇನೆ; ಇವನು ನಿಶ್ಚಯವಾಗಿ ಅವನನ್ನು ದಂಡಿಸುತ್ತಾನೆ. ಅವನ ದುಷ್ಟತ್ವದ ನಿಮಿತ್ತ ನಾನು ಅವನನ್ನು ತಳ್ಳಿಹಾಕಿದ್ದೇನೆ. ಜನಾಂಗಗಳಲ್ಲಿ ಭಯಂಕರವಾದ ಅಪರಿಚಿತರು ಅವನನ್ನು ಕಡಿದುಹಾಕು ವರು. ಎಲ್ಲಾ ಬೆಟ್ಟಗಳ ಮೇಲೆಯೂ ತಗ್ಗುಗಳಲ್ಲಿಯೂ ಅವನ ಕೊಂಬೆಗಳು ಬೀಳುವವು, ದೇಶದ ಹಳ್ಳಗಳ ಲ್ಲೆಲ್ಲಾ ಅವನ ರೆಂಬೆಗಳು ಮುರಿದುಹೋಗುವವು; ಭೂಮಿಯ ಜನಗಳೆಲ್ಲಾ ಅವನ ನೆರಳಿನಿಂದ ದೂರ ಸರಿದು ಅವನನ್ನು ಬಿಟ್ಟುಬಿಡುವರು. ಅವನ ಬುಡದ ಮೇಲೆ ಆಕಾಶದ ಪಕ್ಷಿಗಳೆಲ್ಲಾ ಕೂತುಕೊಳ್ಳುವವು; ಬಯಲಿನ ಎಲ್ಲಾ ಪ್ರಾಣಿಗಳು ಅವನ ರೆಂಬೆಗಳ ಬಳಿಯಲ್ಲಿರುವವು; ನೀರಾವರಿಯ ಯಾವ ಮರಗಳು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗಲಿಸದೆ ಇರುವದರಿಂದ ನೀರನ್ನು ಹೀರುತ್ತಲಿರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು, ಅವೆಲ್ಲಾ ಮರಣದ ಪಾಲಾಗುವವು; ಅವುಗಳಿಗೆ ಅಧೋ ಲೋಕವೇ ಗತಿಯಾಗುವದು, ಪಾತಾಳಕ್ಕೆ ಇಳಿದು ಹೋದ ಮನುಷ್ಯ ಜನ್ಮದವರ ಬಳಿಗೆ ಒಂದೇ ಗುಂಪಾಗಿ ಸೇರುವವು. ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅವನು ಸಮಾಧಿಗೆ ಇಳಿದ ದಿನದಲ್ಲಿ ಗೋಳಾಟ ಹುಟ್ಟಿಸುವೆನು, ಅವನಿಗಾಗಿ ನಾನು ಅಗಾಧವನ್ನು ಮುಚ್ಚುವೆನು; ನಾನು ಅದರ ಪ್ರವಾಹವನ್ನು ತಡೆಹಿಡಿಯುವೆನು; ಮಹಾ ಜಲವು ನಿಲ್ಲಿಸಲ್ಪಡುವವು. ನಾನು ಲೆಬನೋನನ್ನು ಸಹ ಅವನಿಗೋಸ್ಕರ ಗೋಳಾಡಿಸುವೆನು. ಬಯಲಿನ ಮರಗಳೆಲ್ಲಾ ಅವನಿಗೋಸ್ಕರ ಕುಗ್ಗಿಹೋಗುವವು. ನಾನು ಅದನ್ನು ಕುಣಿಗೆ ಇಳಿಯುವವರ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು; ಅಧೋ ಲೋಕಕ್ಕೆ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ನೀರು ಕುಡಿಯುವವುಗಳೆಲ್ಲಾ ಕೆಳಗಿನ ಸೀಮೆಯಲ್ಲಿ ಸಂತೈಸಿ ಕೊಂಡವು. ಅವರು ಕೂಡ ಅನ್ಯಜನಾಂಗಗಳೊಳಗೆ ಅವನ ನೆರಳಿನಲ್ಲಿ ಕುಳಿತುಕೊಳ್ಳುವರು; ಅವನ ಕೈಗಳು ಸಹ ಅವನ ಸಂಗಡವೇ ಪಾತಾಳಕ್ಕೆ ಕತ್ತಿಯಿಂದ ಹತವಾದವರ ಬಳಿಗೆ ಇಳಿದುಹೋಗುವವು;ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆ ಯಿಂದಲೂ ಏದೆನಿನ ಯಾವ ಮರಗಳಿಗೆ ಸಮ ನಾಗಿರುವೆ? ಆದರೂ ಏದೆನಿನ ಮರಗಳ ಸಂಗಡ ಕೆಳಗಿನ ಸೀಮೆಗಳಿಗೆ ಇಳಿಸಲ್ಪಡುವಿ; ಸುನ್ನತಿಯಿಲ್ಲದವರ ಮಧ್ಯದಲ್ಲಿ ಕತ್ತಿಯಿಂದ ಹತವಾದವರ ಸಂಗಡ ಮಲ ಗುವಿ. ಇದೇ ಫರೋಹನನೂ ಅವನ ಎಲ್ಲಾ ಜನ ಸಮೂಹವೂ ಆಗಿವೆ ಎಂದು ದೇವರಾದ ಕರ್ತನು ಹೇಳುತ್ತಾನೆ. ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆ ಯಿಂದಲೂ ಏದೆನಿನ ಯಾವ ಮರಗಳಿಗೆ ಸಮ ನಾಗಿರುವೆ? ಆದರೂ ಏದೆನಿನ ಮರಗಳ ಸಂಗಡ ಕೆಳಗಿನ ಸೀಮೆಗಳಿಗೆ ಇಳಿಸಲ್ಪಡುವಿ; ಸುನ್ನತಿಯಿಲ್ಲದವರ ಮಧ್ಯದಲ್ಲಿ ಕತ್ತಿಯಿಂದ ಹತವಾದವರ ಸಂಗಡ ಮಲ ಗುವಿ. ಇದೇ ಫರೋಹನನೂ ಅವನ ಎಲ್ಲಾ ಜನ ಸಮೂಹವೂ ಆಗಿವೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 17:9–10 ಯೆಹೆಜ್ಕೇಲನು 17:9–10ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅದು ಸಮೃದ್ಧಿಯಾಗಿ ರುವದೋ? ಆ ಹದ್ದು ಅದರ ಬೇರುಗಳನ್ನು ಕಿತ್ತು ಅದರ ಹಣ್ಣುಗಳನ್ನು ತೆಗೆದುಬಿಟ್ಟರೆ ಅದು ಒಣಗುವದಿಲ್ಲವೇ? ಅದರ ಮೊಳಕೆಯ ಎಲೆಗಳೆಲ್ಲಾ ಒಣಗಿಹೋದಾಗ ಅದನ್ನು ಬೇರು ಸಹಿತ ಕೀಳಬೇಕಾದರೆ ಮಹಾಬಲವಾಗಲೀ ಅಥವಾ ಬಹಳ ಜನರಾಗಲೀ ಇರಬೇಕು. ಹೌದು, ಇಗೋ, ನೆಟ್ಟಿರಲಾಗಿ ಅದು ಸಮೃದ್ಧಿಯಾಗಿರುವದೇ? ಅದಕ್ಕೆ ಮೂಡಣಗಾಳಿ ತಗಲುವಾಗ ಅದು ಸಂಪೂರ್ಣ ವಾಗಿ ಒಣಗುವದಿಲ್ಲವೇ? ಅದು ಮೊಳೆತ ಪಾತಿಗಳ ಲ್ಲಿಯೇ ಒಣಗಿಹೋಗುವದು.
- Jeremiah 31:12 ಯೆರೆಮೀಯ 31:12ಆದದರಿಂದ ಅವರು ಬಂದು ಚೀಯೋನಿನ ಉನ್ನತದಲ್ಲಿ ಹಾಡಿ ಕರ್ತನ ಒಳ್ಳೇತನದ ಬಳಿಗೆ ಗೋಧಿಯ ನಿಮಿತ್ತವೂ ದ್ರಾಕ್ಷಾರಸದ ನಿಮಿತ್ತವೂ ಎಣ್ಣೆಯ ನಿಮಿತ್ತವೂ ಮಂದೆ ದನ ಮರಿಗಳ ನಿಮಿತ್ತವೂ ಪ್ರವಾಹದಂತೆ ಬರುವರು; ಅವರ ಪ್ರಾಣವು ಚೆನ್ನಾಗಿ ನೀರು ಹಾಕಿದ ತೋಟದ ಹಾಗೆ ಇರುವದು; ಅವರು ಇನ್ನು ಮೇಲೆ ಯಾವಾಗಲೂ ದುಃಖಪಡುವದಿಲ್ಲ.