Isaiah · chapter 10 · verse 16
Isaiah 10:16 in Kannada
ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು.
Aadakaarana sainyagala kartanaada kartanu avana kobbinalli kshayavannuntumaaduvanu; dahi suva agniyantiruva uriyondu avana vaibha vada kelage hattikolluvadu.
Isaiah 10:16 in English
- King James Version (KJV)
- Therefore shall the Lord, the Lord of hosts, send among his fat ones leanness; and under his glory he shall kindle a burning like the burning of a fire.
- World English Bible (WEB)
- Therefore the Lord, GOD of Armies, will send among his fat ones leanness; and under his glory a burning will be kindled like the burning of fire.
- American Standard Version (ASV)
- Therefore will the Lord, Jehovah of hosts, send among his fat ones leanness; and under his glory there shall be kindled a burning like the burning of fire.
- Bible in Basic English (BBE)
- For this cause the Lord, the Lord of armies, will make his fat become wasted; and in his inner parts a fire will be lighted like a burning flame.
- Darby Translation (DBY)
- Therefore shall the Lord, Jehovah of hosts, send among his fat ones leanness, and under his glory he shall kindle a burning, like the burning of a fire:
- Webster's Bible (WBS)
- Therefore will the LORD, the LORD of hosts, send among his fat ones leanness; and under his glory he will kindle a burning like the burning of a fire.
- Young's Literal Translation (YLT)
- Therefore doth the Lord, the Lord of Hosts, Send among his fat ones leanness, And under his honour He kindleth a burning As the burning of a fire.
Read in context
- 14ಜನಗಳ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ, ಬಿಡಲ್ಪಟ್ಟ ಮೊಟ್ಟೆಗಳನ್ನು ಕೂಡಿಸುವಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾ ಡಿಸಿ ಬಾಯಿತೆರೆದು ಕಿಚುಗುಟ್ಟುವವರು ಯಾರೂ ಇಲ್ಲವೆಂದು ಅಂದುಕೊಂಡನು.
- 15ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು.
- 16ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು.
- 17ಇಸ್ರಾಯೇಲಿನ ಬೆಳಕು ಬೆಂಕಿಯಾಗುವದು, ಅದರ ಪರಿಶುದ್ಧನು ಜ್ವಾಲೆ ಯಂತಿರುವನು; ಅದು ಒಂದೇ ದಿನದಲ್ಲಿ ಅವನ ಮುಳ್ಳು ದತ್ತೂರಿಗಳನ್ನು ದಹಿಸಿನುಂಗಿಬಿಡುವದು;
- 18ಅದು ದೇಹ ಮತ್ತು ಆತ್ಮಗಳನ್ನೂ ಅವನವನ ಹಾಗೂ ಫಲವತ್ತಾದ ಹೊಲವು ಹೊಂದಿರುವ ಘನತೆಯನ್ನೂ ದಹಿಸಿಬಿಡುವದು; ಅದು ಮೂರ್ಛೆ ಹೋಗುವ ರೋಗಿಯಂತಿರುವದು.
Cross references
- 2 Chronicles 32:21 2 ಪೂರ್ವಕಾಲವೃತ್ತಾಂತ 32:21ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು.
- Acts 12:23 ಅಪೊಸ್ತಲರ ಕೃತ್ಯಗಳು 12:23ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
- Psalm 106:15 ಕೀರ್ತನೆಗಳು 106:15ಆಗ ಅವರ ಬೇಡಿಕೆಯಂತೆ ಅವರಿಗೆ ಆತನು ಕೊಟ್ಟನು; ಆದರೆ ಅವರ ಪ್ರಾಣದಲ್ಲಿ ಕ್ಷೀಣತೆಯನ್ನು ಕಳುಹಿಸಿದನು.
- Isaiah 10:18 ಯೆಶಾಯ 10:18ಅದು ದೇಹ ಮತ್ತು ಆತ್ಮಗಳನ್ನೂ ಅವನವನ ಹಾಗೂ ಫಲವತ್ತಾದ ಹೊಲವು ಹೊಂದಿರುವ ಘನತೆಯನ್ನೂ ದಹಿಸಿಬಿಡುವದು; ಅದು ಮೂರ್ಛೆ ಹೋಗುವ ರೋಗಿಯಂತಿರುವದು.
- Isaiah 37:6–7 ಯೆಶಾಯ 37:6–7ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ನೀನು ಕೇಳಿದ್ದೀ; ಆದರೆ ನೀನು ಅವುಗಳಿಗೆ ಹೆದರಬೇಡ. ಇಗೋ, ನಾನು ಅವನ ಮೇಲೆ ಒಂದು ವಿಪತ್ತನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತಿರುಗಿಕೊಂಡು ಸ್ವದೇಶಕ್ಕೆ ಹೋಗಿ ಅಲ್ಲಿ ಕತ್ತಿಯಿಂದ ಬೀಳುವಂತೆ ಮಾಡುವೆನು ಎಂಬ ಈ ಮಾತುಗಳನ್ನು ನಿಮ್ಮ ಯಜಮಾನರಿಗೆ ತಿಳಿಸಿರಿ ಎಂದು ಹೇಳಿದನು.
- Isaiah 30:30–33 ಯೆಶಾಯ 30:30–33ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು. ಕರ್ತನು ದಂಡದಿಂದ ದಂಡಿಸುವಾಗ ಅಶ್ಶೂರ್ಯವು ಆತನ ಸ್ವರದಿಂದಲೇ ಮುರಿದುಹೋಗು ವದು. ಕರ್ತನು ಅದರ ಮೇಲೆ ತರುವದಕ್ಕೆ ನೇಮಿ ಸಿದ ದಂಡವು ಹಾದುಹೋಗುವಲ್ಲೆಲ್ಲಾ ಅದು ದಮ್ಮಡಿ ಕಿನ್ನರಿಗಳ ಸಂಗಡ ಇರುವದು; ಆತನು ಗದ್ದಲವುಳ್ಳ ಯುದ್ಧಗಳಲ್ಲಿ ಅದರ ಸಂಗಡ ಯುದ್ಧಮಾಡುವನು.ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು. ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
- Isaiah 5:17 ಯೆಶಾಯ 5:17ಆಗ ಕುರಿಮರಿಗಳು ತಮಗೆ ಮನಸ್ಸು ಬಂದ ಹಾಗೆ ಮೇಯುವವು, ಕೊಬ್ಬಿದವರ ಹಾಳಾದವುಗಳನ್ನು ಅನ್ಯರು ತಿನ್ನುವರು.
- Isaiah 29:5–8 ಯೆಶಾಯ 29:5–8ಅದೂ ಅಲ್ಲದೆ ನಿನ್ನ ಅನ್ಯರ ಗುಂಪು ಸೂಕ್ಷ್ಮ ವಾದ ದೂಳಿನಂತಾಗುವದು, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನ ಹಾಗೆ ಇರು ವದು; ಹೌದು, ಅದು ಕ್ಷಣ ಮಾತ್ರದಲ್ಲಿ ಫಕ್ಕನೆ ಆಗುವದು. ಸೈನ್ಯಗಳ ಕರ್ತನ ಕಡೆಯಿಂದಲೇ ನೀನು ಗುಡುಗಿನಿಂದಲೂ ಮಹಾಶಬ್ದದಿಂದಲೂ ಬಿರುಗಾಳಿ, ಸುಳಿಗಾಳಿಯಿಂದಲೂ ದಹಿಸುವ ಅಗ್ನಿಜ್ವಾಲೆಯಿಂದ ಲೂ ವಿಚಾರಿಸಲ್ಪಡುವಿ. ಅರೀಯೇಲಿನ ಮೇಲೆ ಹೋರಾಡಿ ಅದಕ್ಕೂ ಅದರ ಕೋಟೆಗೂ ವಿರುದ್ಧ ವಾಗಿ ಯುದ್ಧ ಮಾಡಿ ಬಾಧಿಸುವ ಸಕಲ ಜನಾಂಗಗಳ ಗುಂಪು ರಾತ್ರಿಯ ದರ್ಶನದ ಕನಸಿನಂತೆ ಮಾಯ ವಾಗುವದು. ಹಸಿದ ಮನುಷ್ಯನು ಕನಸುಕಂಡು ಇಗೋ, ಉಣ್ಣುತ್ತಾನೆ ಆದರೆ ಅವನು ಎಚ್ಚತ್ತಾಗ ಪ್ರಾಣ ತುಂಬದ ಹಾಗೆಯೂ ಇಲ್ಲವೆ ಬಾಯಾರಿದ ವನು ಸ್ವಪ್ನದಲ್ಲಿ ಇಗೋ, ಕುಡಿಯುತ್ತಾನೆ ಆದರೆ ಅವನು ಎಚ್ಚರವಾದಾಗ ಇಗೋ, ಬಲಹೀನನಾಗಿದ್ದು ಪ್ರಾಣ ಆಶಿಸುವ ಹಾಗೆಯೂ ಚೀಯೋನ್ ಪರ್ವ ತಕ್ಕೆ ವಿರೋಧವಾಗಿ ಯುದ್ಧಮಾಡುವ ಹಾಗೆಯೇ ಎಲ್ಲಾ ಜನಾಂಗಗಳ ಸಮೂಹವಿರುವದು.
- Isaiah 9:5 ಯೆಶಾಯ 9:5ಯುದ್ಧವೀರರ ಪ್ರತಿಯುದ್ಧವು ಗಲಿಬಿಲಿಯ ಗದ್ದಲ ದಿಂದ ಕೂಡಿದ್ದಾಗಿಯೂ ವಸ್ತ್ರಗಳು ರಕ್ತದಲ್ಲಿ ಹೊರಳಾ ಡಿದವುಗಳಾಗಿಯೂ ಇರುತ್ತವೆ; ಆದರೆ ಇವು ಬೆಂಕಿಗೆ ಆಹುತಿಯಾಗಿ ಸುಟ್ಟುಹೋಗುವವು.
- Isaiah 37:29 ಯೆಶಾಯ 37:29ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ.
- Isaiah 17:4 ಯೆಶಾಯ 17:4ಆ ದಿವಸದಲ್ಲಿ ಆಗುವದೇನಂದರೆ--ಯಾಕೋ ಬಿನ ವೈಭವ ತಗ್ಗುವದು; ಅದರ ಮಾಂಸದ ಕೊಬ್ಬು ಕರಗಿಸಲ್ಪಡುವದು.
- Isaiah 33:10–14 ಯೆಶಾಯ 33:10–14ಕರ್ತನು ಹೀಗನ್ನುತ್ತಾನೆ--ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿ ಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು. ನೀವು ಹೊಟ್ಟನ್ನು ಗರ್ಭಧರಿಸಿ ಕೂಳೆಯನ್ನು ಹೆರು ವಿರಿ. ನಿಮ್ಮ ಶ್ವಾಸವು ನಿಮ್ಮನ್ನೇ ನುಂಗುವ ಜ್ವಾಲೆಯಾಗು ವದು. ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವವು. ಕತ್ತರಿಸಿದ ಮುಳ್ಳು ಕೊಂಪೆಗೆ ಬೆಂಕಿಹಚ್ಚಿದಂತಾಗು ವದು. ದೂರದಲ್ಲಿರುವವರೇ, ನಾನು ಮಾಡಿದ್ದನ್ನು ಕೇಳಿರಿ. ಸವಿಾಪದಲ್ಲಿರುವವರೇ, ನನ್ನ ಪರಾಕ್ರಮ ವನ್ನು ತಿಳಿದುಕೊಳ್ಳಿರಿ. ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯವು ಕಪಟಿಗಳನ್ನು ಆಶ್ಚರ್ಯಕ್ಕೊಳಗಾಗಿ--ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗಿಯಾರು ಅಂದುಕೊಳ್ಳುವರು.