Isaiah · chapter 10 · verse 23
Isaiah 10:23 in Kannada
ಸೈನ್ಯಗಳ ದೇವರಾದ ಕರ್ತನು ಎಲ್ಲಾ ದೇಶದ ಮಧ್ಯದಲ್ಲಿ ನಿಶ್ಚ ಯಿಸಲ್ಪಟ್ಟ ಕ್ಷೀಣತೆಯನ್ನು ಉಂಟುಮಾಡುವನು.
Sainyagala devaraada kartanu ellaa deshada madhyadalli nishcha yisalpatta ksheenateyannu untumaaduvanu.
Isaiah 10:23 in English
- King James Version (KJV)
- For the Lord GOD of hosts shall make a consumption, even determined, in the midst of all the land.
- World English Bible (WEB)
- For the Lord, GOD of Armies, will make a full end, and that determined, throughout all the earth.
- American Standard Version (ASV)
- For a full end, and that determined, will the Lord, Jehovah of hosts, make in the midst of all the earth.
- Bible in Basic English (BBE)
- For the Lord, the Lord of armies, is about to make destruction complete in all the land.
- Darby Translation (DBY)
- For a consumption, and [one] determined, will the Lord, Jehovah of hosts, accomplish in the midst of all the land.
- Webster's Bible (WBS)
- For the Lord GOD of hosts will make a consumption, even determined, in the midst of all the land.
- Young's Literal Translation (YLT)
- For a consumption that is determined, The Lord, Jehovah of Hosts, Is making in the midst of all the land.
Read in context
- 21ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾ ಕ್ರಮಿಯಾದ ದೇವರ ಕಡೆಗೆ ಹಿಂತಿರುಗುವರು.
- 22ತನ್ನ ಜನರಾದ ಇಸ್ರಾಯೇಲ್ಯರು ಸಮುದ್ರದ ಮರಳಿನಂತೆ ಇದ್ದರೂ ಅವರಲ್ಲಿ ಉಳಿದವರು ಮಾತ್ರ ಹಿಂತಿರು ಗುವರು; ನಾಶವಾಗುವದಕ್ಕೆ ವಿಧಿಸಲ್ಪಟ್ಟದ್ದು ನೀತಿ ಯೊಂದಿಗೆ ತುಂಬಿ ತುಳುಕುವದು.
- 23ಸೈನ್ಯಗಳ ದೇವರಾದ ಕರ್ತನು ಎಲ್ಲಾ ದೇಶದ ಮಧ್ಯದಲ್ಲಿ ನಿಶ್ಚ ಯಿಸಲ್ಪಟ್ಟ ಕ್ಷೀಣತೆಯನ್ನು ಉಂಟುಮಾಡುವನು.
- 24ಆದದರಿಂದ ಸೈನ್ಯಗಳ ದೇವರಾದ ಕರ್ತನು ಇಂತೆ ನ್ನುತ್ತಾನೆ--ಚೀಯೋನಿನಲ್ಲಿ ವಾಸಿಸುವ ಓ ನನ್ನ ಜನರೇ, ಐಗುಪ್ತ್ಯರಂತೆ ನಿಮ್ಮನ್ನು ಕೋಲಿನಿಂದ ಹೊಡೆದು ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.
- 25ಇನ್ನು ಸ್ವಲ್ಪ ಕಾಲದಲ್ಲಿ, (ನಿಮ್ಮ ಮೇಲಿನ) ಉಗ್ರವು ತೀರಿ ನನ್ನ ಕೋಪವು ಅವರ ನಾಶನಕ್ಕಾ ಗುವದು.
Cross references
- Isaiah 28:22 ಯೆಶಾಯ 28:22ಹೀಗಿರುವದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗ ಬೇಡಿರಿ; ಸೈನ್ಯಗಳ ಕರ್ತನಾದ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರವು ನಿರ್ಣಯಿಸಿದೆ ಎಂಬದನ್ನು ನಾನು ಕೇಳಿದ್ದೇನೆ.
- Isaiah 24:1–23 ಯೆಶಾಯ 24:1–23ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ. ಜನಗಳಿಗೆ ಹೇಗೋ ಹಾಗೆಯೇ ಯಾಜಕರಿಗೂ ದಾಸನಿಗೆ ಹೇಗೋ ಹಾಗೆಯೇ ಅವನ ಯಜಮಾನನಿಗೆ, ದಾಸಿಗೆ ಹೇಗೋ ಹಾಗೆಯೇ ಅವಳ ಯಜಮಾನಿಗೆ; ಕೊಳ್ಳುವವನಿಗೆ ಹೇಗೋ ಹಾಗೆಯೇ ಮಾರುವವನಿಗೆ; ಸಾಲಕೊಡುವವನಿಗೆ ಹೇಗೋ ಹಾಗೆಯೇ ತರುವ ವನಿಗೆ; ಬಡ್ಡಿಕೊಡುವವನಿಗೆ ಹೇಗೋ ಹಾಗೆಯೇ ತಕ್ಕೊಳ್ಳುವವನಿಗೆ ಆಗುವದು. ಭೂಮಿಯು ಬರಿದೇ ಬರಿದಾಗುವದು ಮತ್ತು ಸಂಪೂರ್ಣ ಸುಲಿಗೆಯಾಗು ವದು. ಕರ್ತನು ತಾನೇ ಈ ಮಾತನ್ನು ಹೇಳಿದ್ದಾನೆ. ಭೂಮಿಯು ಪ್ರಲಾಪಿಸುತ್ತಾ ಬಾಡಿಹೋಗುವದು. ಲೋಕವು ಸೊರಗಿ ಬಾಡಿಹೋಗುವದು ಭೂಮಿಯ ಗರ್ವಿಷ್ಠರು ಕುಗ್ಗಿಹೋಗುವರು. ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು. ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅದರಲ್ಲಿ ವಾಸವಾಗಿರು ವವರು ಧ್ವಂಸವಾಗುವರು; ಆದ್ದರಿಂದ ಭೂನಿವಾಸಿ ಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ. ದ್ರಾಕ್ಷಾರಸವು ದುಃಖಿಸುತ್ತದೆ, ದ್ರಾಕ್ಷೆಯು ಕ್ಷೀಣಿಸು ವದು; ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ. ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು. ಇನ್ನು ಗಾನದೊಡನೆ ದ್ರಾಕ್ಷಾರಸ ವನ್ನು ಕುಡಿಯರು; ಕುಡಿಯುವವರಿಗೆ ಮದ್ಯಪಾನವು ಕಹಿಯಾಗುವದು. ಗಲಿಬಿಲಿಗುಂಟಾದ ಪಟ್ಟಣವು ಹಾಳಾಗಿದೆ. ಯಾರು ಒಳಗೆ ಬಾರದಂತೆ ಪ್ರತಿಯೊಂದು ಮನೆಯು ಮುಚ್ಚಿದೆ. ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲ ಅಸ್ತಮಿಸಿದೆ; ದೇಶದ ಸಡಗರವು ತೊಲಗಿಹೋಗಿದೆ. ಪಟ್ಟಣ ದಲ್ಲಿ ಹಾಳೇ ಉಳಿದಿವೆ; ನಾಶನವು ಹೆಬ್ಬಾಗಿಲಿಗೆ ತಟ್ಟಿದೆ. ಎಣ್ಣೇ ಮರವನ್ನು ಬಡಿದ ಮೇಲೆಯೂ ದ್ರಾಕ್ಷೇ ಸುಗ್ಗಿಯು ತೀರಿದ ನಂತರವು ನಿಲ್ಲುವ ಉಳಿದ ಕಾಯಿಗಳ ಹಾಗೆ ದೇಶದಲ್ಲಿರುವದು. ಅವರು ತಮ್ಮ ಸ್ವರವನ್ನೆತ್ತಿ ಕರ್ತನ ಮಹತ್ತಿನ ನಿಮಿತ್ತ ಹಾಡು ವರು, ಸಮುದ್ರದ ಕಡೆಯಿಂದ ಆರ್ಭಟಿಸುವರು. ಆದದರಿಂದ ನೀವು ಕರ್ತನಿಗೆ ಬೆಂಕಿಯಲ್ಲಿಯೂ ಸಮುದ್ರದ ದ್ವೀಪಗಳಲ್ಲಿಯೂ ಇಸ್ರಾಯೇಲ್ಯರ ದೇವ ರಾದ ಕರ್ತನ ಹೆಸರನ್ನು ಘನಪಡಿಸಿರಿ. ಭೂಮಂಡಲದ ಕಟ್ಟಕಡೆಯಿಂದ ನೀತಿವಂತರ ಘನತೆಗೆ ಬರುವಂತಹ ಗೀತೆಗಳು ನಮಗೆ ಕೇಳಿ ಬರು ತ್ತಿವೆ. ನಾನಾದರೋ--ಕ್ಷಮಿಸೇ ಕ್ಷಮಿಸುತ್ತೇನೆ. ನನಗೆ ಅಯ್ಯೋ! ಬಾಧಕರು ಬಾಧಿಸುವದರಲ್ಲಿಯೇ ನಿರತ ರಾಗಿದ್ದಾರೆ; ಹೌದು, ಬಾಧಕರು, ಬಹಳವಾಗಿ ಬಾಧಿ ಸುವದರಲ್ಲಿ ನಿರತರಾಗಿದ್ದಾರೆ. ಓ, ಭೂಮಿಯ ನಿವಾಸಿಗಳೇ, ಭಯವೂ ಗುಂಡಿಯೂ ಬಲೆಯೂ ನಿಮಗೆ ಕಾದಿವೆ. ಆಗ ಭಯದ ಶಬ್ದಕ್ಕೆ ಓಡಿ ಹೋಗುವವನು, ಕುಣಿಯೊಳಗೆ ಬೀಳುವನು; ಆ ಕುಣಿಯೊಳಗಿಂದ ಏರಿ ಬರುವವನು ಬಲೆಗೆ ಬೀಳು ವನು; ಮೇಲಿನ ಕಿಟಕಿಗಳು (ಆಕಾಶದ ದ್ವಾರಗಳು) ತೆರೆಯಲ್ಪಟ್ಟಿವೆ. ಭೂಮಿಯ ಅಸ್ತಿವಾರಗಳು ನಡುಗು ತ್ತವೆ. (ಕಂಪಿಸುತ್ತವೆ). ಭೂಮಿಯು ಸಂಪೂರ್ಣ ವಾಗಿ ಮುರಿಯಲ್ಪಟ್ಟಿದೆ. ಪೂರ್ತಿಯಾಗಿ ತುಂಡು ತುಂಡಾಗಿ ಹೋಗಿದೆ. ಭೂಮಿಯು ಮಿತಿವಿಾರಿ ಚಲಿಸ ಲ್ಪಟ್ಟಿದೆ. ಭೂಮಿಯು ಕುಡುಕನ ಹಾಗೆ ಓಲಾಡು ತ್ತದೆ ಮತ್ತು ಗುಡಿಸಲಿನ ಹಾಗೆ ತೆಗೆಯಲ್ಪಡುತ್ತದೆ ಅದರ ಅಪರಾಧವು ಅದರ ಮೇಲೆ ಭಾರವಾಗಿರುತ್ತದೆ; ಅದು ಬಿದ್ದುಹೋಗುತ್ತದೆ ತಿರಿಗಿ ಏಳುವದೇ ಇಲ್ಲ. ಆ ದಿವಸದಲ್ಲಿ ಆಗುವದೇನಂದರೆ--ಕರ್ತನು ಉನ್ನತದಲ್ಲಿರುವ ಉನ್ನತವಾದವರ ಸೈನ್ಯವನ್ನೂ ಭೂಮಿಯ ಮೇಲಿರುವ ಭೂರಾಜರನ್ನೂ ದಂಡಿಸು ವನು. ಕುಣಿಯೊಳಗೆ ಒಟ್ಟುಗೂಡಿದ ಸೆರೆಯವರ ಹಾಗೆ ಅವರು ಒಟ್ಟುಗೂಡಿ ಸೆರೆಮನೆಯಲ್ಲಿ ಮುಚ್ಚ ಲ್ಪಟ್ಟು ಬಹಳ ದಿವಸಗಳಾದ ಮೇಲೆ ದಂಡನೆಗೆ ಗುರಿ ಯಾಗುವರು.ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು. ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
- Isaiah 14:26–27 ಯೆಶಾಯ 14:26–27ಇದೇ ಸಮಸ್ತ ಭೂಮಿಯ ವಿಷಯ ಆಲೋ ಚಿಸಿದ ಉದ್ದೇಶ. ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ. ಸೈನ್ಯಗಳ ಕರ್ತನುಉದ್ದೇಶಿಸಿ ದ್ದಾನೆ; ಅದನ್ನು ಯಾರು ವ್ಯರ್ಥಪಡಿಸುವರು. ಆತನ ಕೈಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು ಎಂಬದೇ.
- Daniel 4:35 ದಾನಿಯೇಲನು 4:35ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
- Romans 9:28 ರೋಮಾಪುರದವರಿಗೆ 9:28ಆತನು ನೀತಿಯಲ್ಲಿ ಕಾರ್ಯವನ್ನು ಕ್ಲುಪ್ತಮಾಡಿ ಪೂರ್ತಿಗೊಳಿಸುತ್ತಾನೆ; ಕಾರಣವೇ ನಂದರೆ, ಕರ್ತನು ಭೂಮಿಯ ಮೇಲೆ ಒಂದು ಕ್ಲುಪ್ತ ವಾದ ಕಾರ್ಯವನ್ನು ಮಾಡುವನು.