Isaiah · chapter 10 · verse 3
Isaiah 10:3 in Kannada
ವಿಚಾರಣೆಯ ದಿನದಲ್ಲಿಯೂ ದೂರ ದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡು ವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ವೈಭವವನ್ನು ಎಲ್ಲಿ ಬಿಡುವಿರಿ?
Vichaaraneya dinadalliyoo doora dinda baruva naashanadalliyoo neevu enu maadu viri? Sahaayakkaagi neevu yaara balige oduviri? Nimma vaibhavavannu elli biduviri?
Isaiah 10:3 in English
- King James Version (KJV)
- And what will ye do in the day of visitation, and in the desolation [which] shall come from far? to whom will ye flee for help? and where will ye leave your glory?
- World English Bible (WEB)
- What will you do in the day of visitation, and in the desolation which will come from afar? To whom will you flee for help? Where will you leave your wealth?
- American Standard Version (ASV)
- And what will ye do in the day of visitation, and in the desolation which shall come from far? to whom will ye flee for help? and where will ye leave your glory?
- Bible in Basic English (BBE)
- And what will you do in the day of punishment, and in the destruction which is coming from far? to whom will you go for help, and what will become of your glory?
- Darby Translation (DBY)
- And what will ye do in the day of visitation, and in the sudden destruction [which] shall come from far? To whom will ye flee for help, and where will ye leave your glory?
- Webster's Bible (WBS)
- And what will ye do in the day of visitation, and in the desolation [which] shall come from far? to whom will ye flee for help? and where will ye leave your glory?
- Young's Literal Translation (YLT)
- And what do ye at a day of inspection? And at desolation? — from afar it cometh. Near whom do ye flee for help? And where do ye leave your honour?
Read in context
- 1ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಬರಹ ಬರೆಯುವವರಿಗೆ ಅಯ್ಯೋ!
- 2ಇವರು ವಿಧವೆಯರನ್ನು ಸೂರೆಮಾಡಿ ದಿಕ್ಕಿಲ್ಲದವರಿಂದ ಸುಲುಕೊಂಡು ದೀನರಿಗೆ ನ್ಯಾಯ ವನ್ನು ತಪ್ಪಿಸಿ ನನ್ನ ಬಡ ಜನರ ನ್ಯಾಯವನ್ನು ತೆಗೆಯ ಬೇಕೆಂದಿದ್ದಾರೆ.
- 3ವಿಚಾರಣೆಯ ದಿನದಲ್ಲಿಯೂ ದೂರ ದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡು ವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ವೈಭವವನ್ನು ಎಲ್ಲಿ ಬಿಡುವಿರಿ?
- 4ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವದೇ ಇವರ ಗತಿ. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
- 5ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ.
Cross references
- Luke 19:44 ಲೂಕನು 19:44ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
- Hosea 9:7 ಹೋಶೇಯ 9:7ವಿಚಾರಣೆಯ ದಿನಗಳು ಬಂದಿವೆ, ಮುಯ್ಯಿ ತೀರಿಸುವ ದಿನಗಳೂ ಬಂದಿವೆ. ಇಸ್ರಾ ಯೇಲು ಅದನ್ನು ತಿಳಿದುಕೊಳ್ಳುವದು, ನಿನ್ನ ಅಕ್ರಮ ಗಳು ಬಹಳವಾಗಿರುವದರಿಂದಲೂ ಹಗೆತನವು ಹೆಚ್ಚಾ ಗಿರುವದರಿಂದಲೂ ಪ್ರವಾದಿ ಮೂರ್ಖನೂ ಆತ್ಮೀಯ ಮನುಷ್ಯನೂ ಹುಚ್ಚನೂ ಎಂದು ಇಸ್ರಾಯೇಲು ತಿಳಿದುಕೊಳ್ಳುತ್ತದೆ.
- Job 31:14 ಯೋಬನು 31:14ದೇವರು ಏಳುವಾಗ ನಾನು ಏನು ಮಾಡುವೆನು? ಆತನು ವಿಚಾರಿಸುವಾಗ, ಆತನಿಗೆ ಏನು ಉತ್ತರ ಕೊಡುವೆನು?
- Isaiah 5:26 ಯೆಶಾಯ 5:26ಆತನು ದೂರದ ಜನಾಂಗದವರಿಗೆ ಗುರುತಿಗಾಗಿ ಧ್ವಜವನ್ನೆತ್ತಿ, ಭೂಮಿಯ ಅಂಚಿನಿಂದ ಅವರಿಗೆ ಸಿಳ್ಳುಹಾಕುವನು. ಇಗೋ, ಅವರು ತ್ವರೆಯಾಗಿ ಫಕ್ಕನೆ ಬರುವರು;
- Isaiah 26:21 ಯೆಶಾಯ 26:21ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
- 1 Peter 2:12 1 ಪೇತ್ರನು 2:12ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.
- Isaiah 20:6 ಯೆಶಾಯ 20:6ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು.
- Zephaniah 1:18 ಚೆಫನ್ಯ 1:18ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
- Proverbs 11:4 ಜ್ಞಾನೋಕ್ತಿಗಳು 11:4ಉಗ್ರತೆಯ ದಿನದಲ್ಲಿ ಐಶ್ವರ್ಯವು ಲಾಭಕರವಾಗುವದಿಲ್ಲ; ನೀತಿಯು ಮರಣ ದಿಂದ ಬಿಡಿಸುತ್ತದೆ.
- Revelation 6:15–16 ಪ್ರಕಟನೆ 6:15–16ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
- Deuteronomy 28:49 ಧರ್ಮೋಪದೇಶಕಾಂಡ 28:49ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ
- 2 Kings 7:15 2 ಅರಸುಗಳು 7:15ಅವರು ಅವರ ಹಿಂದೆ ಯೊರ್ದನಿನ ವರೆಗೆ ಹೋದರು. ಇಗೋ, ಮಾರ್ಗದಲ್ಲೆಲ್ಲಾ ಅರಾಮ್ಯರು ಬಹು ಅವಸರದಿಂದ ಬಿಸಾಡಿದ ವಸ್ತ್ರಗಳೂ ಪಾತ್ರೆ ಗಳೂ ತುಂಬಿದ್ದನ್ನು ದೂತರು ತಿರಿಗಿ ಬಂದು ಅರಸ ನಿಗೆ ತಿಳಿಸಿದರು.