Isaiah · chapter 10 · verse 4
Isaiah 10:4 in Kannada
ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವದೇ ಇವರ ಗತಿ. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
Naanillade kaidigala kelage mudurikondu, hataraagiruvavara kelage biddiruvade ivara gati. Ishtaadaroo aatana kopavu teerade aatana kai innoo chaachiye iruvadu.
Isaiah 10:4 in English
- King James Version (KJV)
- Without me they shall bow down under the prisoners, and they shall fall under the slain. For all this his anger is not turned away, but his hand [is] stretched out still.
- World English Bible (WEB)
- They will only bow down under the prisoners, and will fall under the slain. For all this his anger is not turned away, but his hand is stretched out still.
- American Standard Version (ASV)
- They shall only bow down under the prisoners, and shall fall under the slain. For all this his anger is not turned away, but his hand is stretched out still.
- Bible in Basic English (BBE)
- ... For all this his wrath is not turned away, but his hand is stretched out still.
- Darby Translation (DBY)
- They can but crouch under the prisoners, and they shall fall under the slain. For all this his anger is not turned away, and his hand is stretched out still.
- Webster's Bible (WBS)
- Without me they shall bow down under the prisoners, and they shall fall under the slain. For all this his anger is not turned away, but his hand [is] stretched out still.
- Young's Literal Translation (YLT)
- Without Me it hath bowed down In the place of a bound one, And in the place of the slain they fall. With all this not turned back hath His anger, And still His hand is stretched out.
Read in context
- 2ಇವರು ವಿಧವೆಯರನ್ನು ಸೂರೆಮಾಡಿ ದಿಕ್ಕಿಲ್ಲದವರಿಂದ ಸುಲುಕೊಂಡು ದೀನರಿಗೆ ನ್ಯಾಯ ವನ್ನು ತಪ್ಪಿಸಿ ನನ್ನ ಬಡ ಜನರ ನ್ಯಾಯವನ್ನು ತೆಗೆಯ ಬೇಕೆಂದಿದ್ದಾರೆ.
- 3ವಿಚಾರಣೆಯ ದಿನದಲ್ಲಿಯೂ ದೂರ ದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡು ವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ವೈಭವವನ್ನು ಎಲ್ಲಿ ಬಿಡುವಿರಿ?
- 4ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವದೇ ಇವರ ಗತಿ. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
- 5ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ.
- 6ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
Cross references
- Isaiah 5:25 ಯೆಶಾಯ 5:25ಆದಕಾರಣ ಕರ್ತನ ಕೋಪವು ಜನರಿಗೆ ವಿರೋ ಧವಾಗಿ ಉರಿಗೊಂಡು ಅವರ ಮೇಲೆ ತನ್ನ ಕೈಚಾಚಿ ಅವರನ್ನು ಹೊಡೆದಿದ್ದಾನೆ; ಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿ ರುವವು. ಇಷ್ಟೆಲ್ಲಾ ಆದರೂ ಆತನ ಕೋಪವು ಹಿಂತಿರುಗದೆ ಇನ್ನೂ ಕೈಚಾಚಿಯೇ ಇದೆ.
- Isaiah 9:12 ಯೆಶಾಯ 9:12ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿ ಬಿಡುವರು; ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.
- Jeremiah 37:10 ಯೆರೆಮೀಯ 37:10ನಿಮ್ಮ ಸಂಗಡ ಯುದ್ಧ ಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿ ದ್ದಾಗ್ಯೂ ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.
- Deuteronomy 32:30 ಧರ್ಮೋಪದೇಶಕಾಂಡ 32:30ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?
- Deuteronomy 31:15–18 ಧರ್ಮೋಪದೇಶಕಾಂಡ 31:15–18ಆಗ ಕರ್ತನು ಗುಡಾರದೊಳಗೆ ಮೇಘಸ್ತಂಭದಲ್ಲಿ ಕಾಣಿಸಿ ಕೊಂಡನು; ಆ ಮೇಘಸ್ತಂಭವು ಗುಡಾರದ ಬಾಗಲಿನ ಮೇಲೆ ನಿಂತಿತು. ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು. ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು. ಅವರು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತವೂ ಅನ್ಯದೇವರುಗಳ ಕಡೆಗೆ ತಿರುಗಿದ್ದರಿಂದಲೂ ನಾನು ಆ ದಿವಸದಲ್ಲಿ ನನ್ನ ಮುಖವನ್ನು ಖಂಡಿತವಾಗಿ ಮರೆಮಾಡುವೆನು.
- Isaiah 9:21 ಯೆಶಾಯ 9:21ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
- Leviticus 26:17 ಯಾಜಕಕಾಂಡ 26:17ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.
- Isaiah 66:16 ಯೆಶಾಯ 66:16ಬೆಂಕಿ ಯಿಂದಲೂ ತನ್ನ ಕತ್ತಿಯಿಂದಲೂ ಕರ್ತನು ಮನುಷ್ಯ ರಿಗೆಲ್ಲಾ ನ್ಯಾಯತೀರಿಸುವನು; ಕರ್ತನಿಂದ ಕೊಲ್ಲಲ್ಪಟ್ಟ ವರು ಅನೇಕರಾಗಿರುವರು.
- Leviticus 26:36–37 ಯಾಜಕಕಾಂಡ 26:36–37ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು. ಓಡಿಸುವವ ನಿಲ್ಲದೆ ಒಬ್ಬರ ಮೇಲೊಬ್ಬರು ಕತ್ತಿಯ ಭಯದಿಂದಾದ ಹಾಗೆ ಬೀಳುವರು; ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವದು ನಿಮ್ಮಿಂದಾಗದು.
- Isaiah 9:17 ಯೆಶಾಯ 9:17ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಆನಂದಿಸುವದಿಲ್ಲ; ಅವರ ಅನಾಥರನ್ನೂ ವಿಧವೆಯರನ್ನೂ ಕರುಣಿಸುವದಿಲ್ಲ; ಪ್ರತಿಯೊಬ್ಬನು ಕಪಟಿಯೂ ಕೇಡು ಮಾಡುವವನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದದರಿಂದ ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.
- Isaiah 34:3 ಯೆಶಾಯ 34:3ಅವರಲ್ಲಿ ಕೊಂದುಹಾಕಲ್ಪಟ್ಟವರು ಬಿಸಾಡಲ್ಪಡು ವರು. ಅವರ ಹೆಣಗಳ ದುರ್ವಾಸನೆಯು ಮೇಲಕ್ಕೆ ಏರುವದು. ಅವರ ರಕ್ತಪ್ರವಾಹದಿಂದ ಪರ್ವತಗಳು ಕರಗಿಹೋಗುವವು.
- Hosea 9:12 ಹೋಶೇಯ 9:12ಅವರು ತಮ್ಮ ಮಕ್ಕಳನ್ನು ಬೆಳೆಸಿದಾಗ್ಯೂ ಒಬ್ಬ ಮನುಷ್ಯನು ಉಳಿಯದ ಹಾಗೆ ನಾನು ಅವರನ್ನು ಅನಾಥರನ್ನಾಗಿ ಮಾಡುವೆನು. ಹೌದು, ನಾನು ಅವ ರನ್ನು ಬಿಟ್ಟು ಹೋಗುವಾಗ ಅವರಿಗೆ ಅಯ್ಯೋ!