Isaiah · chapter 10 · verse 5
Isaiah 10:5 in Kannada
ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ.
O nanna kopada kolaada ashshoorave, kaiyalliruva bettavu nanna raudrave.
Isaiah 10:5 in English
- King James Version (KJV)
- O Assyrian, the rod of mine anger, and the staff in their hand is mine indignation.
- World English Bible (WEB)
- Alas Assyrian, the rod of my anger, the staff in whose hand is my indignation!
- American Standard Version (ASV)
- Ho Assyrian, the rod of mine anger, the staff in whose hand is mine indignation!
- Bible in Basic English (BBE)
- Ho! Assyrian, the rod of my wrath, the instrument of my punishment!
- Darby Translation (DBY)
- Ah! the Assyrian! the rod of mine anger! and the staff in their hand is mine indignation.
- Webster's Bible (WBS)
- O Assyrian, the rod of my anger, and the staff in their hand is my indignation.
- Young's Literal Translation (YLT)
- Woe [to] Asshur, a rod of Mine anger, And a staff in their hand [is] Mine indignation.
Read in context
- 3ವಿಚಾರಣೆಯ ದಿನದಲ್ಲಿಯೂ ದೂರ ದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡು ವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ವೈಭವವನ್ನು ಎಲ್ಲಿ ಬಿಡುವಿರಿ?
- 4ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವದೇ ಇವರ ಗತಿ. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
- 5ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ.
- 6ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
- 7ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ.
Cross references
- Zephaniah 2:13 ಚೆಫನ್ಯ 2:13ಆತನು ತನ್ನ ಕೈಯನ್ನು ಉತ್ತರದ ಮೇಲೆ ಚಾಚಿ ಅಶ್ಶೂರನ್ನು ನಾಶಮಾಡಿ ನಿನೆವೆಯನ್ನು ಹಾಳಾಗಿಯೂ ಅರಣ್ಯದಂತೆ ಒಣಗಿ ದ್ದಾಗಿಯೂ ಮಾಡುವನು.
- Jeremiah 51:20–24 ಯೆರೆಮೀಯ 51:20–24ನೀನು ನನ್ನ ಸುತ್ತಿಗೆಯೇ, ನನ್ನ ಯುದ್ಧದ ಆಯುಧಗಳೇ, ನಿನ್ನಿಂದ ಜನಾಂಗಗಳನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಾಜ್ಯಗಳನ್ನು ನಾಶಮಾಡುತ್ತೇನೆ; ನಿನ್ನಿಂದ ಕುದುರೆಯನ್ನೂ ಅದರ ಮೇಲೆ ಹತ್ತಿದವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಥವನ್ನೂ ಅದರಲ್ಲಿ ಸವಾರಿ ಮಾಡುವವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ. ನಿನ್ನಿಂದ ಗಂಡಸರನ್ನೂ ಹೆಂಗಸರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ. ನಿನ್ನಿಂದ ಕುರುಬನನ್ನೂ ಅವನ ಮಂದೆಯನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ. ನಿನ್ನಿಂದ ಹಿರಿಯರನ್ನೂ ಕಿರಿಯರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಯೌವನಸ್ಥನನ್ನೂ ಕನ್ನಿಕೆಯನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಒಕ್ಕಲಿಗನನ್ನೂ ಅವನ ನೊಗದ ಎತ್ತುಗಳನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಚೂರು ಚೂರಾಗಿ ಒಡೆದುಬಿಡು ತ್ತೇನೆ. ಬಾಬೆಲಿಗೂ ಕಸ್ದೀಯರ ನಿವಾಸಿಗಳೆಲ್ಲ ರಿಗೂ--ಅವರು ಚೀಯೋನಿನಲ್ಲಿ ನಿಮ್ಮ ಸನ್ನಿಧಿಯಲ್ಲಿ ಮಾಡಿದ ಕೇಡನ್ನೆಲ್ಲಾ ಸಲ್ಲಿಸುವೆನೆಂದು ಕರ್ತನು ಅನ್ನುತ್ತಾನೆ.
- Isaiah 10:15 ಯೆಶಾಯ 10:15ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು.
- Isaiah 30:30 ಯೆಶಾಯ 30:30ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.
- Isaiah 14:25 ಯೆಶಾಯ 14:25ಏನಂದರೆ ಅಶ್ಶೂ ರ್ಯರನ್ನು ನನ್ನ ದೇಶದಲ್ಲಿ ಮುರಿದುಬಿಡುತ್ತೇನೆ. ನನ್ನ ಪರ್ವತಗಳ ಮೇಲೆ ಅವನನ್ನು ತುಳಿದುಬಿಡುತ್ತೇನೆ; ಅವನ ನೊಗವು ಅವರ ಮೇಲಿನಿಂದ ತೊಲಗಿ ಅವ ನ ಭಾರವು ಅವನ ಭುಜದ ಮೇಲಿನಿಂದ ತೊಲಗು ವದು.
- Isaiah 13:5 ಯೆಶಾಯ 13:5ಕರ್ತನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವದಕ್ಕಾಗಿ ಬರುತ್ತಾರೆ.
- Isaiah 66:14 ಯೆಶಾಯ 66:14ನೀವು ಅದನ್ನು ನೋಡುವಾಗ ನಿಮ್ಮ ಹೃದಯವು ಸಂತೋಷಿಸುವದು, ನಿಮ್ಮ ಎಲುಬು ಗಳು ಹಸಿರು ಪಲ್ಯದ ಹಾಗೆ ಚಿಗುರುವವು; ಕರ್ತನ ಕೈ ಆತನ ಸೇವಕನ ಕಡೆಗೂ ಆತನ ರೌದ್ರವು ಆತನ ಶತ್ರುಗಳ ಕಡೆಗೂ ಕಾಣಬರುವದು.
- Isaiah 14:5–6 ಯೆಶಾಯ 14:5–6ಜನರನ್ನು ಉಗ್ರಕೋಪದಿಂದ ಎಡೆಬಿಡದೆ ಹೊಡೆ ದು ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ ಆಳುತ್ತಿದ್ದ ದುಷ್ಟರ ಕೋಲನ್ನೂ ರಾಜರ ದಂಡವನ್ನೂ ಕರ್ತನು ಮುರಿದುಬಿಟ್ಟಿದ್ದಾನೆ. ಯಾವನೂ ಅಡ್ಡಿ ಮಾಡನು.
- Genesis 10:11 ಆದಿಕಾಂಡ 10:11ಆ ದೇಶದೊಳಗಿಂದ ಅಶ್ಶೂರನು ಹೊರಟು ನಿನವೆ ರೆಹೋಬೋತ್ ಎಂಬ ಪಟ್ಟಣ, ಕೆಲಹ,
- Isaiah 8:4 ಯೆಶಾಯ 8:4ಆ ಮಗುವು--ಅಪ್ಪಾ, ಅಮ್ಮಾ ಎಂದು ಕೂಗಬಲ್ಲವನಾಗುವದರ ಮುಂಚೆ ಅಶ್ಯೂರದ ಅರಸ ನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆ ಯನ್ನೂ ತೆಗೆದುಕೊಂಡು ಹೋಗುವನು ಅಂದನು.
- Psalm 125:3 ಕೀರ್ತನೆಗಳು 125:3ನೀತಿವಂತರು ತಮ್ಮ ಕೈಗಳನ್ನು ಅನ್ಯಾಯಕ್ಕೆ ಚಾಚದ ಹಾಗೆ, ದುಷ್ಟನ ಕೋಲು ನೀತಿವಂತರ ಸ್ವಾಸ್ತ್ಯದ ಮೇಲೆ ನೆಲೆಯಾಗಿರುವದಿಲ್ಲ.
- Psalm 17:14 ಕೀರ್ತನೆಗಳು 17:14ಓ ಕರ್ತನೇ, ನಿನ್ನ ಕೈಚಾಚಿ ಈ ಮನುಷ್ಯರಿಂದ ಅಂದರೆ ಜೀವನದಲ್ಲಿ ತಮ್ಮ ಪಾಲಿಗಿರುವ ಈ ಲೋಕದ ಜನರಿಂದ ನನ್ನನ್ನು ಪಾರುಮಾಡು. ಅವರ ಹೊಟ್ಟೆಯನ್ನು ಮರೆಯಾದ ನಿನ್ನ ನಿಕ್ಷೇಪದಿಂದ ತುಂಬಿಸುತ್ತೀ; ಅವರು ಮಕ್ಕಳಿಂದ ತೃಪ್ತರಾಗಿ ತಮ್ಮ ಮಿಕ್ಕ ಆಸ್ತಿಯನ್ನು ತಮ್ಮ ಶಿಶುಗಳಿಗೆ ಉಳಿಸುತ್ತಾರೆ.ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.