Isaiah · chapter 12 · verse 2
Isaiah 12:2 in Kannada
ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
Igo, devare nanna rakshaneyu; naanu bhara vasaviduvenu mattu bhayapadenu; kartanaada yehovane nanna balavoo keertaneyoo aatane nanage rakshaneyoo aagiddaane.
Isaiah 12:2 in English
- King James Version (KJV)
- Behold, God [is] my salvation; I will trust, and not be afraid: for the LORD JEHOVAH [is] my strength and [my] song; he also is become my salvation.
- World English Bible (WEB)
- Behold, God is my salvation. I will trust, and will not be afraid; for the LORD, the LORD, is my strength and song; and he has become my salvation.”
- American Standard Version (ASV)
- Behold, God is my salvation; I will trust, and will not be afraid: for Jehovah, [even] Jehovah, is my strength and song; and he is become my salvation.
- Bible in Basic English (BBE)
- See, God is my salvation; I will have faith in the Lord, without fear: for the Lord Jah is my strength and song; and he has become my salvation.
- Darby Translation (DBY)
- Behold, God is my salvation: I will trust, and not be afraid; for Jah, Jehovah, is my strength and song, and he is become my salvation.
- Webster's Bible (WBS)
- Behold, God [is] my salvation; I will trust, and not be afraid: for the LORD JEHOVAH [is] my strength and [my] song; he also is become my salvation.
- Young's Literal Translation (YLT)
- Lo, God [is] my salvation, I trust, and fear not, For my strength and song [is] Jah Jehovah, And He is to me for salvation.
Read in context
- 1ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ.
- 2ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
- 3ಆದದರಿಂದಲೇ ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.
- 4ನೀವು--ಕರ್ತನನ್ನು ಕೊಂಡಾ ಡಿರಿ; ಜನರ ಮಧ್ಯದಲ್ಲಿ ಆತನ ಹೆಸರನ್ನೆತ್ತಿ ಕ್ರಿಯೆಗ ಳನ್ನು ಪ್ರಕಟಿಸಿರಿ. ಆತನ ನಾಮವನ್ನು ಉನ್ನತೋನ್ನತ ವೆಂದು ಎತ್ತಿ ಹೇಳಿರಿ ಎಂದು ಆ ದಿನದಲ್ಲಿ ಹೇಳುವಿರಿ.
Cross references
- Exodus 15:2 ವಿಮೋಚನಕಾಂಡ 15:2ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು.
- Psalm 118:14 ಕೀರ್ತನೆಗಳು 118:14ನನ್ನ ಬಲವೂ ಕೀರ್ತನೆಯೂ ಕರ್ತನೇ; ಆತನೇ ನನಗೆ ರಕ್ಷಣೆಯಾದನು.
- Psalm 27:1 ಕೀರ್ತನೆಗಳು 27:1ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
- Revelation 7:10 ಪ್ರಕಟನೆ 7:10ಅವರು--ರಕ್ಷಣೆಯು ಸಿಂಹಾಸನದ ಮೇಲೆ ಕೂತಿರುವ ನಮ್ಮ ದೇವರಿಗೂ ಕುರಿಮರಿಯಾದಾತನಿಗೂ ಸೇರಿದ್ದು ಎಂದು ಮಹಾ ಶಬ್ದದಿಂದ ಕೂಗಿದರು.
- Isaiah 26:3–4 ಯೆಶಾಯ 26:3–4ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ. ನೀವು ಕರ್ತನಲ್ಲಿ ಸದಾ ಭರವಸವಿಡಿರಿ; ಕರ್ತನಾದ ಯೆಹೋವನಲ್ಲಿ ನಿತ್ಯವಾದ ಬಲವುಂಟು.
- Jonah 2:9 ಯೋನ 2:9ಆದರೆ ನಾನು ಸ್ತೋತ್ರದ ಸ್ವರದಿಂದ ನಿನಗೆ ಬಲಿಅರ್ಪಿಸು ವೆನು; ನಾನು ಮಾಡಿದ ಪ್ರಮಾಣವನ್ನು ತೀರಿಸುವೆನು; ರಕ್ಷಣೆಯು ಕರ್ತನದೇ ಎಂದು ಹೇಳಿದನು.ಆಗ ಕರ್ತನು ಆ ವಿಾನಿಗೆ ಹೇಳಿದ್ದರಿಂದ ಅದು ಯೋನನನ್ನು ಒಣ ಭೂಮಿಯ ಮೇಲೆ ಕಾರಿಬಿಟ್ಟಿತು.
- Isaiah 45:17 ಯೆಶಾಯ 45:17ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ.
- Isaiah 45:22–25 ಯೆಶಾಯ 45:22–25ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ. ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು. ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು. ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
- Matthew 1:21–23 ಮತ್ತಾಯನು 1:21–23ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು. ಪ್ರವಾದಿಯ ಮುಖಾಂತರ ಕರ್ತನು ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು. ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
- Luke 2:30–32 ಲೂಕನು 2:30–32ಯಾಕಂದರೆ ನನ್ನ ಕಣ್ಣುಗಳು ನಿನ್ನ ರಕ್ಷಣೆಯನ್ನು ನೋಡಿದವು. ಅದನ್ನು (ಆ ರಕ್ಷಣೆಯನ್ನು) ನೀನು ಎಲ್ಲಾ ಜನರ ಮುಂದೆ ಸಿದ್ಧ ಪಡಿಸಿದ್ದೀ. ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.
- Isaiah 62:11 ಯೆಶಾಯ 62:11ಇಗೋ, ಕರ್ತನು ಭೂಮಿಯ ಅಂತ್ಯದ ವರೆಗೆ ಪ್ರಕಟಿಸಿದ್ದಾನೆ. ಚೀಯೋನಿನ ಕುಮಾ ರಿಯೇ--ಇಗೋ, ನಿನ್ನ ರಕ್ಷಣೆಯು ಬರುತ್ತದೆ; ಆತನ ಬಹುಮಾನವು ಆತನ ಸಂಗಡವೂ ಆತನ ಕೆಲಸವು ಆತನ ಮುಂದೆಯೂ ಅದೆ ಎಂದು ಹೇಳಿರಿ.ಆಗ ಅವರು--ಪರಿಶುದ್ಧ ಜನರೂ ಕರ್ತನು ವಿಮೋಚಿಸಿದ ವರೂ ಎಂದು ಕರೆಯಲ್ಪಡುವರು; ನೀನು ಕಂಡು ಕೊಳ್ಳಲ್ಪಟ್ಟವಳೂ ತೊರೆಯಲ್ಪಡದ ಪಟ್ಟಣವೂ ಎಂದು ಕರೆಯಲ್ಪಡುವಿ.
- Jeremiah 23:6 ಯೆರೆಮೀಯ 23:6ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.