Isaiah · chapter 12 · verse 3
Isaiah 12:3 in Kannada
ಆದದರಿಂದಲೇ ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.
Aadadarindale rakshaneyemba baavigalinda aanandadodane neevu neerannu seduviri.
Isaiah 12:3 in English
- King James Version (KJV)
- Therefore with joy shall ye draw water out of the wells of salvation.
- World English Bible (WEB)
- Therefore with joy you will draw water out of the wells of salvation.
- American Standard Version (ASV)
- Therefore with joy shall ye draw water out of the wells of salvation.
- Bible in Basic English (BBE)
- So with joy will you get water out of the springs of salvation.
- Darby Translation (DBY)
- And with joy shall ye draw water out of the wells of salvation.
- Webster's Bible (WBS)
- Therefore with joy shall ye draw water out of the wells of salvation.
- Young's Literal Translation (YLT)
- And ye have drawn waters with joy Out of the fountains of salvation,
Read in context
- 1ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ.
- 2ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
- 3ಆದದರಿಂದಲೇ ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.
- 4ನೀವು--ಕರ್ತನನ್ನು ಕೊಂಡಾ ಡಿರಿ; ಜನರ ಮಧ್ಯದಲ್ಲಿ ಆತನ ಹೆಸರನ್ನೆತ್ತಿ ಕ್ರಿಯೆಗ ಳನ್ನು ಪ್ರಕಟಿಸಿರಿ. ಆತನ ನಾಮವನ್ನು ಉನ್ನತೋನ್ನತ ವೆಂದು ಎತ್ತಿ ಹೇಳಿರಿ ಎಂದು ಆ ದಿನದಲ್ಲಿ ಹೇಳುವಿರಿ.
- 5ಕರ್ತನಿಗೆ ಹಾಡಿರಿ, ಆತನು ಶ್ರೇಷ್ಠವಾದ ಕಾರ್ಯಗ ಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
Cross references
- Revelation 22:1 ಪ್ರಕಟನೆ 22:1ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.
- Revelation 22:17 ಪ್ರಕಟನೆ 22:17ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.
- Jeremiah 2:13 ಯೆರೆಮೀಯ 2:13ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
- John 4:10–14 ಯೋಹಾನನು 4:10–14ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು. ಆ ಸ್ತ್ರೀಯು ಆತನಿಗೆ--ಅಯ್ಯಾ, ಸೇದುವದಕ್ಕೆ ನಿನಗೆ ಏನೂ ಇಲ್ಲ ಮತ್ತು ಬಾವಿ ಅಳವಾಗಿದೆ; ಹೀಗಿರುವಲ್ಲಿ ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂತು? ತಾನೂ ತನ್ನ ಮಕ್ಕಳೂ ತನ್ನ ದನಗಳೂ ಈ ಬಾವಿ ಯಿಂದ ಕುಡಿದು ನಮಗೆ ಅದನ್ನು ಕೊಟ್ಟ ನಮ್ಮ ತಂದೆಯಾದ ಯಾಕೋಬನಿಗಿಂತ ನೀನು ದೊಡ್ಡ ವನೋ? ಅಂದಳು. ಯೇಸು ಪ್ರತ್ಯುತ್ತರವಾಗಿ ಆಕೆಗೆ--ಈ ನೀರನ್ನು ಕುಡಿಯುವ ಪ್ರತಿಯೊಬ್ಬನಿಗೆ ತಿರಿಗಿ ನೀರಡಿಕೆಯಾಗುವದು; ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
- Revelation 7:17 ಪ್ರಕಟನೆ 7:17ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- John 7:37–39 ಯೋಹಾನನು 7:37–39ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ. ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು. (ಆದರೆ ಆತನು ತನ್ನಲ್ಲಿ ವಿಶ್ವಾಸವಿಡುವವರು ಹೊಂದಲಿರುವ ಆತ್ಮನನ್ನು ಕುರಿತು ಇದನ್ನು ಹೇಳಿದನು; ಯಾಕಂದರೆ ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ್ದರಿಂದ ಪವಿತ್ರಾ ತ್ಮನು ಇನ್ನೂ ಕೊಡಲ್ಪಟ್ಟಿರಲಿಲ್ಲ.)
- Isaiah 55:1–3 ಯೆಶಾಯ 55:1–3ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ. ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ! ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- Isaiah 49:10 ಯೆಶಾಯ 49:10ಅವರಿಗೆ ಹಸಿವೆ ಯಾಗಲಿ ಬಾಯಾರಿಕೆಯಾಗಲಿ ಇರವು. ಇಲ್ಲವೆ ಝಳವೂ ಬಿಸಿಲೂ ಬಡಿಯವು; ಯಾಕಂದರೆ ಅವ ರನ್ನು ಕರುಣಿಸುವಾತನು ಅವರನ್ನು ನಡೆಸುತ್ತಾ ನೀರು ಕ್ಕುವ ಒರತೆಗಳ ಬಳಿಗೆ ತರುವನು.
- John 1:16 ಯೋಹಾನನು 1:16ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು.
- Psalm 36:9 ಕೀರ್ತನೆಗಳು 36:9ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟು. ನಿನ್ನ ತೇಜಸ್ಸಿನ ಬೆಳಕನ್ನು ನೋಡುವೆವು.