Isaiah · chapter 12 · verse 6
Isaiah 12:6 in Kannada
ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
Cheeyonina nivaasigale, aarbhatisi harshadhvaniyannu gaiyiri; israayelina parishu ddhanu ninna madhyadalli mahatvavullavanaagiddaane.
Isaiah 12:6 in English
- King James Version (KJV)
- Cry out and shout, thou inhabitant of Zion: for great [is] the Holy One of Israel in the midst of thee.
- World English Bible (WEB)
- Cry aloud and shout, you inhabitant of Zion, for the Holy One of Israel is great among you!”
- American Standard Version (ASV)
- Cry aloud and shout, thou inhabitant of Zion; for great in the midst of thee is the Holy One of Israel.
- Bible in Basic English (BBE)
- Let your voice be sounding in a cry of joy, O daughter of Zion, for great is the Holy One of Israel among you.
- Darby Translation (DBY)
- Cry out and shout, thou inhabitress of Zion; for great is the Holy One of Israel in the midst of thee.
- Webster's Bible (WBS)
- Cry aloud and shout, thou inhabitant of Zion: for great [is] the Holy One of Israel in the midst of thee.
- Young's Literal Translation (YLT)
- Cry aloud, and sing, O inhabitant of Zion, For great in thy midst [is] the Holy One of Israel!'
Read in context
- 4ನೀವು--ಕರ್ತನನ್ನು ಕೊಂಡಾ ಡಿರಿ; ಜನರ ಮಧ್ಯದಲ್ಲಿ ಆತನ ಹೆಸರನ್ನೆತ್ತಿ ಕ್ರಿಯೆಗ ಳನ್ನು ಪ್ರಕಟಿಸಿರಿ. ಆತನ ನಾಮವನ್ನು ಉನ್ನತೋನ್ನತ ವೆಂದು ಎತ್ತಿ ಹೇಳಿರಿ ಎಂದು ಆ ದಿನದಲ್ಲಿ ಹೇಳುವಿರಿ.
- 5ಕರ್ತನಿಗೆ ಹಾಡಿರಿ, ಆತನು ಶ್ರೇಷ್ಠವಾದ ಕಾರ್ಯಗ ಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
- 6ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
Cross references
- Zechariah 2:10–11 ಜೆಕರ್ಯ 2:10–11ಚೀಯೋನ್ ಕುಮಾರ್ತೆಯೇ, ಹಾಡಿ ಹರ್ಷಿಸು. ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸವಾಗಿರುವೆನೆಂದು ಕರ್ತನು ಅನ್ನುತ್ತಾನೆ. ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.
- Zechariah 2:5 ಜೆಕರ್ಯ 2:5ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ.
- Psalm 9:11 ಕೀರ್ತನೆಗಳು 9:11ಚೀಯೋನಿನಲ್ಲಿ ವಾಸಿಸುವ ಕರ್ತನನ್ನು ಕೀರ್ತಿಸಿರಿ; ಆತನ ಕ್ರಿಯೆಗಳನ್ನು ಜನಗಳಲ್ಲಿ ತಿಳಿಸಿರಿ.
- Zephaniah 3:14–17 ಚೆಫನ್ಯ 3:14–17ಓ ಚೀಯೋನಿನ ಕುಮಾರ್ತೆಯೇ, ಹಾಡು; ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಕುಮಾರ್ತೆಯೇ, ಪೂರ್ಣಹೃದಯ ದಿಂದ ಸಂಭ್ರಮಿಸಿ ಉಲ್ಲಾಸಪಡು. ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ. ಆ ದಿನದಲ್ಲಿ ಯೆರೂಸಲೇಮಿಗೆ ಹೇಳಲ್ಪಡುವದೇನಂದರೆ--ನೀನು ಭಯಪಡಬೇಡ; ಚೀಯೋನೇ, ನಿನ್ನ ಕೈಗಳು ಬಲ ಹೀನವಾಗದಿರಲಿ. ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.
- Isaiah 41:14 ಯೆಶಾಯ 41:14ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
- Isaiah 40:9 ಯೆಶಾಯ 40:9ಶುಭಸಮಾಚಾರವನ್ನು ತಿಳಿಸುವ ಓ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಶುಭಸಮಾ ಚಾರವನ್ನು ತಿಳಿಸುವ ಓ ಯೆರೂಸಲೇಮೇ, ಬಲವಾಗಿ ನಿನ್ನ ಸ್ವರವನ್ನು ಎತ್ತು, ಭಯಪಡದೆ ಎತ್ತು; ಯೆಹೂದದ ಪಟ್ಟಣಗಳಿಗೆ ಇಗೋ, ನಿನ್ನ ದೇವರು ಎಂದು ಹೇಳು.
- Ezekiel 48:35 ಯೆಹೆಜ್ಕೇಲನು 48:35ಸುತ್ತಲೂ ಹದಿನೆಂಟು ಸಾವಿರ ಅಳತೆಗಳು; ಆ ದಿನದಿಂದ ಆ ಪಟ್ಟಣದ ಹೆಸರು ಕರ್ತನು ನೆಲೆ ಯಾಗಿರುವನು ಎಂಬದೇ ಆಗಿರುವದು.
- Isaiah 54:1 ಯೆಶಾಯ 54:1ಓ ಹೆರದವಳೇ, ನೀನು ಹರ್ಷಧ್ವನಿಗೈ! ಪ್ರಸವವೇದನೆಯನ್ನನುಭವಿಸದವಳೇ, ಆನಂದ ಸ್ವರವನ್ನೆತ್ತಿ ಗಟ್ಟಿಯಾಗಿ ಕೂಗು! ಮದುವೆ ಯಾದವಳಿಗಿಂತ ಆಗದವಳಿಗೆ ಮಕ್ಕಳು ಹೆಚ್ಚು ಎಂದು ಕರ್ತನು ಹೇಳುತ್ತಾನೆ.
- Psalm 71:22 ಕೀರ್ತನೆಗಳು 71:22ಓ ನನ್ನ ದೇವರೇ, ನಾನು ಸಹ ನಿನ್ನನ್ನೂ ನಿನ್ನ ಸತ್ಯವನ್ನೂ ವೀಣೆಯಿಂದ ಕೊಂಡಾಡುವೆನು; ಓ ಇಸ್ರಾಯೇಲಿನ ಪರಿಶುದ್ದನೇ, ಕಿನ್ನರಿಯಿಂದ ನಿನ್ನನ್ನು ಕೀರ್ತಿಸುವೆನು.
- Luke 19:37–40 ಲೂಕನು 19:37–40ಇದಲ್ಲದೆ ಆತನು ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಸವಿಾಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ನೋಡಿದ್ದ ಎಲ್ಲಾ ಮಹತ್ಕಾರ್ಯಗಳಿಗಾಗಿ ಸಂತೋಷ ಪಡುತ್ತಾ ಮಹಾಧ್ವನಿಯಿಂದ ದೇವರನ್ನು ಕೊಂಡಾಡ ಲಾರಂಭಿಸಿ-- ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು. ಜನಸಮೂಹದೊಳಗಿಂದ ಕೆಲವು ಫರಿಸಾಯರು ಆತನಿಗೆ--ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು ಅಂದರು. ಆಗ ಆತನು ಪ್ರತ್ಯುತ್ತರವಾಗಿ ಅವ ರಿಗೆ--ಇವರು ಸುಮ್ಮನಿರುವದಾದರೆ ಈ ಕಲ್ಲುಗಳು ಕೂಡಲೆ ಕೂಗುವವು ಎಂದು ನಾನು ನಿಮಗೆ ಹೇಳು ತ್ತೇನೆ ಅಂದನು.
- Isaiah 41:16 ಯೆಶಾಯ 41:16ನೀನು ಅವುಗಳನ್ನು ತೂರಲು ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತೂ ಕರ್ತನಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧನಲ್ಲಿ ಮಹಿಮೆಹೊಂದುವಿ.
- Isaiah 52:7–10 ಯೆಶಾಯ 52:7–10ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ, ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವಾತನ ಪಾದಗಳು ಪರ್ವತಗಳ ಮೇಲೆ ಎಷ್ಟೋ ಅಂದವಾಗಿವೆ! ನಿನ್ನ ಕಾವಲುಗಾರರು ಸ್ವರವನ್ನೆತ್ತುವರು; ಆ ಸ್ವರದೊಂದಿಗೆ ಒಟ್ಟಾಗಿ ಅವರು ಹಾಡುವರು; ಕರ್ತನು ಚೀಯೋನನ್ನು ತಿರಿಗಿ ತರು ವಾಗ ಅವರು ಕಣ್ಣಲ್ಲಿ ಕಣ್ಣು ಇಟ್ಟು ನೋಡುವರು. ಯೆರೂಸಲೇಮಿನ ಹಾಳಾದ ಸ್ಥಳಗಳೇ, ಆನಂದ ಧ್ವನಿಗೈಯಿರಿ ಒಟ್ಟಾಗಿ ಹಾಡಿರಿ; ಯಾಕಂದರೆ ಕರ್ತನು ತನ್ನ ಪ್ರಜೆಗಳನ್ನು ಆದರಿಸಿದ್ದಾನೆ, ಆತನು ಯೆರೂಸ ಲೇಮನ್ನು ವಿಮೋಚಿಸಿದ್ದಾನೆ. ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು.