Isaiah · chapter 13 · verse 1
Isaiah 13:1 in Kannada
ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡುಬಂದ ದೈವೋಕ್ತಿ.
Aamochana maganaada yeshaayanige baabelina vishayavaagi kandubanda daivokti.
Isaiah 13:1 in English
- King James Version (KJV)
- The burden of Babylon, which Isaiah the son of Amoz did see.
- World English Bible (WEB)
- The burden of Babylon, which Isaiah the son of Amoz saw.
- American Standard Version (ASV)
- The burden of Babylon, which Isaiah the son of Amoz did see.
- Bible in Basic English (BBE)
- The word of the Lord about Babylon which Isaiah, the son of Amoz, saw.
- Darby Translation (DBY)
- The burden of Babylon, which Isaiah the son of Amoz saw.
- Webster's Bible (WBS)
- The burden of Babylon, which Isaiah the son of Amoz saw.
- Young's Literal Translation (YLT)
- The burden of Babylon that Isaiah son of Amoz hath seen:
Read in context
- 1ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡುಬಂದ ದೈವೋಕ್ತಿ.
- 2ಅವರು(ಶತ್ರುಗಳು) ಬಂದು ಘನವಂತ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ ನೀವು ಧ್ವಜವನ್ನೆತ್ತಿ ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ ಜೋರಾಗಿ ಕೂಗಿ ಕರೆಯಿರಿ.
- 3ನಾನು ನನ್ನ ಪರಿಶುದ್ಧರಿಗೆ ಆಜ್ಞಾಪಿಸಿ ನನ್ನ ಮಹಿಮೆಯಲ್ಲಿ ಉಲ್ಲಾಸಿಸುವವರನ್ನೂ ಶೂರರನ್ನೂ ನನ್ನ ಕೋಪಕ್ಕೆ ಕರೆದಿದ್ದೇನೆ.
Cross references
- Jeremiah 50:1–64 ಯೆರೆಮೀಯ 50:1–64ಬಾಬೆಲಿಗೆ ವಿರೋಧವಾಗಿಯೂ ಕಸ್ದೀಯರ ದೇಶಕ್ಕೆ ವಿರೋಧವಾಗಿಯೂ ಕರ್ತನು ಪ್ರವಾದಿಯಾದ ಯೆರೆವಿಾಯನ ಮೂಲಕ ಹೇಳಿಸಿದ ವಾಕ್ಯವು. ಜನಾಂಗಗಳಿಗೆ ತಿಳಿಸಿರಿ, ಸಾರಿರಿ; ಧ್ವಜವನ್ನೆತ್ತಿರಿ; ಸಾರಿರಿ, ಮರೆಮಾಡಬೇಡಿರಿ, ಬಾಬೆಲು ಹಿಡಿಯ ಲ್ಪಟ್ಟಳು, ಬೇಲ್ನಿಗೆ ನಾಚಿಕೆಯಾಯಿತು, ಮೆರೋದಾ ಕನು ತುಂಡು ತುಂಡಾಗಿ ಮುರಿದು ಹೋದನು, ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಅವಳ ವಿಗ್ರಹಗಳು ಮುರಿದು ಹೋದವೆಂದು ಹೇಳಿರಿ; ಉತ್ತರದಿಂದ ಅವಳ ವಿರೋಧವಾಗಿ ಜನಾಂಗವು ಬರುತ್ತದೆ; ಅದು ಅವಳ ದೇಶವನ್ನು ಹಾಳು ಮಾಡಿ ಬಿಡುವದು; ಅವಳಲ್ಲಿ ಯಾರೂ ವಾಸಿಸುವದಿಲ್ಲ; ಮನುಷ್ಯರೂ ಮೃಗಗಳೂ ಒಟ್ಟಾಗಿ ತೊಲಗಿಬಿಡುತ್ತಾರೆ, ಓಡಿಹೋಗುತ್ತಾರೆ. ಆ ದಿವಸಗಳಲ್ಲಿಯೂ ಕಾಲ ದಲ್ಲಿಯೂ ಇಸ್ರಾಯೇಲಿನ ಮಕ್ಕಳು ಬರುವರು; ಅವರೂ ಯೆಹೂದನ ಮಕ್ಕಳೂ ಒಟ್ಟಾಗಿ ಕೂಡಿ ಕೊಳ್ಳುವರೆಂದು ಕರ್ತನು ಅನ್ನುತ್ತಾನೆ. ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಕರ್ತನನ್ನು ಹುಡುಕುವರು. ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ--ಬನ್ನಿ, ಮರೆತುಹೋಗದ ನಿತ್ಯವಾದ ಒಡಂಬಡಿಕೆಯಿಂದ ಕರ್ತನನ್ನು ಸೇರಿಸಿ ಕೊಳ್ಳೋಣ ಅನ್ನುವರು. ನನ್ನ ಜನರು ಕಳೆದುಹೋದ ಕುರಿಗಳಾಗಿದ್ದರು; ಅವರ ಕುರುಬರು ಅವರನ್ನು ತಪ್ಪಿ ಹೋಗುವಂತೆ ಮಾಡಿದರು; ಅವರನ್ನು ಬೆಟ್ಟಗಳ ಮೇಲೆ ತಿರುಗಿಸಿ ಅಡ್ಡಾಡಿಸಿದರು; ಅವರು ಬೆಟ್ಟದಿಂದ ಗುಡ್ಡಕ್ಕೆ ಹೋದರು; ಮಲಗುವ ಸ್ಥಳವನ್ನು ಮರೆತುಬಿಟ್ಟರು. ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟರು, ಅವರ ಎದುರಾಳಿಗಳು--ನಮ್ಮಲ್ಲಿ ಅಪರಾಧವಿಲ್ಲ; ನೀತಿಯ ನಿವಾಸವಾದ ಕರ್ತನಿಗೆ, ಅವರ ತಂದೆಗಳ ನಿರೀಕ್ಷಣೆಯಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿದ್ದಾರೆಂದು ಅಂದರು. ಬಾಬೆಲಿನೊಳ ಗಿಂದ ಓಡಿಹೋಗಿರಿ; ಕಸ್ದೀಯರ ದೇಶದಿಂದ ಹೊರ ಡಿರಿ, ಮಂದೆಯ ಮುಂದೆ ಹೋತಗಳ ಹಾಗೆ ಇರ್ರಿ. ಇಗೋ, ನಾನು ಉತ್ತರ ದೇಶದಿಂದ ದೊಡ್ಡ ಜನಾಂಗಗಳ ಸಭೆ ಸೇರಿಸಿ; ಬಾಬೆಲಿಗೆ ವಿರೋಧವಾಗಿ ಏಳುವಂತೆ ಮಾಡುತ್ತೇನೆ. ಅವರು ಅದಕ್ಕೆ ವಿರೋಧ ವಾಗಿ ಯುದ್ಧವನ್ನು ಸಿದ್ಧಮಾಡುವರು; ಅಲ್ಲಿಂದ ಅದು ಹಿಡಿಯಲ್ಪಡುವದು; ಅವರ ಬಾಣಗಳು ಬಲಿಷ್ಠನಾದ ಪ್ರವೀಣಶಾಲಿಯ ಹಾಗಿರುವವು. ಯಾವದೂ ವ್ಯರ್ಥವಾಗಿ ತಿರುಗವು. ಕಸ್ದೀಯರ ದೇಶವು ಸುಲಿಗೆಯಾಗುವದು; ಅದನ್ನು ಸುಲುಕೊಳ್ಳುವವರೆಲ್ಲರಿಗೆ ತೃಪ್ತಿಯಾಗುವದೆಂದು ಕರ್ತನು ಅನ್ನುತ್ತಾನೆ. ನನ್ನ ಸ್ವಾಸ್ತ್ಯವನ್ನು ನಾಶಮಾಡಿದವರೇ, ನೀವು ಸಂತೋಷಿಸಿದ್ದರಿಂದಲೂ ಉಲ್ಲಾಸಿಸಿದ್ದರಿಂದಲೂ ಕೊಬ್ಬಿದ ಕಡಸಿನ ಹಾಗೆ ಗರ್ವಪಟ್ಟದ್ದರಿಂದಲೂ ಹೋರಿಗಳ ಹಾಗೆ ಹೂಂಕರಿಸಿದ್ದರಿಂದಲೂ ನಿಮ್ಮ ತಾಯಿ ಬಹಳವಾಗಿ ನಾಚಿಕೆಪಡುವಳು; ನಿಮ್ಮನ್ನು ಹೆತ್ತವಳು ಲಜ್ಜೆ ಹೊಂದುವಳು; ಇಗೋ, ಜನಾಂಗ ಗಳಲ್ಲಿ ಅಂತ್ಯವಾದದ್ದು ಕಾಡೂ ಒಣ ಭೂಮಿಯೂ ಅರಣ್ಯವೂ ಆಗುವದು. ಕರ್ತನ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವದಿಲ್ಲ; ಸಂಪೂರ್ಣ ಹಾಳಾಗುವದು ಬಾಬೆಲನ್ನು ಹಾದುಹೋಗುವವ ರೆಲ್ಲರು ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು. ಬಿಲ್ಲನ್ನು ಬೊಗ್ಗಿಸುವವರೆಲ್ಲರೇ, ಬಾಬೆಲಿಗೆ ವಿರೋಧವಾಗಿ ಸುತ್ತಲೂ ಯುದ್ಧವನ್ನು ಸಿದ್ಧಮಾಡಿರಿ. ಬಾಣಗಳನ್ನು ಅದಕ್ಕೆ ಎಸೆಯಿರಿ; ಕಡಿಮೆ ಮಾಡಬೇಡಿರಿ; ಅದು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆ. ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಒಳಪಟ್ಟಿತು; ಅದರ ಅಸ್ತಿವಾರಗಳು ಬಿದ್ದು ಹೋದವು; ಅದರ ಗೋಡೆಗಳು ಕೆಡವಲ್ಪಟ್ಟವು; ಅದು ಕರ್ತನ ಪ್ರತಿದಂಡನೆಯೇ, ಅದರಿಂದ ಪ್ರತಿ ದಂಡನೆ ತಕ್ಕೊಳ್ಳಿರಿ. ಅದು ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ. ಬಿತ್ತುವವನನ್ನೂ ಸುಗ್ಗಿ ಕಾಲದಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನೊಳ ಗಿಂದ ಕಡಿದು ಬಿಡಿರಿ; ಕಷ್ಟಪಡಿಸುವ ಕತ್ತಿಯ ಭಯದಿಂದ ಅವರು ತಮ್ಮ ತಮ್ಮ ಜನರ ಬಳಿಗೆ ತಿರುಗಿಕೊಳ್ಳುವರು; ತಮ್ಮ ತಮ್ಮ ದೇಶಗಳಿಗೆ ಓಡಿ ಹೋಗುವರು. ಇಸ್ರಾಯೇಲನು ಚದರಿಹೋದ ಕುರಿಯಾಗಿ ದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಶ್ಶೂರಿನ ಅರಸನು ಅವನನ್ನು ನುಂಗಿಬಿಟ್ಟನು. ಕಡೆಯಲ್ಲಿ ಬಾಬೆಲಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ. ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅಶ್ಶೂರಿನ ಅರಸನನ್ನು ಶಿಕ್ಷಿಸಿದ ಹಾಗೆ, ಬಾಬೆಲಿನ ಅರಸನನ್ನೂ ಅವನ ದೇಶವನ್ನೂ ಶಿಕ್ಷಿಸುತ್ತೇನೆ. ಇಸ್ರಾಯೇಲನನ್ನು ಅವನ ನಿವಾಸಕ್ಕೆ ತಿರಿಗಿ ಬರಮಾಡುತ್ತೇನೆ; ಅವನು ಕರ್ಮೆಲಿ ನಲ್ಲಿಯೂ ಬಾಷಾನಿನ್ನಲ್ಲಿಯೂ ಮೇಯುವನು; ಅವನ ಪ್ರಾಣವು ಎಫ್ರಾಯಿಮ್ ಬೆಟ್ಟದಲ್ಲಿಯೂ ಗಿಲ್ಯಾದಿ ನಲ್ಲಿಯೂ ತೃಪ್ತಿಹೊಂದುವದು. ಕರ್ತನು ಹೀಗೆ ಅನ್ನುತ್ತಾನೆ--ಆ ದಿವಸಗಳಲ್ಲಿ ಆ ಕಾಲದಲ್ಲಿ ಇಸ್ರಾ ಯೇಲಿನ ಅಕ್ರಮವನ್ನು ಹುಡುಕಿದರೂ ಅಲ್ಲಿ ಏನೂ ಇರದು; ಯೆಹೂದದ ಪಾಪಗಳನ್ನು ಹುಡುಕಿದರೂ ಅವು ಸಿಕ್ಕುವದಿಲ್ಲ. ನಾನು ಉಳಿಸುವವರನ್ನು ಮನ್ನಿಸುತ್ತೇನೆ. ಮೆರಾಥಯಿಮ್ ದೇಶಕ್ಕೂ ಪೆಕೋದಿನ ನಿವಾಸಿ ಗಳಿಗೂ ವಿರೋಧವಾಗಿ ಏರಿಹೋಗು; ಅವರನ್ನು ಹಿಂದಟ್ಟಿ ಕೆಡಿಸಿಬಿಟ್ಟು ಸಂಪೂರ್ಣ ನಾಶಮಾಡು, ನಾನು ನಿನಗೆ ಆಜ್ಞಾಪಿಸಿದ್ದೆಲಾದರ ಪ್ರಕಾರ ಮಾಡು ಎಂದು ಕರ್ತನು ಅನ್ನುತ್ತಾನೆ. ಯುದ್ಧದ ಶಬ್ದವೂ ದೊಡ್ಡ ನಾಶನವೂ ದೇಶದಲ್ಲಿ ಇರುವದು. ಎಲ್ಲಾ ಭೂಮಿಯ ಸುತ್ತಿಗೆಯೂ ಹೇಗೆ ತುಂಡಾಗಿ ಮುರಿಯಲ್ಪಟ್ಟಿತು; ಬಾಬೆಲ್ ಹೇಗೆ ಜನಾಂಗಗಳೊಳಗೆ ಹಾಳಾಯಿತು! ನಾನು ಬೋನನ್ನು ಇಟ್ಟೆನು; ಹೌದು, ಬಾಬೆಲೇ ನೀನು ಹಿಡಿಯಲ್ಪಟ್ಟಿದ್ದೀ; ಆದರೆ ನಿನಗೆ ತಿಳಿಯದಿತ್ತು; ನೀನು ಕರ್ತನಿಗೆ ವಿರೋಧವಾಗಿ ಜಗಳವಾಡಿದ್ದ ರಿಂದಲೇ ಸಿಕ್ಕಿದ್ದೀ; ವಶಮಾಡಲ್ಪಟ್ಟಿದ್ದೀ; ಕರ್ತನು ತನ್ನ ಆಯುಧ ಶಾಲೆಯನ್ನು ತೆರೆದು, ರೋಷದ ಆಯುಧಗಳನ್ನು ಹೊರಗೆ ತಂದಿದ್ದಾನೆ; ಕಸ್ದೀಯರ ದೇಶದಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ನಿರ್ವಹಿಸ ಬೇಕಾದ ಕಾರ್ಯವುಂಟು. ಕಟ್ಟಕಡೆಯ ಮೇರೆ ಯಿಂದ ಅದಕ್ಕೆ ವಿರೋಧವಾಗಿ ಬನ್ನಿ; ಅದರ ಕಣಜಗಳನ್ನು ತೆರೆಯಿರಿ; ಅದನ್ನು ದಿಬ್ಬಗಳಂತೆ ತುಳಿ ಯಿರಿ; ಸಂಪೂರ್ಣವಾಗಿ ನಾಶಮಾಡಿರಿ; ಅದಕ್ಕೆ ಒಂದೂ ಉಳಿಯದಿರಲಿ. ಅದರ ಹೋರಿಗಳನ್ನೆಲ್ಲಾ ಕೊಂದುಹಾಕಿರಿ; ಅವು ಕೊಲೆಗೆ ಇಳಿಯಲಿ; ಅವರಿಗೆ ಅಯ್ಯೋ! ಅವರ ದಿನವೂ ಅವರ ವಿಚಾರಣೆಯ ಕಾಲವೂ ಬಂತು. ಅವರು ಚೀಯೋನಿನಲ್ಲಿ ನಮ್ಮ ದೇವರಾದ ಕರ್ತನ ಪ್ರತಿದಂಡನೆಯನ್ನೂ ಆತನ ಆಲಯದ ಪ್ರತಿ ದಂಡನೆ ಯನ್ನೂ ತಿಳಿಸುತ್ತಾ, ಬಾಬೆಲಿನ ದೇಶದಿಂದ ತಪ್ಪಿಸಿ ಕೊಂಡು ಓಡಿ ಹೋಗುವವರ ಸ್ವರವು! ಬಾಬೆಲಿಗೆ ವಿರೋಧವಾಗಿ ಬಿಲ್ಲಿನವರನ್ನು ಒಟ್ಟಾಗಿ ಕರೆಯಿರಿ; ಬಿಲ್ಲು ಬೊಗ್ಗಿಸುವವರೆಲ್ಲರೇ, ಅದಕ್ಕೆ ವಿರೋಧವಾಗಿ ಸುತ್ತಲು ದಂಡು ಕಟ್ಟಿರಿ; ಅದರಲ್ಲಿ ಯಾವದು ತಪ್ಪಿಸಿ ಕೊಳ್ಳಲಾರದೆ ಇರಲಿ. ಅದರ ಕೃತ್ಯಗಳ ಪ್ರಕಾರ ಅದಕ್ಕೆ ಪ್ರತಿಫಲ ಕೊಡಿರಿ; ಅದು ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿರಿ; ಕರ್ತನಿಗೆ ವಿರೋಧವಾಗಿಯೂ ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೂ ಅದು ಗರ್ವ ತೋರಿಸಿತು. ಆದದರಿಂದ ಅದರ ಯೌವನಸ್ಥರು ಬೀದಿಗಳಲ್ಲಿ ಬೀಳುವರು; ಅದರ ಯುದ್ಧಸ್ಥರೆಲ್ಲರು ಆ ದಿವಸದಲ್ಲಿ ತೆಗೆದುಹಾಕಲ್ಪಡು ವರೆಂದು ಕರ್ತನು ಅನ್ನುತ್ತಾನೆ. ಅತಿ ಗರ್ವಿಷ್ಠನೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ; ನಿನ್ನ ದಿವಸವೂ ನಿನ್ನ ವಿಚಾರಣೆಯ ಕಾಲವೂ ಬಂತು. ಆಗ ಅತಿ ಗರ್ವದ (ರಾಜ್ಯವು) ಎಡವಿ ಬೀಳುವದು; ಅದನ್ನು ಎಬ್ಬಿಸುವದಕ್ಕೆ ಯಾರೂ ಇರುವದಿಲ್ಲ; ಅದರ ಪಟ್ಟಣಗಳಲ್ಲಿ ನಾನು ಬೆಂಕಿ ಹಚ್ಚುವೆನು, ಅದು ಅದರ ಸುತ್ತಲಿರುವದನ್ನೆಲ್ಲಾ ನುಂಗಿಬಿಡುವದು. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ-- ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಕೂಡ ಹಿಂಸಿಸಲ್ಪಟ್ಟರು; ಅವರನ್ನು ಸೆರೆಗೆ ಒಯ್ಯುವವ ರೆಲ್ಲರು ಅವರನ್ನು ಬಲವಾಗಿ ಹಿಡಿದು, ಕಳುಹಿಸಿ ಬಿಡಲೊಲ್ಲದೆ ಇದ್ದರು. ಅವರ ವಿಮೋಚಕನು ಬಲಿಷ್ಠನೇ, ಸೈನ್ಯಗಳ ಕರ್ತನು ಆತನ ಹೆಸರು; ಆತನು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ ಬಾಬೆಲಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವನು. ಕಸ್ದೀಯರಿಗೂ ಬಾಬೆಲಿನ ನಿವಾಸಿಗಳಿಗೂ ಅದರ ಪ್ರಧಾನರಿಗೂ ಜ್ಞಾನಿಗಳಿಗೂ ವಿರೋಧವಾಗಿ ಕತ್ತಿ ಉಂಟೆಂದು ಕರ್ತನು ಅನ್ನುತ್ತಾನೆ. ಸುಳ್ಳುಗಾರರಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಮೂರ್ಖರಾಗು ವರು; ಅದರ ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಭಯಭ್ರಾಂತಿ ಪಡುವರು. ಅವರ ಕುದುರೆಗಳಿಗೂ ರಥಗಳಿಗೂ ಅದರೊಳ ಗಿರುವ ಎಲ್ಲಾ ಜನರಿಗೆ ವಿರೋಧವಾಗಿ ಖಡ್ಗ ಉಂಟು. ಅವರು ಹೆಂಗಸರ ಹಾಗೆ ಬೆದರುವರು; ಅದರ ಬೊಕ್ಕಸಗಳಿಗೆ ವಿರೋಧವಾಗಿಯೂ ಖಡ್ಗ ಉಂಟು. ಅವು ಕೊಳ್ಳೆಯಾಗುವವು. ಬೇಗೆಯು ಅವರ ನೀರನ್ನೆಲ್ಲಾ ಹೀರಲಿ; ಅದು ಬತ್ತಿ ಹೋಗುವದು; ಅದು ವಿಗ್ರಹಗಳ ದೇಶವೇ, ಅವರು ವಿಗ್ರಹಗಳಿಂದ ಹುಚ್ಚರಾದರು. ಆದದರಿಂದ ಅರಣ್ಯದ ಕಾಡು ಮೃಗಗಳು, ನರಿಗಳು ಕೂಡ ಅಲ್ಲಿ ವಾಸಮಾಡುವವು. ಗೂಬೆಗಳೂ ಸಹ ಅದರಲ್ಲಿ ವಾಸಮಾಡುವವು; ಅದು ಇನ್ನು ಮೇಲೆ ಎಂದೆಂದಿಗೂ ನಿವಾಸವಾಗುವದಿಲ್ಲ; ತಲತಲಾಂತರಗಳ ವರೆಗೂ ಯಾರೂ ಅದರಲ್ಲಿ ತಂಗುವದಿಲ್ಲ. ದೇವರು ಸೊದೋಮನ್ನೂ ಗೊಮೋರವನ್ನು ಅವುಗಳ ಸವಿಾಪದಲ್ಲಿದ್ದ ಪಟ್ಟಣಗಳನ್ನೂ ಕೆಡವಿಹಾಕಿದಾಗ ಆದ ಹಾಗೆ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ; ಅದರಲ್ಲಿ ಯಾವ ನರಪುತ್ರನಾದರೂ ತಂಗುವದಿ ಲ್ಲವೆಂದು ಕರ್ತನು ಅನ್ನುತ್ತಾನೆ. ಇಗೋ, ಒಂದು ಜನಾಂಗ ಉತ್ತರದಿಂದ ಬರುತ್ತದೆ; ಅದು ದೊಡ್ಡ ಜನಾಂಗವು. ಭೂಮಿಯ ಮೇರೆಗಳಿಂದ ಅನೇಕ ಅರಸರು ಎಬ್ಬಿಸಲ್ಪಡುವರು. ಅವರು ಬಿಲ್ಲನ್ನೂ ಭಲ್ಲೆಯನ್ನೂ ಹಿಡಿಯುವರು; ಅವರು ಕ್ರೂರರು; ಅಂತಃಕರುಣೆ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುವದು; ಬಾಬೆಲಿನ ಮಗಳೇ, ನಿನಗೆ ವಿರೋಧವಾಗಿ ಯುದ್ಧಕ್ಕೆ ಸಿದ್ಧವಾಗಿ ರುವ ಪುರುಷರ ಹಾಗೆ ಕುದುರೆಗಳನ್ನು ಹತ್ತಿಕೊಂಡು ಬರುವರು. ಬಾಬೆಲಿನ ಅರಸನು ಅವರ ಸುದ್ದಿಯನ್ನು ಕೇಳಿದ್ದಾನೆ. ಅವನ ಕೈಗಳು ನಿತ್ರಾಣವಾದವು. ಸಂಕಟವೂ ಹೆರುವ ಸ್ತ್ರೀಯ ಹಾಗೆ ನೋವೂ ಅವನನ್ನು ಹಿಡಿದವು. ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಕ್ಕುವಿಕೆಯಿಂದ ಬಲವಾದ ನಿವಾಸಕ್ಕೆ ಏರಿ ಬರುವನು; ಆದರೆ ನಾನು ಅವರನ್ನು ಕ್ಷಣಮಾತ್ರ ದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು, ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ಮತ್ತು ನನಗೆ ಕಾಲವನ್ನು ನೇಮಿಸುವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು? ಆದದರಿಂದ ಕರ್ತನು ಬಾಬೆಲಿಗೆ ವಿರೋಧವಾಗಿ ಮಾಡಿದ ಆಲೋ ಚನೆಯನ್ನೂ ಆತನು ಕಸ್ದೀಯರ ದೇಶಕ್ಕೆ ವಿರೋಧವಾಗಿ ಮಾಡಿದ ಯೋಚನೆಗಳನ್ನೂ ಕೇಳಿರಿ; ನಿಶ್ಚಯವಾಗಿ ಮಂದೆಯಲ್ಲಿ ಚಿಕ್ಕವುಗಳು ಅವರನ್ನು ಎಳೆಯುವವು; ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡುವನು.ಬಾಬೆಲ್ ಹಿಡಿಯಲ್ಪಟ್ಟಿತ್ತೆಂಬ ಶಬ್ದದಿಂದ ಭೂಮಿಯು ಕದಲುತ್ತದೆ; ಅದರ ಕೂಗು ಜನಾಂಗಗಳೊಳಗೆ ಕೇಳಬಂತು. ಬಾಬೆಲ್ ಹಿಡಿಯಲ್ಪಟ್ಟಿತ್ತೆಂಬ ಶಬ್ದದಿಂದ ಭೂಮಿಯು ಕದಲುತ್ತದೆ; ಅದರ ಕೂಗು ಜನಾಂಗಗಳೊಳಗೆ ಕೇಳಬಂತು.
- Isaiah 47:1–15 ಯೆಶಾಯ 47:1–15ಬಾಬೆಲಿನ ಕುಮಾರ್ತೆಯಾದ ಓ ಕನ್ಯಾ ಸ್ತ್ರೀಯೇ, ಕೆಳಕ್ಕೆ ಇಳಿದು ಬಂದು ದೂಳಿ ನಲ್ಲಿ ಕುಳಿತುಕೋ, ಓ ಕಸ್ದೀಯರ ಕುಮಾರಿಯೇ ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ. ಯಾಕಂದರೆ ಇನ್ನು ಮೇಲೆ ನೀನು ಕೋಮಲೆ ಮತ್ತು ನಾಜೂಕಾದವಳು ಎಂದು ಕರೆಯಲ್ಪಡುವದಿಲ್ಲ. ಬೀಸುವ ಕಲ್ಲನ್ನು ಹಿಡಿದು ಹಿಟ್ಟನ್ನು ಬೀಸು, ಮುಸುಕನ್ನು ತೆಗೆದುಹಾಕಿ ನಿನ್ನ ಕಾಲನ್ನು ಬರಿದುಮಾಡಿ, ತೊಡೆಯನ್ನು ಮುಚ್ಚದೆ ನದಿಗಳನ್ನು ಹಾದುಹೋಗು. ನಿನ್ನ ಬೆತ್ತಲೆತನವು ಮುಚ್ಚಲ್ಪಡದೇ ಇದ್ದದರಿಂದ ನೀನು ನಾಚಿಕೆಗೆ ಈಡಾಗುವಿ, ನಾನು ನಿನ್ನನ್ನು ಮನುಷ್ಯನಂತೆ ಸಂದಿಸದೆ ನಿನಗೆ ಮುಯ್ಯಿ ತೀರಿಸುವೆನು. ನಮ್ಮ ವಿಮೋಚಕನಿಗಾದರೋ, ಸೈನ್ಯಗಳ ಕರ್ತನು ಎಂಬದೇ ಆತನ ಹೆಸರು, ಆತನೇ ಇಸ್ರಾಯೇಲಿನ ಪರಿಶುದ್ಧನು. ಓ ಕಸ್ದೀಯರ ಕುಮಾರಿಯೇ, ಮೌನ ವಾಗಿ ಕುಳಿತುಕೋ, ಕತ್ತಲೊಳಗೆ ಹೋಗು; ಯಾಕಂ ದರೆ ಇನ್ನು ಮೇಲೆ ನೀನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವದಿಲ್ಲ. ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವಾಸ್ಥ್ಯವನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು; ನೀನು ಅವರಿಗೆ ಕರುಣೆಯನ್ನು ತೋರಿಸದೆ ಮುದುಕರ ಮೇಲೆಯೂ ಬಹು ಭಾರವಾದ ನೊಗವನ್ನು ಹೊರಿ ಸಿದಿ. ನಾನು ಶಾಶ್ವತವಾಗಿ ರಾಣಿಯೆಂದು ನೀನು ಅಂದುಕೊಂಡಿದ್ದರಿಂದ ಈ ಸಂಗತಿಗಳನ್ನು ನಿನ್ನ ಹೃದಯ ದಲ್ಲಿಟ್ಟುಕೊಳ್ಳಲಿಲ್ಲ; ಇಲ್ಲವೆ ಅವರ ಅಂತ್ಯವನ್ನು ನೆನಸ ಲಿಲ್ಲ. ನಾನೇ ಇರುವವಳು ನನ್ನ ಹೊರತು ಇನ್ನು ಯಾರೂ ಇಲ್ಲ. ನಾನು ವಿಧವೆಯಾಗಿ ಕೂತುಕೊಳ್ಳು ವದಿಲ್ಲ; ಪುತ್ರಶೋಕವನ್ನು ಅನುಭವಿಸುವದಿಲ್ಲ ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿ ಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು. ಒಂದೇ ದಿನದೊಳಗೆ ಒಂದು ಕ್ಷಣದಲ್ಲೇ, ಪುತ್ರ ಶೋಕ ಮತ್ತು ವಿಧವಾ ಸ್ಥಿತಿಯು ಇವೆರಡೂ ನಿನಗೆ ಬರುವವು; ನಿನ್ನ ಮಂತ್ರಗಳು ಬಹಳವಾಗಿರುವದ ರಿಂದಲೂ ನಿನ್ನ ಮಾಟಗಳು ಹೆಚ್ಚಾಗಿರುವದರಿಂದಲೂ ಅವು ಸಂಪೂರ್ಣವಾಗಿ ನಿನ್ನ ಮೇಲೆ ಬರುವವು. ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು ನನ್ನನ್ನು ಯಾರೂ ನೋಡುವದಿಲ್ಲವೆಂದು ಹೇಳಿದಿ. ನಿನ್ನ ಜ್ಞಾನವು, ನಿನ್ನ ತಿಳುವಳಿಕೆಯು ನಿನ್ನನ್ನು ದಾರಿತಪ್ಪಿಸಿದ್ದ ರಿಂದ ನಿನ್ನ ಹೃದಯದಲ್ಲಿ--ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಎಂದು ಅಂದು ಕೊಂಡಿ. ಆದದರಿಂದ ನೀನು ಮಂತ್ರಿಸಿ ನಿವಾರಿಸ ಲಾರದ ಕೇಡು ನಿನ್ನ ಮೇಲೆ ಬರುವದು. ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವದು; ನಿನಗೆ ತಿಳಿಯದ ನಾಶನವು ಪಕ್ಕನೆ ನಿನ್ನ ಮೇಲೆ ಬರುವದು. ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು. ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಲಜ್ಞರು, ಜೋಯಿಸರು, ಪಂಚಾಂಗದವರು ಇವರೆ ಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ. ಇಗೋ, ಅವರೆಲ್ಲಾ ಕೂಳೆ ಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡು ವದು, ಜ್ವಾಲೆಯ ಶಕ್ತಿಯಿಂದ ತಮ್ಮನ್ನು ರಕ್ಷಿಸಿಕೊಳ್ಳ ಲಾರರು; ಇಲ್ಲವೆ ಕಾಯಿಸಿಕೊಳ್ಳುವದಕ್ಕೆ ಕೆಂಡವಿರು ವದಿಲ್ಲ, ಹತ್ತಿರ ಕೂತುಕೊಳ್ಳಲು ಬೆಂಕಿ ಇಲ್ಲ.ನೀನು ಪ್ರಯಾಸ ಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು; ನಿನ್ನ ಯೌವನ ಪ್ರಾಯದಿಂದ ನಿನ್ನ ವರ್ತಕರು ಚದುರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿ ಬಿಡುವರು; ನಿನ್ನನ್ನು ರಕ್ಷಿಸಲು ಒಬ್ಬನೂ ಇರನು. ನೀನು ಪ್ರಯಾಸ ಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು; ನಿನ್ನ ಯೌವನ ಪ್ರಾಯದಿಂದ ನಿನ್ನ ವರ್ತಕರು ಚದುರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿ ಬಿಡುವರು; ನಿನ್ನನ್ನು ರಕ್ಷಿಸಲು ಒಬ್ಬನೂ ಇರನು.
- Isaiah 1:1 ಯೆಶಾಯ 1:1ಯೆಹೂದ ದೇಶದ ಅರಸರುಗಳಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗ ನಾದ ಯೆಶಾಯನಿಗಾದ ದರ್ಶನವು.
- Daniel 5:6 ದಾನಿಯೇಲನು 5:6ಆಗ ಅರಸನ ಮುಖವು ಕಳೆಗುಂದಿತು, ಅವನ ಆಲೋಚನೆಗಳು ಅವನನ್ನು ಕಳವಳಪಡಿಸಿದವು. ಅವನ ನಡುವಿನ ಕೀಲುಗಳು ಸಡಿಲವಾದವು. ಅವನ ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.
- Revelation 17:1–18 ಪ್ರಕಟನೆ 17:1–18ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ. ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು. ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು. ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು. ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ ಆಗ ಆ ದೂತನು ನನಗೆ--ನೀನೇಕೆ ಆಶ್ಚರ್ಯಪಟ್ಟೆ? ಆ ಸ್ತ್ರೀಯ ವಿಷಯವಾಗಿಯೂ ಅವಳನ್ನು ಹೊತ್ತುಕೊಂಡಿದ್ದ ಏಳು ತಲೆಗಳು ಮತ್ತು ಹತ್ತು ಕೊಂಬುಗಳುಳ್ಳ ಮೃಗದ ವಿಷಯವಾಗಿಯೂ ಇರುವ ಮರ್ಮವನ್ನು ನಾನು ನಿನಗೆ ತಿಳಿಸುತ್ತೇನೆ. ನೀನು ಕಂಡ ಈ ಮೃಗವು ಮೊದಲು ಇತ್ತು. ಈಗ ಇಲ್ಲ, ಅದು ತಳವಿಲ್ಲದ ತಗ್ಗಿನಿಂದ ಏರಿ ಬಂದು ನಾಶನಕ್ಕೆ ಹೋಗುವದು. ಭೂಮಿಯಲ್ಲಿ ವಾಸಿಸುವವರೊಳಗೆ ಯಾರಾರ ಹೆಸರು ಗಳು ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಜೀವಗ್ರಂಥ ದಲ್ಲಿ ಬರೆದಿರುವದಿಲ್ಲವೋ ಅವರು ಮೊದಲು ಇದ್ದು ಈಗ ಇಲ್ಲದ ಇನ್ನು ಇದರಲ್ಲಿ ಜ್ಞಾನವುಳ್ಳ ಮನಸ್ಸು ಇರುತ್ತದೆ. ಆ ಏಳು ತಲೆಗಳು ಆ ಸ್ತ್ರೀ ಕೂತು ಕೊಂಡಿರುವ ಏಳು ಬೆಟ್ಟಗಳೇ. ಇದಲ್ಲದೆ ಅವು ಏಳು ಮಂದಿ ರಾಜರು; ಐದು ಮಂದಿ ಬಿದ್ದು ಹೋಗಿದ್ದಾರೆ. ಒಬ್ಬನು ಇದ್ದಾನೆ, ಮತ್ತೊಬ್ಬನು ಇನ್ನೂ ಬಂದಿಲ್ಲ. ಬಂದ ಮೇಲೆ ಅವನು ಸ್ವಲ್ಪಕಾಲ ಇರಲೇ ಬೇಕು. ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯವನು; ಅವನು ಆ ಏಳು ಮಂದಿಗೆ ಸೇರಿದವನಾಗಿದ್ದು ನಾಶನಕ್ಕೆ ಹೋಗುತ್ತಾನೆ. ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು. ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ. ಅವರು ಒಂದೇ ಮನಸ್ಸುಳ್ಳವರಾಗಿದ್ದು ತಮ್ಮ ಅಧಿಕಾರವನ್ನೂ ಶಕ್ತಿಯನ್ನೂ ಮೃಗಕ್ಕೆ ಕೊಡುತ್ತಾರೆ. ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ. ಅವನು ನನಗೆ--ನೀನು ಕಂಡ ಆ ಜಾರಸ್ತ್ರೀಯು ಕೂತುಕೊಂಡಿರುವ ನೀರುಗಳು ಅಂದರೆ ಪ್ರಜೆಗಳೂ ಸಮೂಹಗಳೂ ಜನಾಂಗಗಳೂ ಭಾಷೆಗಳೂ ಆಗಿವೆ. ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು. ಯಾಕಂದರೆ ಅವರು ದೇವರ ಚಿತ್ತವನ್ನು ನೆರವೇರಿಸುವದಕ್ಕೆ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವಂತೆ ದೇವರು ತನ್ನ ವಾಕ್ಯಗಳು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರೇಪಿಸಿದನು.ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು. ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು.
- Daniel 5:28 ದಾನಿಯೇಲನು 5:28ಪೆರೇಸ್ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು.
- Isaiah 21:1–11 ಯೆಶಾಯ 21:1–11ಸಮುದ್ರದ ಅಡವಿಯ ವಿಷಯವಾದ ದೈವೋಕ್ತಿ ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿ ದಾಟಿಹೋಗುವಂತೆ ಅದು ಮರುಭೂಮಿ ಕಡೆಯಿಂದ ಭಯಂಕರವಾದ ದೇಶದಿಂದ ಬರುತ್ತದೆ. ಘೋರದರ್ಶನವು ನನಗೆ ತಿಳಿಯಬಂದಿದೆ. ಬಾಧ ಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡು ತ್ತಿದ್ದಾನೆ. ಏಲಾಮೇ, ಏಳು ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ. ಆದ ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ; ಕೇಳಕೂಡದ ಹಾಗೆ ಸಂಕಟಪಡುತ್ತೇನೆ, ನೋಡಕೂಡದ ಹಾಗೆ ಭ್ರಾಂತನಾಗಿದ್ದೇನೆ. ನನ್ನ ಹೃದಯವು (ಎದುರಿಸುತ್ತದೆ) ಗಾಬರಿಗೊಂಡಿದೆ, ನಡು ಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನನ್ನ ಆನಂ ದದ ರಾತ್ರಿಯನ್ನು ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ. ಮೇಜನ್ನು ಸಿದ್ಧಮಾಡು ಬುರುಜಿನ ಮೇಲೆ ಕಾವ ಲಿರು, ಉಣ್ಣು, ಕುಡಿ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಬಳಿಯಿರಿ. ಕರ್ತನು ನನಗೆ ಹೇಳಿರುವ ದೇನಂದರೆ--ಹೋಗು, ಕಾವಲುಗಾರನನ್ನು ನೇಮಿಸು. ಅವನು ಕಂಡದ್ದನ್ನು ತಿಳಿಸಲಿ. ಅವನು ಜೋಡಿ ಜೋಡಿಯಾಗಿ ಬರುವ ರಥ ಸವಾರರ ಸಾಲನ್ನು ಕತ್ತೆಗಳ, ಒಂಟೆಗಳ, ರಥಗಳ ಸಾಲುಗಳನ್ನು ನೋಡಿ ದರೆ, ಬಹು ಗಮನದಿಂದ ಕಿವಿಗೊಟ್ಟು ಗಮನಿಸಲಿ ಎಂಬದೇ. ಬಳಿಕ ಅವನು ಸಿಂಹದಂತೆ ಕೂಗಿದ್ದೇ ನಂದರೆ, ನನ್ನ ಒಡೆಯನೇ, ನಾನು ಹಗಲೆಲ್ಲಾ ಕಾವ ಲಿನ ಬುರುಜಿನ ಮೇಲೆ ನಿಂತಿದ್ದೇನೆ. ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ. ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ ಮತ್ತು ಪ್ರತ್ಯುತ್ತರ ವಾಗಿ--ಬಾಬೆಲ್ ಬಿತ್ತು, ಆದರೆ ಕೆತ್ತಿದ ದೇವತೆಗಳ ವಿಗ್ರಹಗಳನ್ನು ಮುರಿದು ನೆಲಸಮ ಮಾಡಿಬಿಟ್ಟರು ಎಂದು ಹೇಳಿದನು. ನಾನು ತುಳಿಯುವ ತೆನೆಯೇ, ನನ್ನ ಕಣದ ಧಾನ್ಯವೇ, ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನಿಂದ ನಾನು ಕೇಳಿದ್ದನ್ನು ನಿಮಗೆ ತಿಳಿಸಿದ್ದೇನೆ. ದೂಮದ ವಿಷಯವಾದ ದೈವೋಕ್ತಿ, ಆತನು ಸೇಯಾರಿನಿಂದ ನನಗೆ ಕರೆದನು. ಹೇಗಂದರೆ, ಕಾವ ಲುಗಾರನೇ, ಈಗ ರಾತ್ರಿ ಎಷ್ಟು ಕಳೆಯಿತು? ಕಾವಲು ಗಾರನೇ ರಾತ್ರಿ ಎಷ್ಟು ಕಳೆಯಿತು?
- Isaiah 15:1 ಯೆಶಾಯ 15:1ಮೋವಾಬಿನ ವಿಷಯವಾದ ದೈವೋಕ್ತಿ. ಆ ರಾತ್ರಿಯಲ್ಲಿ ಮೋವಾಬಿನ ಆರ್ ಹಾಳಾಗಿ ನಿಶ್ಯಬ್ದವಾಯಿತು; ಆ ರಾತ್ರಿಯಲ್ಲಿ ಮೋವಾ ಬಿನ ಕಿರ್ ಹಾಳಾಗಿ ನಿಶ್ಯಬ್ಧವಾಯಿತು
- Isaiah 14:28 ಯೆಶಾಯ 14:28ಅರಸನಾದ ಆಹಾಜನು ಸತ್ತ ವರುಷದಲ್ಲಿ ಈ ದೇವವಾಣಿಯಾಯಿತು.
- Jeremiah 25:12–26 ಯೆರೆಮೀಯ 25:12–26ಎಪ್ಪತ್ತು ವರುಷ ತುಂಬಿದ ಮೇಲೆ ನಾನು ಬಾಬೆಲಿನ ಅರಸನನ್ನೂ ಆ ಜನಾಂಗವನ್ನೂ ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು. ನಿಶ್ಚಯವಾಗಿ ಆ ದೇಶದ ಮೇಲೆ ನಾನು ಅದಕ್ಕೆ ವಿರೋಧವಾಗಿ ಹೇಳಿದ ನನ್ನ ಎಲ್ಲಾ ವಾಕ್ಯಗಳನ್ನೂ ಯೆರವಿಾಯನು ಜನಾಂಗ ಗಳಿಗೆ ವಿರೋಧವಾಗಿ ಪ್ರವಾದಿಸಿ ಈ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನೂ ಅವರ ಮೇಲೆ ಬರಮಾಡು ವೆನು. ಅನೇಕ ಜನಾಂಗಗಳೂ ದೊಡ್ಡ ಅರಸರೂ ಅವರಿಂದ ಸೇವೆ ಮಾಡಿಸಿಕೊಳ್ಳುವರು. ಅವರ ಕ್ರಿಯೆ ಗಳ ಪ್ರಕಾರವೂ ಅವರ ಕೈ ಕೆಲಸದ ಪ್ರಕಾರವೂ ನಾನು ಅವರಿಗೆ ಪ್ರತಿಫಲ ಕೊಡುವೆನು ಎಂದು ಕರ್ತನು ಅನ್ನುತ್ತಾನೆ. ಇಸ್ರಾಯೇಲಿನ ದೇವರಾದ ಕರ್ತನು ನನಗೆ ಹೀಗೆ ಹೇಳುತ್ತಾನೆ--ಈ ರೌದ್ರದ ದ್ರಾಕ್ಷಾರಸ ಪಾತ್ರೆ ಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತಕ್ಕೋ. ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತ ಕದಲಿ ಹುಚ್ಚರಾಗುವರು ಅಂದನು. ಆಗ ನಾನು ಪಾತ್ರೆಯನ್ನು ಕರ್ತನ ಕೈಯಿಂದ ತಕ್ಕೊಂಡು ಕರ್ತನು ನನ್ನನ್ನು ಕಳುಹಿಸಿದ ಎಲ್ಲಾ ಜನಾಂಗಗಳಿಗೆ ಕುಡಿಸಿದೆನು. ಯೆರೂಸ ಲೇಮಿಗೂ ಯೆಹೂದದ ಪಟ್ಟಣಗಳಿಗೂ ಅದರ ಅರಸುಗಳಿಗೂ ಪ್ರಭುಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳುಮಾಡಿ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ಶಾಪಕ್ಕೂ ಗುರಿಮಾಡುವ ಹಾಗೆ ಕುಡಿಸಿದೆನು. ಐಗುಪ್ತದ ಅರಸನಾದ ಫರೋಹನಿಗೂ ಅವನ ಸೇವಕರಿಗೂ ಅವನ ಪ್ರಭುಗಳಿಗೂ ಅವನ ಎಲ್ಲಾ ಜನರಿಗೂ ಮಿಶ್ರವಾದ ಜನರೆಲ್ಲರಿಗೂ ಊಚ್ ದೇಶದ ಅರಸರೆಲ್ಲರಿಗೂ ಫಿಲಿಷ್ಟಿಯ ದೇಶದ ಅರಸರೆಲ್ಲರಿಗೂ ಅಷ್ಕೆಲೋನಿಗೂ ಗಾಜಾಕ್ಕೂ ಎಕ್ರೋನಿಗೂ ಅಷ್ಡೋ ದಿನ ಉಳಿದವರಿಗೂ ಎದೋಮಿಗೂ ಮೋವಾ ಬಿಗೂ ಅಮ್ಮೋನನ ಮಕ್ಕಳಿಗೂ ತೂರಿನ ಅರಸರೆ ಲ್ಲರಿಗೂ ಚೀದೋನಿನ ಅರಸರೆಲ್ಲರಿಗೂ ಸಮುದ್ರದ ಆಚೆಯಲ್ಲಿರುವ ದ್ವೀಪದ ಅರಸರಿಗೂ ದೆದಾನಿಗೂ ತೇಮಾಗೂ ಬೂಜಿಗೂ ಕಟ್ಟಕಡೆಯ ಮೂಲೆಯ ವರೆಗೂ ಅರಬಿಯದ ಅರಸರೆಲ್ಲರಿಗೂ ಅರಣ್ಯದಲ್ಲಿ ವಾಸಿಸುವ ಮಿಶ್ರವಾದ ಜನರ ಅರಸರೆಲ್ಲರಿಗೂ ಜಿಮ್ರಿಯ ಅರಸರೆಲ್ಲರಿಗೂ ಏಲಾಮಿನ ಅರಸರೆ ಲ್ಲರಿಗೂ ಮೇದ್ಯದ ಅರಸರೆಲ್ಲರಿಗೂ ಹತ್ತಿರದ ಲ್ಲಿಯೂ ದೂರದಲ್ಲಿಯೂ ಒಬ್ಬರ ಬಳಿಯಲ್ಲಿ ಒಬ್ಬರಿ ರುವ ಉತ್ತರದಿಕ್ಕಿನ ಅರಸರೆಲ್ಲರಿಗೂ ಭೂಮಿಯ ಮೇಲ್ಭಾಗದಲ್ಲಿರುವಂಥ ಲೋಕದ ಎಲ್ಲಾ ರಾಜ್ಯ ಗಳಿಗೂ ಕುಡಿಸಿದೆನು; ಶೇಷಕಿನ ಅರಸನು ಅವರ ತರುವಾಯ ಕುಡಿಯುವನು.
- Isaiah 14:4–23 ಯೆಶಾಯ 14:4–23ಹೀಗೆ ಹಿಂಸಕನು ಕೊನೆ ಗೊಂಡನು, ಬಂಗಾರದ ಪಟ್ಟಣವು ಸುಮ್ಮನೆ ಇದೆ. ಜನರನ್ನು ಉಗ್ರಕೋಪದಿಂದ ಎಡೆಬಿಡದೆ ಹೊಡೆ ದು ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ ಆಳುತ್ತಿದ್ದ ದುಷ್ಟರ ಕೋಲನ್ನೂ ರಾಜರ ದಂಡವನ್ನೂ ಕರ್ತನು ಮುರಿದುಬಿಟ್ಟಿದ್ದಾನೆ. ಯಾವನೂ ಅಡ್ಡಿ ಮಾಡನು. ಭೂಲೋಕವೆಲ್ಲಾ ಶಾಂತವಾಗಿ ವಿಶ್ರಾಂತಿ ಗೊಂಡಿದೆ. ಅವರು ಉತ್ಸಾಹಧ್ವನಿಯನ್ನು ಎತ್ತುತ್ತಾರೆ. ಹೌದು, ತುರಾಯಿ ಮರಗಳೂ ಲೆಬನೋನಿನ ದೇವದಾರು ಮರಗಳೂ ನೀನು ಬಿದ್ದಂದಿನಿಂದ ಕಡಿಯುವವನು ಯಾವನೂ ತಮ್ಮ ಮೇಲೆ ಬರಲಿಲ್ಲವೆಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ. ನಿನಗೋ ಸ್ಕರ ನಿನ್ನ ಬರೋಣವನ್ನು ಎದುರುಗೊಳ್ಳುವದಕ್ಕೆ ಪಾತಾಳವು ಕೆಳಗಿನಿಂದ ತಳಮಳಪಡುತ್ತದೆ. ಸತ್ತವ ರನ್ನೂ ಅಂದರೆ, ಭೂಲೋಕದ ಮುಖಂಡರಾಗಿದ್ದವರೆ ಲ್ಲರನ್ನೂ ಕಲಕಿ (ಎಚ್ಚರಿಸಿ) ಜನಾಂಗಗಳ ಎಲ್ಲಾ ರಾಜ ರುಗಳನ್ನು ಅವರ ಸಿಂಹಾಸನಗಳಿಂದ ಎಬ್ಬಿಸುತ್ತದೆ. ಅವರೆಲ್ಲರು ನಿನಗೆ--ನಮ್ಮ ಹಾಗೆ ನೀನು ಸಹ ಬಲಹೀನನಾಗಿದ್ದೀ, ನೀನು ನಮ್ಮ ಸಮಾನನಾಗಿದ್ದೀ ಎಂದು ಮಾತಾಡಿ ಹೇಳುವರು. ನಿನ್ನ ವೈಭವವೂ ವೀಣೆಗಳ ಸ್ವರವೂ ಸಮಾಧಿಗೆ ಇಳಿಸಲ್ಪಟ್ಟಿವೆ. ನಿನಗೆ ಹುಳುಗಳೇ ಹಾಸಿಗೆ, ನಿನ್ನ ಹೊದಿಕೆಯು ಕ್ರಿಮಿಗಳೇ; ಓ ಲೂಸಿಫರ್ ಉದಯದ ಮಗನೇ. ಆಕಾಶದಿಂದ ನೀನು ಹೇಗೆ ಬಿದ್ದೀ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಕಡಿಯಲ್ಪಟ್ಟಿದ್ದೀ? ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು. ಉನ್ನತವಾದ ಮೇಘ ಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುತ್ತೇನೆ ಅಂದು ಕೊಂಡಿದ್ದೆಯಲ್ಲಾ; ಆದಾಗ್ಯೂ ಪಾತಾಳದ ಕುಣಿಯ ಪಾರ್ಶ್ವಗಳಿಗೆ ಇಳಿಸಲ್ಪಡುವಿ. ನಿನ್ನನ್ನು ನೋಡುವ ವರು ನಿನ್ನನ್ನು ಸೂಕ್ಷ್ಮವಾಗಿ ದೃಷ್ಟಿಸಿ ಯೋಚಿಸುತ್ತಾ --ಭೂಮಿಯನ್ನು ನಡುಗಿಸಿ ರಾಜ್ಯಗಳನ್ನು ಕದಲಿಸಿ ಪಟ್ಟಣವನ್ನು ನಾಶಮಾಡಿ ಲೋಕವನ್ನು ಕಾಡ ನ್ನಾಗಿ ಮಾಡಿ ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದ ವನು ಈ ಮನುಷ್ಯನೋ ಎಂದು ಅಂದುಕೊಳ್ಳುವರು. ಜನಾಂಗಗಳ ಅರಸುಗಳೆಲ್ಲಾ ಅವರೆಲ್ಲರೂ ವೈಭವ ದಿಂದ ತಮ್ಮತಮ್ಮ ಮನೆಗಳಲ್ಲಿ ಮಲಗುತ್ತಾರೆ. ಆದರೆ ನೀನು ಅಸಹ್ಯವಾದ ಕೊಂಬೆಯಂತೆಯೂ ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಉಡುಪಿನಂತೆಯೂ ಕಾಲಕೆಳಗೆ ತುಳಿಯಲ್ಪಟ್ಟ ಹೆಣ ದಂತೆಯೂ ನಿನ್ನ ಸಮಾಧಿಯೊಳಗಿಂದ ಹೊರಗೆ ಹಾಕ ಲ್ಪಟ್ಟಿದ್ದೀ. ನೀನು ಅವರೊಂದಿಗೆ ಹೂಣಿಡುವಿಕೆ ಯಲ್ಲಿ ಕೂಡಿಕೊಳ್ಳದೆ ಇರುವಿ. ನಿನ್ನ ದೇಶವನ್ನು ನೀನು ನಾಶಮಾಡಿ ನಿನ್ನ ಜನರನ್ನು ಕೊಂದುಹಾಕಿದಿ. ಕೆಟ್ಟವರ ಸಂತಾನವು ಎಂದೆಂದಿಗೂ ಹೆಸರು ಹೊಂದು ವದಿಲ್ಲ. ಅವರು ಏಳದೆ ಇಲ್ಲವೆ ದೇಶವನ್ನು ವಶ ಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ ಅವರ ತಂದೆಗಳ ಅಪರಾಧದ ನಿಮಿತ್ತ ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ. ಅವರಿಗೆ ವಿರುದ್ಧವಾಗಿ ಏಳುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬಾಬೆಲಿನಿಂದ ಹೆಸರನ್ನೂ ಉಳಿದ ಜನರನ್ನೂ ಮಗನನ್ನೂ ಸೋದರಳಿಯನನ್ನೂ ನಿರ್ಮೂಲ ಮಾಡುವೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಅದನ್ನು ಸಹ ಮುಳ್ಳುಹಂದಿಗೆ ಬಾಧ್ಯ ವಾಗಿಯೂ ನೀರಿನ ಕುಣಿಗಳಾಗಿಯೂ ಮಾಡಿ ನಾಶ ವೆಂಬ ಕಸಬರಿಕೆಯಿಂದ ಗುಡಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Isaiah 13:19 ಯೆಶಾಯ 13:19ರಾಜ್ಯಗಳ ಘನತೆಯೂ ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬೆಲಿಗೆ ದೇವರು ಸೊದೋ ಮ್ ಗೊಮೋರಗಳನ್ನು ಕೆಡವಿಬಿಟ್ಟಂತೆ ಇದನ್ನು ಸಹ ಕೆಡವಿಬಿಡುವನು.