Isaiah · chapter 13 · verse 10
Isaiah 13:10 in Kannada
ಆಕಾಶದ ನಕ್ಷತ್ರಗಳು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ; ಸೂರ್ಯನು ಮೂಡಿ ಹೋಗುತ್ತಿರುವಾಗಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವದಿಲ್ಲ.
Aakaashada nakshatragalu adara raashigalu tamma belakannu koduvudilla; sooryanu moodi hoguttiruvaagale kattalaaguvanu. Chandranu tanna belakannu koduvadilla.
Isaiah 13:10 in English
- King James Version (KJV)
- For the stars of heaven and the constellations thereof shall not give their light: the sun shall be darkened in his going forth, and the moon shall not cause her light to shine.
- World English Bible (WEB)
- For the stars of the sky and its constellations will not give their light. The sun will be darkened in its going out, and the moon will not cause its light to shine.
- American Standard Version (ASV)
- For the stars of heaven and the constellations thereof shall not give their light; the sun shall be darkened in its going forth, and the moon shall not cause its light to shine.
- Bible in Basic English (BBE)
- For the stars of heaven and its bright armies will not give their light: the sun will be made dark in his journey through the heaven, and the moon will keep back her light.
- Darby Translation (DBY)
- For the stars of the heavens and the constellations thereof shall not give their light; the sun shall be darkened in his going forth, and the moon shall not cause her light to shine.
- Webster's Bible (WBS)
- For the stars of heaven and its constellations shall not give their light: the sun shall be darkened in his going forth, and the moon shall not cause her light to shine.
- Young's Literal Translation (YLT)
- For the stars of the heavens, and their constellations, Cause not their light to shine, Darkened hath been the sun in its going out, And the moon causeth not its light to come forth.
Read in context
- 8ಅವರು ಭಯ ಪಡುವರು; ನೋವು ಮತ್ತು ಬೇನೆಗಳು ಅವರನ್ನು ಆವರಿಸಿಕೊಳ್ಳುವವು; ಹೆರುವ ಹೆಂಗಸಿನಂತೆ ಸಂಕಟ ಪಡುವರು; ಅವರು ಒಬ್ಬರಿಗೊಬ್ಬರು ಭ್ರಮೆಪಡು ವರು; ಅವರ ಮುಖಗಳು ಜ್ವಾಲೆಯಂತಿರುವವು.
- 9ಇಗೋ, ಕರ್ತನ ದಿನವು ಬರುತ್ತದೆ, ಭೂಮಿಯನ್ನು ಹಾಳುಮಾಡುವದಕ್ಕೂ ಅಲ್ಲಿಂದ ಪಾಪಿಗಳನ್ನು ನಿರ್ಮೂಲಮಾಡುವದಕ್ಕೂ ಅದು ಕೋಪೋದ್ರೇಕ ದಿಂದಲೂ ತೀಕ್ಷ್ಣ ರೋಷದಿಂದಲೂ ಕ್ರೂರವಾಗಿರು ವದು.
- 10ಆಕಾಶದ ನಕ್ಷತ್ರಗಳು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ; ಸೂರ್ಯನು ಮೂಡಿ ಹೋಗುತ್ತಿರುವಾಗಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವದಿಲ್ಲ.
- 11ಅವರ ಕೆಟ್ಟವುಗಳಿಗೋಸ್ಕರವೂ ದುಷ್ಟರ ಅಪ ರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸು ವೆನು; ಗರ್ವಿಷ್ಟರ ಅಹಂಕಾರವನ್ನು ನಿಲ್ಲಿಸಿಬಿಡುವೆನು, ಭಯಂಕರವಾದ ಹೆಮ್ಮೆಯನ್ನು ತಗ್ಗಿಸುವೆನು.
- 12ನಾನು ಮನುಷ್ಯನನ್ನು ಚೊಕ್ಕ ಬಂಗಾರಕ್ಕಿಂತಲೂ ಇಲ್ಲವೆ ಒಫೀರಿನ ಬಂಗಾರಕ್ಕಿಂತಲೂ ಅಮೂಲ್ಯನನ್ನಾಗಿ ಮಾಡುವೆನು.
Cross references
- Joel 2:31 ಯೋವೇಲ 2:31ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ, ಸೂರ್ಯನು ಕತ್ತಲೆಗೂ ಚಂದ್ರನು ರಕ್ತಕ್ಕೂ ಮಾರ್ಪಡುವವು.ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
- Matthew 24:29 ಮತ್ತಾಯನು 24:29ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.
- Ezekiel 32:7–8 ಯೆಹೆಜ್ಕೇಲನು 32:7–8ಇದಲ್ಲದೆ, ನಾನು ನಿನ್ನನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಕತ್ತಲಾಗ ಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು. ಆಕಾಶದಲ್ಲಿ ಪ್ರಕಾಶಿ ಸುವ ಬೆಳಕುಗಳನ್ನು ನಿನ್ನ ನಿಮಿತ್ತವಾಗಿ ನಾನು ಕತ್ತಲು ಮಾಡುವೆನು; ಆ ಕತ್ತಲೆಯನ್ನು ನಿನ್ನ ದೇಶದ ಮೇಲೆ ಇಡುತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ.
- Mark 13:24 ಮಾರ್ಕನು 13:24ಇದಲ್ಲದೆ ಆ ದಿವಸಗಳಲ್ಲಿ ಸಂಕಟವು ತೀರಿದ ನಂತರ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.
- Luke 21:25 ಲೂಕನು 21:25ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು.
- Isaiah 24:23 ಯೆಶಾಯ 24:23ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
- Revelation 8:12 ಪ್ರಕಟನೆ 8:12ನಾಲ್ಕನೆಯ ದೂತನು ಊದಿದಾಗ ಸೂರ್ಯನ ಮೂರರಲ್ಲಿ ಒಂದು ಭಾಗವೂ ಚಂದ್ರನ ಮೂರರಲ್ಲಿ ಒಂದು ಭಾಗವೂ ನಕ್ಷತ್ರಗಳ ಮೂರರಲ್ಲಿ ಒಂದು ಭಾಗವೂ ಒಡೆಯಲ್ಪಟ್ಟದ್ದರಿಂದ ಮೂರನೇ ಭಾಗವು ಕತ್ತಲಾಯಿತು; ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು; ರಾತ್ರಿಯು ಹಾಗೆಯೇ ಆಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.
- Joel 2:10 ಯೋವೇಲ 2:10ಅವರ ಮುಂದೆ ಭೂಮಿಯು ನಡುಗುತ್ತದೆ; ಆಕಾಶಗಳು ಅದುರುತ್ತವೆ; ಸೂರ್ಯ ಚಂದ್ರರು ಕಪ್ಪಾಗುತ್ತವೆ; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆ ಮಾಡುತ್ತವೆ.
- Joel 3:15 ಯೋವೇಲ 3:15ಸೂರ್ಯ, ಚಂದ್ರ ಕಪ್ಪಾಗುವವು; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆಮಾಡುವವು.
- Isaiah 5:30 ಯೆಶಾಯ 5:30ಆ ದಿನದಲ್ಲಿ ಅವರು ಸಮುದ್ರವು ಬೋರ್ಗರೆಯುವಂತೆ ಅವರ ಮೇಲೆ ಘರ್ಜಿಸುವರು; ಭೂಮಿಯನ್ನು ದೃಷ್ಟಿ ಸಿದರೆ ಅಂಧಕಾರವನ್ನೂ ದುಃಖವನ್ನೂ ನೋಡುವಿ. ಆಕಾಶಮಂಡಲದಲ್ಲಿ ಬೆಳಕು ಕತ್ತಲಾಗುವದು.
- Revelation 6:12–14 ಪ್ರಕಟನೆ 6:12–14ಆತನು ಆರನೆಯ ಮುದ್ರೆ ತೆರೆಯುವದನ್ನು ನಾನು ಕಂಡೆನು. ಆಗ ಇಗೋ, ಮಹಾಭೂಕಂಪ ಉಂಟಾಯಿತು; ಸೂರ್ಯನು ಕೂದಲಿನ ಗೋಣಿ ಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು. ಅಂಜೂರದ ಮರವು ಬಿರುಗಾಳಿಯಿಂದ ಅಲ್ಲಾಡಿಸ ಲ್ಪಟ್ಟು ಅಕಾಲದಲ್ಲಿ ತನ್ನ ಕಾಯಿಗಳನ್ನು ಉದುರಿಸುವ ಪ್ರಕಾರ ಆಕಾಶದ ನಕ್ಷತ್ರಗಳು ಭೂಮಿಗೆ ಬಿದ್ದವು. ಆಕಾಶವು ಸುರುಳಿಯ ಹಾಗೆ ಸುತ್ತಲ್ಪಟ್ಟು ಹೋಗಿ ಬಿಟ್ಟಿತು; ಎಲ್ಲಾ ಬೆಟ್ಟಗಳೂ ದ್ವೀಪಗಳೂ ತಮ್ಮ ತಮ್ಮ ಸ್ಥಳಗಳಿಂದ ಚದರಿದವು.
- Zephaniah 1:15–16 ಚೆಫನ್ಯ 1:15–16ಆ ದಿನವು ರೌದ್ರದ ದಿನವು, ಇಕ್ಕಟ್ಟು ಸಂಕಟಗಳ ದಿನವು, ಹಾಳು ಪಾಳುಗಳ ದಿನವು, ಕತ್ತಲೆ ಮೊಬ್ಬುಗಳ ದಿನವು, ಮೇಘ ಮೋಡಗಳ ದಿನವು. ಅದರ ಕೋಟೆಯುಳ್ಳ ಪಟ್ಟಣಗಳಿಗೆ ವಿರೋಧವಾಗಿಯೂ ಉನ್ನತವಾದ ಗೋಪುರಗಳಿಗೆ ವಿರೋಧವಾಗಿಯೂ ತುತೂರಿ ಅರ್ಭಟಗಳ ದಿನವು.