Isaiah · chapter 13 · verse 11
Isaiah 13:11 in Kannada
ಅವರ ಕೆಟ್ಟವುಗಳಿಗೋಸ್ಕರವೂ ದುಷ್ಟರ ಅಪ ರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸು ವೆನು; ಗರ್ವಿಷ್ಟರ ಅಹಂಕಾರವನ್ನು ನಿಲ್ಲಿಸಿಬಿಡುವೆನು, ಭಯಂಕರವಾದ ಹೆಮ್ಮೆಯನ್ನು ತಗ್ಗಿಸುವೆನು.
Avara kettavugaligoskaravoo dushtara apa raadhagaligoskaravoo naanu lokavannu shikshisu venu; garvishtara ahankaaravannu nillisibiduvenu, bhayankaravaada hemmeyannu taggisuvenu.
Isaiah 13:11 in English
- King James Version (KJV)
- And I will punish the world for [their] evil, and the wicked for their iniquity; and I will cause the arrogancy of the proud to cease, and will lay low the haughtiness of the terrible.
- World English Bible (WEB)
- I will punish the world for their evil, and the wicked for their iniquity. I will cause the arrogance of the proud to cease, and will humble the arrogance of the terrible.
- American Standard Version (ASV)
- And I will punish the world for [their] evil, and the wicked for their iniquity: and I will cause the arrogancy of the proud to cease, and will lay low the haughtiness of the terrible.
- Bible in Basic English (BBE)
- And I will send punishment on the world for its evil, and on the sinners for their wrongdoing; and I will put an end to all pride, and will make low the power of the cruel.
- Darby Translation (DBY)
- And I will punish the world for evil, and the wicked for their iniquity; and I will make the arrogance of the proud to cease, and will bring low the haughtiness of the violent.
- Webster's Bible (WBS)
- And I will punish the world for [their] evil, and the wicked for their iniquity; and I will cause the arrogance of the proud to cease, and will lay low the haughtiness of the terrible.
- Young's Literal Translation (YLT)
- And I have appointed on the world evil, And on the wicked their iniquity, And have caused to cease the excellency of the proud, And the excellency of the terrible I make low.
Read in context
- 9ಇಗೋ, ಕರ್ತನ ದಿನವು ಬರುತ್ತದೆ, ಭೂಮಿಯನ್ನು ಹಾಳುಮಾಡುವದಕ್ಕೂ ಅಲ್ಲಿಂದ ಪಾಪಿಗಳನ್ನು ನಿರ್ಮೂಲಮಾಡುವದಕ್ಕೂ ಅದು ಕೋಪೋದ್ರೇಕ ದಿಂದಲೂ ತೀಕ್ಷ್ಣ ರೋಷದಿಂದಲೂ ಕ್ರೂರವಾಗಿರು ವದು.
- 10ಆಕಾಶದ ನಕ್ಷತ್ರಗಳು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ; ಸೂರ್ಯನು ಮೂಡಿ ಹೋಗುತ್ತಿರುವಾಗಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವದಿಲ್ಲ.
- 11ಅವರ ಕೆಟ್ಟವುಗಳಿಗೋಸ್ಕರವೂ ದುಷ್ಟರ ಅಪ ರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸು ವೆನು; ಗರ್ವಿಷ್ಟರ ಅಹಂಕಾರವನ್ನು ನಿಲ್ಲಿಸಿಬಿಡುವೆನು, ಭಯಂಕರವಾದ ಹೆಮ್ಮೆಯನ್ನು ತಗ್ಗಿಸುವೆನು.
- 12ನಾನು ಮನುಷ್ಯನನ್ನು ಚೊಕ್ಕ ಬಂಗಾರಕ್ಕಿಂತಲೂ ಇಲ್ಲವೆ ಒಫೀರಿನ ಬಂಗಾರಕ್ಕಿಂತಲೂ ಅಮೂಲ್ಯನನ್ನಾಗಿ ಮಾಡುವೆನು.
- 13ಆದದರಿಂದ ಸೈನ್ಯಗಳ ಕರ್ತನ ಉಗ್ರದಲ್ಲಿಯೂ ಆತನ ಕೋಪೋದ್ರೇಕದ ದಿನ ದಲ್ಲಿಯೂ ನಾನು ಆಕಾಶಗಳನ್ನು ನಡುಗಿಸುವೆನು, ಭೂಮಿಯನ್ನು ಅದರ ಸ್ಥಳದಿಂದ ತೆಗೆದುಬಿಡುವೆನು.
Cross references
- Isaiah 2:11 ಯೆಶಾಯ 2:11ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.
- Isaiah 5:15 ಯೆಶಾಯ 5:15ಮನುಷ್ಯನು ತಗ್ಗಿಸಲ್ಪಡು ವನು ಬಲಿಷ್ಠ ಮನುಷ್ಯನು ಕುಗ್ಗಿಸಲ್ಪಡುವನು. ಅಹಂಭಾವದ ಕಣ್ಣುಗಳು ಕಂಗೆಡುವವು.
- Jeremiah 50:29–32 ಯೆರೆಮೀಯ 50:29–32ಬಾಬೆಲಿಗೆ ವಿರೋಧವಾಗಿ ಬಿಲ್ಲಿನವರನ್ನು ಒಟ್ಟಾಗಿ ಕರೆಯಿರಿ; ಬಿಲ್ಲು ಬೊಗ್ಗಿಸುವವರೆಲ್ಲರೇ, ಅದಕ್ಕೆ ವಿರೋಧವಾಗಿ ಸುತ್ತಲು ದಂಡು ಕಟ್ಟಿರಿ; ಅದರಲ್ಲಿ ಯಾವದು ತಪ್ಪಿಸಿ ಕೊಳ್ಳಲಾರದೆ ಇರಲಿ. ಅದರ ಕೃತ್ಯಗಳ ಪ್ರಕಾರ ಅದಕ್ಕೆ ಪ್ರತಿಫಲ ಕೊಡಿರಿ; ಅದು ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿರಿ; ಕರ್ತನಿಗೆ ವಿರೋಧವಾಗಿಯೂ ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೂ ಅದು ಗರ್ವ ತೋರಿಸಿತು. ಆದದರಿಂದ ಅದರ ಯೌವನಸ್ಥರು ಬೀದಿಗಳಲ್ಲಿ ಬೀಳುವರು; ಅದರ ಯುದ್ಧಸ್ಥರೆಲ್ಲರು ಆ ದಿವಸದಲ್ಲಿ ತೆಗೆದುಹಾಕಲ್ಪಡು ವರೆಂದು ಕರ್ತನು ಅನ್ನುತ್ತಾನೆ. ಅತಿ ಗರ್ವಿಷ್ಠನೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ; ನಿನ್ನ ದಿವಸವೂ ನಿನ್ನ ವಿಚಾರಣೆಯ ಕಾಲವೂ ಬಂತು. ಆಗ ಅತಿ ಗರ್ವದ (ರಾಜ್ಯವು) ಎಡವಿ ಬೀಳುವದು; ಅದನ್ನು ಎಬ್ಬಿಸುವದಕ್ಕೆ ಯಾರೂ ಇರುವದಿಲ್ಲ; ಅದರ ಪಟ್ಟಣಗಳಲ್ಲಿ ನಾನು ಬೆಂಕಿ ಹಚ್ಚುವೆನು, ಅದು ಅದರ ಸುತ್ತಲಿರುವದನ್ನೆಲ್ಲಾ ನುಂಗಿಬಿಡುವದು.
- Daniel 5:22–23 ದಾನಿಯೇಲನು 5:22–23ಅವನ ಮಗನಾದ ಓ ಬೇಲ್ಯಚ್ಚರನೇ--ನೀನು ಇದನ್ನೆಲ್ಲಾ ತಿಳಿದರೂ ನಿನ್ನ ಹೃದಯವನ್ನು ತಗ್ಗಿಸದೆ ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
- Isaiah 11:4 ಯೆಶಾಯ 11:4ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
- Isaiah 3:11 ಯೆಶಾಯ 3:11ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.
- Jeremiah 51:34–38 ಯೆರೆಮೀಯ 51:34–38ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ನುಂಗಿಬಿಟ್ಟಿದ್ದಾನೆ; ಜಜ್ಜಿದ್ದಾನೆ; ಬರಿದಾದ ಪಾತ್ರೆಯಾಗಿ ಮಾಡಿದ್ದಾನೆ; ಘಟಸರ್ಪದ ಹಾಗೆ ನುಂಗಿಬಿಟ್ಟಿದ್ದಾನೆ; ನನ್ನ ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ; ನನ್ನನ್ನು ತಳ್ಳಿಬಿಟ್ಟಿದ್ದಾನೆ. ನನಗೂ ನನ್ನ ಶರೀರಕ್ಕೂ ಮಾಡಿರುವ ಬಲಾತ್ಕಾರವು ಬಾಬೆಲಿನ ಮೇಲೆ ಇರಲಿ ಎಂದು ಚೀಯೋನಿನ ನಿವಾಸಿ ಹೇಳುವನು; ಕಸ್ದೀಯರ ನಿವಾಸಿಗಳ ಮೇಲೆ ನನ್ನ ರಕ್ತವು ಇರಲಿ ಎಂದು ಯೆರೂಸಲೇಮು ಹೇಳುವದು. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನ ನಿಮಿತ್ತ ವ್ಯಾಜ್ಯವಾಡುತ್ತೇನೆ; ನಿನಗೋಸ್ಕರ ಪ್ರತಿದಂಡನೆ ಮಾಡುತ್ತೇನೆ; ಅದರ ಸಮುದ್ರವನ್ನು ಒಣಗಿಸುತ್ತೇನೆ; ಅದರ ಬುಗ್ಗೆಯನ್ನು ಬತ್ತಿ ಹೋಗುವಂತೆ ಮಾಡುತ್ತೇನೆ; ಬಾಬೆಲ್ ದಿಬ್ಬೆಗಳಾಗುವದು; ನಿವಾಸಿಗಳು ಇಲ್ಲದೆ ನರಿಗಳ ವಾಸಸ್ಥಳವೂ ಆಶ್ಚರ್ಯವೂ ಹಾಳೂ ಸಿಳ್ಳಿಡುವಿಕೆಯೂ ಆಗುವದು. ಅವರು ಸಿಂಹಗಳ ಹಾಗೆ ಒಟ್ಟಾಗಿ ಗರ್ಜಿಸುವರು, ಸಿಂಹದ ಮರಿಗಳ ಹಾಗೆ ಶಬ್ದ ಮಾಡುವರು.
- Isaiah 24:4–6 ಯೆಶಾಯ 24:4–6ಭೂಮಿಯು ಪ್ರಲಾಪಿಸುತ್ತಾ ಬಾಡಿಹೋಗುವದು. ಲೋಕವು ಸೊರಗಿ ಬಾಡಿಹೋಗುವದು ಭೂಮಿಯ ಗರ್ವಿಷ್ಠರು ಕುಗ್ಗಿಹೋಗುವರು. ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು. ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅದರಲ್ಲಿ ವಾಸವಾಗಿರು ವವರು ಧ್ವಂಸವಾಗುವರು; ಆದ್ದರಿಂದ ಭೂನಿವಾಸಿ ಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.
- Isaiah 2:17 ಯೆಶಾಯ 2:17ಮನುಷ್ಯನ ಅಹಂಭಾವವು ಕುಗ್ಗುವದು, ಮನುಷ್ಯರ ಗರ್ವವು ತಗ್ಗಿಸಲ್ಪಡುವದು; ಆ ದಿನದಲ್ಲಿ ಕರ್ತನೊಬ್ಬನೇ ಉನ್ನತ ನಾಗಿರುವನು.
- Isaiah 14:12–16 ಯೆಶಾಯ 14:12–16ಓ ಲೂಸಿಫರ್ ಉದಯದ ಮಗನೇ. ಆಕಾಶದಿಂದ ನೀನು ಹೇಗೆ ಬಿದ್ದೀ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಕಡಿಯಲ್ಪಟ್ಟಿದ್ದೀ? ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು. ಉನ್ನತವಾದ ಮೇಘ ಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುತ್ತೇನೆ ಅಂದು ಕೊಂಡಿದ್ದೆಯಲ್ಲಾ; ಆದಾಗ್ಯೂ ಪಾತಾಳದ ಕುಣಿಯ ಪಾರ್ಶ್ವಗಳಿಗೆ ಇಳಿಸಲ್ಪಡುವಿ. ನಿನ್ನನ್ನು ನೋಡುವ ವರು ನಿನ್ನನ್ನು ಸೂಕ್ಷ್ಮವಾಗಿ ದೃಷ್ಟಿಸಿ ಯೋಚಿಸುತ್ತಾ --ಭೂಮಿಯನ್ನು ನಡುಗಿಸಿ ರಾಜ್ಯಗಳನ್ನು ಕದಲಿಸಿ ಪಟ್ಟಣವನ್ನು ನಾಶಮಾಡಿ
- Isaiah 26:21 ಯೆಶಾಯ 26:21ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
- Isaiah 14:21 ಯೆಶಾಯ 14:21ಅವರು ಏಳದೆ ಇಲ್ಲವೆ ದೇಶವನ್ನು ವಶ ಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ ಅವರ ತಂದೆಗಳ ಅಪರಾಧದ ನಿಮಿತ್ತ ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ.