Isaiah · chapter 13 · verse 17
Isaiah 13:17 in Kannada
ಇಗೋ, ಬೆಳ್ಳಿಯನ್ನು ಲಕ್ಷಿಸದೆ ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧ ವಾಗಿ ನಾನು ಎಬ್ಬಿಸುವೆನು.
Igo, belliyannu lakshisade bangaaradalli aanandisade iruva medyarannu avarige virodha vaagi naanu ebbisuvenu.
Isaiah 13:17 in English
- King James Version (KJV)
- Behold, I will stir up the Medes against them, which shall not regard silver; and [as for] gold, they shall not delight in it.
- World English Bible (WEB)
- Behold, I will stir up the Medes against them, who will not value silver, and as for gold, they will not delight in it.
- American Standard Version (ASV)
- Behold, I will stir up the Medes against them, who shall not regard silver, and as for gold, they shall not delight in it.
- Bible in Basic English (BBE)
- See, I am driving the Medes against them, who put no value on silver and have no pleasure in gold.
- Darby Translation (DBY)
- Behold, I will stir up the Medes against them, who do not regard silver, and as for gold, they have no delight in it.
- Webster's Bible (WBS)
- Behold, I will stir up the Medes against them, who shall not regard silver; and [as for] gold, they shall not delight in it.
- Young's Literal Translation (YLT)
- Lo, I am stirring up against them the Medes, Who silver esteem not, And gold — they delight not in it.
Read in context
- 15ಸಿಕ್ಕಿದ ಪ್ರತಿಯೊಬ್ಬನೂ ಇರಿಯಲ್ಪಡುವನು; ಅವರೊಂದಿಗೆ ಸೇರಿಕೊಂಡ ಪ್ರತಿಯೊಬ್ಬನೂ ಕತ್ತಿಯಿಂದ ಬೀಳು ವನು.
- 16ಅವರ ಮಕ್ಕಳೂ ಅವರ ಕಣ್ಣೆದುರಿಗೆ ತುಂಡು ತುಂಡಾಗುವಂತೆ ಅಪ್ಪಳಿಸಲ್ಪಡುವರು; ಅವರ ಮನೆ ಗಳು ಸೂರೆಯಾಗುವವು; ಅವರ ಪತ್ನಿಯರು ಕೆಡಿ ಸಲ್ಪಡುವರು.
- 17ಇಗೋ, ಬೆಳ್ಳಿಯನ್ನು ಲಕ್ಷಿಸದೆ ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧ ವಾಗಿ ನಾನು ಎಬ್ಬಿಸುವೆನು.
- 18ಅವರ ಬಿಲ್ಲುಗಳು ಸಹ ಯುವಕರನ್ನು ಹೊಡೆದು ತುಂಡುತುಂಡು ಮಾಡುವವು; ಇವರು ಗರ್ಭಫಲವನ್ನು ಕರುಣಿಸರು, ಇವರ ಕಣ್ಣುಗಳು ಮಕ್ಕಳನ್ನೂ ಉಳಿಸುವದಿಲ್ಲ.
- 19ರಾಜ್ಯಗಳ ಘನತೆಯೂ ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬೆಲಿಗೆ ದೇವರು ಸೊದೋ ಮ್ ಗೊಮೋರಗಳನ್ನು ಕೆಡವಿಬಿಟ್ಟಂತೆ ಇದನ್ನು ಸಹ ಕೆಡವಿಬಿಡುವನು.
Cross references
- Daniel 5:28–31 ದಾನಿಯೇಲನು 5:28–31ಪೆರೇಸ್ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು. ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರ ವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಹಾರವನ್ನು ಹಾಕಿ, ಇವನು ರಾಜ್ಯದ ಮೂವರು ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿ ದನು. ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಕೊಲ್ಲಲ್ಪಟ್ಟನು.ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು. ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.
- Jeremiah 51:11 ಯೆರೆಮೀಯ 51:11ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ.
- Isaiah 41:25 ಯೆಶಾಯ 41:25ಉತ್ತರ ದಿಕ್ಕಿನಿಂದ ಒಬ್ಬನನ್ನು ನಾನು ಎಬ್ಬಿಸಿದ್ದೇನೆ, ಸೂರ್ಯೋ ದಯದ ಕಡೆಯಿಂದ ಅವನು ನನ್ನ ಹೆಸರನ್ನು ಸ್ಮರಿಸು ವನು; ಅವನು ಜೇಡಿಮಣ್ಣಿನಂತೆಯೂ ಕುಂಬಾರನು ಮಣ್ಣನ್ನು ತುಳಿಯುವಂತೆಯೂ ಅಧಿಕಾರಸ್ಥರ ಮೇಲೆ ಬರುವನು.
- Jeremiah 51:27–28 ಯೆರೆಮೀಯ 51:27–28ದೇಶದಲ್ಲಿ ಧ್ವಜವನ್ನೆತ್ತಿರಿ; ಜನಾಂಗಗಳಲ್ಲಿ ತುತೂರಿಯನ್ನೂದಿರಿ; ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; ಅರರಾಟ್, ಮಿನ್ನಿ, ಅಷ್ಕೆನಜ್ ರಾಜ್ಯಗಳನ್ನು ಅದಕ್ಕೆ ವಿರೋಧವಾಗಿ ಕರೆಯಿರಿ; ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; ಬಿರುಸಾದ ಮಿಡತೆ ದಂಡಿನಂತೆ ಕುದುರೆ ಗಳನ್ನು ಬರಮಾಡಿರಿ. ಅದಕ್ಕೆ ವಿರೋಧವಾಗಿ ಜನಾಂಗಗಳನ್ನೂ ಮೇದ್ಯರ ಅರಸರನ್ನೂ ಅದರ ಅಧಿಪತಿಗಳನ್ನೂ ಅಧಿಕಾರಿಗಳೆಲ್ಲರನ್ನೂ ಅವನ ರಾಜ್ಯದ ದೇಶವನ್ನೆಲ್ಲಾ ಸಿದ್ಧಮಾಡಿರಿ.
- Jeremiah 50:9 ಯೆರೆಮೀಯ 50:9ಇಗೋ, ನಾನು ಉತ್ತರ ದೇಶದಿಂದ ದೊಡ್ಡ ಜನಾಂಗಗಳ ಸಭೆ ಸೇರಿಸಿ; ಬಾಬೆಲಿಗೆ ವಿರೋಧವಾಗಿ ಏಳುವಂತೆ ಮಾಡುತ್ತೇನೆ. ಅವರು ಅದಕ್ಕೆ ವಿರೋಧ ವಾಗಿ ಯುದ್ಧವನ್ನು ಸಿದ್ಧಮಾಡುವರು; ಅಲ್ಲಿಂದ ಅದು ಹಿಡಿಯಲ್ಪಡುವದು; ಅವರ ಬಾಣಗಳು ಬಲಿಷ್ಠನಾದ ಪ್ರವೀಣಶಾಲಿಯ ಹಾಗಿರುವವು. ಯಾವದೂ ವ್ಯರ್ಥವಾಗಿ ತಿರುಗವು.
- Isaiah 13:3–5 ಯೆಶಾಯ 13:3–5ನಾನು ನನ್ನ ಪರಿಶುದ್ಧರಿಗೆ ಆಜ್ಞಾಪಿಸಿ ನನ್ನ ಮಹಿಮೆಯಲ್ಲಿ ಉಲ್ಲಾಸಿಸುವವರನ್ನೂ ಶೂರರನ್ನೂ ನನ್ನ ಕೋಪಕ್ಕೆ ಕರೆದಿದ್ದೇನೆ. ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ; ಒಟ್ಟಿಗೆ ಕೂಡಿಕೊಂಡ ರಾಜ್ಯ ಜನಾಂಗ ಗಳ ಆರ್ಭಟ; ಸೈನ್ಯಗಳ ಕರ್ತನು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾನೆ. ಕರ್ತನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವದಕ್ಕಾಗಿ ಬರುತ್ತಾರೆ.
- Isaiah 21:2 ಯೆಶಾಯ 21:2ಘೋರದರ್ಶನವು ನನಗೆ ತಿಳಿಯಬಂದಿದೆ. ಬಾಧ ಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡು ತ್ತಿದ್ದಾನೆ. ಏಲಾಮೇ, ಏಳು ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
- Proverbs 6:34–35 ಜ್ಞಾನೋಕ್ತಿಗಳು 6:34–35ಮನುಷ್ಯನ ಕ್ರೋಧವು ಮತ್ಸರವಾಗಿದೆ; ಆದದರಿಂದ ಮುಯ್ಯಿ ತೀರಿಸುವ ದಿನದಲ್ಲಿ ಅವನು ಕ್ಷಮೆತೋರುವದಿಲ್ಲ.ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ. ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ.