Isaiah · chapter 13 · verse 20
Isaiah 13:20 in Kannada
ಅದು ಎಂದಿಗೂ ನಿವಾಸ ಸ್ಥಳ ವಾಗದು, ಇಲ್ಲವೆ ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಇಲ್ಲವೆ ಯಾವ ಅರಬಿಯನೂ ಗುಡಾರ ಹಾಕನು; ಅಥವಾ ಕುರುಬರು ಮಂದೆಯನ್ನು ತಂಗಿಸರು.
Adu endigoo nivaasa sthala vaagadu, illave talatalaantarakkoo alli yaaroo vaasisaru; illave yaava arabiyanoo gudaara haakanu; athavaa kurubaru mandeyannu tangisaru.
Isaiah 13:20 in English
- King James Version (KJV)
- It shall never be inhabited, neither shall it be dwelt in from generation to generation: neither shall the Arabian pitch tent there; neither shall the shepherds make their fold there.
- World English Bible (WEB)
- It will never be inhabited, neither will it be lived in from generation to generation. The Arabian will not pitch a tent there, neither will shepherds make their flocks lie down there.
- American Standard Version (ASV)
- It shall never be inhabited, neither shall it be dwelt in from generation to generation: neither shall the Arabian pitch tent there; neither shall shepherds make their flocks to lie down there.
- Bible in Basic English (BBE)
- People will never be living in it again, and it will have no more men from generation to generation: the Arab will not put up his tent there; and those who keep sheep will not make it a resting-place for their flocks.
- Darby Translation (DBY)
- It shall never be inhabited, neither shall it be dwelt in, even to generation and generation; nor shall Arabian pitch tent there, nor shepherds make fold there.
- Webster's Bible (WBS)
- It shall never be inhabited, neither shall it be dwelt in from generation to generation: neither shall the Arabian pitch tent there; neither shall the shepherds make their fold there.
- Young's Literal Translation (YLT)
- She doth not sit for ever, Nor continueth unto many generations, Nor doth Arab pitch tent there, And shepherds lie not down there.
Read in context
- 18ಅವರ ಬಿಲ್ಲುಗಳು ಸಹ ಯುವಕರನ್ನು ಹೊಡೆದು ತುಂಡುತುಂಡು ಮಾಡುವವು; ಇವರು ಗರ್ಭಫಲವನ್ನು ಕರುಣಿಸರು, ಇವರ ಕಣ್ಣುಗಳು ಮಕ್ಕಳನ್ನೂ ಉಳಿಸುವದಿಲ್ಲ.
- 19ರಾಜ್ಯಗಳ ಘನತೆಯೂ ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬೆಲಿಗೆ ದೇವರು ಸೊದೋ ಮ್ ಗೊಮೋರಗಳನ್ನು ಕೆಡವಿಬಿಟ್ಟಂತೆ ಇದನ್ನು ಸಹ ಕೆಡವಿಬಿಡುವನು.
- 20ಅದು ಎಂದಿಗೂ ನಿವಾಸ ಸ್ಥಳ ವಾಗದು, ಇಲ್ಲವೆ ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಇಲ್ಲವೆ ಯಾವ ಅರಬಿಯನೂ ಗುಡಾರ ಹಾಕನು; ಅಥವಾ ಕುರುಬರು ಮಂದೆಯನ್ನು ತಂಗಿಸರು.
- 21ಆದರೆ ಮರುಭೂಮಿಯ ಕಾಡುಮೃಗಗಳು ಅಲ್ಲಿ ಮಲಗುವವು; ಅವರ ಮನೆಗಳು ವ್ಯೆಥೆಯಿಂದ ತುಂಬಿರುವವು; ಅಲ್ಲಿ ಗೂಬೆಗಳು ವಾಸಿಸುವವು, ದೆವ್ವಗಳು ಕುಣಿದಾಡುವವು.ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.
- 22ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.
Cross references
- Jeremiah 51:43 ಯೆರೆಮೀಯ 51:43ಅದರ ಪಟ್ಟಣಗಳು ಹಾಳಾದವು; ಅವು ಒಣನೆಲವೂ ಅಡವಿಯೂ ಯಾರೂ ವಾಸಮಾಡದೆ, ಮನುಷ್ಯನ ಮಗನು ಹಾದುಹೋಗದೆ ಇರುವ ದೇಶವೂ ಆಗಿವೆ.
- Isaiah 14:23 ಯೆಶಾಯ 14:23ಅದನ್ನು ಸಹ ಮುಳ್ಳುಹಂದಿಗೆ ಬಾಧ್ಯ ವಾಗಿಯೂ ನೀರಿನ ಕುಣಿಗಳಾಗಿಯೂ ಮಾಡಿ ನಾಶ ವೆಂಬ ಕಸಬರಿಕೆಯಿಂದ ಗುಡಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Jeremiah 51:29 ಯೆರೆಮೀಯ 51:29ಆಗ ದೇಶವು ಕದಲಿ ವೇದನೆಪಡುವದು; ಬಾಬೆಲಿನ ದೇಶವನ್ನು ನಿವಾಸಿ ಇಲ್ಲದೆ ಹಾಳುಮಾಡುವ ವಿಷಯವಾಗಿ ಬಾಬೆಲಿಗೆ ವಿರೋಧವಾದ ಕರ್ತನ ಆಲೋಚನೆಗಳು ಮಾಡಲ್ಪಡು ವವು.
- Isaiah 34:10–15 ಯೆಶಾಯ 34:10–15ಅದು ರಾತ್ರಿಯಲ್ಲಾದರೂ ಇಲ್ಲವೆ ಹಗಲಿನಲ್ಲಾದರೂ ಆರು ವದಿಲ್ಲ; ಅದರ ಹೊಗೆಯು ನಿರಂತರವಾಗಿ ಏಳುತ್ತಿರು ವದು; ಅದು ತಲತಲಾಂತರಕ್ಕೂ ಹಾಳಾಗಿ ಬಿದ್ದಿರು ವದು; ಅದನ್ನು ಎಂದೆಂದಿಗೂ ಯಾರೂ ಹಾದು ಹೋಗರು. ಆದರೆ ಬಕ ಪಕ್ಷಿಯು ಮತ್ತು ಮುಳ್ಳು ಹಂದಿಯು ಅದನ್ನು ಆವರಿಸಿಕೊಳ್ಳುವವು; ಗೂಬೆ ಮತ್ತು ಕಾಗೆಗಳು ಸಹ ಅಲ್ಲಿ ವಾಸಿಸುವವು; ಗಲಿಬಿಲಿ ಯೆಂಬ ನೂಲನ್ನು ಶೂನ್ಯವೆಂಬ ಗಟ್ಟಿ ತೂಕವನ್ನು ಆತನು ಅದರ ಮೇಲೆ ಎಳೆಯುವನು. ಅವರ ರಾಜ್ಯಕ್ಕೆ ಪ್ರಮುಖರನ್ನು ಕರೆಯುವರು; ಆದರೆ ಅಲ್ಲಿ ಯಾರೂ ಇರುವದಿಲ್ಲ; (ಅದರ) ಅವಳ ಪ್ರಭುಗಳು ಇಲ್ಲದಂತಾಗುವರು. ಅವಳ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು; ಅವಳ ಕೋಟೆಗಳಲ್ಲಿ ತುರುಚಿಯೂ ದತ್ತೂರಿಯೂ ಇರುವವು; ಅದು (ಉಷ್ಟ್ರ ಪಕ್ಷಿಗಳ) ಸರ್ಪಗಳ ನಿವಾಸವೂ ಗೂಬೆಗಳಿಗೆ ಸ್ಥಾನವೂ ಆಗುವದು. ಮರುಭೂಮಿಯ ಕಾಡು ಮೃಗಗಳು ಸಹ ದ್ವೀಪದ ಕಾಡುಮೃಗಗಳೊಂದಿಗೆ ಸಂಧಿಸುವವು; ದೆವ್ವವು ತನ್ನ ಜೊತೆಯನ್ನು ಕೂಗು ವದು; ಅಲ್ಲಿ ಚೀರುಗೂಬೆಯು ಸಹ ವಿಶ್ರಮಿಸಿಕೊಂಡು ಉಪಶಮನ ಸ್ಥಳವನ್ನು ಕಂಡುಕೊಳ್ಳುವದು. ದೊಡ್ಡ ಗೂಬೆಯು ಅಲ್ಲಿ ಗೂಡನ್ನು ಮಾಡಿಕೊಂಡು ಮೊಟ್ಟೆ ಯಿಟ್ಟು ಮರಿ ಮಾಡಿ ಅವುಗಳನ್ನು ತನ್ನ ನೆರಳಿನಲ್ಲಿ ಕೂಡಿಸುವದು; ಅಲ್ಲಿ ಹದ್ದುಗಳಲ್ಲಿ ಪ್ರತಿಯೊಂದು ತಮ್ಮ ಜೊತೆಜೊತೆಯಾಗಿ ಕೂಡಿಕೊಳ್ಳುವವು.
- Jeremiah 50:3 ಯೆರೆಮೀಯ 50:3ಉತ್ತರದಿಂದ ಅವಳ ವಿರೋಧವಾಗಿ ಜನಾಂಗವು ಬರುತ್ತದೆ; ಅದು ಅವಳ ದೇಶವನ್ನು ಹಾಳು ಮಾಡಿ ಬಿಡುವದು; ಅವಳಲ್ಲಿ ಯಾರೂ ವಾಸಿಸುವದಿಲ್ಲ; ಮನುಷ್ಯರೂ ಮೃಗಗಳೂ ಒಟ್ಟಾಗಿ ತೊಲಗಿಬಿಡುತ್ತಾರೆ, ಓಡಿಹೋಗುತ್ತಾರೆ.
- 2 Chronicles 17:11 2 ಪೂರ್ವಕಾಲವೃತ್ತಾಂತ 17:11ಇದಲ್ಲದೆ ಫಿಲಿಷ್ಟಿಯರಲ್ಲಿ ಕೆಲವರು ಯೆಹೋ ಷಾಫಾಟನಿಗೆ ಕಾಣಿಕೆಗಳನ್ನೂ ಕಪ್ಪದ ಹಣವನ್ನೂ ತಂದರು, ಅರಬ್ಬಿ ದೇಶದವರು ತಮ್ಮ ಮಂದೆಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ ಏಳು ಸಾವಿರದ ಏಳು ನೂರು ಹೋತಗಳನ್ನೂ ತಂದರು.
- Jeremiah 50:39 ಯೆರೆಮೀಯ 50:39ಆದದರಿಂದ ಅರಣ್ಯದ ಕಾಡು ಮೃಗಗಳು, ನರಿಗಳು ಕೂಡ ಅಲ್ಲಿ ವಾಸಮಾಡುವವು. ಗೂಬೆಗಳೂ ಸಹ ಅದರಲ್ಲಿ ವಾಸಮಾಡುವವು; ಅದು ಇನ್ನು ಮೇಲೆ ಎಂದೆಂದಿಗೂ ನಿವಾಸವಾಗುವದಿಲ್ಲ; ತಲತಲಾಂತರಗಳ ವರೆಗೂ ಯಾರೂ ಅದರಲ್ಲಿ ತಂಗುವದಿಲ್ಲ.
- Jeremiah 51:25 ಯೆರೆಮೀಯ 51:25ನಾಶಮಾಡುವ ಬೆಟ್ಟವೇ! ಭೂಮಿಯನ್ನೆಲ್ಲಾ ನಾಶಮಾಡುವಂಥಾದ್ದೇ! ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ. ನಿನ್ನ ಮೇಲೆ ನನ್ನ ಕೈಯನ್ನು ಚಾಚಿ ಬಂಡೆಗಳ ಮೇಲಿನಿಂದ ನಿನ್ನನ್ನು ಹೊರಳಿಸಿ ನಿನ್ನನ್ನು ಸುಟ್ಟ ಬೆಟ್ಟವಾಗಿ ಮಾಡುತ್ತೇನೆ.
- Jeremiah 50:21 ಯೆರೆಮೀಯ 50:21ಮೆರಾಥಯಿಮ್ ದೇಶಕ್ಕೂ ಪೆಕೋದಿನ ನಿವಾಸಿ ಗಳಿಗೂ ವಿರೋಧವಾಗಿ ಏರಿಹೋಗು; ಅವರನ್ನು ಹಿಂದಟ್ಟಿ ಕೆಡಿಸಿಬಿಟ್ಟು ಸಂಪೂರ್ಣ ನಾಶಮಾಡು, ನಾನು ನಿನಗೆ ಆಜ್ಞಾಪಿಸಿದ್ದೆಲಾದರ ಪ್ರಕಾರ ಮಾಡು ಎಂದು ಕರ್ತನು ಅನ್ನುತ್ತಾನೆ.
- Jeremiah 50:13 ಯೆರೆಮೀಯ 50:13ಕರ್ತನ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವದಿಲ್ಲ; ಸಂಪೂರ್ಣ ಹಾಳಾಗುವದು ಬಾಬೆಲನ್ನು ಹಾದುಹೋಗುವವ ರೆಲ್ಲರು ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
- Jeremiah 50:45 ಯೆರೆಮೀಯ 50:45ಆದದರಿಂದ ಕರ್ತನು ಬಾಬೆಲಿಗೆ ವಿರೋಧವಾಗಿ ಮಾಡಿದ ಆಲೋ ಚನೆಯನ್ನೂ ಆತನು ಕಸ್ದೀಯರ ದೇಶಕ್ಕೆ ವಿರೋಧವಾಗಿ ಮಾಡಿದ ಯೋಚನೆಗಳನ್ನೂ ಕೇಳಿರಿ; ನಿಶ್ಚಯವಾಗಿ ಮಂದೆಯಲ್ಲಿ ಚಿಕ್ಕವುಗಳು ಅವರನ್ನು ಎಳೆಯುವವು; ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡುವನು.ಬಾಬೆಲ್ ಹಿಡಿಯಲ್ಪಟ್ಟಿತ್ತೆಂಬ ಶಬ್ದದಿಂದ ಭೂಮಿಯು ಕದಲುತ್ತದೆ; ಅದರ ಕೂಗು ಜನಾಂಗಗಳೊಳಗೆ ಕೇಳಬಂತು.
- Jeremiah 51:37 ಯೆರೆಮೀಯ 51:37ಬಾಬೆಲ್ ದಿಬ್ಬೆಗಳಾಗುವದು; ನಿವಾಸಿಗಳು ಇಲ್ಲದೆ ನರಿಗಳ ವಾಸಸ್ಥಳವೂ ಆಶ್ಚರ್ಯವೂ ಹಾಳೂ ಸಿಳ್ಳಿಡುವಿಕೆಯೂ ಆಗುವದು.