Isaiah · chapter 13 · verse 4
Isaiah 13:4 in Kannada
ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ; ಒಟ್ಟಿಗೆ ಕೂಡಿಕೊಂಡ ರಾಜ್ಯ ಜನಾಂಗ ಗಳ ಆರ್ಭಟ; ಸೈನ್ಯಗಳ ಕರ್ತನು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾನೆ.
Bahu samoohavu iddante gaddalavu bettagalalli kelibaruttade; ottige koodikonda raajya janaanga gala aarbhata; sainyagala kartanu yuddhakke sainyavannu siddhamaaduttaane.
Isaiah 13:4 in English
- King James Version (KJV)
- The noise of a multitude in the mountains, like as of a great people; a tumultuous noise of the kingdoms of nations gathered together: the LORD of hosts mustereth the host of the battle.
- World English Bible (WEB)
- The noise of a multitude is in the mountains, as of a great people; the noise of an uproar of the kingdoms of the nations gathered together! The LORD of Armies is mustering the army for the battle.
- American Standard Version (ASV)
- The noise of a multitude in the mountains, as of a great people! the noise of a tumult of the kingdoms of the nations gathered together! Jehovah of hosts is mustering the host for the battle.
- Bible in Basic English (BBE)
- The noise of great numbers in the mountains, like the noise of a strong people! The noise of the kingdoms of the nations meeting together! The Lord of armies is numbering his forces for war.
- Darby Translation (DBY)
- The noise of a multitude on the mountains, as of a great people; a tumultuous noise of the kingdoms of nations assembled together: Jehovah of hosts mustereth the host of the battle.
- Webster's Bible (WBS)
- The noise of a multitude in the mountains, as of a great people; a tumultuous noise of the kingdoms of nations assembled: the LORD of hosts mustereth the host of the battle.
- Young's Literal Translation (YLT)
- A voice of a multitude in the mountains, A likeness of a numerous people, A voice of noise from the kingdoms of nations who are gathered, Jehovah of Hosts inspecting a host of battle!
Read in context
- 2ಅವರು(ಶತ್ರುಗಳು) ಬಂದು ಘನವಂತ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ ನೀವು ಧ್ವಜವನ್ನೆತ್ತಿ ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ ಜೋರಾಗಿ ಕೂಗಿ ಕರೆಯಿರಿ.
- 3ನಾನು ನನ್ನ ಪರಿಶುದ್ಧರಿಗೆ ಆಜ್ಞಾಪಿಸಿ ನನ್ನ ಮಹಿಮೆಯಲ್ಲಿ ಉಲ್ಲಾಸಿಸುವವರನ್ನೂ ಶೂರರನ್ನೂ ನನ್ನ ಕೋಪಕ್ಕೆ ಕರೆದಿದ್ದೇನೆ.
- 4ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ; ಒಟ್ಟಿಗೆ ಕೂಡಿಕೊಂಡ ರಾಜ್ಯ ಜನಾಂಗ ಗಳ ಆರ್ಭಟ; ಸೈನ್ಯಗಳ ಕರ್ತನು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾನೆ.
- 5ಕರ್ತನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವದಕ್ಕಾಗಿ ಬರುತ್ತಾರೆ.
- 6ನೀವು ಗೋಳಾ ಡಿರಿ, ಕರ್ತನ ದಿನವು ಸವಿಾಪವಾಯಿತು; ಅದು ಸರ್ವಶಕ್ತನಿಂದ ನಾಶನದಂತೆ ಬರುವದು.
Cross references
- Joel 3:14 ಯೋವೇಲ 3:14ನಿರ್ಣಯದ ತಗ್ಗಿನಲ್ಲಿ ಗುಂಪುಗಳು, ಗುಂಪುಗಳು; ಕರ್ತನ ದಿನವು ನಿರ್ಣ ಯದ ತಗ್ಗಿನಲ್ಲಿ ಸವಿಾಪವಾಗಿದೆ.
- Ezekiel 38:3–23 ಯೆಹೆಜ್ಕೇಲನು 38:3–23ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮೆಷೆಕ್ ತೂಬಲಿಗೆ ಮುಖ್ಯ ಪ್ರಭುವಾದ ಗೋಗನೇ, ನಾನು ನಿನಗೆ ವಿರೋಧವಾಗಿದ್ದೇನೆ. ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕು ವೆನು; ನಾನು ನಿನ್ನನ್ನೂ ನಿನ್ನ ಎಲ್ಲಾ ಸೈನ್ಯವನ್ನೂ ಕುದುರೆಗಳನ್ನೂ ಕುದುರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧ ಗಳನ್ನು ತೊಟ್ಟಿರುವರು, ಇವರೊಂದಿಗೆ ಖೇಡ್ಯವೂ ಮತ್ತು ಗುರಾಣಿಯೂ ಉಳ್ಳ ಮಹಾಸಮೂಹವನ್ನು ತರುವೆನು; ಇವರೆಲ್ಲರೂ ಕತ್ತಿಗಳನ್ನು ಹಿಡಿದಿರುವರು. ಅವರೊಂದಿಗೆ ಪರ್ಷಿಯಾ ಇಥಿಯೋಪ್ಯ ಲಿಬಿಯಾ ಇವರೆಲ್ಲರೊಂದಿಗೆ ಗುರಾಣಿ ಮತ್ತು ಶಿರಸ್ತ್ರಾಣಗಳು ಇದ್ದವು. ಗೋಮೆರ್ ಮತ್ತು ಅವನ ಎಲ್ಲಾ ದಳಗಳನ್ನು ಉತ್ತರ ದಿಕ್ಕಿನ ತೋಗರ್ಮನ ಮನೆತನದವರನ್ನೂ ಅವನ ಎಲ್ಲಾ ದಳಗಳನ್ನೂ ನಿನ್ನ ಸಂಗಡವಿರುವ ಅನೇಕ ಜನರನ್ನೂ ಹೊರಗೆ ತರುವೆನು. ನೀನು ಸಿದ್ಧನಾಗಿ ನಿನ್ನ ಸಂಗಡ ಕೂಡಿ ಬಂದಿರುವ ನಿನ್ನ ಎಲ್ಲಾ ಕೂಟಗಳನ್ನು ಸಿದ್ಧಮಾಡಿಕೊಂಡು ನೀನು ಅವರಿಗೆ ಕಾವಲಿರು. ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಪರಿಶೀ ಲಿಸುತ್ತೇನೆ; ವರುಷಗಳ ಅಂತ್ಯದಲ್ಲಿ ನೀನು ಕತ್ತಿಯಿಂದ ಹಿಂತಿರುಗಿಸಲ್ಪಟ್ಟಂಥ ದೇಶಕ್ಕೂ ಯಾವಾಗಲೂ ಬೀಡಾ ಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ ಜನಾಂಗಗಳೊಳಗಿಂದ ಮುಂದೆ ತರಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೂ ಬರುವಿ. ನೀನು ಮೇಲೇರಿ ಬಿರುಗಾಳಿಯಂತೆ ಬರುವಿ. ನೀನೂ ನಿನ್ನ ಎಲ್ಲಾ ದಂಡುಗಳೂ ಮತ್ತು ಅನೇಕ ಜನರ ಸಹಿತವಾಗಿ ಮೇಘದಂತೆ ದೇಶವನ್ನು ಮುಚ್ಚುವಿರಿ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ, ನೀನು ಪೌಳಿಗೋಡೆಯಿಲ್ಲದ ಹಳ್ಳಿಗಳುಳ್ಳ ದೇಶಕ್ಕೆ ನಾನು ಹೋಗುವೆನು; ಪೌಳಿ ಗೋಡೆಗಳಿಲ್ಲದೆ ಇಲ್ಲವೆ ಬಾಗಲುಗಳು ಅಗುಳಿಗಳು ಇಲ್ಲದೆ ಅದೂ ಅವರು ವಿಶ್ರಾಂತಿಯಿಂದಲೂ ಸುಖ ವಾಗಿ ವಾಸಿಸುತ್ತಿರುವಾಗ ನಾನು ಹೋಗಿ, ಸುಲಿಗೆ ಯನ್ನು ಕೊಳ್ಳೆಯನ್ನು ತೆಗೆದುಕೊಳ್ಳುವೆನು; ಹೀಗೆ ನಿವಾಸಗಳಿದ್ದು ಬೀಡಾಗಿದ್ದ ಸ್ಥಳಗಳಲ್ಲಿಯೂ ಜನಾಂಗ ಗಳಿಂದ ಕೂಡಿಸಲ್ಪಟ್ಟಂತಹ ದನಗಳೂ ಸಂಪತ್ತೂ ಉಳ್ಳಂಥ ಮತ್ತು ಭೂಮಿಯ ಮಧ್ಯದಲ್ಲಿ ವಾಸಮಾಡು ವಂಥ ಜನರ ಮೇಲೆಯೂ ಕೈಹಾಕವೆನು ಎಂದು ಹೇಳುವಿ. ಶೇಬಾ, ದೇದಾನ್ ಮತ್ತು ತಾರ್ಷೀಷಿನ ವರ್ತಕರು, ಎಲ್ಲಾ ಪ್ರಾಯದ ಸಿಂಹಗಳೊಂದಿಗೆ ಅಲ್ಲಿ ನಿನಗೆ--ನೀನು ಸುಲಿಗೆ ತೆಗೆದುಕೊಳ್ಳಬೇಕೆಂದು ಬಂದಿಯಾ ಕೊಳ್ಳೆಹೊಡೆಯುವದಕ್ಕಾಗಿಯೇ ನಿನ್ನ ತಂಡ ವನ್ನು ಕೂಡಿಸಿದೆಯೋ? ಬಂಗಾರ ಮತ್ತು ಬೆಳ್ಳಿಯನ್ನು ಹೊತ್ತುಕೊಂಡು ದನಗಳನ್ನು ಸಂಪತ್ತನ್ನೂ ತೆಗೆದು ಕೊಂಡು ಮಹಾಸುಲಿಗೆ ತೆಗೆದುಕೊಳ್ಳಬೇಕೆಂದೋ ಅನ್ನುವರು. ಆದದರಿಂದ ಮನುಷ್ಯಪುತ್ರನೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಗೋಗನಿಗೆ ಪ್ರವಾ ದಿಸು ಮತ್ತು ಹೇಳು--ಯಾವಾಗ ನನ್ನ ಜನರಾದ ಇಸ್ರಾಯೇಲ್ಯರು ಸುಖವಾಗಿ ವಾಸಿಸುವರೋ ಆ ದಿನದಲ್ಲಿ ಅದು ನಿನಗೆ ತಿಳಿಯುವುದಿಲ್ಲವೋ ನೀನು ಉತ್ತರ ಭಾಗಗಳ ನಿನ್ನ ಸ್ಥಳದಿಂದ ಬರುವಿ; ನೀನೂ ನಿನ್ನ ಸಂಗಡ ಅನೇಕ ಜನರೂ ಕುದುರೆಗಳನ್ನು ಹತ್ತಿದ ವರಾಗಿ ಬಲವಾದ ಸೈನ್ಯವಾಗಿಯೂ ಮಹಾದಂಡಾ ಗಿಯೂ ಬರುವಿರಿ. ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಯಾವನ ವಿಷಯವಾಗಿ ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳಿಂದ ಪೂರ್ವಕಾಲದಲ್ಲಿ ಮಾತನಾಡಿದೆನೋ ಅವನು ನೀನೇ ಅಲ್ಲವೇ? ನಿನ್ನನ್ನು ಅವರಿಗೆ ವಿರೋಧವಾಗಿ ಬರ ಮಾಡುತ್ತೇನೆಂದು ಆ ದಿನಗಳಲ್ಲಿ ಅನೇಕ ವರ್ಷಗ ಳಿಗೆ ಮುಂಚೆ ಪ್ರವಾದಿಸಿದರಲ್ಲವೇ? ಆ ದಿನದಲ್ಲಿ ಗೋಗನು ಇಸ್ರಾಯೇಲ್ ದೇಶಕ್ಕೆ ವಿರೋಧವಾಗಿ ಬರುವಾಗ ರೋಷವು ನನ್ನ ಮುಖದ ಮೇಲೆ ಬರುವದೆಂದು ದೇವರಾದ ಕರ್ತನು ಹೇಳುತ್ತಾನೆ. ನನ್ನ ಈ ರೋಷದಲ್ಲಿ ಮತ್ತು ನನ್ನ ಕೋಪದ ಬೆಂಕಿಯಲ್ಲಿ ನಾನು ಮಾತನಾಡುತ್ತೇನೆ. ನಿಶ್ಚಯವಾಗಿ ಆ ದಿನ ಇಸ್ರಾಯೇಲ್ ದೇಶದಲ್ಲಿ ಮಹಾಕಂಪನ ಉಂಟಾಗು ವದು; ಆಗ ಸಮುದ್ರದ ವಿಾನುಗಳು ಆಕಾಶದ ಪಕ್ಷಿಗಳು ಬಯಲಿನ ಮೃಗಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಜಂತುಗಳು, ಭೂಮಿಯ ಎಲ್ಲಾ ಮನುಷ್ಯರ ಸಂಗಡ ನನ್ನ ಸಮ್ಮುಖದಲ್ಲಿ ನಡುಗುವವು; ಪರ್ವತಗಳು ಕೆಡವಲ್ಪಡುವವು, ಇಳಿ ಜಾರುಗಳು ಬೀಳುವವು, ಪ್ರತಿಯೊಂದು ಗೋಡೆಯೂ ನೆಲಕ್ಕೆ ಉರುಳುವವು. ನನ್ನ ಎಲ್ಲಾ ಪರ್ವತಗಳಲ್ಲೂ ನಾನು ಅವನಿಗೆ ವಿರುದ್ಧವಾಗಿ ಕತ್ತಿಯನ್ನು ಕರೆಯುವೆ ನೆಂದೂ ದೇವರಾದ ಕರ್ತನು ಹೇಳುತ್ತಾನೆ; ಪ್ರತಿ ಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರೋಧವಾಗಿರುವದು. ನಾನು ಅವನಿಗೆ ವಿರುದ್ಧ ವಾಗಿ ವ್ಯಾಧಿಯಿಂದಲೂ ರಕ್ತದಿಂದಲೂ ವಾದಿಸು ತ್ತೇನೆ. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು. ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.
- Joel 2:1–11 ಯೋವೇಲ 2:1–11ನೀವು ಚೀಯೋನಿನಲ್ಲಿ ಕೊಂಬುಊದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ; ದೇಶದ ನಿವಾಸಿಗಳೆಲ್ಲರೂ ನಡುಗಲಿ; ಯಾಕಂದರೆ ಕರ್ತನ ದಿನವು ಬರುತ್ತದೆ; ಅದು ಸವಿಾಪ ವಾಗಿದೆ. ಕತ್ತಲೆಯೂ ಮೊಬ್ಬೂ ಉಳ್ಳ ದಿವಸವೂ; ಮೇಘವೂ ಕಾರ್ಗತ್ತಲೂ ಉಳ್ಳ ದಿವಸ ವೂ; ಬೆಟ್ಟಗಳ ಮೇಲೆ ಹಾಸಿರುವ ಉದಯದ ಹಾಗಿದೆ. ದೊಡ್ಡ ಬಲವಾದ ಜನವು; ಅದರ ಹಾಗೆ ಎಂದೂ ಇದ್ದದ್ದಿಲ್ಲ; ಅದರ ತರುವಾಯ ತಲತಲಾಂತರಗಳ ವರುಷಗಳ ವರೆಗೆ ಇನ್ನು ಇರುವದೇ ಇಲ್ಲ. ಅವರ ಮುಂದೆ ಬೆಂಕಿ ದಹಿಸುತ್ತದೆ; ಅವರ ಹಿಂದೆ ಜ್ವಾಲೆ ಸುಡುತ್ತದೆ; ಅವರ ಮುಂದೆ ದೇಶವು ಏದೆನ್ ತೋಟದ ಹಾಗಿದೆ; ಅವರ ಹಿಂದೆ ಹಾಳಾದ ಕಾಡು; ಹೌದು, ಅವುಗಳಿಗೆ ಯಾವದೂ ತಪ್ಪಿಸಿಕೊಳ್ಳಲಾರದು. ಅವರ ಆಕಾರವು ಕುದುರೆಗಳ ಆಕಾರದ ಹಾಗಿದೆ; ಸವಾರರ ಹಾಗೆಯೇ ಓಡುತ್ತಾರೆ. ಪರ್ವತಾಗ್ರಗಳಲ್ಲಿ ರಥಗಳ ಶಬ್ದದಂತೆ ಹಾರುತ್ತಾರೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಜನರ ಹಾಗೆಯೂ ಅವರ ಮುಂದೆ ಜನರು ಬಹಳವಾಗಿ ನೊಂದುಕೊಳ್ಳುತ್ತಾರೆ. ಎಲ್ಲಾ ಮುಖಗಳು ಕಳೆಗುಂದುತ್ತವೆ. ಶೂರರ ಹಾಗೆ ಓಡುತ್ತಾರೆ; ಯುದ್ಧ ಶಾಲಿಗಳ ಹಾಗೆ ಗೋಡೆ ಏರುತ್ತಾರೆ; ಒಬ್ಬೊಬ್ಬನು ತನ್ನ ತನ್ನ ಮಾರ್ಗದಲ್ಲಿ ಹೋಗುತ್ತಾನೆ; ತಮ್ಮ ಹಾದಿ ಗಳನ್ನು ಬದಲು ಮಾಡುವದಿಲ್ಲ. ಒಬ್ಬನು ಇನ್ನೊಬ್ಬ ನನ್ನು ನೂಕುವದಿಲ್ಲ; ಅವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ದಾರಿಯಲ್ಲಿ ಹೋಗುತ್ತಾನೆ; ಆಯುಧಗಳಲ್ಲಿ ಬಿದ್ದರೂ ಗಾಯವಾಗುವದಿಲ್ಲ. ಪಟ್ಟಣದಲ್ಲಿ ಅತ್ತಿತ್ತ ತಿರುಗಾಡುತ್ತಾರೆ; ಗೋಡೆಯ ಮೇಲೆ ಓಡುತ್ತಾರೆ; ಮನೆಗಳ ಮೇಲೆ ಹತ್ತುತ್ತಾರೆ; ಕಳ್ಳನ ಹಾಗೆ ಕಿಟಕಿಗಳಿಂದ ಪ್ರವೇಶಿಸುತ್ತಾರೆ. ಅವರ ಮುಂದೆ ಭೂಮಿಯು ನಡುಗುತ್ತದೆ; ಆಕಾಶಗಳು ಅದುರುತ್ತವೆ; ಸೂರ್ಯ ಚಂದ್ರರು ಕಪ್ಪಾಗುತ್ತವೆ; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆ ಮಾಡುತ್ತವೆ. ಕರ್ತನು ತನ್ನ ಸೈನ್ಯದ ಮುಂದೆ ತನ್ನ ಶಬ್ದವನ್ನು ಮಾಡುತ್ತಾನೆ; ಆತನ ದಂಡು ಬಹು ದೊಡ್ಡದಾಗಿದೆ; ಹೌದು, ಬಲವಾದ ದ್ದಾಗಿದ್ದು ಆತನ ವಾಕ್ಯವನ್ನು ನಡಿಸುತ್ತದೆ; ಕರ್ತನ ದಿನವು ದೊಡ್ಡದು, ಮಹಾ ಭಯಂಕರವಾದದ್ದು, ಅದನ್ನು ತಾಳಿಕೊಳ್ಳುವವನ್ಯಾರು?
- Revelation 19:11–21 ಪ್ರಕಟನೆ 19:11–21ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ; ಆತನ ಕಣ್ಣುಗಳು ಬೆಂಕಿಯ ಉರಿಯಂತಿದ್ದವು; ಆತನ ತಲೆಯ ಮೇಲೆ ಅನೇಕ ಕಿರೀಟಗಳು ಇದ್ದವು. ಬರೆಯಲ್ಪಟ್ಟ ಹೆಸರು ಆತನಿಗೆ ಇತ್ತು. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿದಿರಲಿಲ್ಲ. ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿ ಕೊಂಡಿದ್ದನು. ಆತನ ಹೆಸರು ದೇವರವಾಕ್ಯ ವೆಂದು ಕರೆಯಲ್ಪಡುತ್ತದೆ. ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು. ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ. ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ. ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ, ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು. ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು. ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು. ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- Joel 2:25 ಯೋವೇಲ 2:25ನಾನು ನಿಮ್ಮಲ್ಲಿ ಕಳುಹಿಸದಂಥ, ನನ್ನ ದೊಡ್ಡ ಸೈನ್ಯವಾದ ಹುಳವೂ ಕಂಬಳಿ ಹುಳವೂ ಒಳಗೆ ನಾಶಮಾಡುವ ಹುಳವೂ ಮಿಡತೆಗಳೂ ತಿಂದ ವರುಷಗಳಿಗೆ ಬದಲಾಗಿ ನಿಮಗೆ ಕೊಡುವೆನು.
- Jeremiah 50:14–15 ಯೆರೆಮೀಯ 50:14–15ಬಿಲ್ಲನ್ನು ಬೊಗ್ಗಿಸುವವರೆಲ್ಲರೇ, ಬಾಬೆಲಿಗೆ ವಿರೋಧವಾಗಿ ಸುತ್ತಲೂ ಯುದ್ಧವನ್ನು ಸಿದ್ಧಮಾಡಿರಿ. ಬಾಣಗಳನ್ನು ಅದಕ್ಕೆ ಎಸೆಯಿರಿ; ಕಡಿಮೆ ಮಾಡಬೇಡಿರಿ; ಅದು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆ. ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಒಳಪಟ್ಟಿತು; ಅದರ ಅಸ್ತಿವಾರಗಳು ಬಿದ್ದು ಹೋದವು; ಅದರ ಗೋಡೆಗಳು ಕೆಡವಲ್ಪಟ್ಟವು; ಅದು ಕರ್ತನ ಪ್ರತಿದಂಡನೆಯೇ, ಅದರಿಂದ ಪ್ರತಿ ದಂಡನೆ ತಕ್ಕೊಳ್ಳಿರಿ. ಅದು ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ.
- Jeremiah 51:6–25 ಯೆರೆಮೀಯ 51:6–25ಬಾಬೆಲಿನೊಳಗಿಂದ ಓಡಿಹೋಗಿರಿ, ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಅಕ್ರಮದಲ್ಲಿ ನಾಶವಾಗ ಬೇಡಿರಿ; ಇದು ಕರ್ತನ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆಮುಯ್ಯಿ ಕೊಡುತ್ತಾನೆ. ಬಾಬೆಲ್ ಕರ್ತನ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿ ಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದದರಿಂದ ಜನಾಂಗ ಗಳು ಹುಚ್ಚರಾದರು. ಇದ್ದಕ್ಕಿದ್ದ ಹಾಗೆ ಬಾಬೆಲ್ ಬಿದ್ದು ಮುರಿಯಲ್ಪಟ್ಟಿದೆ; ಅದರ ವಿಷಯ ಗೋಳಾ ಡಿರಿ; ಅದರ ನೋವಿಗೆ ತೈಲ ತಕ್ಕೊಳ್ಳಿರಿ; ಒಂದು ವೇಳೆ ವಾಸಿಯಾದೀತು. ನಾವು ಬಾಬೆಲನ್ನು ವಾಸಿಮಾಡುವದಕ್ಕಿದ್ದೆವು. ಆದರೆ ಅದು ವಾಸಿಯಾಗಲಿಲ್ಲ; ಅದನ್ನು ಬಿಡು, ನಮ್ಮ ಸ್ವಂತ ದೇಶಗಳಿಗೆ ಹೋಗೋಣ; ಅದರ ನ್ಯಾಯ ತೀರ್ವಿಕೆಯು ಆಕಾಶಗಳಿಗೆ ಮುಟ್ಟುತ್ತದೆ; ಆಕಾಶಗಳ ವರೆಗೂ ಏಳುತ್ತದೆ. ಕರ್ತನು ನಮ್ಮ ನೀತಿಯನ್ನು ಹೊರಗೆ ತಂದಿದ್ದಾನೆ; ಬನ್ನಿ, ನಮ್ಮ ದೇವರಾದ ಕರ್ತನ ಕ್ರಿಯೆಯನ್ನು, ಚೀಯೋನಿನಲ್ಲಿ ಸಾರಿ ಹೇಳೋಣ. ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ. ಬಾಬೆಲಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ, ಪಹರೆ ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ; ಹೊಂಚಿ ಕೊಳ್ಳುವವರನ್ನು ಸಿದ್ಧಮಾಡಿರಿ; ಕರ್ತನು ಬಾಬೆಲಿನ ನಿವಾಸಿಗಳಿಗೆ ವಿರೋಧವಾಗಿ ತಾನು ಹೇಳಿದ್ದನ್ನು ಯೋಚಿಸಿ ಮಾಡಿದ್ದಾನೆ. ಅನೇಕ ನೀರುಗಳ ಬಳಿಯಲ್ಲಿ ವಾಸವಾಗಿರುವವಳೇ, ಬಹಳ ದ್ರವ್ಯಗಳುಳ್ಳ ವಳೇ, ನಿನ್ನ ಅಂತ್ಯವೂ ನಿನ್ನ ದುರ್ಲಾಭದ ಅಳತೆಯೂ ಬಂತು. ಸೈನ್ಯಗಳ ಕರ್ತನು--ನಿಶ್ಚಯ ವಾಗಿ ನಾನು ಹುಳಗಳಿಂದಾದ ಹಾಗೆ ಮನುಷ್ಯರಿಂದ ನಿನ್ನನ್ನು ತುಂಬಿಸುತ್ತೇನೆಂದು ಅವರು ನಿನಗೆ ವಿರೋಧ ವಾಗಿ ಆರ್ಭಟವನ್ನು ಎತ್ತುವರೆಂದು ತನ್ನ ಮೇಲೆ ಆಣೆ ಇಟ್ಟುಕೊಂಡಿದ್ದಾನೆ. ಆತನು ತನ್ನ ಶಕ್ತಿಯಿಂದ ಭೂಮಿಯನ್ನು ಉಂಟುಮಾಡಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾನೆ. ಆತನು ತನ್ನ ಶಬ್ದವನ್ನು ಎತ್ತುವಾಗ ಆಕಾಶದಲ್ಲಿ ನೀರಿನ ಘೋಷವದೆ; ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏರ ಮಾಡುತ್ತಾನೆ; ಮಳೆಯ ಸಂಗಡ ಮಿಂಚುಗಳನ್ನು ಮಾಡಿ ತನ್ನ ಭಂಡಾರಗಳೊ ಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ. ಮನುಷ್ಯ ರೆಲ್ಲರೂ ತಮ್ಮ ತಿಳುವಳಿಕೆಯಿಂದ ಮೂಢರಾಗಿದ್ದಾರೆ; ಎರಕ ಹೊಯ್ಯುವವರೆಲ್ಲರೂ ವಿಗ್ರಹದಿಂದ ನಾಚಿಕೆ ಪಡುತ್ತಾರೆ; ಅವರ ಎರಕದ ಬೊಂಬೆಗಳು ಸುಳ್ಳೇ; ಅವುಗಳಲ್ಲಿ ಉಸಿರು ಇಲ್ಲ. ಅವು ಮಾಯವೇ, ಮೋಸದ ಕೆಲಸವೇ; ಅವುಗಳ ವಿಚಾರಣೆಯ ಕಾಲದಲ್ಲಿ ನಾಶವಾಗುವವು. ಯಾಕೋಬನ ಭಾಗವು ಇವುಗಳ ಹಾಗಲ್ಲ; ಆತನು ಎಲ್ಲವನ್ನು ರೂಪಿಸಿದವನೇ, ಆತನ ಸ್ವಾಸ್ತ್ಯದ ಕೋಲು ಇಸ್ರಾಯೇಲೇ; ಆತನ ಹೆಸರು ಸೈನ್ಯಗಳ ಕರ್ತನೇ. ನೀನು ನನ್ನ ಸುತ್ತಿಗೆಯೇ, ನನ್ನ ಯುದ್ಧದ ಆಯುಧಗಳೇ, ನಿನ್ನಿಂದ ಜನಾಂಗಗಳನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಾಜ್ಯಗಳನ್ನು ನಾಶಮಾಡುತ್ತೇನೆ; ನಿನ್ನಿಂದ ಕುದುರೆಯನ್ನೂ ಅದರ ಮೇಲೆ ಹತ್ತಿದವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಥವನ್ನೂ ಅದರಲ್ಲಿ ಸವಾರಿ ಮಾಡುವವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ. ನಿನ್ನಿಂದ ಗಂಡಸರನ್ನೂ ಹೆಂಗಸರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ. ನಿನ್ನಿಂದ ಕುರುಬನನ್ನೂ ಅವನ ಮಂದೆಯನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ. ನಿನ್ನಿಂದ ಹಿರಿಯರನ್ನೂ ಕಿರಿಯರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಯೌವನಸ್ಥನನ್ನೂ ಕನ್ನಿಕೆಯನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಒಕ್ಕಲಿಗನನ್ನೂ ಅವನ ನೊಗದ ಎತ್ತುಗಳನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಚೂರು ಚೂರಾಗಿ ಒಡೆದುಬಿಡು ತ್ತೇನೆ. ಬಾಬೆಲಿಗೂ ಕಸ್ದೀಯರ ನಿವಾಸಿಗಳೆಲ್ಲ ರಿಗೂ--ಅವರು ಚೀಯೋನಿನಲ್ಲಿ ನಿಮ್ಮ ಸನ್ನಿಧಿಯಲ್ಲಿ ಮಾಡಿದ ಕೇಡನ್ನೆಲ್ಲಾ ಸಲ್ಲಿಸುವೆನೆಂದು ಕರ್ತನು ಅನ್ನುತ್ತಾನೆ. ನಾಶಮಾಡುವ ಬೆಟ್ಟವೇ! ಭೂಮಿಯನ್ನೆಲ್ಲಾ ನಾಶಮಾಡುವಂಥಾದ್ದೇ! ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ. ನಿನ್ನ ಮೇಲೆ ನನ್ನ ಕೈಯನ್ನು ಚಾಚಿ ಬಂಡೆಗಳ ಮೇಲಿನಿಂದ ನಿನ್ನನ್ನು ಹೊರಳಿಸಿ ನಿನ್ನನ್ನು ಸುಟ್ಟ ಬೆಟ್ಟವಾಗಿ ಮಾಡುತ್ತೇನೆ.
- Isaiah 22:1–9 ಯೆಶಾಯ 22:1–9ದಿವ್ಯ ದರ್ಶನದ ತಗ್ಗಿನ ವಿಷಯವಾದ ದೈವೋಕ್ತಿ, ನಿನ್ನವರೆಲ್ಲರು ಮಾಳಿಗೆಗಳ ಮೇಲೆ ಏರುವ ಹಾಗೆ, ಈಗ ನಿನಗೆ ಏನಾಯಿತು? ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣ ವೇ ಸಂಭ್ರಮದ ಪಟ್ಟಣವೇ, ನಿನ್ನಲ್ಲಿ ಕೊಂದುಹಾಕಲ್ಪ ಟ್ಟವರು ಕತ್ತಿಯಿಂದ ಕೊಂದುಹಾಕಲ್ಪಟ್ಟವರಲ್ಲ ಅಥವಾ ಯುದ್ಧದಲ್ಲಿ ಸತ್ತವರಲ್ಲ. ನಿನ್ನ ಅಧಿಕಾರಸ್ಥರೆಲ್ಲರು ಒಟ್ಟಿಗೆ ಓಡಿ ಬಿಲ್ಲುಗಾರರಿಲ್ಲದೆ ಸೆರೆಯಾಗಿದ್ದಾರೆ. ದೂರದಿಂದ ಓಡಿಬಂದು ನಿನ್ನಲ್ಲಿ ಸಿಕ್ಕಿದವರೆಲ್ಲ ರೊಂದಿಗೆ ಕಟ್ಟುಬಿದ್ದಿದ್ದಾರೆ. ಹೀಗಿರಲು ನನ್ನ ಕಡೆ ಯಿಂದ ದೃಷ್ಟಿ ತಿರುಗಿಸಿರಿ. ಬಹುಸಂಕಟದಿಂದ ನಾನು ಅಳುವೆನು. ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವದಕ್ಕೆ ತವಕಗೊಳ್ಳದಿರಿ ಅಂದೆನು. ಸೈನ್ಯಗಳ ದೇವರಾದ ಕರ್ತನಿಗೆ ದರ್ಶ ನದ ತಗ್ಗಿನಲ್ಲಿ ಶ್ರಮೆಯ ತುಳಿದಾಟದ ಗಲಿಬಿಲಿಯ ದಿನವದೆ, ಗೋಡೆ ಒಡೆಯೋಣವು ಪರ್ವತದ ಕಡೆಗೆ ಹೋಗೋಣವು ಉಂಟಾಗುವದು. ಏಲಾಮಿನ ಮನುಷ್ಯರ ಕುದುರೆ ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿ ಯನ್ನು ತೆಗೆದರು. ನಿಮ್ಮ ಪ್ರಿಯವಾದ ತಗ್ಗುಗಳಲ್ಲಿ ರಥಗಳು ತುಂಬಿರುವವು. ರಾಹುತರು ಬಾಗಿಲಿನ ಹತ್ತಿರ ಸಿದ್ಧಮಾಡಿಕೊಳ್ಳುವರು. ಅವನು ಯೆಹೂ ದದ ಮುಸುಕನ್ನು ತೆಗೆದಿದ್ದಾನೆ. ಆ ದಿವಸದಲ್ಲಿ ಅಡವಿ ಮನೆಯ ಯುದ್ಧಸಾಮಗ್ರಿಯ ಕಡೆಗೆ ದೃಷ್ಟಿ ಇಡುತ್ತಿ. ದಾವೀದನ ಪಟ್ಟಣದ ಕೋಟೆಯ ಒಡಕುಗಳನ್ನು ಬಹಳವೆಂದು ಸಹ ನೋಡುತ್ತೀರಿ; ಕೆಳಗಿನ ಕೊಳಕ್ಕೆ ನೀರನ್ನು ಕೂಡಿಸುತ್ತೀರಿ.
- Jeremiah 50:21–46 ಯೆರೆಮೀಯ 50:21–46ಮೆರಾಥಯಿಮ್ ದೇಶಕ್ಕೂ ಪೆಕೋದಿನ ನಿವಾಸಿ ಗಳಿಗೂ ವಿರೋಧವಾಗಿ ಏರಿಹೋಗು; ಅವರನ್ನು ಹಿಂದಟ್ಟಿ ಕೆಡಿಸಿಬಿಟ್ಟು ಸಂಪೂರ್ಣ ನಾಶಮಾಡು, ನಾನು ನಿನಗೆ ಆಜ್ಞಾಪಿಸಿದ್ದೆಲಾದರ ಪ್ರಕಾರ ಮಾಡು ಎಂದು ಕರ್ತನು ಅನ್ನುತ್ತಾನೆ. ಯುದ್ಧದ ಶಬ್ದವೂ ದೊಡ್ಡ ನಾಶನವೂ ದೇಶದಲ್ಲಿ ಇರುವದು. ಎಲ್ಲಾ ಭೂಮಿಯ ಸುತ್ತಿಗೆಯೂ ಹೇಗೆ ತುಂಡಾಗಿ ಮುರಿಯಲ್ಪಟ್ಟಿತು; ಬಾಬೆಲ್ ಹೇಗೆ ಜನಾಂಗಗಳೊಳಗೆ ಹಾಳಾಯಿತು! ನಾನು ಬೋನನ್ನು ಇಟ್ಟೆನು; ಹೌದು, ಬಾಬೆಲೇ ನೀನು ಹಿಡಿಯಲ್ಪಟ್ಟಿದ್ದೀ; ಆದರೆ ನಿನಗೆ ತಿಳಿಯದಿತ್ತು; ನೀನು ಕರ್ತನಿಗೆ ವಿರೋಧವಾಗಿ ಜಗಳವಾಡಿದ್ದ ರಿಂದಲೇ ಸಿಕ್ಕಿದ್ದೀ; ವಶಮಾಡಲ್ಪಟ್ಟಿದ್ದೀ; ಕರ್ತನು ತನ್ನ ಆಯುಧ ಶಾಲೆಯನ್ನು ತೆರೆದು, ರೋಷದ ಆಯುಧಗಳನ್ನು ಹೊರಗೆ ತಂದಿದ್ದಾನೆ; ಕಸ್ದೀಯರ ದೇಶದಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ನಿರ್ವಹಿಸ ಬೇಕಾದ ಕಾರ್ಯವುಂಟು. ಕಟ್ಟಕಡೆಯ ಮೇರೆ ಯಿಂದ ಅದಕ್ಕೆ ವಿರೋಧವಾಗಿ ಬನ್ನಿ; ಅದರ ಕಣಜಗಳನ್ನು ತೆರೆಯಿರಿ; ಅದನ್ನು ದಿಬ್ಬಗಳಂತೆ ತುಳಿ ಯಿರಿ; ಸಂಪೂರ್ಣವಾಗಿ ನಾಶಮಾಡಿರಿ; ಅದಕ್ಕೆ ಒಂದೂ ಉಳಿಯದಿರಲಿ. ಅದರ ಹೋರಿಗಳನ್ನೆಲ್ಲಾ ಕೊಂದುಹಾಕಿರಿ; ಅವು ಕೊಲೆಗೆ ಇಳಿಯಲಿ; ಅವರಿಗೆ ಅಯ್ಯೋ! ಅವರ ದಿನವೂ ಅವರ ವಿಚಾರಣೆಯ ಕಾಲವೂ ಬಂತು. ಅವರು ಚೀಯೋನಿನಲ್ಲಿ ನಮ್ಮ ದೇವರಾದ ಕರ್ತನ ಪ್ರತಿದಂಡನೆಯನ್ನೂ ಆತನ ಆಲಯದ ಪ್ರತಿ ದಂಡನೆ ಯನ್ನೂ ತಿಳಿಸುತ್ತಾ, ಬಾಬೆಲಿನ ದೇಶದಿಂದ ತಪ್ಪಿಸಿ ಕೊಂಡು ಓಡಿ ಹೋಗುವವರ ಸ್ವರವು! ಬಾಬೆಲಿಗೆ ವಿರೋಧವಾಗಿ ಬಿಲ್ಲಿನವರನ್ನು ಒಟ್ಟಾಗಿ ಕರೆಯಿರಿ; ಬಿಲ್ಲು ಬೊಗ್ಗಿಸುವವರೆಲ್ಲರೇ, ಅದಕ್ಕೆ ವಿರೋಧವಾಗಿ ಸುತ್ತಲು ದಂಡು ಕಟ್ಟಿರಿ; ಅದರಲ್ಲಿ ಯಾವದು ತಪ್ಪಿಸಿ ಕೊಳ್ಳಲಾರದೆ ಇರಲಿ. ಅದರ ಕೃತ್ಯಗಳ ಪ್ರಕಾರ ಅದಕ್ಕೆ ಪ್ರತಿಫಲ ಕೊಡಿರಿ; ಅದು ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿರಿ; ಕರ್ತನಿಗೆ ವಿರೋಧವಾಗಿಯೂ ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೂ ಅದು ಗರ್ವ ತೋರಿಸಿತು. ಆದದರಿಂದ ಅದರ ಯೌವನಸ್ಥರು ಬೀದಿಗಳಲ್ಲಿ ಬೀಳುವರು; ಅದರ ಯುದ್ಧಸ್ಥರೆಲ್ಲರು ಆ ದಿವಸದಲ್ಲಿ ತೆಗೆದುಹಾಕಲ್ಪಡು ವರೆಂದು ಕರ್ತನು ಅನ್ನುತ್ತಾನೆ. ಅತಿ ಗರ್ವಿಷ್ಠನೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ; ನಿನ್ನ ದಿವಸವೂ ನಿನ್ನ ವಿಚಾರಣೆಯ ಕಾಲವೂ ಬಂತು. ಆಗ ಅತಿ ಗರ್ವದ (ರಾಜ್ಯವು) ಎಡವಿ ಬೀಳುವದು; ಅದನ್ನು ಎಬ್ಬಿಸುವದಕ್ಕೆ ಯಾರೂ ಇರುವದಿಲ್ಲ; ಅದರ ಪಟ್ಟಣಗಳಲ್ಲಿ ನಾನು ಬೆಂಕಿ ಹಚ್ಚುವೆನು, ಅದು ಅದರ ಸುತ್ತಲಿರುವದನ್ನೆಲ್ಲಾ ನುಂಗಿಬಿಡುವದು. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ-- ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಕೂಡ ಹಿಂಸಿಸಲ್ಪಟ್ಟರು; ಅವರನ್ನು ಸೆರೆಗೆ ಒಯ್ಯುವವ ರೆಲ್ಲರು ಅವರನ್ನು ಬಲವಾಗಿ ಹಿಡಿದು, ಕಳುಹಿಸಿ ಬಿಡಲೊಲ್ಲದೆ ಇದ್ದರು. ಅವರ ವಿಮೋಚಕನು ಬಲಿಷ್ಠನೇ, ಸೈನ್ಯಗಳ ಕರ್ತನು ಆತನ ಹೆಸರು; ಆತನು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ ಬಾಬೆಲಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವನು. ಕಸ್ದೀಯರಿಗೂ ಬಾಬೆಲಿನ ನಿವಾಸಿಗಳಿಗೂ ಅದರ ಪ್ರಧಾನರಿಗೂ ಜ್ಞಾನಿಗಳಿಗೂ ವಿರೋಧವಾಗಿ ಕತ್ತಿ ಉಂಟೆಂದು ಕರ್ತನು ಅನ್ನುತ್ತಾನೆ. ಸುಳ್ಳುಗಾರರಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಮೂರ್ಖರಾಗು ವರು; ಅದರ ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಭಯಭ್ರಾಂತಿ ಪಡುವರು. ಅವರ ಕುದುರೆಗಳಿಗೂ ರಥಗಳಿಗೂ ಅದರೊಳ ಗಿರುವ ಎಲ್ಲಾ ಜನರಿಗೆ ವಿರೋಧವಾಗಿ ಖಡ್ಗ ಉಂಟು. ಅವರು ಹೆಂಗಸರ ಹಾಗೆ ಬೆದರುವರು; ಅದರ ಬೊಕ್ಕಸಗಳಿಗೆ ವಿರೋಧವಾಗಿಯೂ ಖಡ್ಗ ಉಂಟು. ಅವು ಕೊಳ್ಳೆಯಾಗುವವು. ಬೇಗೆಯು ಅವರ ನೀರನ್ನೆಲ್ಲಾ ಹೀರಲಿ; ಅದು ಬತ್ತಿ ಹೋಗುವದು; ಅದು ವಿಗ್ರಹಗಳ ದೇಶವೇ, ಅವರು ವಿಗ್ರಹಗಳಿಂದ ಹುಚ್ಚರಾದರು. ಆದದರಿಂದ ಅರಣ್ಯದ ಕಾಡು ಮೃಗಗಳು, ನರಿಗಳು ಕೂಡ ಅಲ್ಲಿ ವಾಸಮಾಡುವವು. ಗೂಬೆಗಳೂ ಸಹ ಅದರಲ್ಲಿ ವಾಸಮಾಡುವವು; ಅದು ಇನ್ನು ಮೇಲೆ ಎಂದೆಂದಿಗೂ ನಿವಾಸವಾಗುವದಿಲ್ಲ; ತಲತಲಾಂತರಗಳ ವರೆಗೂ ಯಾರೂ ಅದರಲ್ಲಿ ತಂಗುವದಿಲ್ಲ. ದೇವರು ಸೊದೋಮನ್ನೂ ಗೊಮೋರವನ್ನು ಅವುಗಳ ಸವಿಾಪದಲ್ಲಿದ್ದ ಪಟ್ಟಣಗಳನ್ನೂ ಕೆಡವಿಹಾಕಿದಾಗ ಆದ ಹಾಗೆ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ; ಅದರಲ್ಲಿ ಯಾವ ನರಪುತ್ರನಾದರೂ ತಂಗುವದಿ ಲ್ಲವೆಂದು ಕರ್ತನು ಅನ್ನುತ್ತಾನೆ. ಇಗೋ, ಒಂದು ಜನಾಂಗ ಉತ್ತರದಿಂದ ಬರುತ್ತದೆ; ಅದು ದೊಡ್ಡ ಜನಾಂಗವು. ಭೂಮಿಯ ಮೇರೆಗಳಿಂದ ಅನೇಕ ಅರಸರು ಎಬ್ಬಿಸಲ್ಪಡುವರು. ಅವರು ಬಿಲ್ಲನ್ನೂ ಭಲ್ಲೆಯನ್ನೂ ಹಿಡಿಯುವರು; ಅವರು ಕ್ರೂರರು; ಅಂತಃಕರುಣೆ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುವದು; ಬಾಬೆಲಿನ ಮಗಳೇ, ನಿನಗೆ ವಿರೋಧವಾಗಿ ಯುದ್ಧಕ್ಕೆ ಸಿದ್ಧವಾಗಿ ರುವ ಪುರುಷರ ಹಾಗೆ ಕುದುರೆಗಳನ್ನು ಹತ್ತಿಕೊಂಡು ಬರುವರು. ಬಾಬೆಲಿನ ಅರಸನು ಅವರ ಸುದ್ದಿಯನ್ನು ಕೇಳಿದ್ದಾನೆ. ಅವನ ಕೈಗಳು ನಿತ್ರಾಣವಾದವು. ಸಂಕಟವೂ ಹೆರುವ ಸ್ತ್ರೀಯ ಹಾಗೆ ನೋವೂ ಅವನನ್ನು ಹಿಡಿದವು. ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಕ್ಕುವಿಕೆಯಿಂದ ಬಲವಾದ ನಿವಾಸಕ್ಕೆ ಏರಿ ಬರುವನು; ಆದರೆ ನಾನು ಅವರನ್ನು ಕ್ಷಣಮಾತ್ರ ದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು, ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ಮತ್ತು ನನಗೆ ಕಾಲವನ್ನು ನೇಮಿಸುವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು? ಆದದರಿಂದ ಕರ್ತನು ಬಾಬೆಲಿಗೆ ವಿರೋಧವಾಗಿ ಮಾಡಿದ ಆಲೋ ಚನೆಯನ್ನೂ ಆತನು ಕಸ್ದೀಯರ ದೇಶಕ್ಕೆ ವಿರೋಧವಾಗಿ ಮಾಡಿದ ಯೋಚನೆಗಳನ್ನೂ ಕೇಳಿರಿ; ನಿಶ್ಚಯವಾಗಿ ಮಂದೆಯಲ್ಲಿ ಚಿಕ್ಕವುಗಳು ಅವರನ್ನು ಎಳೆಯುವವು; ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡುವನು.ಬಾಬೆಲ್ ಹಿಡಿಯಲ್ಪಟ್ಟಿತ್ತೆಂಬ ಶಬ್ದದಿಂದ ಭೂಮಿಯು ಕದಲುತ್ತದೆ; ಅದರ ಕೂಗು ಜನಾಂಗಗಳೊಳಗೆ ಕೇಳಬಂತು. ಬಾಬೆಲ್ ಹಿಡಿಯಲ್ಪಟ್ಟಿತ್ತೆಂಬ ಶಬ್ದದಿಂದ ಭೂಮಿಯು ಕದಲುತ್ತದೆ; ಅದರ ಕೂಗು ಜನಾಂಗಗಳೊಳಗೆ ಕೇಳಬಂತು.
- Jeremiah 51:27–28 ಯೆರೆಮೀಯ 51:27–28ದೇಶದಲ್ಲಿ ಧ್ವಜವನ್ನೆತ್ತಿರಿ; ಜನಾಂಗಗಳಲ್ಲಿ ತುತೂರಿಯನ್ನೂದಿರಿ; ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; ಅರರಾಟ್, ಮಿನ್ನಿ, ಅಷ್ಕೆನಜ್ ರಾಜ್ಯಗಳನ್ನು ಅದಕ್ಕೆ ವಿರೋಧವಾಗಿ ಕರೆಯಿರಿ; ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; ಬಿರುಸಾದ ಮಿಡತೆ ದಂಡಿನಂತೆ ಕುದುರೆ ಗಳನ್ನು ಬರಮಾಡಿರಿ. ಅದಕ್ಕೆ ವಿರೋಧವಾಗಿ ಜನಾಂಗಗಳನ್ನೂ ಮೇದ್ಯರ ಅರಸರನ್ನೂ ಅದರ ಅಧಿಪತಿಗಳನ್ನೂ ಅಧಿಕಾರಿಗಳೆಲ್ಲರನ್ನೂ ಅವನ ರಾಜ್ಯದ ದೇಶವನ್ನೆಲ್ಲಾ ಸಿದ್ಧಮಾಡಿರಿ.
- Revelation 9:7–19 ಪ್ರಕಟನೆ 9:7–19ಆ ಮಿಡಿತೆಗಳ ಆಕಾರಗಳು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ಆಕಾರದಂತೆ ಇದ್ದವು ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳೋ ಎಂಬಂತೆ ಇದ್ದವು; ಅವುಗಳ ಮುಖಗಳು ಮನುಷ್ಯರ ಮುಖಗಳ ಹಾಗೆ ಇದ್ದವು. ಸ್ತ್ರೀಯರ ಕೂದಲಿ ನಂತಿರುವ ಕೂದಲು ಅವುಗಳಿಗೆ ಇತ್ತು; ಅವುಗಳ ಹಲ್ಲುಗಳು ಸಿಂಹದ ಹಲ್ಲುಗಳ ಹಾಗಿದ್ದವು. ಅವುಗಳಿಗೆ ಕಬ್ಬಿಣದ ಕವಚಗಳಂತಿದ್ದ ಕವಚಗಳು ಇದ್ದವು; ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ಅನೇಕ ರಥಾಶ್ವಗಳ ಶಬ್ದದ ಹಾಗೆ ಇತ್ತು. ಚೇಳಿಗಿರುವಂತೆ ಅವುಗಳಿಗೆ ಬಾಲಗಳೂ ಆ ಬಾಲಗಳಲ್ಲಿ ಕೊಂಡಿಗಳೂ ಇದ್ದವು; ಮನುಷ್ಯರನ್ನು ಐದು ತಿಂಗಳುಗಳ ವರೆಗೂ ಬಾಧಿಸುವ ಬಲವು ಅವುಗಳಿಗೆ ಇತ್ತು. ತಳವಿಲ್ಲದ ತಗ್ಗಿನ ದೂತನು ಅವುಗಳನ್ನಾಳುವ ಅರಸನು; ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರು. ಒಂದು ಆಪತ್ತು ಕಳೆದುಹೋಯಿತು; ಇದಾದ ಮೇಲೆ ಇಗೋ, ಇನ್ನೂ ಎರಡು ಆಪತ್ತುಗಳು ಬರುವದಕ್ಕಿವೆ. ಆರನೆಯ ದೂತನು ಊದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ವೇದಿಗಿದ್ದ ನಾಲ್ಕು ಕೊಂಬು ಗಳಿಂದ ಬಂದ ಧ್ವನಿಯನ್ನು ನಾನು ಕೇಳಿದೆನು. ಅದು ತುತೂರಿಯನ್ನು ಹಿಡಿದಿದ್ದ ಆರನೆಯ ದೂತನಿಗೆ--ಯೂಫ್ರೇಟೀಸ್ ಮಹಾ ನದಿಯಲ್ಲಿ ಬಂಧಿಸಲ್ಪಟ್ಟಿರುವ ನಾಲ್ಕು ಮಂದಿ ದೂತರನ್ನು ಬಿಚ್ಚಿಬಿಡು ಎಂದು ಹೇಳಿತು. ಆಗ ಮೂರರಲ್ಲಿ ಒಂದು ಭಾಗದ ಜನರನ್ನು ಸಂಹಾರ ಮಾಡುವ ತಾಸು, ದಿನ, ತಿಂಗಳು ಮತ್ತು ವರುಷಕ್ಕೆ ಸಿದ್ಧವಾಗಿದ್ದ ಆ ನಾಲ್ಕು ದೂತರನ್ನು ಬಿಚ್ಚಿದನು. ಕುದುರೇ ದಂಡಿನವರ ಸಂಖ್ಯೆಯು ಇಪ್ಪತ್ತು ಕೋಟಿ ಎಂದು ನಾನು ಕೇಳಿದೆನು. ನಾನು ದರ್ಶನದಲ್ಲಿ ಕುದುರೆಗಳನ್ನು ಕಂಡೆನು, ಅವುಗಳ ಮೇಲೆ ಕೂತಿದ್ದವರು ಬೆಂಕಿಯ ನೀಲಿಯ ಮತ್ತು ಗಂಧಕದ ಕವಚಗಳನ್ನು ಧರಿಸಿದ್ದರು; ಆ ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು; ಅವುಗಳ ಬಾಯೊಳಗಿಂದ ಬೆಂಕಿ ಹೊಗೆ ಗಂಧಕ ಇವುಗಳು ಹೊರಡುತ್ತಿದ್ದವು. ಅವುಗಳ ಬಾಯಿಂದ ಹೊರಟ ಆ ಬೆಂಕಿ ಹೊಗೆ ಗಂಧಕ ಈ ಮೂರರಿಂದ ಮನುಷ್ಯರಲ್ಲಿ ಮೂರನೇ ಭಾಗವು ಹತವಾಯಿತು. ಅವುಗಳ ಬಲವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇರುತ್ತದೆ. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದ ಅವು ಕೇಡನ್ನುಂಟುಮಾಡು ತ್ತವೆ.
- Zechariah 14:13–14 ಜೆಕರ್ಯ 14:13–14ಆ ದಿನದಲ್ಲಿ ಆಗುವದೇನಂದರೆ --ಕರ್ತನಿಂದಾದ ದೊಡ್ಡ ಕೋಲಾಹಲ ಅವರಲ್ಲಿ ಇರುವದು; ಆಗ ಒಬ್ಬೊಬ್ಬನು ತನ್ನ ತನ್ನ ನೆರೆಯವನ ಕೈಯನ್ನು ಹಿಡಿಯುವನು ಮತ್ತು ಅವನ ಕೈ ತನ್ನ ನೆರೆಯವನ ಮೇಲೆ ಎತ್ತಲ್ಪಡುವದು. ಯೆಹೂದವು ಸಹ ಯೆರೂಸಲೇಮಿನಲ್ಲಿ ಯುದ್ಧ ಮಾಡುವದು; ಸುತ್ತಲಿರುವ ಎಲ್ಲಾ ಅನ್ಯ ಜನಾಂಗಗಳ ಸಂಪತ್ತಾಗಿ ರುವ, ಚಿನ್ನ, ಬೆಳ್ಳಿ, ವಸ್ತ್ರಗಳು ಬಹು ಹೇರಳವಾಗಿ ಕೂಡಿಸಲ್ಪಡುವವು.
Original words (Hebrew)
- noise · H6963קוֹל qôwl
- multitude · H1995הָמוֹן hâmôwn
- mountains · H2022הַר har
- as · H1823דְּמוּת dᵉmûwth
- great · H7227רַב rab
- people · H5971עַם ʻam
- tumultuous · H7588שָׁאוֹן shâʼôwn
- noise · H6963קוֹל qôwl
- kingdoms · H4467מַמְלָכָה mamlâkâh
- nations · H1471גּוֹי gôwy
- together · H622אָסַף ʼâçaph
- hosts · H6635צָבָא tsâbâʼ
- mustereth · H6485פָּקַד pâqad
- host · H6635צָבָא tsâbâʼ
- battle · H4421מִלְחָמָה milchâmâh