Isaiah · chapter 13 · verse 7
Isaiah 13:7 in Kannada
ಆದ ಕಾರಣ ಎಲ್ಲಾ ಕೈಗಳು ಜೋಲು ಬೀಳುವವು ಪ್ರತಿ ಯೊಬ್ಬನ ಹೃದಯವು ಕರಗುವದು.
Aada kaarana ellaa kaigalu jolu beeluvavu prati yobbana hrudayavu karaguvadu.
Isaiah 13:7 in English
- King James Version (KJV)
- Therefore shall all hands be faint, and every man’s heart shall melt:
- World English Bible (WEB)
- Therefore all hands will be feeble, and everyone’s heart will melt.
- American Standard Version (ASV)
- Therefore shall all hands be feeble, and every heart of man shall melt:
- Bible in Basic English (BBE)
- For this cause all hands will be feeble, and every heart of man be turned to water;
- Darby Translation (DBY)
- Therefore shall all hands be feeble, and every heart of man shall melt,
- Webster's Bible (WBS)
- Therefore shall all hands be faint, and every man's heart shall melt:
- Young's Literal Translation (YLT)
- Therefore, all hands do fail, And every heart of man doth melt.
Read in context
- 5ಕರ್ತನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವದಕ್ಕಾಗಿ ಬರುತ್ತಾರೆ.
- 6ನೀವು ಗೋಳಾ ಡಿರಿ, ಕರ್ತನ ದಿನವು ಸವಿಾಪವಾಯಿತು; ಅದು ಸರ್ವಶಕ್ತನಿಂದ ನಾಶನದಂತೆ ಬರುವದು.
- 7ಆದ ಕಾರಣ ಎಲ್ಲಾ ಕೈಗಳು ಜೋಲು ಬೀಳುವವು ಪ್ರತಿ ಯೊಬ್ಬನ ಹೃದಯವು ಕರಗುವದು.
- 8ಅವರು ಭಯ ಪಡುವರು; ನೋವು ಮತ್ತು ಬೇನೆಗಳು ಅವರನ್ನು ಆವರಿಸಿಕೊಳ್ಳುವವು; ಹೆರುವ ಹೆಂಗಸಿನಂತೆ ಸಂಕಟ ಪಡುವರು; ಅವರು ಒಬ್ಬರಿಗೊಬ್ಬರು ಭ್ರಮೆಪಡು ವರು; ಅವರ ಮುಖಗಳು ಜ್ವಾಲೆಯಂತಿರುವವು.
- 9ಇಗೋ, ಕರ್ತನ ದಿನವು ಬರುತ್ತದೆ, ಭೂಮಿಯನ್ನು ಹಾಳುಮಾಡುವದಕ್ಕೂ ಅಲ್ಲಿಂದ ಪಾಪಿಗಳನ್ನು ನಿರ್ಮೂಲಮಾಡುವದಕ್ಕೂ ಅದು ಕೋಪೋದ್ರೇಕ ದಿಂದಲೂ ತೀಕ್ಷ್ಣ ರೋಷದಿಂದಲೂ ಕ್ರೂರವಾಗಿರು ವದು.
Cross references
- Ezekiel 21:7 ಯೆಹೆಜ್ಕೇಲನು 21:7ನೀನು ಯಾಕೆ ನಿಟ್ಟುಸಿರಿಡುತ್ತೀ ಎಂದು ಅವರು ನಿನಗೆ ಕೇಳಿದಾಗ ನೀನು ಹೇಳಬೇಕಾದದ್ದೇನಂದರೆ -- ಆ ಸುದ್ದಿಯ ನಿಮಿತ್ತವೇ ಅದು ಬರುವದು; ಯಾಕಂದರೆ ಆಗ ಹೃದಯಗಳೆಲ್ಲಾ ಕರಗುವವು; ಕೈಗಳೆಲ್ಲಾ ನಿತ್ರಾಣ ವಾಗುವವು, ಪ್ರತಿಯೊಂದು ಆತ್ಮವು ಕುಂದಿ ಹೋಗು ವದು, ಮತ್ತು ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ನಿತ್ರಾಣಗೊಳ್ಳುವವು; ಇಗೋ, ಅದು ಬರುತ್ತದೆ, ತರಲ್ಪಡುತ್ತದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- Nahum 1:6 ನಹೂಮ 1:6ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
- Ezekiel 7:17 ಯೆಹೆಜ್ಕೇಲನು 7:17ಕೈಗಳೆಲ್ಲಾ ಜೋತಾಡುವವು; ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ನಿತ್ರಾಣವಾಗು ವವು.
- Isaiah 19:1 ಯೆಶಾಯ 19:1ಐಗುಪ್ತ್ಯರ ವಿಷಯವಾದ ದೈವೋಕ್ತಿ; ಇಗೋ ಕರ್ತನು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಐಗುಪ್ತಕ್ಕೆ ಬರುತ್ತಾನೆ; ಆತನು ಸಮ್ಮುಖ ನಾದಾಗ ಐಗುಪ್ತದ ವಿಗ್ರಹಗಳು ನಡುಗುವವು, ಐಗುಪ್ತ್ಯರ ಹೃದಯವು ಅವರ ಮಧ್ಯೆ ಕರಗುವದು.
- Nahum 2:10 ನಹೂಮ 2:10ಅದು ಬರಿದಾಗಿಯೂ, ಬೈಲಾಗಿಯೂ, ಹಾಳಾ ಗಿಯೂ ಇತ್ತು; ಹೃದಯ ಕರಗುತ್ತದೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ. ಎಲ್ಲಾ ನಡುವುಗಳಲ್ಲಿ ಹೆಚ್ಚು ಸಂಕಟ ಉಂಟು; ಎಲ್ಲಾ ಮುಖಗಳು ಕಳೆ ಗುಂದುತ್ತವೆ.
- Jeremiah 50:43 ಯೆರೆಮೀಯ 50:43ಬಾಬೆಲಿನ ಅರಸನು ಅವರ ಸುದ್ದಿಯನ್ನು ಕೇಳಿದ್ದಾನೆ. ಅವನ ಕೈಗಳು ನಿತ್ರಾಣವಾದವು. ಸಂಕಟವೂ ಹೆರುವ ಸ್ತ್ರೀಯ ಹಾಗೆ ನೋವೂ ಅವನನ್ನು ಹಿಡಿದವು.
- Exodus 15:15 ವಿಮೋಚನಕಾಂಡ 15:15ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು.
- Isaiah 10:3–4 ಯೆಶಾಯ 10:3–4ವಿಚಾರಣೆಯ ದಿನದಲ್ಲಿಯೂ ದೂರ ದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡು ವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ವೈಭವವನ್ನು ಎಲ್ಲಿ ಬಿಡುವಿರಿ? ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವದೇ ಇವರ ಗತಿ. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
- Isaiah 37:27 ಯೆಶಾಯ 37:27ಆದದರಿಂದ ಅವುಗಳ ನಿವಾಸಿ ಗಳು ಬಲವಿಲ್ಲದವರಾಗಿ ಆಶಾಭಂಗ ಪಟ್ಟು ಕಳವಳ ಗೊಂಡರು; ಅವರು ಹೊಲದ ಹುಲ್ಲಿನಂತೆಯೂ ಹಸಿರು ಎಲೆಯಂತೆಯೂ ಮಾಳಿಗೆಯ ಮೇಲಿನ ಹುಲ್ಲಿನಂತೆಯೂ ಹೊಡೆಯುವದಕ್ಕಿಂತ ಮೊದಲೇ ಬಾಡಿಹೋಗುವ ಪೈರಿನಂತೆಯೂ ಇದ್ದರು.
- Isaiah 51:20 ಯೆಶಾಯ 51:20ನಿನ್ನ ಕುಮಾರರು ಮೂರ್ಛೆ ಹೋಗಿ, ಬಲೆಗೆ ಸಿಕ್ಕಿದ ಕಾಡು ಗೂಳಿಗಳಂತೆ ಎಲ್ಲಾ ಬೀದಿಗಳು ಕೂಡುವ ಚೌಕದಲ್ಲಿ ಅವರು ಬಿದ್ದಿದ್ದಾರೆ; ಅವರು ಕರ್ತನ ಉಗ್ರದಿಂದಲೂ ನಿನ್ನ ದೇವರ ಗದರಿಕೆ ಯಿಂದಲೂ ತುಂಬಿದ್ದಾರೆ.