Isaiah · chapter 14 · verse 1
Isaiah 14:1 in Kannada
ಕರ್ತನು ಯಾಕೋಬ್ಯರನ್ನು ಕರುಣಿಸಿ ಮತ್ತೆ (ಇನ್ನೂ) ಇಸ್ರಾಯೇಲ್ಯರನ್ನು ಆದುಕೊಂಡು ಅವರನ್ನು ತಮ್ಮ ಸ್ವಂತ ದೇಶದಲ್ಲಿ ಸೇರಿಸಬೇಕೆಂದಿದ್ದಾನೆ. ಅನ್ಯರು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.
Kartanu yaakobyarannu karunisi matte (innoo) israayelyarannu aadukondu avarannu tamma svanta deshadalli serisabekendiddaane. Anyaru avarondige koodi bandu yaakobana manetanakke serikolluvaru.
Isaiah 14:1 in English
- King James Version (KJV)
- For the LORD will have mercy on Jacob, and will yet choose Israel, and set them in their own land: and the strangers shall be joined with them, and they shall cleave to the house of Jacob.
- World English Bible (WEB)
- For the LORD will have compassion on Jacob, and will yet choose Israel, and set them in their own land. The foreigner will join himself with them, and they will unite with the house of Jacob.
- American Standard Version (ASV)
- For Jehovah will have compassion on Jacob, and will yet choose Israel, and set them in their own land: and the sojourner shall join himself with them, and they shall cleave to the house of Jacob.
- Bible in Basic English (BBE)
- For the Lord will have mercy on Jacob, and will again make Israel his special people, and will put them in their land; and the man from a strange country will take his place among them and be joined to the family of Jacob.
- Darby Translation (DBY)
- For Jehovah will have mercy on Jacob, and will yet choose Israel, and set them in rest in their own land; and the stranger shall be united to them, and they shall be joined to the house of Jacob.
- Webster's Bible (WBS)
- For the LORD will have mercy on Jacob, and will yet choose Israel, and set them in their own land: and the strangers shall be joined with them, and they shall cleave to the house of Jacob.
- Young's Literal Translation (YLT)
- Because Jehovah loveth Jacob, And hath fixed again on Israel, And given them rest on their own land, And joined hath been the sojourner to them, And they have been admitted to the house of Jacob.
Read in context
- 1ಕರ್ತನು ಯಾಕೋಬ್ಯರನ್ನು ಕರುಣಿಸಿ ಮತ್ತೆ (ಇನ್ನೂ) ಇಸ್ರಾಯೇಲ್ಯರನ್ನು ಆದುಕೊಂಡು ಅವರನ್ನು ತಮ್ಮ ಸ್ವಂತ ದೇಶದಲ್ಲಿ ಸೇರಿಸಬೇಕೆಂದಿದ್ದಾನೆ. ಅನ್ಯರು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.
- 2ಜನರು ಅವರನ್ನು ತೆಗೆದುಕೊಂಡು ತಮ್ಮ ಸ್ಥಳಕ್ಕೆ ಅವರನ್ನು ಬರಮಾಡುವರು. ಆಗ ಇಸ್ರಾಯೇಲಿನ ಮನೆತನದವರು ಕರ್ತನ ದೇಶದಲ್ಲಿ ಆ ಜನಾಂಗದ ವರನ್ನು ಗಂಡು ಹೆಣ್ಣಾಳುಗಳನ್ನಾಗಿ (ದಾಸದಾಸಿಯ ರನ್ನಾಗಿ) ಇಟ್ಟುಕೊಳ್ಳುವರು. ತಮ್ಮನ್ನು ಸೆರೆಹಿಡಿದ ವರನ್ನು ಸೆರೆಹಿಡಿಯುವರು, ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರನಡಿಸುವರು.
- 3ಕರ್ತನು ನಿಮ್ಮ ಸಂಕಟದಿಂದಲೂ ಕಳವಳದಿಂದ ಲೂ ಕಠಿಣವಾದ ಬಿಟ್ಟಿಯ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಸಾಮತಿಯನ್ನು (ಪದ್ಯವನ್ನು) ನೀವು ಹೀಗೆ ಎತ್ತಿ ಹೇಳಬೇಕು.
Cross references
- Psalm 102:13 ಕೀರ್ತನೆಗಳು 102:13ನೀನು ಎದ್ದು, ಚೀಯೋನನ್ನು ಕನಿ ಕರಿಸುವಿ; ಯಾಕಂದರೆ ಅದನ್ನು ಕರುಣಿಸುವದಕ್ಕೆ ಕಾಲವಾಯಿತು; ಹೌದು ನಿರ್ಣಯಿಸಿದ ಸಮಯವು ಬಂದಿದೆ.
- Zechariah 1:17 ಜೆಕರ್ಯ 1:17ಇನ್ನೂ ಕೂಗಿ ಹೇಳು, ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಪಟ್ಟಣಗಳು ಇನ್ನು ಅಭಿವೃದ್ಧಿಯಾಗಿ ಹರಡುವವು; ಕರ್ತನು ಚೀಯೋನನ್ನು ಇನ್ನು ಆದರಿಸುವನು; ಯೆರೂಸಲೇಮನ್ನು ಇನ್ನು ಆದುಕೊಳ್ಳುವನು.
- Isaiah 54:7–8 ಯೆಶಾಯ 54:7–8ಕ್ಷಣ ಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ; ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು. ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ.
- Ephesians 2:12–19 ಎಫೆಸದವರಿಗೆ 2:12–19ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ. ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ. ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು. ಆತನು ಇದ್ದ ದ್ವೇಷವನ್ನು ಅಂದರೆ ಶಾಸನಗಳ ಆಜ್ಞೆಗಳುಳ್ಳ ನ್ಯಾಯಪ್ರಮಾಣವನ್ನು ತನ್ನ ಶರೀರದ ಮೂಲಕ ರದ್ದುಗೊಳಿಸಿ ಸಮಾಧಾನ ಮಾಡುವವನಾಗಿ ಉಭಯರನ್ನು ತನ್ನಲ್ಲಿ ಒಬ್ಬ ನೂತನ ಪುರಷನನ್ನಾಗಿ ಮಾಡಿದನು. ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಅದರಿಂದ ಉಭಯರನ್ನು ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನ ಪಡಿಸಿದ್ದಾನೆ. ಇದಲ್ಲದೆ ಆತನು ಬಂದು ದೂರ ವಾಗಿದ್ದ ನಿಮಗೂ ಸವಿಾಪವಾಗಿದ್ದ ಅವರಿಗೂ ಸಮಾಧಾನವನ್ನು ಸಾರಿದನು. ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು. ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೆ ಪರಿಶುದ್ಧರೊಂದಿಗೆ ಒಂದೇ ಪಟ್ಟಣದವರೂ ದೇವರ ಮನೆಯವರೂ ಆಗಿದ್ದೀರಿ.
- Zechariah 8:22–23 ಜೆಕರ್ಯ 8:22–23ಹೌದು, ಅನೇಕ ಜನಗಳೂ ಬಲವಾದ ಜನಾಂಗಗಳೂ ಸೈನ್ಯಗಳ ಕರ್ತನನ್ನು ಯೆರೂಸಲೇಮಿನಲ್ಲಿ ಹುಡುಕುವದಕ್ಕೂ ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಬರುವವು.ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
- Malachi 1:11 ಮಲಾಕಿಯ 1:11ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Jeremiah 50:4–6 ಯೆರೆಮೀಯ 50:4–6ಆ ದಿವಸಗಳಲ್ಲಿಯೂ ಕಾಲ ದಲ್ಲಿಯೂ ಇಸ್ರಾಯೇಲಿನ ಮಕ್ಕಳು ಬರುವರು; ಅವರೂ ಯೆಹೂದನ ಮಕ್ಕಳೂ ಒಟ್ಟಾಗಿ ಕೂಡಿ ಕೊಳ್ಳುವರೆಂದು ಕರ್ತನು ಅನ್ನುತ್ತಾನೆ. ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಕರ್ತನನ್ನು ಹುಡುಕುವರು. ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ--ಬನ್ನಿ, ಮರೆತುಹೋಗದ ನಿತ್ಯವಾದ ಒಡಂಬಡಿಕೆಯಿಂದ ಕರ್ತನನ್ನು ಸೇರಿಸಿ ಕೊಳ್ಳೋಣ ಅನ್ನುವರು. ನನ್ನ ಜನರು ಕಳೆದುಹೋದ ಕುರಿಗಳಾಗಿದ್ದರು; ಅವರ ಕುರುಬರು ಅವರನ್ನು ತಪ್ಪಿ ಹೋಗುವಂತೆ ಮಾಡಿದರು; ಅವರನ್ನು ಬೆಟ್ಟಗಳ ಮೇಲೆ ತಿರುಗಿಸಿ ಅಡ್ಡಾಡಿಸಿದರು; ಅವರು ಬೆಟ್ಟದಿಂದ ಗುಡ್ಡಕ್ಕೆ ಹೋದರು; ಮಲಗುವ ಸ್ಥಳವನ್ನು ಮರೆತುಬಿಟ್ಟರು.
- Jeremiah 31:8–12 ಯೆರೆಮೀಯ 31:8–12ಇಗೋ, ನಾನು ಅವರನ್ನು ಉತ್ತರ ದೇಶ ದಿಂದ ಬರಮಾಡಿ ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ; ಅವರಲ್ಲಿ ಕುರುಡರೂ ಕುಂಟರೂ ಗರ್ಭಿಣಿಯಾದವರೂ ದಿನತುಂಬಿದ ಗರ್ಭಿಣಿಯರ ಸಹಿತವಾಗಿ ಇರುವರು; ದೊಡ್ಡ ಗುಂಪಾಗಿ ಇಲ್ಲಿಗೆ ಹಿಂತಿರುಗಿ ಬರುವರು. ಅಳುತ್ತಾ ಬರುವರು; ಬಿನ್ನಹಗಳ ಸಂಗಡ ಅವರನ್ನು ನಡಿಸುವೆನು; ಅವರು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು; ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ; ಎಫ್ರಾಯಾಮನು ನನ್ನ ಚೊಚ್ಚಲನೇ. ಜನಾಂಗಗಳೇ, ಕರ್ತನ ವಾಕ್ಯವನ್ನು ಕೇಳಿರಿ; ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ತಿಳಿಸಿ ಹೀಗೆ ಹೇಳಿರಿ--ಇಸ್ರಾಯೇಲನನ್ನು ಚದರಿಸಿದಾತನು ಅವ ನನ್ನು ಕೂಡಿಸುವನು; ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವನನ್ನು ಕಾಯುವನು. ಕರ್ತನು ಯಾಕೋಬನನ್ನು ವಿಮೋಚಿಸಿದ್ದಾನೆ; ಅವನಿಗಿಂತ ಬಲಿಷ್ಠನಾದವನ ಕೈಯೊಳಗಿಂದ ಅವನನ್ನು ಬಿಡಿಸಿ ದ್ದಾನೆ. ಆದದರಿಂದ ಅವರು ಬಂದು ಚೀಯೋನಿನ ಉನ್ನತದಲ್ಲಿ ಹಾಡಿ ಕರ್ತನ ಒಳ್ಳೇತನದ ಬಳಿಗೆ ಗೋಧಿಯ ನಿಮಿತ್ತವೂ ದ್ರಾಕ್ಷಾರಸದ ನಿಮಿತ್ತವೂ ಎಣ್ಣೆಯ ನಿಮಿತ್ತವೂ ಮಂದೆ ದನ ಮರಿಗಳ ನಿಮಿತ್ತವೂ ಪ್ರವಾಹದಂತೆ ಬರುವರು; ಅವರ ಪ್ರಾಣವು ಚೆನ್ನಾಗಿ ನೀರು ಹಾಕಿದ ತೋಟದ ಹಾಗೆ ಇರುವದು; ಅವರು ಇನ್ನು ಮೇಲೆ ಯಾವಾಗಲೂ ದುಃಖಪಡುವದಿಲ್ಲ.
- Jeremiah 32:37–41 ಯೆರೆಮೀಯ 32:37–41ಇಗೋ, ನಾನು ನನ್ನ ಕೋಪ ದಲ್ಲಿಯೂ ಉಗ್ರದಲ್ಲಿಯೂ ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶಗಳೊಳಗಿಂದ ಅವರನ್ನು ಕೂಡಿಸಿ ಈ ಸ್ಥಳಕ್ಕೆ ತಿರಿಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು. ಅವರು ನನಗೆ ಜನರಾಗಿರುವರು; ನಾನು ಅವರಿಗೆ ದೇವರಾಗಿರುವೆನು. ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು. ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ. ಹೌದು, ಅವರಿಗೆ ಒಳ್ಳೇದನ್ನು ಮಾಡುವದಕ್ಕೆ ಅವ ರೊಂದಿಗೆ ಆನಂದಪಡುವೆನು; ನಿಜವಾಗಿ ನನ್ನ ಪೂರ್ಣ ಹೃದಯದಿಂದಲೂ ನನ್ನ ಪೂರ್ಣ ಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ.
- Acts 15:14–17 ಅಪೊಸ್ತಲರ ಕೃತ್ಯಗಳು 15:14–17ದೇವರು ಮೊದಲೇ ಅನ್ಯಜನರನ್ನು ದರ್ಶಿಸಿ ತನ್ನ ಹೆಸರಿಗಾಗಿ ಅವರೊ ಳಗಿಂದ ಒಂದು ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ. ಇದಕ್ಕೆ ಪ್ರವಾದಿ ಗಳ ಮಾತುಗಳು ಒಪ್ಪುತ್ತವೆ, ಹೇಗಂದರೆ-- ಇದಾದ ಮೇಲೆ ನಾನು ಹಿಂತಿರುಗಿ ಬಂದು ಬಿದ್ದು ಹೋಗಿರುವ ದಾವೀದನ ಗುಡಾರವನ್ನು ತಿರಿಗಿ ಕಟ್ಟುವೆನು. ಅದರಲ್ಲಿ ಹಾಳಾದದ್ದನ್ನು ನಾನು ತಿರಿಗಿ ಸರಿಮಾಡಿಸಿ ಅದನ್ನು ನೆಟ್ಟಗೆ ನಿಲ್ಲಿಸುವೆನು. ಅವೆಲ್ಲವುಗಳನ್ನು ಮಾಡುವ ಕರ್ತನು--ನನ್ನ ಹೆಸರಿನಿಂದ ಕರೆಯಲ್ಪಟ್ಟ ಮನುಷ್ಯರಲ್ಲಿ ಉಳಿದವರೆಲ್ಲರೂ ಅನ್ಯಜನರೆಲ್ಲರೂ ಕರ್ತನನ್ನು ಹುಡುಕುವವರಾಗಿರಬೇಕು ಎಂದು ಹೇಳುತ್ತಾನೆ.
- Jeremiah 12:15–16 ಯೆರೆಮೀಯ 12:15–16ನಾನು ಅವರನ್ನು ಕಿತ್ತುಹಾಕಿದ ಮೇಲೆ ಆಗುವದೇ ನಂದರೆ--ನಾನು ಹಿಂತಿರುಗಿ ಅವರನ್ನು ಕರುಣಿಸುವೆನು; ತಮ್ಮ ತಮ್ಮ ಸ್ವಾಸ್ತ್ಯಕ್ಕೂ ತಮ್ಮ ತಮ್ಮ ದೇಶಕ್ಕೂ ಅವರನ್ನು ತಿರುಗಿ ಬರಮಾಡುವೆನು. ಬಾಳನ ಆಣೆ ಇಟ್ಟು ಕೊಳ್ಳುವದಕ್ಕೆ ಅವರು ನನ್ನ ಜನಕ್ಕೆ ಬೋಧಿಸಿದ ಪ್ರಕಾರ ಅವರು ಕರ್ತನ ಜೀವದಾಣೆ ಎಂದು ಹೇಳಿ ನನ್ನ ಹೆಸರಿನ ಆಣೆ ಇಟ್ಟುಕೊಳ್ಳುವದಕ್ಕೆ ನನ್ನ ಜನರ ಮಾರ್ಗ ಗಳನ್ನು ಜಾಗ್ರತೆಯಾಗಿ ಕಲಿತುಕೊಂಡರೆ ಆಗ ಅವರು ನನ್ನ ಜನರ ಮಧ್ಯದಲ್ಲಿ ಕಟ್ಟಲ್ಪಡುವರು.ಆದರೆ ಅವರು ಕೇಳದೆಹೋದರೆ, ಆ ಜನಾಂಗವನ್ನು ಸಂಪೂ ರ್ಣವಾಗಿ ಕಿತ್ತು ನಾಶಮಾಡುವೆನು ಎಂದು ಕರ್ತನು ಅನ್ನುತ್ತಾನೆ.
- Zechariah 2:11–12 ಜೆಕರ್ಯ 2:11–12ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ. ಇದಲ್ಲದೆ ಕರ್ತನು ತನ್ನ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸ್ವಾಸ್ತ್ಯವಾಗಿ ಹೊಂದುವನು. ಯೆರೂಸಲೇಮನ್ನು ತಿರುಗಿ ಆದು ಕೊಳ್ಳುವನು.ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.