Isaiah · chapter 14 · verse 11
Isaiah 14:11 in Kannada
ನಿನ್ನ ವೈಭವವೂ ವೀಣೆಗಳ ಸ್ವರವೂ ಸಮಾಧಿಗೆ ಇಳಿಸಲ್ಪಟ್ಟಿವೆ. ನಿನಗೆ ಹುಳುಗಳೇ ಹಾಸಿಗೆ, ನಿನ್ನ ಹೊದಿಕೆಯು ಕ್ರಿಮಿಗಳೇ;
Ninna vaibhavavoo veenegala svaravoo samaadhige ilisalpattive. Ninage hulugale haasige, ninna hodikeyu krimigale;
Isaiah 14:11 in English
- King James Version (KJV)
- Thy pomp is brought down to the grave, [and] the noise of thy viols: the worm is spread under thee, and the worms cover thee.
- World English Bible (WEB)
- Your pomp is brought down to Sheol, with the sound of your stringed instruments. Maggots are spread out under you, and worms cover you.
- American Standard Version (ASV)
- Thy pomp is brought down to Sheol, [and] the noise of thy viols: the worm is spread under thee, and worms cover thee.
- Bible in Basic English (BBE)
- Your pride has gone down into the underworld, and the noise of your instruments of music; the worms are under you, and your body is covered with them.
- Darby Translation (DBY)
- — Thy pomp is brought down to Sheol, the noise of thy lyres: the maggot is spread under thee, and worms cover thee.
- Webster's Bible (WBS)
- Thy pomp is brought down to the grave, [and] the noise of thy viols: the worm is spread under thee, and the worms cover thee.
- Young's Literal Translation (YLT)
- Brought down to Sheol hath been thine excellency, The noise of thy psaltery, Under thee spread out hath been the worm, Yea, covering thee is the worm.
Read in context
- 9ನಿನಗೋ ಸ್ಕರ ನಿನ್ನ ಬರೋಣವನ್ನು ಎದುರುಗೊಳ್ಳುವದಕ್ಕೆ ಪಾತಾಳವು ಕೆಳಗಿನಿಂದ ತಳಮಳಪಡುತ್ತದೆ. ಸತ್ತವ ರನ್ನೂ ಅಂದರೆ, ಭೂಲೋಕದ ಮುಖಂಡರಾಗಿದ್ದವರೆ ಲ್ಲರನ್ನೂ ಕಲಕಿ (ಎಚ್ಚರಿಸಿ) ಜನಾಂಗಗಳ ಎಲ್ಲಾ ರಾಜ ರುಗಳನ್ನು ಅವರ ಸಿಂಹಾಸನಗಳಿಂದ ಎಬ್ಬಿಸುತ್ತದೆ.
- 10ಅವರೆಲ್ಲರು ನಿನಗೆ--ನಮ್ಮ ಹಾಗೆ ನೀನು ಸಹ ಬಲಹೀನನಾಗಿದ್ದೀ, ನೀನು ನಮ್ಮ ಸಮಾನನಾಗಿದ್ದೀ ಎಂದು ಮಾತಾಡಿ ಹೇಳುವರು.
- 11ನಿನ್ನ ವೈಭವವೂ ವೀಣೆಗಳ ಸ್ವರವೂ ಸಮಾಧಿಗೆ ಇಳಿಸಲ್ಪಟ್ಟಿವೆ. ನಿನಗೆ ಹುಳುಗಳೇ ಹಾಸಿಗೆ, ನಿನ್ನ ಹೊದಿಕೆಯು ಕ್ರಿಮಿಗಳೇ;
- 12ಓ ಲೂಸಿಫರ್ ಉದಯದ ಮಗನೇ. ಆಕಾಶದಿಂದ ನೀನು ಹೇಗೆ ಬಿದ್ದೀ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಕಡಿಯಲ್ಪಟ್ಟಿದ್ದೀ?
- 13ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು.
Cross references
- Daniel 5:25–30 ದಾನಿಯೇಲನು 5:25–30ಆ ಬರಹವು ಏನಂದರೆ ಮೆನೇ ಮೆನೇ ತೇಕಲ್ ಉಫ ರ್ಸಿನ್, ಇದರ ಅರ್ಥವು ಹೀಗಿದೆ--ಮೆನೇ ಅಂದರೆ ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆ ಗಾಣಿಸಿದ್ದಾನೆ; ತೇಕೆಲ್ ಅಂದರೆ ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡುಬಂದಿರುವಿ. ಪೆರೇಸ್ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು. ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರ ವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಹಾರವನ್ನು ಹಾಕಿ, ಇವನು ರಾಜ್ಯದ ಮೂವರು ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿ ದನು. ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಕೊಲ್ಲಲ್ಪಟ್ಟನು.ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.
- Isaiah 66:24 ಯೆಶಾಯ 66:24ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.
- Amos 6:3–7 ಆಮೋಸ 6:3–7ನೀವು ಕೆಟ್ಟ ದಿನವನ್ನು ದೂರಮಾಡಿ ಕೊಂಡು ಬಲಾತ್ಕಾರದ ಪೀಠವನ್ನು ಹತ್ತಿರ ಮಾಡಿಕೊ ಳ್ಳುತ್ತೀರಿ. ದಂತದ ಮಂಚಗಳ ಮೇಲೆ ಮಲಗಿಕೊಳ್ಳು ತ್ತಾರೆ; ತಮ್ಮ ಹಾಸಿಗೆಗಳ ಮೇಲೆ ಹಾಯಾಗಿ ಒರಗಿ ಕೊಳ್ಳುತ್ತಾರೆ; ಮಂದೆಯೊಳಗಿಂದ ಕುರಿಮರಿಗಳನ್ನು, ಹಟ್ಟಿಯ ಮಂದೆಯೊಳಗಿಂದ ಕರುಗಳನ್ನು ತಿನ್ನುತ್ತಾರೆ. ವೀಣೆಯ ಸ್ವರಕ್ಕೆ ಹಾಡುತ್ತಾರೆ; ದಾವೀದನ ಹಾಗೆ ತಮಗೆ ತಾವೇ ಗಾನ ವಾದ್ಯಗಳನ್ನು ಕಲ್ಪಿಸಿಕೊಳ್ಳು ತ್ತಾರೆ. ದ್ರಾಕ್ಷಾರಸದ ಪಾತ್ರೆಗಳಲ್ಲಿ ಕುಡಿಯುತ್ತಾರೆ. ಶ್ರೇಷ್ಠವಾದ ಎಣ್ಣೆಗಳಿಂದ ತಮ್ಮನ್ನು ಅಭಿಷೇಕಿಸಿ ಕೊಳ್ಳುತ್ತಾರೆ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡು ವದಿಲ್ಲ. ಅದರಿಂದ ಸೆರೆಗೆ ಒಯ್ಯಲ್ಪಡುವವರಿಗೆ ಮೊದಲು ತಾವೇ ಸೆರೆಗೆ ಹೋಗುವರು; ಭೋಗ ಮಾಡುವವರ ಹರ್ಷಧ್ವನಿಯು ಬಿಟ್ಟು ಹೋಗುವದು.
- Isaiah 22:2 ಯೆಶಾಯ 22:2ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣ ವೇ ಸಂಭ್ರಮದ ಪಟ್ಟಣವೇ, ನಿನ್ನಲ್ಲಿ ಕೊಂದುಹಾಕಲ್ಪ ಟ್ಟವರು ಕತ್ತಿಯಿಂದ ಕೊಂದುಹಾಕಲ್ಪಟ್ಟವರಲ್ಲ ಅಥವಾ ಯುದ್ಧದಲ್ಲಿ ಸತ್ತವರಲ್ಲ.
- Ezekiel 26:13 ಯೆಹೆಜ್ಕೇಲನು 26:13ಆಗ ನಿನ್ನ ಹಾಡು ಗಳ ಶಬ್ದವನ್ನು ನಿಲ್ಲಿಸುವೆನು, ಇನ್ನು ನಿನ್ನ ಕಿನ್ನರಿಗಳ ಧ್ವನಿ ಕೇಳಲ್ಪಡುವದಿಲ್ಲ.
- Job 21:11–15 ಯೋಬನು 21:11–15ತಮ್ಮ ಚಿಕ್ಕವರನ್ನು ಮಂದೆಯ ಹಾಗೆ ಕಳುಹಿಸು ತ್ತಾರೆ; ಅವರ ಮಕ್ಕಳು ಕುಣಿದಾಡುತ್ತಾರೆ. ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಹಾಡುತ್ತಾರೆ; ಕೊಳಲಿನ ಶಬ್ದಕ್ಕೆ ಸಂತೋಷಿಸುತ್ತಾರೆ. ಸಂಪತ್ತಿನಲ್ಲಿ ತಮ್ಮ ದಿವಸ ಗಳನ್ನು ಕಳೆಯುತ್ತಾರೆ; ಕ್ಷಣದಲ್ಲಿ ಪಾತಾಳಕ್ಕೆ ಇಳಿ ಯುತ್ತಾರೆ. ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ. ನಾವು ಆತನನ್ನು ಸೇವಿಸುವ ಹಾಗೆ ಸರ್ವಶಕ್ತನು ಯಾರು? ನಾವು ಆತನಿಗೆ ಬಿನ್ನಹ ಮಾಡುವದರಲ್ಲಿ ನಮಗೆ ಪ್ರಯೋಜನವೇನು ಎಂದು ಹೇಳುತ್ತಾರೆ.
- Mark 9:43–48 ಮಾರ್ಕನು 9:43–48ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು; ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ. ನಿನ್ನ ಕಾಲು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದು ಹಾಕು; ಯಾಕಂದರೆ ನೀನು ಎರಡು ಕಾಲುಗಳುಳ್ಳವ ನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹಾಕ ಲ್ಪಡುವದಕ್ಕಿಂತ ಕುಂಟನಾಗಿ ಜೀವದಲ್ಲಿ ಸೇರುವದು ನಿನಗೆ ಒಳ್ಳೇದು. ಅಲ್ಲಿ ಅವರ ಹುಳವು ಸಾಯುವ ದಿಲ್ಲ ಮತ್ತು ಬೆಂಕಿಯು ಆರುವದಿಲ್ಲ. ನಿನ್ನ ಕಣ್ಣು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಿತ್ತುಬಿಡು; ಎರಡು ಕಣ್ಣುಗಳುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕ ಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯ ದಲ್ಲಿ ಸೇರುವದು ನಿನಗೆ ಒಳ್ಳೇದು. ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ.
- Daniel 5:1–4 ದಾನಿಯೇಲನು 5:1–4ಅರಸನಾದ ಬೆಲ್ಯಚ್ಚರನು ತನ್ನ ಪ್ರಭುಗಳಲ್ಲಿ ಸಾವಿರ ಮಂದಿಗೆ ದೊಡ್ಡ ಔತಣವನ್ನು ಮಾಡಿಸಿ, ಆ ಸಾವಿರ ಮಂದಿಯ ಮುಂದೆ ಅವನು ದ್ರಾಕ್ಷಾರಸವನ್ನು ಕುಡಿದನು. ಆ ದ್ರಾಕ್ಷಾರಸವನ್ನು ರುಚಿಸುತ್ತಿರುವಾಗ ಬೆಲ್ಯಚ್ಚರನು ತನ್ನ ತಂದೆಯಾದ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯ ದೊಳಗಿಂದ ತಂದ ಬೆಳ್ಳಿಬಂಗಾರಗಳ ಪಾತ್ರೆಗಳಲ್ಲಿ ಅರಸನೂ ಅವನ ಪ್ರಭುಗಳೂ ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವ ಹಾಗೆ ತರಲು ಆಜ್ಞಾಪಿಸಿದನು. ಆಗ ಅವರು ಯೆರೂಸಲೇಮಿನ ದೇವಾಲಯದೊಳಗಿಂದ ತೆಗೆದ ಬಂಗಾರದ ಪಾತ್ರೆ ಗಳನ್ನು ತಂದರು. ಅರಸನೂ ಅವನ ಪ್ರಭುಗಳೂ ಪತ್ನಿ ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು. ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಹೊಗಳತೊಡಗಿದರು.
- Ezekiel 32:19–20 ಯೆಹೆಜ್ಕೇಲನು 32:19–20ನೀನು ಸೌಂದರ್ಯದಲ್ಲಿ ಯಾರಿಗೆ ಹೋಲುವಿ? ಕೆಳಗೆ ಹೋಗು ಮತ್ತು ಸುನ್ನತಿಯಿಲ್ಲದವರ ಸಂಗಡ ಮಲಗು. ಅವರು ಕತ್ತಿಯಿಂದ ಹತರಾದವರ ಮಧ್ಯದಲ್ಲಿ ಬೀಳುವರು. ಅವಳು ಕತ್ತಿಗೆ ಒಪ್ಪಿಸಲ್ಪಟ್ಟಿದ್ದಾಳೆ; ಅವಳನ್ನೂ ಅವಳ ಎಲ್ಲಾ ಸಮೂಹವನ್ನೂ ಎಳೆಯಿರಿ.
- Job 24:19–20 ಯೋಬನು 24:19–20ಹಿಮದ ನೀರನ್ನು ಒಣ ಭೂಮಿಯೂ ಬಿಸಿಲೂ ಹೀರಿಕೊಳ್ಳುವಂತೆ ಪಾಪಮಾಡಿದವರನ್ನು ಸಮಾಧಿಯು ಹೀರಿಕೊಳ್ಳುತ್ತದೆ. ಗರ್ಭವು ಅವನನ್ನು ಮರೆತುಬಿಡುವದು; ಹುಳವು ಅವನಲ್ಲಿ ಸವಿ ಊಟ ಹೊಂದುವದು; ಇನ್ನು ಅವನ ನೆನಪು ಇರುವದಿಲ್ಲ; ಮರದ ಹಾಗೆ ಅನ್ಯಾಯವು ಮುರಿಯಲ್ಪಡುವದು.
- Revelation 18:11–19 ಪ್ರಕಟನೆ 18:11–19ಇದಲ್ಲದೆ ಭೂಲೋಕದ ವರ್ತಕರು ಅವಳ ನಿಮಿತ್ತವಾಗಿ ಅತ್ತು ಗೋಳಾಡುವರು. ಯಾಕಂದರೆ ಅವರ ಸರಕುಗಳನ್ನು ಅಂದರೆ ಚಿನ್ನ, ಬೆಳ್ಳಿ, ಅಮೂಲ್ಯವಾದ ಕಲ್ಲುಗಳು, ಮುತ್ತುಗಳು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ದಂತದ ಪಾತ್ರೆಗಳು, ಬಹು ಅಮೂಲ್ಯವಾದ ಮರ, ಹಿತ್ತಾಳೆ, ಸಕಲ ವಿಧವಾದ ಪಾತ್ರೆಗಳು, ಕಬ್ಬಿಣ, ಚಂದ್ರಕಾಂತ, ಲವಂಗ, ಚೆಕ್ಕೆ, ಧೂಪ, ಸುಗಂಧ ತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದಹಿಟ್ಟು, ಗೋಧಿ, ದನಗಳು, ಕುರಿ ಗಳು, ಕುದುರೆಗಳು, ರಥಗಳು, ಗುಲಾಮರು, ಮನುಷ್ಯರ ಪ್ರಾಣಗಳು ಇವೇ ಮೊದಲಾದವುಗಳನ್ನು ಯಾರೂ ಎಂದೂ ಕೊಂಡುಕೊಳ್ಳುವರಿಲ್ಲ ಎಂದು ದುಃಖಿಸುವರು. ನಿನ್ನ ಜೀವವು ಅಪೇಕ್ಷಿಸಿದ ಹಣ್ಣು ಗಳು ನಿನ್ನನ್ನು ಬಿಟ್ಟು ಹೋದವು; ಸೊಗಸಾಗಿಯೂ ಶೋಭಾಯಮಾನವಾಗಿಯೂ ಇರುವವುಗಳೆಲ್ಲವೂ ನಿನ್ನನ್ನು ಬಿಟ್ಟು ಹೋದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವದೇ ಇಲ್ಲ. ಅವಳಿಂದ ಐಶ್ವರ್ಯವಂತ ರಾದ ಈ ಸರಕುಗಳ ವರ್ತಕರು ಅವಳ ಯಾತನೆಗೆ ಭಯಪಟ್ಟು ದೂರದಲ್ಲಿ ನಿಂತು ಅಳುತ್ತಾ ಗೋಳಾ ಡುತ್ತಾ-- ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ, ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು ಅವಳ ದಹನದ ಹೊಗೆಯನ್ನು ನೋಡುತ್ತಾ--ಈ ಮಹಾ ಪಟ್ಟಣಕ್ಕೆ ಸಮಾನವಾದ ಪಟ್ಟಣವು ಯಾವದು ಎಂದು ಕೂಗಿ ಹೇಳಿದರು. ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು
- Job 17:13–14 ಯೋಬನು 17:13–14ನಾನು ನಿರೀಕ್ಷಿಸಿದರೆ ಸಮಾಧಿಯೇ ನನ್ನ ಮನೆ; ಕತ್ತಲೆಯಲ್ಲಿ ನನ್ನ ಹಾಸಿಗೆಯನ್ನು ಹಾಸಿದ್ದೇನೆ. ಕೊಳೆಯುವಿಕೆಗೆ -- ನೀನು ನನ್ನ ತಂದೆ ಎಂದೂ ಹುಳಕ್ಕೆ--ನನ್ನ ತಾಯಿಯೇ, ನನ್ನ ಅಕ್ಕನೇ ಎಂದೂ ನಾನು ಹೇಳಿದೆನು.